Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ - Vistara News

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading

New year 2023

New Year 2023 | ಗಣ್ಯರಿಂದ ದೇಶದ ಜನರಿಗೆ ಹೊಸ ವರ್ಷದ ಶುಭಾಶಯ; ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ರಾಹುಲ್​ ಗಾಂಧಿ ಟ್ವೀಟ್​

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಭಾರತ್ ಜೋಡೋ ಯಾತ್ರೆಯ ಫೋಟೋಗಳನ್ನು ಕೊಲ್ಯಾಜ್​ ಮಾಡಿ, ರಚಿಸಲಾದ ವಿಡಿಯೊವೊಂದನ್ನು ಶೇರ್​ ಮಾಡಿ, ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

New Year Wishes From PM Modi and President Murmu
Koo

ನವ ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನಕರ್​, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸೇರಿ ಹಲವು ಪ್ರಮುಖರು ಇಂದು ದೇಶದ ಜನರಿಗೆ ಹೊಸವರ್ಷದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ನಿಮ್ಮೆಲ್ಲರ ಪಾಲಿಗೆ 2023 ಅದ್ಭುತವಾಗಿರಲಿ. ಭರವಸೆ, ಸಂತೋಷ ಮತ್ತು ಯಶಸ್ಸು ನಿಮ್ಮದಾಗಲಿ. ಪ್ರತಿಯೊಬ್ಬರೂ ಅತ್ಯುತ್ತಮ ಆರೋಗ್ಯ ಹೊಂದಲಿ’ ಎಂದು ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್ ಮಾಡಿ ‘ದೇಶದ ಎಲ್ಲ ನಾಗರಿಕರಿಗೆ ಮತ್ತು ವಿದೇಶದಲ್ಲಿರುವ ಎಲ್ಲ ಭಾರತೀಯರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2023ನೇ ವರ್ಷ ಎಲ್ಲರ ಬಾಳಲ್ಲಿ ಹೊಸ ಸ್ಫೂರ್ತಿ ತುಂಬಲಿ. ಗುರಿ ಕಟ್ಟಿಕೊಡಲಿ ಮತ್ತು ಯಶಸ್ಸು ತಂದುಕೊಡಲಿ. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಂತರ್ಗತ ಅಭಿವೃದ್ಧಿಗೆ ನಾವೆಲ್ಲರೂ ನಮ್ಮನ್ನು ನಾವು ಅರ್ಪಿಸಿಕೊಳ್ಳುವ ಸಂಕಲ್ಪ ಮಾಡೋಣ’ ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್​ ಧನಕರ್​ ಅವರು ಟ್ವೀಟ್ ಮಾಡಿ ‘ಎಲ್ಲರಿಗೂ 2023ರ ನೂತನ ವರ್ಷದ ಶುಭ ಹಾರೈಕೆಗಳು ಮತ್ತು ಅಭಿನಂದನೆಗಳು. ಭಾರತವನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯೋಣ ಎಂಬ ಹೊಸ ಸಂಕಲ್ಪವನ್ನು ನಾವೆಲ್ಲರೂ ಮಾಡೋಣ. ಶಾಂತಿ, ಆರೋಗ್ಯ, ಸಾಮರಸ್ಯ ಸ್ಥಾಪಿಸಲು ನಾವೆಲ್ಲರೂ ಒಟ್ಟಾಗಿ ಪ್ರಯತ್ನಿಸೋಣ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಭಾರತ್ ಜೋಡೋ ಯಾತ್ರೆಯ ಫೋಟೋಗಳನ್ನು ಕೊಲ್ಯಾಜ್​ ಮಾಡಿ, ರಚಿಸಲಾದ ವಿಡಿಯೊವೊಂದನ್ನು ಶೇರ್​ ಮಾಡಿಕೊಂಡು ‘2023ರಲ್ಲಿ ದೇಶದ ಪ್ರತಿ ದಾರಿಗಳು, ಗ್ರಾಮಗಳು, ನಗರಗಳೆಲ್ಲವೂ ಪ್ರೀತಿಯ ಮಳಿಗೆಗಳಾಗಿ ಪರಿವರ್ತನೆಗೊಳ್ಳಲಿ’ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಹಾಗೇ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದ್ದಾರೆ.

ಇನ್ನು ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಅಮಿತ್​ ಶಾ, ನಿತಿನ್​ ಗಡ್ಕರಿ, ಹರ್ದೀಪ್​ ಸಿಂಗ್​ ಪುರಿ, ಮನ್ಸುಖ್ ಮಾಂಡವಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಉತ್ತರಾಖಂಡ್​ ಸಿಎಂ ಪುಷ್ಕರ್ ಸಿಂಗ್​ ಧಮಿ ಸೇರಿ ಹಲವು ಪ್ರಮುಖ ರಾಜಕಾರಣಿಗಳು, ವಿವಿಧ ಕ್ಷೇತ್ರಗಳ ಗಣ್ಯರು ದೇಶದ ಜನರಿಗೆ ಹೊಸವರ್ಷದ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: New Year 2023 | ಇಂದು ಅಯೋಧ್ಯೆಗೆ 50 ಲಕ್ಷ ಮಂದಿ ಭೇಟಿ ಸಾಧ್ಯತೆ! ಭದ್ರತೆ ಹೇಗಿದೆ?

Continue Reading
Advertisement
Dina Bhavishya
ಭವಿಷ್ಯ8 ಗಂಟೆಗಳು ago

Dina Bhavishya : ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸುವಿರಿ

HK patil
ಗದಗ18 ಗಂಟೆಗಳು ago

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

Dolly Dhananjay
ಸಿನಿಮಾ21 ಗಂಟೆಗಳು ago

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dina Bhavishya
ಭವಿಷ್ಯ1 ದಿನ ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ3 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ3 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು4 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು4 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು4 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