Site icon Vistara News

Ram Mandir: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ; ನಾಳೆ ಗೋವಾ ಕ್ಯಾಸಿನೋಗಳು ಬಂದ್!

Ram Mandir Prana Pratshapana; Tomorrow is a holiday for Goa casinos!

ಪಣಜಿ: ಅಯೋಧ್ಯಾ ರಾಮ ಮಂದಿರ(Ayodhya Ram Mandir) ಪ್ರಾಣ ಪ್ರತಿಷ್ಠಾಪನೆಯ (Prana Pratishtha) ಹಿನ್ನೆಲೆಯಲ್ಲಿ ಗೋವಾದಲ್ಲಿ (Goa) ಕಾರ್ಯನಿರ್ವಹಿಸುವ ಎಲ್ಲ ಕ್ಯಾಸಿನೋಗಳು ಜನವರಿ 22, ಸೋಮವಾರ 8 ಗಂಟೆಗಳ ಕಾಲ ಬಂದ್ ಆಗಲಿವೆ(casinos remain closed). ಗೋವಾದಲ್ಲಿ ಒಟ್ಟು 6 ಕಡಲಾಚೆ ಮತ್ತು ಅನೇಕ ಕಡಲತೀರದ ಕ್ಯಾಸಿನೋಗಳು ಕ್ಯಾಸಿನೋಗಳು ಕಾರ್ಯನಿರ್ವಹಿಸುತ್ತವೆ. ಈ ಎಲ್ಲ ಕ್ಯಾಸಿನೋಗಳು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮುಚ್ಚಲಿವೆ ಎಂದು ಕ್ಯಾಸಿನೋ ಮ್ಯಾನೇಜ್‌ಮೆಂಟ್ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೋವಾದಲ್ಲಿ ನಡೆಸಲಾಗುವ ಎಲ್ಲ ಕ್ಯಾಸಿನೋಗಳು ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿವೆ ಎಂದು ಈ ಕೆಲವು ಕ್ಯಾಸಿನೋಗಳನ್ನು ನಿರ್ವಹಿಸುವ ಮೆಜೆಸ್ಟಿಕ್ ಪ್ರೈಡ್ ಗ್ರೂಪ್‌ನ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರತಿಯೊಬ್ಬರೂ ತಮ್ಮ ವ್ಯವಹಾರಗಳನ್ನು ಸ್ಥಗಿತ ಮಾಡಿರುವಾಗ ಮತ್ತು ಜೀವಿತಾವಧಿಯಲ್ಲಿ ಒಮ್ಮೆ ದೊರೆಯಬಹುದಾದ ಈ ಕಾರ್ಯಕ್ರಮಕ್ಕೆ ನಾವು ಕೂಡ ನಮ್ಮ ಬಿಸಿನೆಸ್‌ಗೆ ರಜೆ ಘೋಷಿಸಿದ್ದೇವೆ ಎಂದು ಅವರು ಹೇಳಿದರು. ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಆಚರಣೆಯನ್ನು ಆಚರಿಸಲು ಗೋವಾ ಸರ್ಕಾರವು ಈಗಾಗಲೇ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಿದೆ.

ನಾಳೆ ಭಾರತೀಯರಿಗೆ ಸುದಿನ; ಈಡೇರಲಿದೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಕ್ಷಣ!

ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆ (Pran Pratishtha) ಜ.22ರ ಸೋಮವಾರ ಮಧ್ಯಾಹ್ನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ಪ್ರತಿಷ್ಠಾಪನೆಯ ಮುಖ್ಯ ಯಜಮಾನರಾಗಿದ್ದು, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿಕೊಡಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಪೂರ್ಣಗೊಳಿಸಲಾಗಿದ್ದು, ಆಹ್ವಾನಿತ ಗಣ್ಯ ಮಾನ್ಯರು ಭಾನುವಾರದಿಂದಲೇ ಅಯೋಧ್ಯೆಗೆ ಬಂದಿಳಿಯುತ್ತಿದ್ದಾರೆ.

