Ram Mandir: ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ - Vistara News

ದೇಶ

Ram Mandir: ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ

Ram Mandir: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ.

VISTARANEWS.COM


on

advani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ (Ram Mandir)ದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ (L.K. Advani) ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (Vishva Hindu Parishad) ತಿಳಿಸಿದೆ. ರಾಮ ಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಅಡ್ವಾಣಿ ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ವಿಎಚ್​ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

2023ರ ಡಿಸೆಂಬರ್‌ನಲ್ಲಿ ವಿಎಚ್​ಪಿ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಅಡ್ವಾಣಿ (96) ಮತ್ತು ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ (89) ಅವರಿಗೆ ಆಹ್ವಾನ ಪತ್ರಿಕೆ ಕಳುಹಿಸಿತ್ತು. ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಡ್ವಾಣಿ ಅವರಿಗೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

ಚರ್ಚೆಗೆ ಗ್ರಾಸವಾಗಿತ್ತು

ಈ ಹಿಂದೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದರು. 1990ರ ದಶಕದಲ್ಲಿ ರಾಮ ಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ರಾಮ ಮಂದಿರದ ಕಾರ್ಯಕ್ರಮದಿಂದ ದೂರವಿರಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.

ರಾಮಮಂದಿರ ಉದ್ಘಾಟನೆಗೆ ಹೋಗದಿರಲು ಸೋನಿಯಾ, ಖರ್ಗೆ ನಿರ್ಧಾರ

ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್‌ ತೀರ್ಮಾನಿಸಿದೆ. “ಇದು ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕ್ರಮವಾಗಿರುವ ಕಾರಣ ತೆರಳುವುದಿಲ್ಲ” ಎಂದು ಕಾಂಗ್ರೆಸ್‌ ಪ್ರಕಟಣೆಯಲ್ಲಿ ತಿಳಿಸಿದೆ. ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಈ ಕುರಿತು ಪ್ರಕಟಣೆ ಹೊರಡಿಸಿದ್ದರು. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಅಧೀರ್‌ ರಂಜನ್‌ ಚೌಧರಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲಾಗಿದೆ. ಭಗವಾನ್‌ ಶ್ರೀರಾಮನನ್ನು ಕೋಟ್ಯಂತರ ಜನ ಆರಾಧಿಸುತ್ತಾರೆ. ಅಷ್ಟಕ್ಕೂ ಧರ್ಮವು ವೈಯಕ್ತಿಕ ವಿಚಾರವಾಗಿದೆ. ಅಷ್ಟಕ್ಕೂ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕ್ರಮವನ್ನಾಗಿ ರೂಪಿಸಲಾಗಿದೆ. ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಕಾರ್ಯಕ್ರಮವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ, ಕಾಂಗ್ರೆಸ್‌ ನಾಯಕರು ರಾಮಮಂದಿರ ಉದ್ಘಾಟನೆಗೆ ತೆರಳದಿರಲು ತೀರ್ಮಾನಿಸಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು. ಈ ಕ್ರಮವನ್ನು ಬಿಜೆಪಿ ಟೀಕಿಸಿದೆ.

ಭರದ ಸಿದ್ಧತೆ

ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಸುಮಾರು 7 ಸಾವಿರ ಮಂದಿ ಭಾಗವಹಿಸಲಿದ್ದು, ಈಗಾಗಲೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ. ‘ಪ್ರಾಣ ಪ್ರತಿಷ್ಠಾಪನೆ’ಯ ಪೂಜೆಯು ಜನವರಿ 16ರಿಂದ ಪ್ರಾರಂಭವಾಗಲಿದೆ.

ಇದನ್ನೂ ಓದಿ: Ram Mandir: ರಾಮ ಮಂದಿರ ಉದ್ಘಾಟನೆಗೆ ಆಡ್ವಾಣಿ, ಜೋಶಿಗೆ ವಿಹಿಂಪ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Union Budget 2024 : ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ‘ಚೊಂಬು’ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

Union Budget 2024 : ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ.

VISTARANEWS.COM


on

Union Budget 2024
Koo

ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್​ನಲ್ಲಿ (Union Budget 2024) ಕರ್ನಾಟಕದ ಜನತೆಗೆ ‘ಚೊಂಬು’ ಕೊಟ್ಟಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಜೆಟ್​ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾಗಿರುವ ಹೊರತಾಗಿಯೂ ತಮ್ಮ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ. ಅವರು ತಮ್ಮ ಮೈತ್ರಿಯ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದಾರೆ. ಹೀಗಾಗಿ ಇಂಡಿಯಾ ಮೈತ್ರಿಕೂಟ ಇರುವ ರಾಜ್ಯಗಳಿಗೆ ಅನ್ಯವಾಯವಾಗಿದೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದ ಜನರ ಬಗ್ಗೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದೆ. ಇದರ ಜೆತಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬಜೆಟ್ ಅನ್ನು ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ‘ಕುರ್ಚಿ ಉಳಿಸುವ ಕಸರತ್ತು’ ಎಂದು ಹೇಳಿದ್ದಾರೆ.

ಜೆಟ್ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಈ ಕಲ್ಪನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯ ನಕಲು ಎಂದು ಹೇಳಿದ್ದಾರೆ, ಚುನಾವಣಾ ಫಲಿತಾಂಶದ ನಂತರ ಹಣಕಾಸು ಸಚಿವರು ಕಾಂಗ್ರೆಸ್​ನ ಲೋಕಸಭಾ ಪ್ರಣಾಳಿಕೆಯನ್ನು ಓದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ 30ನೇ ಪುಟದಲ್ಲಿ ವಿವರಿಸಿರುವ ಉದ್ಯೋಗ-ಸಂಬಂಧಿತ ಪ್ರೋತ್ಸಾಹ ಧನವನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಟಿಎಂಸಿ ಹೇಳಿದ್ದೇನು?

