Site icon Vistara News

Ram Mandir: ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ಮೋದಿ; ಕೆಲವೇ ಕ್ಷಣಗಳಲ್ಲಿ ಪ್ರಾಣ ಪ್ರತಿಷ್ಠೆ

PM Modi

Want 400 seats to ensure Congress doesn't put 'Babri lock' on Ram Temple: PM Narendra Modi

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯ ತುಂಬ ರಾಮನ ಜಪವೇ ಕೇಳಿಸುತ್ತಿದೆ. ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ನಗರವೀಗ ರಾಮನ ಸ್ಮರಣೆಯಲ್ಲಿ ತೇಲಾಡುತ್ತಿದೆ. ಸಾವಿರಾರು ಸೆಲೆಬ್ರಿಟಿಗಳು, ಗಣ್ಯರು, ರಾಜಕೀಯ ನಾಯಕರು, ಸಾಧು-ಸಂತರು ಅಯೋಧ್ಯೆಗೆ ಆಗಮಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠಾಪನೆ ನಡೆಯುವುದರಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಅಯೋಧ್ಯೆಗೆ ಆಗಮಿಸಿದ್ದಾರೆ.

ದೆಹಲಿಯಿಂದ ಹೊರಟು ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮೀಕಿ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಅವರು ವಿಶೇಷ ಹೆಲಿಕಾಪ್ಟರ್‌ ಮೂಲಕ ರಾಮಮಂದಿರಕ್ಕೆ ಆಗಮಿಸಿದರು.

ಮೋದಿ ಮುಂದಿನ ಕಾರ್ಯಕ್ರಮಗಳ ವೇಳಾಪಟ್ಟಿ

ಇದನ್ನೂ ಓದಿ: Ram Mandir: ಬಾಹ್ಯಾಕಾಶದಿಂದ ರಾಮಮಂದಿರ ಕಂಡಿದ್ದು ಹೇಗೆ? ಇಸ್ರೋ ಫೋಟೊಗಳು ಇಲ್ಲಿವೆ

ಅಯೋಧ್ಯೆಯಲ್ಲಿ ಯೋಗಿ ಆದಿತ್ಯನಾಥ್

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version