ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ(Reasi Terror Attack) ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA Raid) ವಿವಿಧ ಸ್ಥಳಗಳಲ್ಲಿ ರೇಡ್ ನಡೆಸಿದೆ. ಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸಿತ್ತು.
ಇದೀಗ ತನಿಖಾ ಭಾಗವಾಗಿ ಜಮ್ಮು -ಕಾಶ್ಮೀರದ ವಿವಿಧ ಭಾಗಗಳಲ್ಲಿ ಎನ್‌ಐಎ ರೇಡ್ ನಡೆಸಿದೆ. ಉಗ್ರರಿಗೆ ಆಶ್ರಯ, ಸಹಾಯ ನೀಡಿದ ಶಂಕಿತರ ಮೇಲೆ ಈ ರೇಡ್ ನಡೆದಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಳೆ ಹಾಕಿದ್ದಾರೆ. ಇತ್ತೀಚೆಗಷ್ಟೇ ರಿಯಾಸಿ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೌರಿ ಜಿಲ್ಲೆಯಲ್ಲಿ ಹಕೀಮ್ ದಿನ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ. ಇದರಿಂದ ಉಗ್ರರು ಸುಲಭವಾಗಿ ದಾಳಿ ಮಾಡಲು ಸಾಧ್ಯವಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ
Reasi Police in J&K have arrested one Hakimdeen in connection with the Reasi terror attack case.
— TIMES NOW (@TimesNow) June 19, 2024
As per the police, he worked for the terrorists as a guide and gave them shelter for Rs 6000.#Reasi #ReasiTerrorAttack pic.twitter.com/ftaDtMRfss
ಜೂನ್ 9ರಂದು ಏನಾಗಿತ್ತು?
ದೆಹಲಿ ರಾಜಸ್ಥಾನ ಹಾಗೂ ಉತ್ತರ ಪ್ರದೇಶದ ಹಿಂದು ಯಾತ್ರಿಕರು ಜೂನ್ 9ರಂದು ಬಸ್‌ನಲ್ಲಿ ವೈಷ್ಣೋದೇವಿ ಯಾತ್ರೆಗೆ ಹೊರಟಿದ್ದರು. ರಿಯಾಸಿ ಜಿಲ್ಲೆಯ ತೆರ್ಯಾತ್ ಗ್ರಾಮದ ಬಳಿಯ ಮಾರ್ಗವಾಗಿ ಬಸ್ ಚಲಿಸುತ್ತಿತ್ತು. ಆದರೆ, ಉಗ್ರರು ಬಸ್ ಅನ್ನು ಹಿಂಬಾಲಿಸಿಕೊಂಡು ಬಂದು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಬಸ್ ಕಣಿವೆಗೆ ಉರುಳಿತ್ತು. ಇದರಿಂದಾಗಿ 9 ಮಂದಿ ಮೃತಪಟ್ಟರೆ, 33 ಜನ ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ಹೊತ್ತುಕೊಂಡಿದೆ.
ರಿಯಾಸಿಯಲ್ಲಿ ಯಾತ್ರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು, ಎನ್‌ಐಎ ತನಿಖೆಗೆ ಆದೇಶಿಸಿದೆ. ಇದುವರೆಗೆ 50ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜೂನ್ 17ರಂದು ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಗ್ರರನ್ನು ಮಟ್ಟಹಾಕಿ ಎಂಬುದಾಗಿ ಸೂಚನೆ ನೀಡಿದ್ದಾರೆ. ನರೇಂದ್ರ ಮೋದಿ ಅವರೂ ಜಮ್ಮು-ಕಾಶ್ಮೀರ ಭದ್ರತೆ ಕುರಿತು ಹೈ ಲೆವೆಲ್ ಮೀಟಿಂಗ್ ನಡೆಸಿದ್ದಾರೆ. ಈಗಾಗಲೇ ಉಗ್ರನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!