Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ - Vistara News

ದೇಶ

Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ

Ram Navami Violence: ರಾಮನವಮಿ ಹಿನ್ನೆಲೆಯಲ್ಲಿ ರಾಮನ ಮೂರ್ತಿಯ ಮೆರವಣಿಗೆ ಮಾಡುವಾಗ ಪಶ್ಚಿಮ ಬಂಗಾಳ, ಗುಜರಾತ್‌ ಹಾಗೂ ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆದಿದೆ. ಕಲ್ಲುತೂರಾಟ ಕೂಡ ನಡೆದಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Ram Navami Violence erupted in West Bengal and Gujarat, 24 detained
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ/ಗಾಂಧಿನಗರ: ಪಶ್ಚಿಮ ಬಂಗಾಳ ಹಾಗೂ ಗುಜರಾತ್‌ನಲ್ಲಿ ರಾಮನವಮಿ ದಿನವೇ ಭಾರಿ ಹಿಂಸಾಚಾರ (Ram Navami Violence) ನಡೆದಿದ್ದು, ಗುಜರಾತ್‌ನಲ್ಲಿ 24 ಮಂದಿಯನ್ನು ಬಂಧಿಸಲಾಗಿದೆ. ಬಂಗಾಳದಲ್ಲೂ 36 ಜನರನ್ನು ಬಂಧಿಸಲಾಗಿದೆ. ಹಾಗೆಯೇ, ನೂರಾರು ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಬಂಗಾಳದ ಹೌರಾದಲ್ಲಂತೂ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗುಜರಾತ್‌ನ ವಡೋದರಾದಲ್ಲೂ ಹಿಂಸಾಚಾರ ನಡೆದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಹಾಗೆಯೇ, ಇದು ರಾಜಕೀಯ ಮೇಲಾಟಕ್ಕೂ ಕಾರಣವಾಗಿದೆ. ಅತ್ತ, ಮಹಾರಾಷ್ಟ್ರದ ಹಲವೆಡೆಯೂ ಹಿಂಸಾಚಾರದ ಪ್ರಕರಣಗಳು ವರದಿಯಾಗಿವೆ.

ಬಂಗಾಳದಲ್ಲಿ ಶುಕ್ರವಾರವೂ ಗಲಭೆ

ಹೌರಾದ ಶಿಬ್‌ಪುರದಲ್ಲಿ ಶುಕ್ರವಾರವೂ ಗಲಾಟೆ ಮುಂದುವರಿದಿದ್ದು, ಪೊಲೀಸ್‌ ವಾಹನಗಳಿಗೇ ಬೆಂಕಿ ಹಚ್ಚಲಾಗಿದೆ. ಕಲ್ಲು ತೂರಾಟ, ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಸಲಾಗಿದೆ. ಶಿಬ್‌ಪುರವೊಂದರಲ್ಲಿಯೇ ಪೊಲೀಸರು 36 ಜನರನ್ನು ಬಂಧಿಸಿದ್ದು, ನೂರಾರು ಜನರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ರಾಮನವಮಿ ಮೆರವಣಿಗೆ ವೇಳೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಳಿಕ ಗಲಭೆ ಉಂಟಾಗಿದೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಪೊಲೀಸರಿಗೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗದಷ್ಟು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.