ಪಶ್ಚಿಮ ಬಂಗಾಳದ ಪ್ರತಿವರ್ಷ ಪ್ರವಾಹವನ್ನು ಎದುರಿಸುತ್ತಿದ್ದರೂ ಪಶ್ಚಿಮ ಬಂಗಾಳಕ್ಕೆ ಪ್ರವಾಹ ಪರಿಹಾರ ಕಾರ್ಯಕ್ರಮವನ್ನು ಘೋಷಿಸಿಲ್ಲ. ಟಿಎಂಸಿ ಸಂಸದ ಸಾಕೇತ್ ಗೋಖಲೆ ಮಾತನಾಡಿ ಕೇಂದ್ರವು ಉದ್ದೇಶಪೂರ್ವಕವಾಗಿ ಬಂಗಾಳದ ಜನರನ್ನು ನಿರ್ಲಕ್ಷಿಸುತ್ತಿದೆ ಮತ್ತು ಹೊರಹಾಕುತ್ತಿದೆ ಎಂದು ಆರೋಪಿಸಿದರು.

ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ, ಮಾತನಾಡಿ, ಬಿಹಾರಕ್ಕೆ ನೆರವು ಅಗತ್ಯವಿತ್ತು. ಅದಕ್ಕೆ ಬೇಡಿಕೆಯೂ ಇತ್ತು.
ಆಂಧ್ರಪ್ರದೇಶಕ್ಕೂ ನೀಡಿರುವುದು ಸರಿಯಾಗಿದೆ. ಆದರೆ ತೆಲಂಗಾಣ, ಪಂಜಾಬ್ ಮತ್ತು ಪಶ್ಚಿಮ ಬಂಗಾಳಕ್ಕೆ ನೀವು ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ನಾಯಕರ ಪ್ರತಿಭಟನೆ

ಕೇಂದ್ರ ಬಜೆಟ್ 2024 ರಲ್ಲಿ ಕೇಂದ್ರ ಸರ್ಕಾರವು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಪಂಜಾಬ್​​ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ಪಂಜಾಬ್ ಕುರಿತು ತಾರತಮ್ಯ ನಿಲ್ಲಿಸಬೇಕು ಎಂದು ಆರೋಪಿಸಿದರು.

ಬಿಹಾರ, ಆಂಧ್ರ ದೊಡ್ಡ ಫಲಾನುಭವಿ

ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಕ್ರಮವಾಗಿ 26,000 ಕೋಟಿ ಮತ್ತು 15,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಬಿಹಾರ ಮುಖ್ಯಮಂತ್ರಿ ನೇತೃತ್ವದ ಜನತಾದಳ (ಯುನೈಟೆಡ್) ಕೇಂದ್ರದಲ್ಲಿ ಬಿಜೆಪಿಯ ಪ್ರಮುಖ ಮಿತ್ರಪಕ್ಷಗಳಾಗಿವೆ. ಆಂಧ್ರಪ್ರದೇಶ ಮತ್ತು ಬಿಹಾರದ ರಾಜಕೀಯ ಪಕ್ಷಗಳು 2014 ರಿಂದ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: Union Budget 2024 : ಬಜೆಟ್​ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!

ಹಿಮಾಚಲ, ಅಸ್ಸಾಂ, ಉತ್ತರಾಖಂಡಕ್ಕೆ ಪ್ರವಾಹ ಪರಿಹಾರ

ಹಲವಾರು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಕ್ರಮಗಳು ಮತ್ತು ನೀರಾವರಿ ಯೋಜನೆಗಳನ್ನು ಹೆಚ್ಚಿಸಲು. ಸಚಿವೆ ನಿರ್ಮಲಾ ಸೀತಾರಾಮನ್ 11,500 ಕೋಟಿ ರೂ.ಗಳ ಸಮಗ್ರ ಆರ್ಥಿಕ ಬೆಂಬಲ ಯೋಜನೆ ಘೋಷಿಸಿದ್ದಾರೆ. ಬಿಹಾರವು ಆಗಾಗ್ಗೆ ಪ್ರವಾಹದಿಂದ ಬಳಲುತ್ತಿದೆ. ಪ್ರತಿ ವರ್ಷ ಪ್ರವಾಹದಿಂದ ತತ್ತರಿಸುವ ಅಸ್ಸಾಂ, ಪ್ರವಾಹ ನಿರ್ವಹಣೆ ಮತ್ತು ಸಂಬಂಧಿತ ಯೋಜನೆಗಳಿಗೆ ನೆರವು ಪಡೆಯಲಿದೆ ಎಂದು ಹೇಳಿದ್ದಾರೆ.

ಕಂಗಾನಾ ಏನಂದರು?

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿರುವ ಹಿಮಾಚಲ ಪ್ರದೇಶಕ್ಕೆ ಆರ್ಥಿಕ ನೆರವು ನೀಡಿರುವುದನ್ನು ಶ್ಲಾಘಿಸಿದ ಮಂಡಿ ಸಂಸದೆ ಕಂಗನಾ ರಣಾವತ್​​ , “ಹಿಮಾಚಲ ಪ್ರದೇಶಕ್ಕೆ ಪರಿಹಾರ ನಿಧಿಯ ಭರವಸೆ ನೀಡಲಾಗಿದೆ. ಬಜೆಟ್ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

Continue Reading

ದೇಶ

Union Budget 2024: ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಗುಡ್‌ನ್ಯೂಸ್‌! ಮೊಬೈಲ್‌ ಫೋನ್‌, ಚಾರ್ಜರ್‌ ಬೆಲೆ ಅಗ್ಗ

Union Budget 2024: ಮುಂದಿನ ದಿನಗಳಲ್ಲಿ ಟೆಕ್ ಮಾಡುಕಟ್ಟೆಯಲ್ಲಿ ಕೆಲವು ಅಭಿವೃದ್ಧಿ ಕಾಣಲಿದ್ದು, ಮೊಬೈಲ್​, ಚಾರ್ಜರ್ ಬೆಲೆ ಇಳಿಕೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು. ಕೇಂದ್ರದ ಈ ಬಾರಿಯ ಬಜೆಟ್​ನಲ್ಲಿ ಮೊಬೈಲ್‌ ಫೋನ್‌ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು. ಮೊಬೈಲ್‌ ಫೋನ್, ಮೊಬೈಲ್‌ ಚಾರ್ಜರ್​ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದರು.

