Raisin Water On Empty Stomach: ಒಣದ್ರಾಕ್ಷಿ ನೀರಿನ ಮಹತ್ವ, ಇದುವೇ ಆರೋಗ್ಯದ ಸತ್ವ! - Vistara News

ಆರೋಗ್ಯ

Raisin Water On Empty Stomach: ಒಣದ್ರಾಕ್ಷಿ ನೀರಿನ ಮಹತ್ವ, ಇದುವೇ ಆರೋಗ್ಯದ ಸತ್ವ!

VISTARANEWS.COM


on

raisin Water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹಿತ್ತಲು ಗಿಡ ಮದ್ದಲ್ಲ ಎಂಬ ಮಾತುಂಟು. ನಮಗೆ ತೀರಾ ಆಪ್ತವಾದ ಅಥವಾ ಸದಾ ಕೈಗೆಟುಕುವ ವಸ್ತುಗಳ ಬಗ್ಗೆ ನಮಗೆ ಆದರ ಕಡಿಮೆ ಅನ್ನುವುದು ಸುಳ್ಳೇನಲ್ಲ. ಉದಾ, ಒಣದ್ರಾಕ್ಷಿ ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲೂ ಇರುವಂಥದ್ದು. ಆದರೆ ಅದರ ಔಷಧೀಯ ಗುಣಗಳ ಬಗ್ಗೆ ನಮಗೆಷ್ಟು ಅರಿವಿದೆ? ಅದರಲ್ಲಿರುವ ಸತ್ವಗಳೇನು ಎಂಬುದನ್ನು ನಾವೆಷ್ಟು ತಿಳಿದುಕೊಂಡಿದ್ದೇವೆ? ಒಣದ್ರಾಕ್ಷಿಯ ನೀರನ್ನು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ (benefits of raisin water) ಆರೋಗ್ಯಕ್ಕೆ ಆಗುವ ಲಾಭಗಳು ತಿಳಿದಿವೆಯೇ?

ದೇಹಕ್ಕೆ ಅಗತ್ಯವಾಗಿ ಬೇಕಾಗುವ ಜೀವಸತ್ವಗಳು, ನಾರು, ಖನಿಜಗಳ ದಾಸ್ತಾನು ಒಣದ್ರಾಕ್ಷಿಯಲ್ಲಿದೆ. ರಾತ್ರಿ ಸ್ವಚ್ಛವಾದ ನೀರಿಗೆ ಒಣದ್ರಾಕ್ಷಿಯನ್ನು ಹಾಕಿಟ್ಟು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಆ ನೀರನ್ನೂ ಕುಡಿದು, ನೆನೆದು ಉಬ್ಬಿದ ದ್ರಾಕ್ಷಿಯನ್ನೂ ತಿನ್ನಬೇಕು. ಇದರಿಂದ ಒಣದ್ರಾಕ್ಷಿಯಲ್ಲಿರುವ (benefits of raisin water) ಸತ್ವಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳಲು ದೇಹಕ್ಕೆ ಸಾಧ್ಯವಾಗುತ್ತದೆ.

ಡಿಟಾಕ್ಸ್‌ ಪೇಯ

ದೇಹವನ್ನು ಡಿಟಾಕ್ಸ್‌ ಮಾಡುವುದಕ್ಕೆ ಏನೇನೋ ಒದ್ದಾಡುವ ಬದಲು ಇದು ಸರಳ ಉಪಾಯ. ಅನಗತ್ಯ ವಸ್ತುಗಳನ್ನೆಲ್ಲಾ ದೇಹದಿಂದ ಹೊರಹಾಕುವುದಕ್ಕೆ ನಮ್ಮ ಯಕೃತ್ತು ಶ್ರಮಿಸುತ್ತಲೇ ಇರಬೇಕು. ಇಂಥ ಅಂಗಕ್ಕೆ ಸರಿಯಾದ ಪ್ರಚೋದನೆ ನೀಡುವುದಕ್ಕೆ ಒಣದ್ರಾಕ್ಷಿ ನೀರಿನಿಂದ ಸಾಧ್ಯವಿದೆ. ಇಡೀ ದಿನಕ್ಕೆ ಯಕೃತ್ತಿಗೆ ಬೇಕಾದಷ್ಟು ಶಕ್ತಿಯನ್ನು ನೀಡುವುದಲ್ಲದೆ, ಒಣದ್ರಾಕ್ಷಿಯಲ್ಲಿರುವ ನಾರಿನಂಶಗಳು ಹೆಚ್ಚಿನ ಪಿತ್ತ ರಸ ಉತ್ಪತ್ತಿ ಮಾಡುವುದಕ್ಕೆ ಪಿತ್ತಜನಕಾಂಗಕ್ಕೆ ಪ್ರಚೋದನೆ ನೀಡುತ್ತವೆ