ಬಂಗಾಳದಲ್ಲಿ ಹಿಂಸಾಚಾರದ ದೃಶ್ಯ

ಬಿಜೆಪಿ-ಟಿಎಂಸಿ ಮಧ್ಯೆ ವಾಕ್ಸಮರ

ಪಶ್ಚಿಮ ಬಂಗಾಳದಲ್ಲಿ ಭಾರಿ ಕಲ್ಲುತೂರಾಟದಿಂದಾಗಿ ಅಂಗಡಿ-ಮುಂಗಟ್ಟು, ಜನರ ಆಸ್ತಿಪಾಸ್ತಿಗೆ ಹಾನಿಯಾಗಿರುವ ಪ್ರಕರಣವೀಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಹೌರಾದಲ್ಲಿ ನಡೆದ ಹಿಂಸಾಚಾರಕ್ಕೆ ಹಿಂದುಗಳೂ ಕಾರಣವಲ್ಲ, ಮುಸ್ಲಿಮರೂ ಕಾರಣವಲ್ಲ. ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರು ರಾಮನವಮಿ ಮೆರವಣಿಗೆ ವೇಳೆ ಪ್ರಚೋದನೆ ನೀಡಿದ ಕಾರಣ ಹಿಂಸಾಚಾರ ನಡೆದಿದೆ. ಗಲಭೆ ವೇಳೆ ಯಾರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆಯೋ, ಅವರಿಗೆ ನೆರವು ನೀಡಲಾಗುತ್ತದೆ” ಎಂದು ತಿಳಿಸಿದರು. ಅತ್ತ, ಬಿಜೆಪಿಯು ಗಲಭೆಗೆ ಟಿಎಂಸಿಯ ದುರಾಡಳಿತವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಚಾವಣಿ ಮೇಲೆ ನಿಂತು ಕಲ್ಲು ತೂರಾಟ

ಗುಜರಾತ್‌ನ ವಡೋದರ ನಗರದಲ್ಲಿ ರಾಮನ ಮೂರ್ತಿಯ ಮೆರವಣಿಗೆ ವೇಳೆ ಚಾವಣಿ ಮೇಲೆ ನಿಂತು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಫತೇಪುರ ಪ್ರದೇಶದಲ್ಲಿ ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಶ್ರೀರಾಮ ಮೂರ್ತಿಯ ಮೆರವಣಿಗೆ ಆಯೋಜಿಸಿದ್ದರು. ಇದೇ ವೇಳೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗಲಭೆಯಿಂದಾಗಿ ಹಲವರು ಗಾಯಗೊಂಡಿದ್ದು, ಇನ್ನೂ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮೊದಲು ನಡೆದ ಮೆರವಣಿಗೆ ವೇಳೆಯೂ ಪಿತೂರಿ ನಡೆಸಿ ಕಲ್ಲು ತೂರಾಟ ಮಾಡಲಾಗುತ್ತಿತ್ತು. ಈಗಲೂ ಪಿತೂರಿ ನಡೆಸಲಾಗಿದೆ ಎಂದು ಬಜರಂಗದಳದ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: Karnataka Elections: ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣೆ ಸರಕು: ಸಿದ್ದು, ಬಿಜೆಪಿ ನಡುವೆ ರಾಮನವಮಿ ಫೈಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Narendra Modi: ಬಿಹಾರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಮೀಸಲಾತಿ ವಿಷಯ ಪ್ರಸ್ತಾಪಿಸಿದರು. “ಡಾ.ಬಿ.ಆರ್.ಅಂಬೇಡ್ಕರ್ ಅವರು ಇರದಿದ್ದರೆ ಮೀಸಲಾತಿ ಜಾರಿಗೊಳಿಸಲು ಜವಾಹರ ಲಾಲ್‌ ನೆಹರು ಬಿಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