VISTARANEWS.COM


on

Union Budget 2024
Koo

ಹೊಸದಿಲ್ಲಿ: ಈ ಬಾರಿಯ ಕೇಂದ್ರ ಬಜೆಟ್‌(Union Budget 2024)ನಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಗುಡ್​ ನ್ಯೂಸ್ ನೀಡಲಾಗಿದೆ. ಮೊಬೈಲ್ ಫೋನ್‌(Mobile Phones)ಗಳ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಅಲ್ಲದೇ ಮೊಬೈಲ್, ಚಾರ್ಜರ್​ ಬೆಲೆ ಮತ್ತಷ್ಟು ಅಗ್ಗ ಆಗಲಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Seetharaman) ತಮ್ಮ ಬಜೆಟ್‌ ಭಾಷಣ(Budget Speech)ದಲ್ಲಿ ಹೇಳಿದ್ದಾರೆ. ಮೊಬೈಲ್ ಫೋನ್ ಮತ್ತು ಚಾರ್ಜರ್‌ಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 15ಕ್ಕೆ ಇಳಿಸಲಾಗುವುದು. ಸರ್ಕಾರದ ಈ ಕ್ರಮದಿಂದಾಗಿ ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಬೆಲೆ ಕಡಿಮೆಯಾಗಲಿದೆ ಎಂದು ಘೋಷಿಸಿದ್ದಾರೆ.

ಮುಂದಿನ ದಿನಗಳಲ್ಲಿ ಟೆಕ್ ಮಾಡುಕಟ್ಟೆಯಲ್ಲಿ ಕೆಲವು ಅಭಿವೃದ್ಧಿ ಕಾಣಲಿದ್ದು, ಮೊಬೈಲ್​, ಚಾರ್ಜರ್ ಬೆಲೆ ಇಳಿಕೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು. ಕೇಂದ್ರದ ಈ ಬಾರಿಯ ಬಜೆಟ್​ನಲ್ಲಿ ಮೊಬೈಲ್‌ ಫೋನ್‌ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು. ಮೊಬೈಲ್‌ ಫೋನ್, ಮೊಬೈಲ್‌ ಚಾರ್ಜರ್​ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದರು.

ಇನ್ನು ಮೊಬೈಲ್, ಚಾರ್ಜರ್ ಬೆಲೆ ಇಳಿಕೆ ಮಾಡುತ್ತಿದ್ದಂತೆ, 6 ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆ 3 ಪಟ್ಟು ಅಧಿಕವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಅಷ್ಟೇ ಅಲ್ಲದೇ ಮೊಬೈಲ್ ಬಿಡಿ ಭಾಗಗಳ ತೆರಿಗೆ ಕಡಿತ ಮಾಡಲಾಗುವುದು ಎಂದು ತಿಳಿಸಿದರು. ಜೊತೆಗೆ ಸೋಲಾರ್ ಸೆಲ್, ಸೋಲಾರ್ ಪ್ಯಾನೆಲ್‌ಗಳ ಬೆಲೆಯೂ ಇಳಿಕೆಯಾಗಲಿದೆ ಎಂದು ಹೇಳಿದರು. ಕಳೆದ ಹಲವು ವರ್ಷಗಳಿಂದ ಮೊಬೈಲ್ ಉದ್ಯಮವು ಪ್ರಬುದ್ಧವಾಗಿದೆ ಎಂದು ಹೇಳಿದರು. ಮೊಬೈಲ್ ಫೋನ್, PCBA ಮತ್ತು ಚಾರ್ಜರ್‌ನಲ್ಲಿ 15%ಕ್ಕೆ BCD ಕಡಿತವು ಭಾರತೀಯ ಮೊಬೈಲ್ ಫೋನ್ ಉತ್ಪಾದನಾ ಪರಿಸರ ವ್ಯವಸ್ಥೆಯ ದೇಶೀಯ ಉತ್ಪಾದನಾ ಸಾಮರ್ಥ್ಯದಲ್ಲಿ ವಿಶ್ವಾಸವನ್ನು ಹೊರಹಾಕುತ್ತದೆ. ಇದು M-SIPS, SPECS ಮತ್ತು PLI ಯೋಜನೆಗಳು BCD ಯಂತಹ ಪ್ರಮುಖ ಭಾಗಗಳಲ್ಲಿ ಅನೇಕ ಹಣಕಾಸಿನ ಮಧ್ಯಸ್ಥಿಕೆಗಳ ಮೂಲಕ ಲಾಭ ಪಡೆದಿದೆ.

ಭಾರತದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಹೇಗಿದೆ?

ಗುರುವಾರ ಬಿಡುಗಡೆಯಾದ ವರದಿಯ ಪ್ರಕಾರ, ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ (Q2) ಸಾಧಾರಣ 1 ಶೇಕಡಾ ಬೆಳವಣಿಗೆಯನ್ನು ಕಂಡಿತು, ಒಟ್ಟು 36.4 ಮಿಲಿಯನ್ ಯುನಿಟ್‌ಗಳನ್ನು ರವಾನಿಸಲಾಗಿದೆ. Xiaomi ಆರು ತ್ರೈಮಾಸಿಕಗಳ ನಂತರ ಅಗ್ರ ಸ್ಥಾನವನ್ನು ಪಡೆದುಕೊಂಡಿತು, 6.7 ಮಿಲಿಯನ್ ಯುನಿಟ್‌ಗಳ ಮಾರಾಟದೊಂದಿಗೆ ಮಾರುಕಟ್ಟೆ ಶೇ.18ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ.

ಇನ್ನು ವಿವೋ ಮತ್ತು ಓಪ್ಪೋ ಮಾರಾಟ ಪ್ರಮಾಣ ನೋಡುವುದಾದರೆ Xiaomi ಮೊಬೈಲ್‌ ಫೋನ್‌ ನಂತರ ಅಗ್ರ ಸ್ಥಾನಗಳನ್ನು ಪಡೆದುಕೊಂಡಿವೆ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕ್ಯಾನಲಿಸ್ ಪ್ರಕಾರ, ಕೈಗೆಟುಕುವ ದರದಲ್ಲಿ 5G ಮೊಬೈಲ್‌ಗಳನ್ನು ಗ್ರಾಹಕರಿಗೆ ನೀಡುತ್ತಿರುವ ವೀವೋ 6.7 ಮಿಲಿಯನ್ ಯುನಿಟ್‌ಗಳ ಮಾರಾಟಟವಾಗಿದೆ. ಸ್ಯಾಮ್‌ಸಂಗ್ 6.1 ಮಿಲಿಯನ್ ಯುನಿಟ್‌ಗಳನ್ನು ಮಾರಾಟದೊಂದಿಗೆ ಮೂರನೇ ಸ್ಥಾನದಲ್ಲಿದೆ. Realme ಮತ್ತು OPPO (OnePlus ಹೊರತುಪಡಿಸಿ) ಕ್ರಮವಾಗಿ 4.3 ಮಿಲಿಯನ್ ಮತ್ತು 4.2 ಮಿಲಿಯನ್ ಯೂನಿಟ್‌ಗಳ ಮಾರಾಟದೊಂದಿಗೆ ಐದನೇ ಸ್ಥಾನ ಗಿಟ್ಟಿಸಿಕೊಂಡಿವೆ

ಇದನ್ನೂ ಓದಿ:Union Budget 2024: 7 ಬಜೆಟ್‍ಗಳಲ್ಲಿ 7 ಬಣ್ಣದ ಸೀರೆ ಧರಿಸಿ ಮಿಂಚಿದ ನಿರ್ಮಲಾ ಸೀತಾರಾಮನ್!

Continue Reading

ಉದ್ಯೋಗ

IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

IBPS: ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು–XIV) ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) 6,128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಿ ಜುಲೈ 28ರ ತನಕ ಅವಕಾಶ ನೀಡಲಾಗಿದೆ.

VISTARANEWS.COM


on

IBPS
Koo

– ಆರ್‌.ಕೆ.ಬಾಲಚಂದ್ರ
ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ , ಸಾಫ್ಟ್‌ ಸ್ಕಿಲ್‌ ತರಬೇತುದಾರರು, ವೃತ್ತಿ ಮಾರ್ಗದರ್ಶಕರು

ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು–XIV)ನಡೆಸುತ್ತಿದ್ದು, ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6,128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಜುಲೈ 28ರ ತನಕ ಅವಕಾಶವಿದೆ (Job Alert).

ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.  ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮಸಂಖ್ಯೆಬ್ಯಾಂಕ್‌ನ ಹೆಸರುಹುದ್ದೆಗಳು
1ಬ್ಯಾಂಕ್ ಆಫ್ ಇಂಡಿಯಾ    5
2ಕೆನರಾ ಬ್ಯಾಂಕ್364
3ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ  49
4ಇಂಡಿಯನ್ ಓವರ್ಸೀಸ್ ಬ್ಯಾಂಕ್  14
5ಪಂಜಾಬ್ ನ್ಯಾಷನಲ್ ಬ್ಯಾಂಕ್  15
6ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್  10
ಒಟ್ಟು457

ಜುಲೈ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 28, 2024 ಕೊನೆ ದಿನ (IBPS).

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕ ಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು (IBPS).

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ: ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ: ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ: ಏಪ್ರಿಲ್ 2025
  • ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 28.07.2024

ಅರ್ಜಿ ಸಲ್ಲಿಸುವಾಗ

ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ/ಜಿಲ್ಲೆಗಳಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯ ರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪರೀಕ್ಷೆಗಳ ಸ್ವರೂಪ ಹೀಗಿದೆ:

ಪೂರ್ವ ಭಾವಿ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು  ಪರೀಕ್ಷೆಯ ಮಾಧ್ಯಮಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಇಂಗ್ಲಿಷ್303020 ನಿಮಿಷಗಳು
2ಸಂಖ್ಯಾತ್ಮಕಸಾಮರ್ಥ್ಯ(Numerical Ability)  ಕನ್ನಡಕೊಂಕಣಿಇಂಗ್ಲಿಷ್ಮತ್ತುಹಿಂದಿ –ಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ  353520 ನಿಮಿಷಗಳು
3ತಾರ್ಕಿಕಸಾಮರ್ಥ್ಯ353520 ನಿಮಿಷಗಳು
 ಒಟ್ಟು 10010060 ನಿಮಿಷಗಳು

ಕನ್ನಡದಲ್ಲಿ ಪರೀಕ್ಷೆ

ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.(ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ಮರೆಯದಿರಿ)

ಹೇಗೆ ಭಿನ್ನವಾಗಿವೆ?

