Vande Bharat Train: ವಂದೇ ಭಾರತ್ ರೈಲಿನಿಂದಾಗಿ ವಿಮಾನ ಪ್ರಯಾಣ ಮತ್ತಷ್ಟು ಅಗ್ಗ! - Vistara News

ದೇಶ

Vande Bharat Train: ವಂದೇ ಭಾರತ್ ರೈಲಿನಿಂದಾಗಿ ವಿಮಾನ ಪ್ರಯಾಣ ಮತ್ತಷ್ಟು ಅಗ್ಗ!

Vande Bharat Train: ವಂದೇ ಭಾರತ್ ರೈಲುಗಳು ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚುಮೆಚ್ಚಿನ ಕಾರ್ಯಕ್ರಮವಾಗಿದ್ದು, ದೇಶಾದ್ಯಂತ ಎಲ್ಲ ನಗರಗಳಿಗೂ ಸಂಪರ್ಕ ಕಲ್ಪಿಸುವತ್ತ ದಿಟ್ಟ ಹೆಜ್ಜೆ ಇಡಲಾಗಿದೆ.

VISTARANEWS.COM


on

Vande Bharat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ (Vande Bharat Train) ರೈಲು ಸೇವೆ ಪರಿಣಾಮಕಾರಿಯಾಗುವತ್ತ ಸಾಗುತ್ತಿದೆ. ರಾಜ್ಯಗಳ ನಡುವೆ ಮತ್ತು ರಾಜ್ಯದೊಳಗೇ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸೇವೆಯಿಂದಾಗಿ ವಿಮಾನಯಾನ ಶುಲ್ಕ ಗಣನೀಯವಾಗಿ ಇಳಿಕೆಯಾಗಿದ್ದು, ಮತ್ತಷ್ಟು ಅಗ್ಗವಾಗಿದೆ! ಹೌದು, ಹೆಚ್ಚುತ್ತಿರುವ ವಂದೇ ಭಾರತ್ ರೈಲು ಸೇವೆಯು ವಿಮಾನ ಪ್ರಮಾಣದ ಶುಲ್ಕದ ಮೇಲೆ ಪರಿಣಾಮ ಬೀರಿದೆ. ಉದ್ಯಮಗಳ ತಜ್ಞರ ವಿಶ್ಲೇಷಣೆಯ ಪ್ರಕಾರ, ವಿಮಾನಯಾನ ಸಂಚಾರದಲ್ಲಿ (Air Traffic) ಶೇ.10ರಿಂದ 20 ಮತ್ತು ಶುಲ್ಕದಲ್ಲಿ (airfare ) ಶೇ.20ರಿಂದ 30ರಷ್ಟು ಕಡಿಮೆಯಾಗಿದೆ.

ಭಾರತೀಯ ರೈಲ್ವೆಯು ವಂದೇ ