ಕಾಂಗ್ರೆಸ್‌ನಿಂದ ಬಂಪರ್ ಆಫರ್! ಎಲ್‌ಪಿಜಿ ಬಳಸುವ ಪ್ರತಿ ಕುಟುಂಬಕ್ಕೆ 640 ರೂ. ಸಬ್ಸಿಡಿ! ಇದರಿಂದ 14 ಲಕ್ಷ ಫ್ಯಾಮಿಲಿಗೆ ಲಾಭ - Vistara News

ದೇಶ

ಕಾಂಗ್ರೆಸ್‌ನಿಂದ ಬಂಪರ್ ಆಫರ್! ಎಲ್‌ಪಿಜಿ ಬಳಸುವ ಪ್ರತಿ ಕುಟುಂಬಕ್ಕೆ 640 ರೂ. ಸಬ್ಸಿಡಿ! ಇದರಿಂದ 14 ಲಕ್ಷ ಫ್ಯಾಮಿಲಿಗೆ ಲಾಭ

Congress: ಸದ್ಯದಲ್ಲೇ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಇಂದಿರಾ ಗಾಂಧಿ ಗ್ಯಾಸ್‌ ಸಬ್ಸಿಡಿ ಸ್ಕೀಮ್ ಘೋಷಣೆ ಮಾಡಿದ್ದಾರೆ.

VISTARANEWS.COM


on

Rajasthan Congress Government is introducing LPG Subsidy scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ, ರಾಜಸ್ಥಾನ: ವಿಧಾನಸಭೆ ಚುನಾವಣೆ ಎದುರು ನೋಡುತ್ತಿರುವ ರಾಜಸ್ಥಾನದಲ್ಲಿ (Rajasthan) ಕಾಂಗ್ರೆಸ್ (Congress) ಮತ್ತೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಗ್ಯಾಸ್ ಸಬ್ಸಿಡಿ ನೀಡುವುದನ್ನು ಸ್ಥಗಿತ ಮಾಡಿದೆ. ಈ ಅವಕಾಶವನ್ನು ಬಳಸಿಕೊಂಡಿರುವ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರವು, ರಾಜಸ್ಥಾನದ ಸುಮಾರು 14 ಲಕ್ಷ ಕುಟುಂಬಗಳಿಗೆ ನೆರವಾಗುವ ಯೋಜನೆಯನ್ನು ಪ್ರಕಟಿಸಿದ್ದು, ಪ್ರತಿಯೊಬ್ಬರ ಖಾತೆಗೆ 640 ಸಬ್ಸಿಡಿ ಹಣವನ್ನು ನೀಡಲಿದೆ. ಸೋಮವಾರ ಈ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಹೇಳಲಾಗಿತ್ತು. ಅಂದ ಹಾಗೆ, ಈ ಯೋಜನೆಗೆ ಇಂದಿರಾ ಗಾಂಧಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಸ್ಕೀಮ್ (Indira Gandhi Gas Cylinder Subsidy Scheme) ಎಂದು ಹೆಸರಿಡಲಾಗಿದೆ ಎಂದು ಸಿಎ ಅಶೋಕ್ ಗೆಹ್ಲೋಟ್ (CM Ashok Gehlot) ಅವರು ಹೇಳಿದ್ದಾರೆ.

ಇಂದಿರಾ ಗಾಂಧಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಸ್ಕೀಮ್‌ನಲ್ಲಿ ಅರ್ಹ ಪ್ರತಿಯೊಂದು ಕುಟುಂಬಕ್ಕೆ 640 ರೂ. ಸಬ್ಸಿಡಿ ಹಣ ದೊರೆಯಲಿದೆ. ರಾಜಸ್ಥಾನದಲ್ಲಿ ಸುಮಾರು 14 ಲಕ್ಷ ಕುಟುಂಬಗಳು ಈ ಯೋಜನೆಗೆ ಅರ್ಹವಾಗಲಿವೆ. ಹಾಗಿದ್ದೂ, ಕೇಂದ್ರ ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಅಂಕಿಸಂಖ್ಯೆಗಳನ್ನು ಒದಗಿಸುವಂತೆ ಕೇಳಿಕೊಳ್ಳಲಾಗುವುದು ಎಂದು ಅಶೋಕ್ ಗೆಹ್ಲೋಟ್ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಅರ್ಹ ಕುಟುಂಬಗಳಿಗೆ ನೆರವು ಒದಗಿಸಲು ನಮ್ಮ ಹಂತದಲ್ಲಿ ನಾವು ಈ ಸಂಬಂಧ ಮಾಹಿತಿಯನ್ನು ಕಲೆ ಹಾಕಿದ್ದೇವೆ ಎಂದು ಸಿಎಂ ಹೇಳಿದ್ದಾರೆ. 1000 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗಾಗಿ ಜೋಧ್‌ಪುರಕ್ಕೆ ಭಾನುವಾರ ಭೇಟಿ ನೀಡಿದ್ದ ವೇಳೆ ಸಿಎಂ ಗೆಹ್ಲೋಟ್ ಅವರು ಘೋಷಣೆ ಮಾಡಿದರು.

ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಐದು ಗ್ಯಾರಂಟಿಗಳ ಘೋಷಣೆ ಮಾಡಿ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿತ್ತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ. ಅದೇ ರೀತಿಯ ಉಚಿತ ಯೋಜನೆಗಳನ್ನು ರಾಜಸ್ಥಾನದಲ್ಲೂ ಕಾಂಗ್ರೆಸ್ ಜಾರಿ ಮಾಡಲು ಹೊರಟಿದೆ. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಸಚಿನ್ ಪೈಲಟ್‌ರಿಂದ ಹೊಸ ಪಕ್ಷ, ಜೂನ್ 11ಕ್ಕೆ ಘೋಷಣೆ?

ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಕಾಂಗ್ರೆಸ್‌ನಲ್ಲಿನ ಬಿರುಕು (Rajasthan Congress Crisis) ಮತ್ತುಷ್ಟು ಹೆಚ್ಚಾಗಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ (CM Ashok Gehlot) ಜತೆಗೆ ಮುನಿದುಕೊಂಡಿರುವ ಯುವ ನಾಯಕ ಸಚಿನ್ ಪೈಲಟ್ (Sachin Pilot) ಅವರು, ಪಕ್ಷ ತೊರೆಯುವುದು ಬಹುತೇಕ ಖಚಿತವಾಗಿದೆ. ಚುನಾವಣೆ ಎರಡ್ಮೂರು ತಿಂಗಳು ಇರುವಾಗಲೇ ತಮ್ಮದೇ ಆದ ಪ್ರಗತಿಶೀಲ ಕಾಂಗ್ರೆಸ್ (Pragatisheel Congress) ಪಕ್ಷವನ್ನು ಸ್ಥಾಪಿಸಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ಸಚಿನ್ ಪೈಲಟ್ ಅವರಿಗೆ ಪ್ರಶಾಂತ್ ಕಿಶೋರ್ ನೇತೃತ್ವದ ರಾಜಕೀಯ ಸಲಹಾ ಸಂಸ್ಥೆ ತಜ್ಞ ಸಂಸ್ಥೆ ಐ ಪ್ಯಾಕ್ ನೆರವು ನೀಡುತ್ತಿದೆ ಎನ್ನಲಾಗುತ್ತಿದೆ. ಏಪ್ರಿಲ್ 11ರಂದು ಸಚಿನ್ ಪೈಲಟ್ ಅವರು ಕೈಗೊಂಡಿದ್ದ ಒಂದು ದಿನದ ಸತ್ಯಾಗ್ರಹ ಪ್ಲ್ಯಾನ್ ಕೂಡ ಇದೇ ಸಂಸ್ಥೆಯದ್ದು ಎಂದು ಹೇಳಲಾಗುತ್ತಿದೆ. ವಸಂಧುರಾ ರಾಜೇ ಅವರು ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಒತ್ತಾಯಿಸಿ ಸಚಿನ್ ಪೈಲಟ್ ಸತ್ಯಾಗ್ರಹ ನಡೆಸಿದ್ದರು. ಅಜ್ಮೇರ್‌ನಿಂದ ಜೈಪುರದವರೆಗಿನ ಪಾದಯಾತ್ರೆ ಪ್ಲ್ಯಾನ್ ಕೂಡ ಐಪ್ಯಾಕ್‌ನದ್ದೇ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Congress Guarantee: ಬಾಡಿಗೆದಾರರಿಗೆ ಫ್ರೀ ಕರೆಂಟ್‌ ಶಾಕ್: ಬಾಯಿ ಮಾತು, ಟ್ವೀಟ್‌ನಲ್ಲಷ್ಟೆ ಕಾಂಗ್ರೆಸ್‌ ಗ್ಯಾರಂಟಿ

ಅದಾಗಲೇ ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿನ್ ಪೈಲಟ್ ಅವರು, ಜೂನ್ 11ರಂದು ಪ್ರಮುಖ ಘೋಷಣೆ ಮಾಡುವ ಸಾಧ್ಯತೆ ಇದೆ. ಜೂನ್ 11 ಅವರ ತಂದೆ ರಾಜೇಶ್ ಪೈಟಲ್ ಅವರ ಪುಣ್ಯ ತಿಥಿಯೂ ಹೌದು. ಅಂದು ಯಾತ್ರೆಯನ್ನು ಕೈಗೊಳ್ಳಲಿರುವ ಸಚಿನ್ ಪೈಲಟ್ ಅವರು ಹೊಸ ಪಕ್ಷ ಪ್ರಗತಿಶೀಲ ಕಾಂಗ್ರೆಸ್ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ನಿಕಟ ಸಂಬಂಧ ಹೊಂದಿದ್ದ ಪೊಲೀಸ್‌ ಅಧಿಕಾರಿಯ ಗುಂಡಿನಿಂದ ಹೇಮಂತ್‌ ಕರ್ಕರೆ ಹುತಾತ್ಮರಾದರು ಎಂದು ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Vijay Namdevrao Wadettiwar
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆದಿವೆ. ಪ್ರತಿಸ್ಪರ್ಧಿಗಳ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

