Ram Mandir: ರಾಮಮಂದಿರ ನಿರ್ಮಾಣಕ್ಕೆ ವೇಗ; 1,600 ಕಾರ್ಮಿಕರು, ದಿನದ 18 ಗಂಟೆ ಬದಲು 24 ಗಂಟೆ ಕೆಲಸ - Vistara News

ದೇಶ

Ram Mandir: ರಾಮಮಂದಿರ ನಿರ್ಮಾಣಕ್ಕೆ ವೇಗ; 1,600 ಕಾರ್ಮಿಕರು, ದಿನದ 18 ಗಂಟೆ ಬದಲು 24 ಗಂಟೆ ಕೆಲಸ

Ram Mandir: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಇನ್ನಿಲ್ಲದ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

VISTARANEWS.COM


on

Ram Mandir Work Gets Pace
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ (Ram Mandir) ಜನವರಿಯಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಜನವರಿಯಲ್ಲಿ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗಲಿದ್ದು, ಇದಕ್ಕಾಗಿ ಮಂದಿರ ನಿರ್ಮಾಣ ಕಾಮಗಾರಿಗೆ ಶರವೇಗ ನೀಡಲಾಗಿದೆ. ಅಲ್ಲದೆ, ಮಂದಿರ ನಿರ್ಮಾಣದ ಕಾರ್ಮಿಕರ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ.

ರಾಮಮಂದಿರ ನಿರ್ಮಾಣಕ್ಕೆ ಇದುವರೆಗೆ 550 ಕಾರ್ಮಿಕರು ಶ್ರಮಿಸುತ್ತಿದ್ದರು. ಆದರೀಗ ಕಾರ್ಮಿಕರ ಸಂಖ್ಯೆಯನ್ನು 1,600ಕ್ಕೆ ಏರಿಕೆ ಮಾಡಲಾಗಿದೆ. ಇನ್ನು ದಿನದ 18 ಗಂಟೆ ನಡೆಯಬೇಕಿದ್ದ ಕೆಲಸವನ್ನು 24 ಗಂಟೆಗೂ ವಿಸ್ತರಿಸಲಾಗಿದೆ. ಅಂದರೆ, ಇನ್ನು ಮುಂದೆ ವಾರದ ಏಳು ದಿನ, ದಿನದ 24 ಗಂಟೆಯೂ ರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯಲಿದೆ. ಆ ಮೂಲಕ ಜನವರಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯನ್ನು ನೆರವೇರಿಸುವುದು ಉದ್ದೇಶವಾಗಿದೆ.

“ಡಿಸೆಂಬರ್‌ ವೇಳೆಗೆ ರಾಮಮಂದಿರದ ನೆಲಮಹಡಿಯನ್ನು ಪೂರ್ಣಗೊಳಿಸುವುದು ನಮ್ಮ ಗುರಿಯಾಗಿದೆ. ಈಗಾಗಲೇ ಮೊದಲ ಮಹಡಿಯ ನಿರ್ಮಾಣ ಕಾರ್ಯವೂ ಆರಂಭವಾಗಿದ್ದು, ಜನವರಿ ವೇಳೆಗೆ ಮುಗಿಯಲಿದೆ. ಎರಡೂ ಮಹಡಿಗಳ ನಿರ್ಮಾಣ ಕಾರ್ಯ ಮುಗಿಸಲು ಕಾರ್ಮಿಕರ ಸಂಖ್ಯೆ ಹಾಗೂ ಕೆಲಸದ ಅವಧಿಯನ್ನು ಹೆಚ್ಚಿಸಲಾಗಿದೆ” ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಾಜೆಕ್ಟ್‌ ಮ್ಯಾನೇಜರ್‌ ಜಗದೀಶ್‌ ಅಫಾಳೆ ತಿಳಿಸಿದ್ದಾರೆ.

ಅದ್ಧೂರಿ ಕಾರ್ಯಕ್ರಮ

ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Ram Mandir: ಜನವರಿಯಲ್ಲಿ ರಾಮಮಂದಿರಕ್ಕೆ ಚಾಲನೆ; ಕಾರ್ಯಕ್ರಮದ ಉಸ್ತುವಾರಿ ಆರೆಸ್ಸೆಸ್ ಹೆಗಲಿಗೆ‌