ಸಂಖ್ಯಾ ಸಾಮರ್ಥ್ಯ ಪರೀಕ್ಷೆಯು ಒಂದು ಮೂಲಭೂತ ಕೌಶಲ. ಇದರ ಮೂಲಕ ಸಂಖ್ಯೆಗಳ ವಿಷಯದಲ್ಲಿ ಅಭ್ಯರ್ಥಿಗಿರುವ ವೇಗ ಹಾಗೂ ನಿಖರತೆಯನ್ನು ಪರೀಕ್ಷಿಸಲಾಗುತ್ತದೆ. ಸಂಖ್ಯಾ ಸಾಮರ್ಥ್ಯ ಪರೀಕ್ಷೆಯಲ್ಲಿ, ಲೆಕ್ಕಾಚಾರದ ಸಾಮರ್ಥ್ಯ ಮತ್ತು ನಿಖರತೆಯನ್ನು ಸರಳ ಸಂಖ್ಯೆಯ ಪ್ರಶ್ನೆಗಳ ಮೂಲಕ ಪರೀಕ್ಷಿಸಲಾಗುತ್ತದೆ.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಅಭ್ಯರ್ಥಿಗಳು ಐಬಿಪಿಎಸ್ ನಿರ್ಧರಿಸಿದಂತೆ ಮೂರು ಪರೀಕ್ಷೆಗಳಲ್ಲಿಯೂ ಕಟ್-ಆಫ್ ಅಂಕಗಳನ್ನು ಪಡೆಯುವದರ ಮೂಲಕ ಅರ್ಹತೆ ಪಡೆಯಬೇಕು. ಪ್ರತಿ ವರ್ಗದಲ್ಲಿ ಸಾಕಷ್ಟು ಸಂಖ್ಯೆಯ ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಯಲ್ಲಿ ಭಾಗವಹಿಸುವುದರಿಂದ ಕೇವಲ ಪಾಸಾದರೆ ಸಾಕಾಗುವುದಿಲ್ಲ. ಅವಶ್ಯಕತೆಗಳಿಗೆ ತಕ್ಕಂತೆ ಆನ್‌ಲೈನ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಮಾತ್ರ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಮುಖ್ಯಪರೀಕ್ಷೆ

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು (ಅನುಕ್ರಮದಿಂದ ಅಲ್ಲ)ಪರೀಕ್ಷೆ ಮಧ್ಯಮ  ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಆಂಗ್ಲ404035 ನಿಮಿಷಗಳು
2ಸಾಮಾನ್ಯ/ಹಣಕಾಸುಅರಿವು  ಕನ್ನಡಕೊಂಕಣಿಇಂಗ್ಲಿಷ್ಮತ್ತುಹಿಂದಿ –ಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ505035 ನಿಮಿಷಗಳು
3ತಾರ್ಕಿಕಸಾಮರ್ಥ್ಯ& ಕಂಪ್ಯೂಟರ್ಆಪ್ಟಿಟ್ಯೂಡ್506045 ನಿಮಿಷಗಳು
4ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್505045 ನಿಮಿಷಗಳು
 ಒಟ್ಟು 190200160 ನಿಮಿಷಗಳು

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಪ್ರಶ್ನೆ ಅರ್ಥಮಾಡಿಕೊಳ್ಳುವುದರ ಜೊತೆಗೆ ಅದನ್ನ ಬಿಡಿಸಲು ಜ್ಞಾನದ ಮೂಲವನ್ನು (Basic concept) ಅನ್ವಯಿಸುವುದು ಮುಖ್ಯ ಉದ್ದೇಶವಾಗಿದೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಬೀಜಗಣಿತ ಮತ್ತು ಅಭಿವ್ಯಕ್ತಿಗಳನ್ನು ಒಳಗೊಂಡಿರುವ ಪ್ರಶ್ನೆಗಳನ್ನು ಹೊಂದಿದೆ. ಇದರಲ್ಲಿ ಪ್ರಶ್ನೆಗಳನ್ನು ಬಿಡಿಸಲು ಅಭ್ಯರ್ಥಿಗಳು ತರ್ಕ ಮತ್ತು ಜ್ಞಾನವನ್ನು ಅನ್ವಯಿಸುವ ಅಗತ್ಯವಿದೆ.

ಇದನ್ನೂ ಓದಿ: Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

ಕ್ಲಿಷ್ಟತೆಯ ಮಟ್ಟ

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಋಣಾತ್ಮಕ ಮೌಲ್ಯಮಾಪನ ಇದೆ

ಪೂರ್ವ ಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡೂ ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಾಗಿದ್ದು ಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.

ಪ್ರತಿ ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಸ್ಕೋರ್ ಪಡೆಯಬೇಕಾಗುತ್ತದೆ. ಹಾಗೂ ಒಟ್ಟಾರೆ ಕನಿಷ್ಟ ಅಂಕ  ಕೂಡ ಪಡೆಯಬೇಕಾದ ಅನಿವಾರ್ಯತೆ ಇದೆ. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ. ಅದರ ವಿವರಗಳನ್ನು ಅಧಿಕೃತ ಐಬಿಪಿಎಸ್ ವೆಬ್‌ಸೈಟ್‌ನಲ್ಲಿ ನಂತರ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಷ್ಟೇ ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.ಮುಖ್ಯ ಪರೀಕ್ಷೆಯ 200 ಅಂಕಗಳನ್ನು ನೂರಕ್ಕೆ ಇಳಿಸಿ ಮೆರಿಟ್ ಪಟ್ಟಿ ರಚಿಸಲಾಗುತ್ತದೆ. ಈ ಕಾರಣಕ್ಕಾಗಿ ಹೆಚ್ಚಿನ ಅಂಕಗಳಿಸುವತ್ತ ಅಭ್ಯರ್ಥಿಗಳು ಗಮನ ನೀಡಬೇಕಾಗುತ್ತದೆ.ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು.