VISTARANEWS.COM


on

Narendra Modi
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ವಿರುದ್ಧ ಪ್ರತಿ ರ‍್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ. ಈಗ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರ ಲಾಲ್‌ ನೆಹರು (Jawaharlal Nehru) ಅವರನ್ನು ಪ್ರಸ್ತಾಪಿಸಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮೋತಿಹರಿಯಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಅಂಬೇಡ್ಕರ್‌ ಅವರು ಇರದಿದ್ದರೆ ಜವಾಹರ ಲಾಲ್‌ ನೆಹರು ಅವರು ಮೀಸಲಾತಿ ಜಾರಿಗೊಳಿಸಲು ಬಿಡುತ್ತಿರಲಿಲ್ಲ” ಎಂದಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (OBC) ಮೀಸಲಾತಿ ನೀಡಲು ಜವಾಹರಲಾಲ್‌ ನೆಹರು ಅವರಿಗೆ ಸುತಾರಾಂ ಇಷ್ಟವಿರಲಿಲ್ಲ. ಇದೇ ಕಾರಣಕ್ಕಾಗಿ ಆಗಿನ ಮುಖ್ಯಮಂತ್ರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ ಪತ್ರ ಬರೆದಿದ್ದರು. ಹಾಗೊಂದು ವೇಳೆ, ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇರದಿದ್ದರೆ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡಲು ಜವಾಹರ ಲಾಲ್‌ ನೆಹರು ಅವರು ಬಿಡುತ್ತಿರಲಿಲ್ಲ” ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್‌ನಿಂದ ಆಯ್ಕೆಯಾದ ಪ್ರಧಾನಿಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗಿದರು. ಇಂದಿರಾ ಗಾಂಧಿ ಆಗಲಿ, ರಾಜೀವ್‌ ಗಾಂಧಿ ಇರಲಿ, ಇವರೆಲ್ಲ ಮೀಸಲಾತಿಯನ್ನು ವಿರೋಧಿಸಿದವರೇ. ಕಾಂಗ್ರೆಸ್‌ನಿಂದ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ಎಂದಿಗೂ ಗೌರವ ಸಿಕ್ಕಿಲ್ಲ. ಇಂತಹ ಕಾಂಗ್ರೆಸ್‌ ನಾಯಕರು ಈಗ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತದೆ. ಮೀಸಲಾತಿಯನ್ನು ಕಿತ್ತು ಎಸೆಯಲಾಗುತ್ತಿದೆ ಎಂಬುದಾಗಿ ಸುಳ್ಳು ಹರಡುತ್ತಿದ್ದಾರೆ” ಎಂದು ಹೇಳಿದರು.

“ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಬಿಜೆಪಿಯು ಬದ್ಧವಾಗಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯದವರ ಹಕ್ಕುಗಳನ್ನು ಎನ್‌ಡಿಎ ಸರ್ಕಾರವು ರಕ್ಷಿಸುತ್ತಿದೆ. ಆದರೆ, ಇಂಡಿಯಾ ಒಕ್ಕೂಟವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಹೊರಟಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ಅಂಬೇಡ್ಕರ್‌ ಅವರೂ ವಿರೋಧಿಸಿದ್ದರು. ಆದರೆ, ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗುತ್ತಿವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

Continue Reading

ದೇಶ

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ ಎಂಬುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಅವರು ಕ್ಷಮೆಯಾಚಿಸುವ ಜತೆಗೆ ಮೂರು ದಿನ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

VISTARANEWS.COM


on

Sambit Patra
Koo

ಭುವನೇಶ್ವರ: “ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ (Lord Jagannath) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಕ್ತ” ಎಂಬುದಾಗಿ ಬಿಜೆಪಿ ನಾಯಕ, ಪುರಿ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿವಾದ ಉಂಟಾದ ಬೆನ್ನಲ್ಲೇ, “ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಹಾಗೂ ವಿಡಿಯೊ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಸಂಬಿತ್‌ ಪಾತ್ರಾ ಅವರು, ಮೊದಲು ಕ್ಷಮೆಯಾಚಿಸಿದ್ದಾರೆ. “ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾದರೆ ಕ್ಷಮೆ ಕೇಳುತ್ತೇನೆ. ಅಲ್ಲದೆ, ಪ್ರಾಯಶ್ಚಿತ್ತವಾಗಿ ನಾನು ಮೂರು ದಿನ ಉಪವಾಸ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದರು. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದರು

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದರು. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading

ಪ್ರಮುಖ ಸುದ್ದಿ

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Equity Market: ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಜೂನ್‌ 4ರ ಬಳಿಕ ದೇಶದ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವುದು ಕಷ್ಟ ಎಂಬುದಾಗಿ ಮೋದಿ ಹೇಳಿರುವ ಬೆನ್ನಲ್ಲೇ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Equity Market
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆ ಎಂಬುದಾಗಿ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