ನಾರು

ನಮ್ಮ ಜೀರ್ಣಾಂಗಗಳನ್ನು ಸುಸ್ಥಿತಿಯಲ್ಲಿಡುವಂಥ ನಾರು, ಅದರಲ್ಲೂ ಕರಗದೇ ಇರುವಂಥ ನಾರು ಒಣದ್ರಾಕ್ಷಿಯಲ್ಲಿ ಹೇರಳವಾಗಿದೆ. ಜೊತೆಗೆ, ಟಾರ್ಟಾರಿಕ್‌ ಆಮ್ಲ ಮತ್ತು ಟ್ಯಾನಿನ್‌ಗಳಂಥ ಫ್ಲವನಾಯ್ಡ್‌ಗಳು ವಿರೇಚಕಗಳಂತೆ ಕೆಲಸ ಮಾಡುತ್ತವೆ. ಹಾಗಾಗಿ ಮಲಬದ್ಧತೆಯ ನಿವಾರಣೆಗೆ ಅತ್ತ್ಯುತ್ತಮವಾದ ಮನೆಮದ್ದು ಒಣದ್ರಾಕ್ಷಿ ಮತ್ತು ಅದರ ನೀರು.

ಆಸಿಡಿಟಿ ಶಮನ

ರಕ್ತದಲ್ಲಿ ಆಮ್ಲೀಯ ಅಂಶ ಹೆಚ್ಚಾದಾಗ ಆಸಿಡೋಸಿಸ್‌ ಎಂಬ ಸಮಸ್ಯೆ ಉಂಟಾಗುತ್ತದೆ. ಹೊಟ್ಟೆಯಲ್ಲಿರುವ ಆಮ್ಲಗಳನ್ನು ಕಡಿಮೆ ಮಾಡುವುದು ಅಂದರೆ ಆಸಿಡಿಟಿ ಕಡಿಮೆ ಮಾಡುವ ಮೂಲಕ ಈ ಸಮಸ್ಯೆಗೆ ಉಪಶಮನ ಕಾಣಬಹುದು. ಕಪ್ಪು ದ್ರಾಕ್ಷಿಯಲ್ಲಿ ನೈಸರ್ಗಿಕವಾದ ಆಂಟಾಸಿಡ್‌ ಅಂಶವಿದೆ. ಜೊತೆಗೆ, ಪೊಟಾಶಿಯಂ ಮತ್ತು ಮೆಗ್ನೀಶಿಯಂನಂಥ ಖನಿಜಗಳು ಹೊಟ್ಟೆಯಲ್ಲಿರುವ ಆಮ್ಲರಸದ ತೀವ್ರತೆಯನ್ನು ಶಮನ ಮಾಡುವುದಕ್ಕೆ ನೆರವಾಗುತ್ತವೆ.

ಕೊಲೆಸ್ಟ್ರಾಲ್‌ ಕಡಿತ

ಜೀರ್ಣಾಂಗಗಳ ಕ್ಷಮತೆ ಹೆಚ್ಚಿ, ಹಳೆಯ ಕಸವೆಲ್ಲಾ ದೇಹದಲ್ಲಿ ಉಳಿಯದೆ ಶರೀರ ಡಿಟಾಕ್ಸ್‌ ಆಗುತ್ತಿದ್ದಂತೆ ಕೊಲೆಸ್ಟ್ರಾಲ್‌ ಸಮಸ್ಯೆಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಜೊತೆಗೆ ಟ್ರೈಗ್ಲಿಸರೈಡ್‌ ದಾಸ್ತಾನಿಗೂ ಕತ್ತರಿ ಹಾಕಬಹುದು.

ಕಬ್ಬಿಣದ ಕೊರತೆ ಕಡಿಮೆ

ತಾಮ್ರ ಮತ್ತು ವಿಟಮಿನ್‌ ಬಿ ಕಾಂಪ್ಲೆಕ್ಸ್‌ ಒಣದ್ರಾಕ್ಷಿಯಲ್ಲಿ ಅಪಾರವಾಗಿದೆ. ದೇಹದಲ್ಲಿ ಹೊಸ ರಕ್ತಕಣಗಳು ಸೃಷ್ಟಿಯಾಗಬೇಕಾದರೆ ಕಬ್ಬಿಣ ಮತ್ತು ಬಿ ಕಾಂಪ್ಲೆಕ್ಸ್‌ ಎರಡೂ ಬೇಕು ಹಾಗೂ ಇವೆರಡೂ ಒಣದ್ರಾಕ್ಷಿಯಲ್ಲಿವೆ. ಜೊತೆಗೆ, ತಾಮ್ರದ ಗುಣಗಳು ಕಬ್ಬಿಣವನ್ನು ಹೀರಿಕೊಳ್ಳಲು ನೆರವು ನೀಡುತ್ತವೆ

ರಕ್ತದೊತ್ತಡ ನಿಯಂತ್ರಣ

ಇದಲ್ಲಿರುವ ಪೊಟಾಶಿಯಂ ಅಂಶವು ರಕ್ತದ ಏರೊತ್ತಡವನ್ನು ತಹಬಂದಿಗೆ ತರುವುದರಲ್ಲಿ ಅಗತ್ಯವಾದ ಅಂಶ. ಜೊತೆಗೆ, ಇದರಲ್ಲಿರುವ ನಾರು ಮತ್ತು ಉತ್ಕರ್ಷಣ ನಿರೋಧಕಗಳು ರಕ್ತನಾಳಗಳು ಸಂಕುಚಿತಗೊಳ್ಳದಂತೆ ತಡೆದು, ರಕ್ತದ ಒತ್ತಡ ನಿವಾರಣೆಗೆ ನೆರವಾಗುತ್ತವೆ.

ದೇಹಕ್ಕೆ ಶಕ್ತಿ

ಗ್ಲುಕೋಸ್‌ ಮತ್ತು ಫ್ರಕ್ಟೋಸ್‌- ಈ ಎರಡೂ ನೈಸರ್ಗಿಕವಾದ ಸಕ್ಕರೆಯಂಶಗಳು ಒಣದ್ರಾಕ್ಷಿಯಲ್ಲಿವೆ. ಇದರಿಂದ ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ನೀಡಿ, ದಿನವಿಡೀ ಆಯಾಸ, ಸುಸ್ತು ಕಾಡದಂತೆ ನೆರವಾಗುತ್ತವೆ. ಜೊತೆಗೆ ಕಳ್ಳ-ಸುಳ್ಳು ಹಸಿವೆಗಳನ್ನೂ ಓಡಿಸುತ್ತವೆ.

ಈ ಸುದ್ದಿಯನ್ನೂ ಓದಿ: Health Tips: ಆರೋಗ್ಯ ಬೇಕೆ? ಹಾಗಿದ್ದರೆ ತಡಸಂಜೆಯ ಹೊಟ್ಟೆ ತುಂಬಿಸುವ ಸ್ನ್ಯಾಕ್‌ಗೆ ಕಡಿವಾಣ ಹಾಕಿ!

ಹಲ್ಲುಗಳ ಆರೋಗ್ಯ

ಸಿಹಿದ್ರಾಕ್ಷಿಯನ್ನು ದಿನಾ ತಿನ್ನುತ್ತಿದ್ದರೆ ಹಲ್ಲುಗಳು ಗೋ…ವಿಂದ ಎಂದು ಯೋಚಿಸಿದರೆ- ತಪ್ಪು! ಇದರ ಫೈಟೊಕೆಮಿಕಲ್‌ ಮತ್ತು ಒಲೆನೊಲಿಕ್‌ ಆಮ್ಲಗಳಿಂದ ಹಲ್ಲುಗಳ ಮೇಲಿನ ರಕ್ಷಾಕವಚ ಇನ್ನೂ ಭದ್ರವಾಗುತ್ತದೆ. ರುಚಿಯಾದ ತಿನಿಸಿನಲ್ಲಿ ಇಷ್ಟೊಂದು ಅನುಕೂಲಗಳಿದ್ದರೆ ಬೇಡ ಎನ್ನುವವರುಂಟೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

Doctors at Fortis Hospital remove fish bone from man's stomach for 5 years

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

Breast Cancer Awareness Month celebrated through bikethon

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Pink Strong walkathon to raise awareness among people about breast cancer

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading
Advertisement
Latest4 ನಿಮಿಷಗಳು ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest14 ನಿಮಿಷಗಳು ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest1 ಗಂಟೆ ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

Latest1 ಗಂಟೆ ago

ನಟ, ರಾಜಕಾರಣಿ ವಿಜಯ್‌ ವಿರುದ್ಧ ಕಮಲ್‌ ಹಾಸನ್‌ ಆಕ್ರೋಶ; ಕಾರಣ ಏನು?

Latest1 ಗಂಟೆ ago

ಮಹಿಳಾ ಮೀಸಲಾತಿ ಕಾಂಗ್ರೆಸ್ ವಿರುದ್ಧ ಏಪ್ರಿಲ್. 25ರಂದು ಆಕ್ರೋಶ ಯಾತ್ರೆ: ಬಿಜೆಪಿ

Latest2 ಗಂಟೆಗಳು ago

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

Latest3 ಗಂಟೆಗಳು ago

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

Latest3 ಗಂಟೆಗಳು ago

ಅಮೆರಿಕ ಜತೆ ಮಾತುಕತೆಗೆ ಇರಾನ್‌ ಒಪ್ಪಿಗೆ; ಇಸ್ಲಾಮಾಬಾದ್‌ನತ್ತ ಜಗತ್ತಿನ ಕಣ್ಣು; ಬಗೆಹರಿಯಲಿದೆಯೇ ಬಿಕ್ಕಟ್ಟು?

Latest3 ಗಂಟೆಗಳು ago

ಸಮಾಜದ ಪರಿವರ್ತನೆಗೆ ಬಸವಣ್ಣನ ವಿಚಾರಗಳು ಅತ್ಯಗತ್ಯ: ಸಿಎಂ ಸಿದ್ದರಾಮಯ್ಯ

Latest4 ಗಂಟೆಗಳು ago

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್-ಡಿಎಂಕೆ ಅಭ್ಯರ್ಥಿಗಳ ಪರ ಸಚಿವ ಈಶ್ವರ ಖಂಡ್ರೆ ಪ್ರಚಾರ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