ಇನ್ನೊಂದಿಷ್ಟು ಮಾಹಿತಿ…

ಲಿಖಿತ ದೃಢೀಕರಣ:

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್‌ಲೋಡ್‌ ಮಾಡಬೇಕು:

(ಅಭ್ಯ ರ್ಥಿಯ ಹೆಸರು),. …….. ಆದ ನಾನು ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಮತ್ತು ನಿಜ ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ. ಲಿಖಿತ ಘೋಷಣೆಯು ಇಂಗ್ಲಿಷ್ ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್ ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಸಂದರ್ಶನವಿಲ್ಲ

ಪೂರ್ವಭಾವಿ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

Latest

Union Budget 2024: 7 ಬಜೆಟ್‍ಗಳಲ್ಲಿ 7 ಬಣ್ಣದ ಸೀರೆ ಧರಿಸಿ ಮಿಂಚಿದ ನಿರ್ಮಲಾ ಸೀತಾರಾಮನ್!

Union Budget 2024: ಸೀರೆಯ ಮೋಹದಿಂದ ಯಾವ ಹೆಣ್ಣು ಕೂಡ ಹೊರತಾಗಿಲ್ಲ. ಮೊನ್ನೆ ಮೊನ್ನೆಯಷ್ಟೇ ನೀತಾ ಅಂಬಾನಿ ಉಟ್ಟ ಸೀರೆ ಸಖತ್ ಟ್ರೆಂಡ್‌ನಲ್ಲಿತ್ತು. ಈಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವಾಗ ಉಟ್ಟ ಸೀರೆಯ ಮೇಲೆಯೇ ಎಲ್ಲರ ಕಣ್ಣು ನೆಟ್ಟಿದೆ. ನಿರ್ಮಲಾ ಸೀತಾರಾಮನ್ ಅವರು ತಾವು ಮಂಡಿಸಿದ ಏಳು ಬಜೆಟ್‌ಗಳಲ್ಲಿ ಏಳು ಬಣ್ಣದ ಸೀರೆಗಳನ್ನು ಧರಿಸಿದ್ದಾರೆ. ಅದರಲ್ಲಿ ಕೆಂಪು, ನೀಲಿ, ಹಳದಿ, ಕಂದು ಮತ್ತು ಆಫ್-ವೈಟ್ ಮೆಜೆಂಟಾ ಬಾರ್ಡರ್ ಇದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Union Budget 2024
Koo


ನವದೆಹಲಿ: ಮಹಿಳೆಯರಿಗೆ ಸೀರೆಗಳೆಂದರೆ ಬಹಳ ಇಷ್ಟ. ಹಾಗಾಗಿ ಅವರು (Union Budget 2024) ಯಾವುದೇ ಸಭೆ ಸಮಾರಂಭಗಳಿಗೆ ಹೋಗುವಾದ ವಿವಿಧ ರೀತಿಯ, ಬಣ್ಣ ಬಣ್ಣದ ಸೀರೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೂ ಕೂಡ ಸೀರೆಗಳ ಬಗ್ಗೆ ವಿಶೇಷ ಒಲವು ಇದೆ. ಹಾಗಾಗಿ ಅವರು ತಾವು ಮಂಡಿಸಿದ ಏಳು ಬಜೆಟ್‍ಗಳಲ್ಲಿ ಏಳು ತರಹದ ಸೀರೆಗಳನ್ನು ಉಟ್ಟು ಮಿಂಚಿದ್ದಾರೆ. ಈ ಮೂಲಕ ತಮಗೂ ಸೀರೆಗಳ ಬಗ್ಗೆ ಒಲವು ಇದೆ ಎಂಬುದನ್ನು ತಿಳಿಸಿದ್ದಾರೆ.

Nirmala Sitharaman

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವು ಮಂಡಿಸಿದ ಏಳು ಬಜೆಟ್‍ಗಳಲ್ಲಿ ಏಳು ಬಣ್ಣದ ಸೀರೆಗಳನ್ನು ಧರಿಸಿದ್ದಾರೆ. ಅದರಲ್ಲಿ ಕೆಂಪು, ನೀಲಿ, ಹಳದಿ, ಕಂದು ಮತ್ತು ಆಫ್-ವೈಟ್ ಮೆಜೆಂಟಾ ಬಾರ್ಡರ್ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸುವಾಗ ಧರಿಸಿದ ಸೀರೆಗಳ ಛಾಯೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕಥೆ ಇದೆ. ಪ್ರತಿಯೊಂದು ಸೀರೆಯು ಭಾರತದ ವಿಭಿನ್ನ ಸಾಂಸ್ಕೃತಿಕ ಕಥೆಯನ್ನು ಚಿತ್ರಿಸುತ್ತದೆ.

2024-25ರ ಪೂರ್ಣ ಬಜೆಟ್ ಮಂಡಿಸಲು ಸೀತಾರಾಮನ್ ಮಂಗಳವಾರ ಆಂಧ್ರಪ್ರದೇಶದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಮಂಗಳಗಿರಿ ಸೀರೆಯನ್ನು ಧರಿಸಿದ್ದರು.

Nirmala Sitharaman

ಇದಕ್ಕೂ ಮೊದಲು ಫೆಬ್ರವರಿ 2024ರಲ್ಲಿ ಅವರು ನೀಲಿ ಸೀರೆಯನ್ನು ಧರಿಸಿದ್ದರು. ಇದು ಪಶ್ಚಿಮ ಬಂಗಾಳದಲ್ಲಿ ಪ್ರಸಿದ್ಧವಾದ ಕಾಂತಾ ಸ್ಟಿಚ್‌ ಅನ್ನು ಹೊಂದಿತ್ತು. ಈ ವಿಶೇಷವಾದ ಸೀರೆಯ ಮೇಲಿನ ಎಲೆಯು ಬಂಗಾಳದ ಅತ್ಯಂತ ಹಳೆಯ ಕಸೂತಿ ಕೆಲಸಗಳಲ್ಲಿ ಒಂದಾಗಿದೆ. ಬಂಗಾಳದ ನೀಲಿ ಸೀರೆಯು ಜಲಚರ ಸಾಕಣೆ ಉತ್ಪಾದಕತೆ ಮತ್ತು ಭಾರತದ ಮೀನುಗಾರಿಕೆ ಕ್ಷೇತ್ರ ಮತ್ತು ಆರ್ಥಿಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಯೋಜನೆಗಳ ಮೇಲೆ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದು ಅನೇಕರು ನಂಬುತ್ತಾರೆ.