“2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ (ಇವರು ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದವರು. ಅಜ್ಮಲ್‌ ಕಸಬ್‌ ಗಲ್ಲಿಗೇರಿಸುವಲ್ಲಿ ಇವರ ಪಾತ್ರವೂ ಇದೆ) ಉಜ್ವಲ್‌ ನಿಕಮ್‌ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್‌ ನಾಯಕ ಅಜ್ಮಲ್‌ ಕಸಬ್‌ ಪರವಾಗಿ ಮಾತನಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡಿದ್ದಾರೆ.

“ಅಜ್ಮಲ್‌ ಕಸಬ್‌ಗೆ ಬಿರಿಯಾನಿ ನೀಡಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ ಉಜ್ವಲ್‌ ನಿಕಮ್‌ ಅವರು ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಯಾರಾದರೂ ಕಸಬ್‌ಗೆ ಬಿರಿಯಾನಿ ಕೊಡುತ್ತಾರಾ? ಇದಾದ ಬಳಿಕ ಕುತಂತ್ರವನ್ನು ಉಜ್ವಲ್‌ ನಿಕಮ್‌ ಒಪ್ಪಿಕೊಂಡರು. ಇವರನ್ನು ಯಾರದರೂ ವಕೀಲ ಎನ್ನುತ್ತಾರಾ? ಇವರು ಎಂತಹ ವಿಶ್ವಾಸಘಾತುಕ ಇರಬಹುದು? ಹೇಮಂತ್‌ ಕರ್ಕರೆ ಅವರಿಗೆ ತಗುಲಿದ ಗುಂಡು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ಪೊಲೀಸ್‌ ಅಧಿಕಾರಿಯ ಗನ್‌ನಿಂದ. ಇಂತಹ ಪ್ರಕರಣದಲ್ಲಿ ಬಿಜೆಪಿಯು ದೇಶದ್ರೋಹಿ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಬಿಜೆಪಿಯು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತದೆಯೇ” ಎಂಬುದಾಗಿ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಪ್ರತಿಕ್ರಿಯಿಸಿದ್ದಾರೆ. “ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ ಅನ್ನು ಭದ್ರಪಡಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಮುಂಬೈ ದಾಳಿಯ ಉಗ್ರನಿಗೆ ಕ್ಲೀನ್‌ ಚಿಟ್‌ ನೀಡುತ್ತಾರೆ ಎಂದರೆ ಇದಕ್ಕಿಂತಹ ಕೆಳ ಹಂತಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಪ್ರಕಾರ, ಹೇಮಂತ್‌ ಕರ್ಕರೆ ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ನಿಂದ ಅಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಹಾಗಾದರೆ, ಕಾಂಗ್ರೆಸ್‌ ಉಗ್ರರನ್ನು ಬೆಂಬಲಿಸುತ್ತದೆ ಎಂದಾಯಿತಲ್ಲವೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading

ದೇಶ

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Narendra Modi:ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಜನ್ಮಭೂಮಿ(Ram Janmbhoomi)ಯಲ್ಲಿ ಶ್ರೀರಾಮ ಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ವಿಶೇಷ ಪೂಜೆ ಬಳಿಕ ಸುಮಾರು ಎರಡು ಕಿಲೋಮೀಟರ್‌ ರೋಡ್‌ ಶೋ(Roadshow) ನಡೆಸಲಿದ್ದಾರೆ. ಶನಿವಾರವೇ ಉತ್ತರಪ್ರದೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷ(SP)ದ ಭದ್ರಕೋಟೆ ಇಟವಾದಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆ ಹಾಗೂ ಧೌರಹರದಲ್ಲಿ ಸಂಜೆ ರ್ಯಾಲಿ ಕೈಗೊಳ್ಳಲಿದ್ದಾರೆ.

ಇದಾದ ಬಳಿಕ ನೇರವಾಗಿ ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ, ಸಂಜೆ 7ಗಂಟೆಗೆ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಸುಮಾರು 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಇನ್ನು ಈ ರೋಡ್‌ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ಮೇ 14ರಂದು ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು. “ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ವಾರಣಾಸಿಯಲ್ಲಿ ಕಾಂಗ್ರೆಸ್ ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಮತ್ತು ಬಿಎಸ್ ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಸುತ್ತಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಚುನಾವಣೆ ನಡೆಯಲಿದೆ

Continue Reading

ದೇಶ

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Police Officer: ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ.

