ಅಗರ್ತಲಾ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ (Ram Mandir) ಲೋಕಾರ್ಪಣೆಗೆ ಕೋಟ್ಯಂತರ ಭಕ್ತರು ಕಾಯುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. 2024ರ ಜನವರಿಯಲ್ಲಿ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಭಕ್ತರು ಶ್ರೀರಾಮಚಂದ್ರನ ದರ್ಶನ ಮಾಡಬಹುದಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ತ್ರಿಪುರದಲ್ಲಿ ನಡೆದ ಜನ ವಿಶ್ವಾಸ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. “ರಾಹುಲ್ ಗಾಂಧಿಯವರೇ ಕೇಳಿ. ನೀವು ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಯಾದಿರಿ. ಆದರೆ, ನಾನಿಂದು ದಿನಾಂಕ ಘೋಷಿಸುತ್ತಿದ್ದೇನೆ. 2024ರ ಜನವರಿ 1ರ ವೇಳೆಗೆ ನಿರ್ಮಾಣ ಕಾಮಗಾರಿ ಮುಗಿಯುತ್ತದೆ. ರಾಮನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಲೇ ಮಂದಿರವು ಭಕ್ತರಿಗೆ ಮುಕ್ತವಾಗುತ್ತದೆ” ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದೆ. “ಈಗಾಗಲೇ ರಾಮಮಂದಿರ ನಿರ್ಮಾಣ ಕಾಮಗಾರಿಯು ಶೇ.50ರಷ್ಟು ಪೂರ್ಣಗೊಂಡಿದೆ” ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇತ್ತೀಚೆಗಷ್ಟೇ ತಿಳಿಸಿತ್ತು.
ಇದನ್ನೂ ಓದಿ | Ayodhya | ರಾಮಮಂದಿರಕ್ಕೆ ಕರ್ನಾಟಕದಿಂದ ಸ್ವರ್ಣಶಿಖರ ಅರ್ಪಣೆಯಾಗಲಿ ಎಂದು ಟ್ರಸ್ಟ್ ಸಭೆಯಲ್ಲಿ ಪೇಜಾವರ ಶ್ರೀ ಪ್ರಸ್ತಾಪ