ಹೌದು, 2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದರೊಂದಿಗೆ ಮಾರುಕಟ್ಟೆ ಬಂಡವಾಳ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ತಲುಪಿರುವುದು ಐತಿಹಾಸಿಕ ಎಂದೇ ಹೇಳಲಾಗುತ್ತಿದೆ. ಇದರಿಂದ ಹೂಡಿಕೆದಾರರ ವಿಶ್ವಾಸವೂ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 5 ಲಕ್ಷ ಕೋಟಿ ಡಾಲರ್‌ ಎಂದರೆ ಭಾರತದ 414.75 ಲಕ್ಷ ಕೋಟಿ ರೂ. ಆಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ವೇಗದಲ್ಲಿ ಮಾರುಕಟ್ಟೆಯ ಬಂಡವಾಳವು ಏರಿಕೆಯಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ನಿರೀಕ್ಷಿಸಲಾಗಿದೆ.

ಸದ್ಯ, ನಿಫ್ಟಿಯು ತನ್ನ ಗರಿಷ್ಠ ಪಾಯಿಂಟ್‌ಗಳಿಗಿಂತ 250 ಪಾಯಿಂಟ್‌ ಹಿಂದಿದೆ. ಆದರೂ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಹೂಡಿಕೆಯು ಹೆಚ್ಚಾಗಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. 2027ರ ವೇಳೆಗೆ ಭಾರತವು ವಿಶ್ವದಲ್ಲೇ ಮೂರನೇ ಬೃಹತ್‌ ಆರ್ಥಿಕತೆ ರಾಷ್ಟ್ರ ಎಂಬ ಖ್ಯಾತಿ ಗಳಿಸುವ ವಿಶ್ವಾಸ ಹೊಂದಿದೆ. 2030ರ ವೇಳೆಗೆ ಮಾರುಕಟ್ಟೆ ಬಂಡವಾಳವು 10 ಲಕ್ಷ ಡಾಲರ್‌ ತಲುಪಬೇಕು ಎಂಬ ಗುರಿ ಇದೆ. ಇದರ ದಿಸೆಯಲ್ಲಿ ಈಕ್ವಿಟಿ ಮೌಲ್ಯವು ಗಣನೀಯವಾಗಿ ಏರಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Continue Reading

ದೇಶ

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

India Skills: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೋಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

VISTARANEWS.COM


on

India Skills National Competition 2024 Grand Finale 58 Winners to Represent India at World Skills
Koo

ಬೆಂಗಳೂರು: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ (India Skills National Competition 2024) ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ನಾಲ್ಕು ದಿನಗಳ ಕಾಲ ನಡೆದ ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧೆಯಲ್ಲಿ ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೊಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ

ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದಲ್ಲಿ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ನಂತರದ ಸ್ಥಾನದಲ್ಲಿವೆ. 17 ಚಿನ್ನ, 13 ಬೆಳ್ಳಿ, 9 ಕಂಚಿನ ಪದಕಗಳನ್ನು ಮತ್ತು 12 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿ ಪಡೆಯುವುದರೊಂದಿಗೆ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದೆ. ಕರ್ನಾಟಕ ರಾಜ್ಯವು 13 ಚಿನ್ನ, 12 ಬೆಳ್ಳಿ, 3 ಕಂಚಿನ ಪದಕ ಮತ್ತು 19 ಶ್ರೇಷ್ಠತಾ ಪ್ರಶಸ್ತಿ, ತಮಿಳುನಾಡು 6 ಚಿನ್ನ, 8 ಬೆಳ್ಳಿ, 9 ಕಂಚು ಮತ್ತು 17 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಮಹಾರಾಷ್ಟ್ರ 3 ಚಿನ್ನ, 5 ಬೆಳ್ಳಿ, 6 ಕಂಚಿನ ಪದಕ ಮತ್ತು 14 ಶ್ರೇಷ್ಠತಾ ಪ್ರಶಸ್ತಿ, ಉತ್ತರ ಪ್ರದೇಶ ರಾಜ್ಯವು 3 ಚಿನ್ನ, 3 ಬೆಳ್ಳಿ, 6 ಕಂಚಿನ ಪದಕಗಳು ಮತ್ತು 16 ಶ್ರೇಷ್ಠತಾ ಪ್ರಶಸ್ತಿ, ದೆಹಲಿ 5 ಚಿನ್ನ, 3 ಬೆಳ್ಳಿ, 2 ಕಂಚಿನ ಪದಕಗಳು ಮತ್ತು 10 ಶ್ರೇಷ್ಠತಾ ಪ್ರಶಸ್ತಿ, ರಾಜಸ್ಥಾನ ರಾಜ್ಯವು 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕಗಳು, ಮತ್ತು 9 ಶ್ರೇಷ್ಠತಾ ಪ್ರಶಸ್ತಿ, ಹರಿಯಾಣ 2 ಚಿನ್ನ, 3 ಬೆಳ್ಳಿ, 3 ಕಂಚಿನ ಪದಕಗಳು ಮತ್ತು 13 ಶ್ರೇಷ್ಠತಾ ಪ್ರಶಸ್ತಿ, ಮಧ್ಯಪ್ರದೇಶ 1 ಚಿನ್ನ, 2 ಬೆಳ್ಳಿ, 4 ಕಂಚು, ಮತ್ತು 11 ಶ್ರೇಷ್ಠತಾ ಪ್ರಶಸ್ತಿ, ಬಿಹಾರ ರಾಜ್ಯವು 3 ಚಿನ್ನ, 1 ಬೆಳ್ಳಿ, 3 ಕಂಚು ಮತ್ತು 6 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

