Site icon Vistara News

Ram Mandir: ರಾಮಮಂದಿರದಲ್ಲಿ ಚಿನ್ನಲೇಪಿತ ಸಿಂಹಾಸನದ ಮೇಲೆ ರಾಮಲಲ್ಲಾ; ಟ್ರಸ್ಟ್‌ ಘೋಷಣೆ

Ram Lalla

Ram Lalla's idol to be placed on 8 Feet tall gold plated throne inside Ayodhya Ram Mandir

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಇನ್ನು ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇದರ ಬೆನ್ನಲ್ಲೇ, “ರಾಮಮಂದಿರದ ಗರ್ಭಗುಡಿಯಲ್ಲಿ 10 ಅಡಿ ಎತ್ತರದ, ಚಿನ್ನಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ” ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಘೋಷಿಸಿದೆ.

“ಚಿನ್ನಲೇಪಿತ ಅಮೃತಶಿಲೆಯ ಸಿಂಹಾಸನವು 8 ಅಡಿ ಎತ್ತರ, 3 ಅಡಿ ಎತ್ತರ ಹಾಗೂ 4 ಅಡಿ ಅಗಲ ಇರಲಿದೆ. ಇದನ್ನು ರಾಜಸ್ಥಾನದ ಕಲಾವಿದರೊಬ್ಬರು ವಿನ್ಯಾಸ ಮಾಡಿದ್ದಾರೆ. ಡಿಸೆಂಬರ್‌ 15ರಂದು ಚಿನ್ನಲೇಪಿತ ಸಿಂಹಾಸನವು ಅಯೋಧ್ಯೆ ತಲುಪಲಿದೆ. ಈಗಾಗಲೇ ಮಂದಿರದ ಗರ್ಭಗುಡಿ ನಿರ್ಮಾಣ ಪೂರ್ಣಗೊಂಡಿದೆ. ಡಿಸೆಂಬರ್‌ 15ರ ವೇಳೆಗೆ ನೆಲಮಹಡಿ ಪೂರ್ಣಗೊಳ್ಳಲಿದೆ” ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸದಸ್ಯ ಅನಿಲ್‌ ಮಿಶ್ರಾ ಮಾಹಿತಿ ನೀಡಿದ್ದಾರೆ.

ಹೀಗೆ ನಡೆಯುತ್ತಿದೆ ಮಂದಿರ ನಿರ್ಮಾಣ ಕಾರ್ಯ

ಇದನ್ನೂ ಓದಿ: Ram Mandir: ರಾಮಮಂದಿರ ಅರ್ಚಕರು, ಸಿಬ್ಬಂದಿ ಸಂಬಳ 40% ಹೆಚ್ಚಳ; ಇವರ ವೇತನ ಎಷ್ಟು?

ಜನವರಿ 22ರಂದು ಗರ್ಭಗೃಹದಲ್ಲಿ ರಾಮ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂಬ ಸುದ್ದಿಯನ್ನು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಖಚಿತಪಡಿಸಿದ್ದಾರೆ. ಈ ಉದ್ಘಾಟನೆಯ ಸಮಾರಂಭಕ್ಕೆ ಹಾಜರಾಗುವಂತೆ ನೀಡಲಾಗಿರುವ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.‌

ಆರ್‌ಎಸ್‌ಎಸ್‌ಗೆ ಕಾರ್ಯಕ್ರಮಗಳ ಆಯೋಜನೆ ಹೊಣೆ

ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Ram Mandir: ಜನವರಿ 22ಕ್ಕೆ ರಾಮ ಮಂದಿರ ಉದ್ಫಾಟನೆ, ಆಹ್ವಾನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version