ನವದೆಹಲಿ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮ ಮಂದಿರ (Ram Mandir) ಉದ್ಘಾಟನೆಯು ಜನವರಿ 22ರಂದು ನಡೆಯಲಿದೆ. ಈ ಕ್ಷಣಗಳು ಹತ್ತಿರವಾಗುತ್ತಿದ್ದಂತೆ ದೇಶದಲ್ಲಿ ರಾಮ ಜಪ ಹೆಚ್ಚಾಗುತ್ತಿದೆ. ಭೋಜಪುರಿ ಸಿಂಗರ್ (Bhojpuri Singer) ಸ್ವಾತಿ ಮಿಶ್ರಾ (Swati Mishra) ಅವರು ಹಾಡಿರುವ ‘ರಾಮ್ ಆಯೇಂಗೆ…’ (‘Ram Aayenge’ bhajan) ಹಾಡು ಭಜನೆ ಜನಪ್ರಿಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೆಚ್ಚುಗೆಯನ್ನೂ ಗಳಿಸಿದೆ.
ಸ್ವಾಮಿ ಮಿಶ್ರಾ ಹಾಡಿರುವ ರಾಮ್ ಆಯೇಂಗೇ ಹಾಡನ್ನು ಎಕ್ಸ್ ವೇದಿಕೆಯಲ್ಲಿ ಷೇರ್ ಮಾಡಿಕೊಂಡಿರುವ ಪ್ರಧಾನಿ ಮೋದಿ ಅವರು, ರಾಮ ಲಲ್ಲಾನನ್ನು ಸ್ವಾಗತಿಸುವ ಭಕ್ತಿ ಭಜನೆಯನ್ನು ಸ್ವಾತಿ ಮಿಶ್ರಾ ಅವರು ಹಾಡಿದ್ದು, ಮೋಡಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ. ರಾಮ್ ಆಯೆಂಗೇ ಹಾಡನ್ನು ಸ್ವಾತಿ ಮಿಶ್ರಾ ಅವರು 2023ರ ಅಕ್ಟೋಬರ್ ತಿಂಗಳಲ್ಲಿ ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದರು. ಇಲ್ಲಿಯವರೆಗೆ ಈ ಹಾಡು ಸುಮಾರು 43 ಲಕ್ಷ ವೀವ್ಸ್ ಕಂಡಿದೆ.
Prime Minister @narendramodi shares devotional bhajan sung by #SwatiMishra welcoming Shri #RamLalla. #ShriRamBhajan pic.twitter.com/B4pcbrZlr0
— All India Radio News (@airnewsalerts) January 3, 2024
ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಗಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಅಂದು ಗರ್ಭಗುಡಿಯಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಧಾರ್ಮಿಕ ವಿಧಿ ವಿಧಾನಗಳಲ್ಲಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.
ನಾನು ಆಶೀರ್ವದಿತನಾಗಿದ್ದೇನೆ ಎಂದು ಭಾವಿಸುತ್ತೇನೆ. ಇಂಥದೊಂದು ಐತಿಹಾಸಿಕ ಕ್ಷಣಕ್ಕೆ ನನ್ನ ಜೀವಿತಾವಧಿಯಲ್ಲಿ ಸಾಕ್ಷಿಯಾಗುತ್ತಿರವುದು ನನ್ನ ಸುದೈವ ಎಂದು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದರು.
श्री राम लला के स्वागत में स्वाति मिश्रा जी का भक्ति से भरा यह भजन मंत्रमुग्ध करने वाला है…#ShriRamBhajanhttps://t.co/g2u1RhPpqO
— Narendra Modi (@narendramodi) January 3, 2024
ಜನವರಿ 16ರಿಂದ ಆರಂಭವಾಗಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು (Consecration Ceremony) ಏಳು ದಿನಗಳ ಕಾಲ ನಡೆಯಲಿದ್ದು, ಧಾರ್ಮಿಕ ವಿಧಿ ವಿಧಾನಗಳು ದೊಡ್ಡ ಮಟ್ಟದಲ್ಲಿ ನೆರವೇರಲಿವೆ. ಜನವರಿ 22ರಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಮ್ಮುಖದಲ್ಲಿ ಶ್ರೀ ರಾಮ ಲಲ್ಲಾ (Shri Ram Lalla) ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಒಂದು ವಾರಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಜನವರಿ 16
ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರಿಂದ ಸರಯೂ ನದಿಯ ದಡದಲ್ಲಿ ದಶವಿದ್ ಸ್ನಾನ, ವಿಷ್ಣು ಪೂಜೆ ಮತ್ತು ಗೋದಾನ.