ಯಾಕೆಂದರೆ ಮೀನುಗಾರಿಕೆ ಇಲಾಖೆಗೆ 2024-25ರ ಆರ್ಥಿಕ ವರ್ಷಕ್ಕೆ 2,584.50 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 15% ಹೆಚ್ಚಾಗಿದೆ. ಕಾಂತಾ ಕಸೂತಿಯೊಂದಿಗೆ ಈ ಟಸ್ಸಾರ್ ಸೀರೆಯು ಬಟ್ಟೆಯ ತುಂಡುಗಳನ್ನು ಒಟ್ಟಿಗೆ ಹೊಲಿದು ಸೀರೆಯನ್ನು ತಯಾರಿಸಲಾಗಿದೆ. ಈಗ ಸೀತಾರಾಮನ್ ಅವರು ಈ ಸೀರೆಯನ್ನು ಧರಿಸಿರುವುದರಿಂದ, ಸ್ಥಳೀಯ ಕೈಮಗ್ಗ ಕರಕುಶಲತೆಯು ಹೆಚ್ಚು ಗಮನ ಸೆಳೆಯುತ್ತದೆ.

Nirmala Sitharaman

2023ರಲ್ಲಿ ಅವರು ಕೆಂಪು ಬಣ್ಣದ ಟೆಂಪಲ್ ಬಾರ್ಡರ್ ಸೀರೆಯನ್ನು ಧರಿಸಿದ್ದರು. ಈ ಸೀರೆಯು ಕಸೂತಿ ಕೆಲಸದೊಂದಿಗೆ ಕರ್ನಾಟಕ ಧಾರವಾಡ ಪ್ರದೇಶದ ಇಳಕಲ್ ರೇಷ್ಮೆ ಸೀರೆಗೆ ಸೇರಿದೆ. ಇದು ಕೈಯಿಂದ ನೇಯ್ದ ಸೀರೆಯಾಗಿದೆ. ಈ ಸೀರೆಯ ಮೇಲೆ ರಥಗಳು, ನವಿಲುಗಳು ಮತ್ತು ಕಮಲವಿತ್ತು.

Nirmala Sitharaman

2022ರಲ್ಲಿ ಸೀತಾರಾಮನ್ ಅವರು ಬಜೆಟ್ ಮಂಡಿಸುವಾಗ ಕಂದು ಬಣ್ಣದ ಬೊಮ್ಕೈ ಸೀರೆಯನ್ನು ಧರಿಸಿದ್ದರು ಮತ್ತು ಇದು ಒಡಿಶಾದ ಗಂಜಾಂ ಜಿಲ್ಲೆಯ ಕೈಮಗ್ಗಕ್ಕೆ ನೀಡಿದ ಗೌರವದ ಸೂಚಕವಾಗಿತ್ತು.

Nirmala Sitharaman

2021ರಲ್ಲಿ ಅವರು ಹೈದರಾಬಾದ್‍ನ ಪೋಚಂಪಲ್ಲಿ ಗ್ರಾಮದ ವಿಶಿಷ್ಟ ಮಾದರಿಗಳಿಗೆ ಹೆಸರುವಾಸಿಯಾದ ಆಫ್-ವೈಟ್ ಪೋಚಂಪಲ್ಲಿ ಸೀರೆಯನ್ನು ಆರಿಸಿಕೊಂಡರು.

Nirmala Sitharaman

2020ರಲ್ಲಿ ಬಜೆಟ್ ಮಂಡಿಸಲು ಅವರು ಹಳದಿ ರೇಷ್ಮೆ ಸೀರೆಯನ್ನು ಧರಿಸಿದ್ದರು. ಹಳದಿಯನ್ನು ಭಾರತದ ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗಿದೆ.

Nirmala Sitharaman

2019ರಲ್ಲಿ ಅವರು ಕೆಂಪು ಮತ್ತು ಸಮೃದ್ಧಿಯ ಸಂಕೇತವಾದ ಸಾಂಪ್ರದಾಯಿಕ ‘ಬಹಿ ಖಾತಾ’ ದೊಂದಿಗೆ ಬಜೆಟ್ ಬ್ರೀಫ್‌ಕೇಸ್‌ ಅನ್ನು ತೆಗೆದುಕೊಂಡು ಬಂದಿದ್ದರು. ಅದರ ಮೇಲ್ಭಾಗದಲ್ಲಿ ರಾಷ್ಟ್ರೀಯ ಲಾಂಛನದೊಂದಿಗೆ ಚಿನ್ನದ ದಾರಗಳನ್ನು ಹೊಂದಿತ್ತು. ಆ ವೇಳೆ ಅವರು ಚಿನ್ನದ ಅಂಚುಗಳನ್ನು ಹೊಂದಿರುವ ಗುಲಾಬಿ ಮಂಗಳಗಿರಿ ಸೀರೆಯನ್ನು ಧರಿಸಿದ್ದರು.