47 ಕೌಶಲ್ಯ ಸ್ಪರ್ಧೆಗಳನ್ನು ಆನ್‌ಸೈಟ್‌ನಲ್ಲಿ ನಡೆಸಿದರೆ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಫ್‌ಸೈಟ್‌ನಲ್ಲಿ 14 ಕೌಶಲ್ಯ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧಾ ಕಾರ್ಯಕ್ರಮದಲ್ಲಿ 86 ಸ್ಪರ್ಧಿಗಳೊಂದಿಗೆ ತಮಿಳುನಾಡು ಗರಿಷ್ಠ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ, ನಂತರ ಒಡಿಶಾ (64), ಕರ್ನಾಟಕ (61), ಪಂಜಾಬ್ (53), ಮತ್ತು ಹರಿಯಾಣದಿಂದ 47 ಸ್ಪರ್ಧಿಗಳು ಭಾಗವಹಿಸಿದ್ದರು.

ಈ ವೇಳೆ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಮಾತನಾಡಿ, ಸ್ಪರ್ಧೆಯ ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯು ನಿಖರವಾಗಿತ್ತು ಮಾತ್ರವಲ್ಲದೆ ಭಾಗವಹಿಸುವವರು, ಮಾರ್ಗದರ್ಶಕರು, ಉದ್ಯಮದ ವೃತ್ತಿಪರರು, ಸಾರ್ವಜನಿಕರಿಂದ ಹೆಚ್ಚಿನ ಮೆಚ್ಚುಗೆ ಗಳಿಸಿದ್ದಾರೆ. ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ, ಖ್ಯಾತ ನಿರ್ಮಾಪಕ, ಪದ್ಮಶ್ರೀ ಪುರಸ್ಕೃತ ರಮೇಶ್ ಸಿಪ್ಪಿ, ವೃತ್ತಿಪರ ಶಿಕ್ಷಣ ಮತ್ತು ತರಬೇತಿ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಡಾ. ನಿರ್ಮಲಜೀತ್ ಸಿಂಗ್ ಕಲ್ಸಿ ವೇದ್ ಮಣಿ ತಿವಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Road Accident
ಶಿವಮೊಗ್ಗ4 mins ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ20 mins ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ33 mins ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ57 mins ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ1 hour ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Wedding Fashion
ಫ್ಯಾಷನ್2 hours ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sambit Patra
ದೇಶ2 hours ago

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

2024 Bajaj Pulsar F250
ಪ್ರಮುಖ ಸುದ್ದಿ2 hours ago

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Cauvery Dispute
ಕರ್ನಾಟಕ2 hours ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು8 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