ಸೋಮವಾರ ಮಧ್ಯಾಹ್ನ 12.20 ಕ್ಕೆ ಪ್ರತಿಷ್ಠಾಪನಾ ಸಮಾರಂಭ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ವಾರಣಾಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಸಮಾರಂಭದ ಕೆಲವು ಆಚರಣೆಗಳು ಜನವರಿ 16 ರಂದು, ಪ್ರಾಣ-ಪ್ರತಿಷ್ಠಾಪನೆಗೆ ಒಂದು ವಾರ ಮೊದಲು ಪ್ರಾರಂಭವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಗಣ್ಯರು ಭಾಗವಹಿಸಲಿರುವ ಈ ಮೆಗಾ ಕಾರ್ಯಕ್ರಮಕ್ಕೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಡೀ ಅಯೋಧ್ಯೆ ನಗರದ ಮೇಲೆ ಭದ್ರತಾ ಪಡೆಗಳು ಕಣ್ಗಾವಲು ಇಟ್ಟಿದೆ.

ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಹೀಗಾಗಿ ಏಕಾಏಕಿ ಅಯೋಧ್ಯೆಗೆ ಬರಬೇಡಿ ಎಂದು ಟ್ರಸ್ಟ್​​ ಮನವಿ ಮಾಡಿದೆ. ವರ್ಚುವಲ್ ಮೂಲಕ ನೋಡುವಂತೆ ಸಲಹೆ ನೀಡಿದೆ. ಈ ಭವ್ಯ ಕಾರ್ಯಕ್ರಮವನ್ನು ದೇಶದ ವಿವಿಧ ವೇದಿಕೆಗಳಲ್ಲಿ ನೇರ ಪ್ರಸಾರವಾಗಲಿದೆ ಎಂದು ಹೇಳಿದೆ.

ಜ.21 ಭಾನುವಾರ ರಾಮ್ ಲಲ್ಲಾ ವಿರಾಜ್​ಮಾನ್​​ ಮೂಲ ವಿಗ್ರಹವನನು ಶಯನ ಆರತಿಯ ಬಳಿಕ ನೂತನ ರಾಮ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಹನುಮಂತ, ಸಹೋದರರಾದ ಲಕ್ಷ್ಮಣ, ಶತ್ರುಘ್ನ ಮತ್ತು ಭರತನ ಮೂಲ ವಿಗ್ರಹಗಳೂ ದೇವಾಲಯಕ್ಕೆ ಸ್ಥಳಾಂತರವಾದವು. ಅಂದ ಹಾಗೆ ರಾಮ ಮಂದಿರ ವಿವಾದದಲ್ಲಿ ಕೋರ್ಟ್​ ಕೇಸ್​ ಗೆದ್ದಿದ್ದು ಇದೇ ರಾಮ ಲಲ್ಲಾ ವಿರಾಜ್​ಮಾನ್​. ಆ ಮೂರ್ತಿಯ ಬದಲಿಗೆ ಇದೀಗ ಕನ್ನಡಿಗ ಅರುಣ್​ ಯೋಗಿರಾಜ್ ಕೆತ್ತಿರುವ 51 ಇಂಚು ಎತ್ತರದ ಹೊಸ ರಾಮ ಲಲ್ಲಾ ಅವರ ಹೊಸ ವಿಗ್ರಹವನ್ನು ರಾಮ ದೇವಾಲಯದ ಗರ್ಭಗೃಹದೊಳಗೆ (ಗರ್ಭಗುಡಿ) ಪೀಠದ ಮೇಲೆ ಸ್ಥಾಪಿಸಲಾಗಿದೆ. ಈ ವಿಗ್ರಹಕ್ಕೆ ಈಗ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಈ ಸುದ್ದಿಯನ್ನೂ ಓದಿ: Vistara Top 10 News : ರಾಮ ಮಂದಿರ ಕನಸು ನನಸಿಗೆ ಕ್ಷಣಗಣನೆ, ದೇಶದಾದ್ಯಂತ ಪೂಜೆ, ಭಜನೆ ಮತ್ತು ಇತರ ಸುದ್ದಿ

Exit mobile version