VISTARANEWS.COM


on

Police Officer
Koo

ಭೋಪಾಲ್:‌ ಮರಳು ಮಾಫಿಯಾ, ಗಣಿ ಮಾಫಿಯಾಗೆ ಆಗಾಗ ಪೊಲೀಸರು, ಅಧಿಕಾರಿಗಳು ದೇಶದಲ್ಲಿ ಬಲಿಯಾಗುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ ಮರಳು ಮಾಫಿಯಾ ತಡೆಯಲು ಹೋದ ಅಸಿಸ್ಟಂಟ್‌ ಸಬ್‌-ಇನ್ಸ್‌ಪೆಕ್ಟರ್‌ (ASI) ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಮೃತ ಪೊಲೀಸ್‌ ಅಧಿಕಾರಿಯನ್ನು (Police Officer) ಮಹೇಂದ್ರ ಬಾಗ್ರಿ (Mahendra Bagri) ಎಂಬುದಾಗಿ ಗುರುತಿಸಲಾಗಿದೆ.

ಮಧ್ಯಪ್ರದೇಶದ ಶಾಹ್‌ದೋಲ್‌ ಜಿಲ್ಲೆಯ ನೌಧಿಯಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಶನಿವಾರ ರಾತ್ರಿ (ಮೇ 5) ಒಬ್ಬ ಮಹೇಂದ್ರ ಬಾಗ್ರಿ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ದಂಧೆಕೋರರನ್ನು ಹಿಡಿಯಲು ಮಾಫಿಯಾ ನಡೆಯುವ ಜಾಗಕ್ಕೆ ತೆರಳಿದ್ದರು. ಇದೇ ವೇಳೆ ಎಎಸ್‌ಐ ಅವರು ಮೊದಲು ದಂಧೆಕೋರರ ಬಳಿ ಹೋಗಿದ್ದಾರೆ. ಆಗ ದಂಧೆಕೋರರು ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಿದ್ದಾರೆ. ಇದಾದ ಕೂಡಲೇ ಅವರನ್ನು ರಕ್ಷಿಸಲು ಇಬ್ಬರು ಪೇದೆಗಳು ತೆರಳಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಎಎಸ್‌ಐ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಪೊಲೀಸ್‌ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್‌ ಹರಿಸಿದ ಚಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟಾದರೂ, ಮರಳು ದಂಧೆ ನಡೆಸುತ್ತಿರುವ ಪ್ರಮುಖ ಆರೋಪಿಯು ತಪ್ಪಿಸಿಕೊಂಡು ಹೋಗಿದ್ದಾನೆ. “ನೌಧಿಯಾ ಗ್ರಾಮದ ಸುತ್ತಮುತ್ತ ಮರಳು ಮಾಫಿಯಾ ನಡೆಯುತ್ತಿರುವ ಕುರಿತು ನಿಖರ ಮಾಹಿತಿ ಪಡೆದ ಎಎಸ್‌ಐ ನೇತೃತ್ವದ ತಂಡವು ದಾಳಿ ನಡೆಸಿತ್ತು. ಅರೆಸ್ಟ್‌ ವಾರಂಟ್‌ ಜತೆಗೆ ಪೊಲೀಸರು ತೆರಳಿದ್ದರು. ಇದೇ ವೇಳೆ, ದುಷ್ಕರ್ಮಿಗಳು ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆಗೈದಿದ್ದಾರೆ” ಎಂದು ಶಾಹ್‌ದೋಲ್‌ ಎಡಿಜಿಪಿ ಡಿ.ಸಿ.ಸಾಗರ್‌ ಮಾಹಿತಿ ನೀಡಿದ್ದಾರೆ.

ಎಎಸ್‌ಐ ಹತ್ಯೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. “ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರ, ಮಾಫಿಯಾ, ಅಕ್ರಮ ದಂಧೆಗಳು ಮಿತಿಮೀರಿವೆ. ಸರಾಸರಿ 1.7 ದಿನಕ್ಕೆ ಒಂದರಂತೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಮರಳು ಮಾಫಿಯಾ ಮಿತಿಮೀರಿ ಹೋಗಿದೆ. ಇಷ್ಟಾದರೂ ಆಳುವ ಸರ್ಕಾರವು ಕಣ್ಣುಮುಚ್ಚಿಕೊಂಡು ಕೂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

Continue Reading
Advertisement
Vijay Namdevrao Wadettiwar
ದೇಶ4 mins ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ19 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್31 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202434 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest36 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ1 hour ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ1 hour ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್1 hour ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ1 hour ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