ನಿರ್ಮಲಾ ಧರಿಸಿದ್ದ ಈ ಸುಂದರವಾದ ಸೀರೆಗಳು ಪ್ರತಿಯೊಂದೂ ರಾಜ್ಯವನ್ನು ಮತ್ತು ಒಂದು ಪ್ರದೇಶದ ವಿಶಿಷ್ಟ ಕೈಮಗ್ಗ ಮತ್ತು ಕಸೂತಿಯನ್ನು ಪ್ರತಿನಿಧಿಸುತ್ತದೆ. ಅದಕ್ಕಿಂತ ಮುಖ್ಯವಾದ ವಿಷಯವೆಂದರೆ, ಸೀತಾರಾಮನ್ ಬಜೆಟ್ ಮಂಡಿಸಲು ಸೀರೆಯನ್ನು ಧರಿಸಿದ ನಂತರ ಪ್ರತಿ ಸೀರೆಯು ಎಲ್ಲರ ಗಮನ ಸೆಳೆದು ಈಗ ಪ್ರಚಲಿತಕ್ಕೆ ಬಂದಿದೆ.

Nirmala Sitharaman

2024ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಧರಿಸಿದ್ದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬಣ್ಣದ ಸೀರೆಯು ಮಂಗಳಗಿರಿ ಸೀರೆಯಾಗಿದೆ. ಆಂಧ್ರಪ್ರದೇಶದ ಗುಂಟೂರಿನಿಂದ ಹುಟ್ಟಿಕೊಂಡ ಮಂಗಳಗಿರಿ ಸೀರೆಯು ವಿಶಿಷ್ಟವಾದ ಕೈಮಗ್ಗ ಬಟ್ಟೆಯಾಗಿದ್ದು, ಬಾರ್ಡರ್‌ನಲ್ಲಿ ಜರಿ ಮತ್ತು ಮೈಮೇಲೆ ಯಾವುದೇ ನೇಯ್ದ ವಿನ್ಯಾಸಗಳಿಲ್ಲದ ವಿಶಿಷ್ಟ ಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ತಮ್ಮ 2024ರ ಬಜೆಟ್‍ನಲ್ಲಿ ನಿರ್ಮಲಾ ಸೀತಾರಾಮನ್ ಆಂಧ್ರಪ್ರದೇಶಕ್ಕೆ ವಿಶೇಷ ಆರ್ಥಿಕ ಬೆಂಬಲವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ:  ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಏಳು ಬಜೆಟ್‍ಗಳಲ್ಲಿ ನಿರ್ಮಲಾ ಸೀತಾರಾಮನ್ ಅವರ ಏಳು ಸೀರೆಗಳು ಭಾರತದ ವೈವಿಧ್ಯತೆಯನ್ನು ಪ್ರದರ್ಶಿಸುವುದಲ್ಲದೆ, ಸೀರೆಗಳ ಮೂಲಕ ಯೋಜನೆಗಳು ಮತ್ತು ರಾಜ್ಯಗಳಿಗೆ ಒತ್ತು ನೀಡುವ ಬಗ್ಗೆ ಸಾಂಕೇತಿಕ ಸುಳಿವು ನೀಡಿದ್ದಾರೆ.

Continue Reading
Advertisement
Union Budget 2024
ಪ್ರಮುಖ ಸುದ್ದಿ56 seconds ago

Union Budget 2024 : ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ‘ಚೊಂಬು’ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

Union Budget 2024
ದೇಶ9 mins ago

Union Budget 2024: ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಗುಡ್‌ನ್ಯೂಸ್‌! ಮೊಬೈಲ್‌ ಫೋನ್‌, ಚಾರ್ಜರ್‌ ಬೆಲೆ ಅಗ್ಗ

Rahul Dravid
ಕ್ರೀಡೆ9 mins ago

Rahul Dravid: ಆರ್​ಸಿಬಿ ಅಲ್ಲ ಈ ತಂಡದ ಕೋಚ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್

Akhila bharat Veerashaiva Mahasabha taluk unit new president and directors padagrahana programme in koratagere
ತುಮಕೂರು14 mins ago

Koratagere News: ವೀರಶೈವ ಮಹಾಸಭಾದಿಂದ ಧಾರ್ಮಿಕ ನೆಲೆಗಟ್ಟು ಭದ್ರ; ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

IBPS
ಉದ್ಯೋಗ29 mins ago

IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Congress Protest
ಕರ್ನಾಟಕ34 mins ago

Congress Protest: ಇಡಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ದ್ವೇಷ ರಾಜಕೀಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಸಿಎಂ

Tharun Sudhir sonal monteiro age differnce
ಸ್ಯಾಂಡಲ್ ವುಡ್37 mins ago

Tharun Sudhir: ತರುಣ್-ಸೋನಲ್‌ ನಡುವಿನ ವಯಸ್ಸಿನ ಅಂತರ ಎಷ್ಟು?

murder case
ಬೆಳಗಾವಿ38 mins ago

Murder case : ಭೂ ವಿವಾದಕ್ಕಾಗಿ ಪರಸ್ಪರ ಹೊಡೆದಾಡಿಕೊಂಡ ಅಣ್ಣ-ತಮ್ಮ ಮೃತ್ಯು

Paris Olympic 2024
ಕ್ರೀಡೆ51 mins ago

Paris Olympic 2024:’ಆ್ಯಂಟಿ-ಸೆಕ್ಸ್ ಬೆಡ್’ನ ಸಾಮರ್ಥ್ಯ ಪರೀಕ್ಷೆ ನಡೆಸಿದ ಆಸ್ಟ್ರೇಲಿಯಾದ ಟೆನಿಸ್​ ಆಟಗಾರ್ತಿಯರು; ವಿಡಿಯೊ ವೈರಲ್​

Suraj Revanna Case
ಕ್ರೈಂ57 mins ago

Suraj Revanna Case: ಸಲಿಂಗ ಕಾಮ ಪ್ರಕರಣ; ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