ಬೆಳಗಾವಿ: ಮಹಾರಾಷ್ಟ್ರದ ಅಘಾಡಿ ಸರ್ಕಾರದಲ್ಲಿ ಕ್ಷೀಪ್ರ ರಾಜಕೀಯ ಕ್ರಾಂತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಮುಂಬಯಿಗೆ ಮತ್ತೊಮ್ಮೆ ತೆರಳಲಿದ್ದಾರೆ.
ದೇವೇಂದ್ರ ಫಡ್ನವಿಸ್ ಬುಲಾವ್ ಮೇರೆಗೆ ರಮೇಶ್ ಜಾರಕಿಹೊಳಿ ಹೋಗಲಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ರಮೇಶ್ ನೆರೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಲ್ಕು ದಿನಗಳ ಕಾಲ ಮುಂಬಯಿನಲ್ಲೇ ರಮೇಶ್ ಜಾರಕಿಹೊಳಿ ಉಳಿಯಲಿದ್ದಾರೆ.
ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೆರವಿಗೆ ರಮೇಶ್ ಜಾರಕಿಹೊಳಿ ಧಾವಿಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಮುಂಬಯಿಗೆ ತೆರಳಿ ಫಡ್ನವಿಸ್ ಅವರನ್ನು ಭೇಟಿಯಾಗಲಿದ್ದಾರೆ.
ವೈಯಕ್ತಿಕ ಕೆಲಸದ ಮೇಲೆ ನಿನ್ನೆ ಮುಂಬಯಿನಿಂದ ಬೆಂಗಳೂರಿಗೆ ಬಂದಿದ್ದ ರಮೇಶ್ ಜಾರಕಿಹೊಳಿ, ಮತ್ತೆ ಮುಂಬಯಿಗೆ ಹಾರಲಿದ್ದಾರೆ. ಬಂಡಾಯದ ಲಾಭ ಪಡೆದು ಬಿಜೆಪಿ ಸರ್ಕಾರ ರಚನೆಗೆ ಯತ್ನಿಸುವ ಸಾಧ್ಯತೆ ಇದೆ.