ಮೈಸೂರಿನಿಂದ ಎರಡು ಶಿಲೆ ರವಾನೆ

ಶ್ರೀ ರಾಮಮಂದಿರ ಸಂಕೀರ್ಣ ನಿರ್ಮಾಣಕ್ಕಾಗಿ ದೇಶದ ವಿವಿಧ ಭಾಗಗಳಿಂದ ಕಲ್ಲುಗಳನ್ನು ಅಯೋಧ್ಯೆಗೆ ತರಿಸಿ, ಕರಸೇವಕಪುರಂ ಕಾರ್ಯಾಗಾರದಲ್ಲಿ ಸಂಗ್ರಹಿಸಿ ಇಡಲಾಗಿದೆ. ಅದಾದ ಮೇಲೆ ಕೂಡ ನೇಪಾಳ, ಮೈಸೂರಿನಿಂದ ತಲಾ ಎರಡು ಶಿಲೆಗಳನ್ನು ತರಿಸಲಾಗಿದೆ. ಇನ್ನೂ 10 ಕಲ್ಲುಗಳನ್ನು ಇಲ್ಲಿಗೆ ತರುವುದು ಬಾಕಿಯಿದ್ದು, ತಂದಾದ ಮೇಲೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದೆ. ಮೈಸೂರಿನಿಂದ ಇನ್ನೂ ಹಲವು ಶಿಲೆಗಳನ್ನು ಅಯೋಧ್ಯೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌;ಆರೋಪಿ 5ದಿನ ಪೊಲೀಸ್‌ ಕಸ್ಟಡಿಗೆ

Swati Maliwal case: ಬಿಭವ್‌ 2015ರಿಂದಲೂ ಕೇಜ್ರಿವಾಲ್‌ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದಾನೆ. ನಾವು ಅವನ ಫೋನ್‌ನ ಪಾಸ್‌ವರ್ಡ್‌ ಕೇಳಿದಾಗ ಅದನ್ನು ಕೊಡಲು ಆತ ನಿರಾಕರಿಸಿದ್ದಾನೆ. ಅಲ್ಲದೇ ತನ್ನ ಪ್ರಭಾವ ಬಳಸಿ ಸಾಕ್ಷ್ಯ ನಾಶವನ್ನೂ ಮಾಡಿದ್ದಾನೆ. ಇವೆಲ್ಲಾ ವಿಚಾರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆತನನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.

VISTARANEWS.COM


on

Swati Maliwal Case
Koo

ನವದೆಹಲಿ: ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal case) ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar) ಅನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಕೋರ್ಟ್‌ ವಿಚಾರಣೆ ನಡೆಸಿತ್ತು. ಈ ವೇಳೆ ಬಿಭವ್‌ ಕುಮಾರ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.

ನಿನ್ನೆ ಬಿಭವ್‌ ಕುಮಾರ್‌ನನ್ನು ಅರೆಸ್ಟ್‌ ಮಾಡಿದ ಬಳಿಕ ಆತನನ್ನು ದಿಲ್ಲಿಯ ಹಜಾರಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಮುಖ್ಯಮಂತ್ರಿ ನಿವಾಸದಲ್ಲೇ ಸ್ವಾತಿ ಮೇಲೆ ಬಿಭವ್‌ ಕುಮಾರ್‌ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಾತ್ರವಲ್ಲದೇ ಆಕೆ ಧರಿಸಿದ್ದ ಬಟ್ಟೆಯನ್ನು ಎಳೆದಾಡಿ ಕ್ರೌರ್ಯ ಮೆರೆದಿದ್ದಾನೆ. ನಮಗೆ ಮುಖ್ಯಮಂತ್ರಿ ನಿವಾಸದ ಸಿಸಿಟಿವಿಯಿಂದ ಕೆಲವೊಂದು ಫೂಟೇಜ್‌ ಸಿಕ್ಕಿದೆ. ಬಿಭವ್‌ 2015ರಿಂದಲೂ ಕೇಜ್ರಿವಾಲ್‌ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದಾನೆ. ನಾವು ಅವನ ಫೋನ್‌ನ ಪಾಸ್‌ವರ್ಡ್‌ ಕೇಳಿದಾಗ ಅದನ್ನು ಕೊಡಲು ಆತ ನಿರಾಕರಿಸಿದ್ದಾನೆ. ಅಲ್ಲದೇ ತನ್ನ ಪ್ರಭಾವ ಬಳಸಿ ಸಾಕ್ಷ್ಯ ನಾಶವನ್ನೂ ಮಾಡಿದ್ದಾನೆ. ಇವೆಲ್ಲಾ ವಿಚಾರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆತನನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.

ಕಳೆದ ವಾರ ಸ್ವಾತಿ ಮಲಿವಾಲ್‌ ಮೇಲೆ ಸಿಎಂ ನಿವಾಸದಲ್ಲೇ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದ. ಇದಾದ ನಾಲ್ಕು ದಿನಗಲ ಬಳಿಕ ಸ್ವಾತಿ ಪೊಲೀಸರಿಗೆ ದೂರು ನೀಡಿದ್ದರು., ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ಬಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಬಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ಬಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಿಟ್ಟು ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.

 

Continue Reading

ದೇಶ

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದ್ದು, ಈ ಮೂರು ಹೊಸ ಕಾನೂನುಗಳು (New Criminal Laws) ಜುಲೈ 1 ರಿಂದ ಜಾರಿಗೆ ಬರಲಿವೆ.

VISTARANEWS.COM


on

By

New Criminal Laws
Koo

ನವದೆಹಲಿ: ಸಂಸತ್ತಿನ (Parliament) ಚಳಿಗಾಲದ ಅಧಿವೇಶನದಲ್ಲಿ (Winter session) ಅಂಗೀಕರಿಸಲಾದ ಮೂರು ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಸೇರಿದೆ.

ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ. ಈ ಕಾನೂನುಗಳಲ್ಲಿ ಪರಿಚಯಿಸಲಾದ ಪ್ರಮುಖ ಬದಲಾವಣೆಗಳು ಇಂತಿವೆ.

ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ.

ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಕಾನೂನಿನ ಪ್ರಕಾರ, ಅತ್ಯಾಚಾರ ಎಸಗುವವರಿಗೆ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಿದ್ದಾರೆ.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ, ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಗುರುತನ್ನು ಮರೆಮಾಚುವ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ.

ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ =ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಅಥವಾ ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ನವೀಕರಿಸಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾರಾಂಶ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು

Continue Reading

ದೇಶ

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

Jammu Kashmir: ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Jammu Kashmir
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಲೋಕಸಭೆ ಚುನಾವಣೆಯ (Lok Sabha Election) 5ನೇ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಇರುವಾಗಲೇ ಉಗ್ರರ ದಾಳಿ ನಡೆದಿದೆ. ಒಂದೇ ದಿನ ಎರಡು ಕಡೆ ಉಗ್ರರು ನಾಗರಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಶೋಪಿಯಾನ್‌ (Shopian) ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಾಜಿ ಸರ್ಪಂಚ್‌ ಒಬ್ಬರು ಹತರಾದರೆ, ಅನಂತನಾಗ್‌ ಜಿಲ್ಲೆಯಲ್ಲಿ ರಾಜಸ್ಥಾನದ ದಂಪತಿಯು ಗಾಯಗೊಂಡಿದ್ದಾರೆ.

ಉಗ್ರರ ದಾಳಿಯ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಎಂಬುವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಅನಂತನಾಗ್‌ನಲ್ಲಿಯೂ ಉಗ್ರರ ದಾಳಿ ನಡೆದಿದ್ದು, ರಾಜಸ್ಥಾನದ ಪತಿ-ಪತ್ನಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಮೂಲ ನಿವಾಸಿಗಳು ಅಲ್ಲ ಎಂಬುದನ್ನು ಗುರುತಿಸಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಟೂರಿಸ್ಟ್‌ ಕ್ಯಾಂಪ್‌ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪರ್ಹಾ ಹಾಗೂ ಅವರ ಪತಿ ತಬ್ರೇಜ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಡೆ ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಉಗ್ರರು ದಾಳಿ ನಡೆಸಿದ ಕಾರಣ ಭದ್ರತಾ ಸಿಬ್ಬಂದಿಯು ಎರಡೂ ಜಿಲ್ಲೆಗಳಲ್ಲಿ ಉಗ್ರರು ನಡೆಸಿದ ದಾಳಿಯ ಪ್ರದೇಶಗಳ ಸುತ್ತ ಸುತ್ತುವರಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಕಳೆದ ಏಪ್ರಿಲ್‌ನಲ್ಲಿ ಶೋಪಿಯಾನ್‌ ಜಿಲ್ಲೆಯಲ್ಲಿ ಸ್ಥಳೀಯನಲ್ಲದ ಟೂರಿಸ್ಟ್‌ ಗೈಡ್‌ ಒಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ಶ್ರೀನಗರದಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Continue Reading

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading
Advertisement
Swati Maliwal Case
ದೇಶ11 seconds ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌;ಆರೋಪಿ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20243 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ10 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ17 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ32 mins ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ47 mins ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ49 mins ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್1 hour ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್1 hour ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Karnataka weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