ಜನವರಿ 17
ರಾಮಲಲ್ಲಾ ಮೂರ್ತಿಯೊಂದಿಗೆ ಅಯೋಧ್ಯೆಯಲ್ಲಿ ಮೆರವಣಿಗೆ ನಡೆಯಲಿದ್ದು, ಭಕ್ತರು ಮಂಗಲ ಕಲಶದಲ್ಲಿ ಸರಯು ಜಲವನ್ನು ಹೊತ್ತು ದೇವಸ್ಥಾನಕ್ಕೆ ಬರಲಿದ್ದಾರೆ.
ಜನವರಿ 18
ಗಣೇಶ ಅಂಬಿಕಾ ಪೂಜೆಗಳೊಂದಿಗೆ ಔಪಚಾರಿಕ ಪೂಜಾ ವಿಧಿ ವಿಧಾನಗಳು ಶುರುವಾಗಲಿವೆ. ವರುಣ ಪೂಜೆ, ಮತ್ರಿಕಾ ಪೂಜೆ, ಬ್ರಾಹ್ಮಿಣ್ ವರನ್, ವಾಸ್ತು ಪೂಜೆ ಸೇರಿದಂತೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.
ಜನವರಿ 19
ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ಮತ್ತು ಹವನ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಜನವರಿ 20
ದೇವಾಲಯದ ಗರ್ಭಗುಡಿಯನ್ನು ಸರಯುವಿನ ಪವಿತ್ರ ನೀರಿನಿಂದ ತೊಳೆದ ನಂತರ ವಾಸ್ತು ಶಾಂತಿ ಪೂಜಾ ವಿಧಿವಿಧಾನಗಳು ನಡೆಯಲಿವೆ.
ಜನವರಿ 21
125 ಕಲಶಗಳಿರುವ ದೈವ ಸ್ನಾನದ ನಂತರ ಶಯಾಧಿವಾಸ ನಡೆಯಲಿದೆ.
ಜನವರಿ 22
ಬೆಳಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರ ನಕ್ಷತ್ರದಲ್ಲಿ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ನಡೆಯಲಿದೆ.
ಪ್ರಾಣ ಪ್ರತಿಷ್ಠಾಪನೆಯ ಮುಹೂರ್ತ ಯಾವಾಗ?
ಜನವರಿ 22ರಂದು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠಾಪನೆಯು ಸರಿಯಾಗಿ ಮಧ್ಯಾಹ್ನ 12:29:8 ಶುರುವಾಗಿ, 12:30:32ಕ್ಕೆ ಅಂದರೆ 1 ನಿಮಿಷ 24 ಸೆಕೆಂಡ್‌ಗಳಲ್ಲಿ ಪೂರ್ಣಗೊಳ್ಳಲಿದೆ. ಬಳಿಕ ಆರತಿ ನಡೆಯುತ್ತದೆ. ದೇಗುಲದಲ್ಲಿ ಪ್ರಸಾದ ಹಂಚಿಕೆ ನಡೆಯುತ್ತದೆ. ಸಂಜೆಯ ವೇಳೆಗೆ ಅಯೋಧ್ಯೆಯಲ್ಲಿ ದೀಪಗಳನ್ನು ಬೆಳಗಲಾಗುತ್ತದೆ.
ಈ ಸುದ್ದಿಯನ್ನೂ ಓದಿ: Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ 7 ದಿನ ಯಾವೆಲ್ಲ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ?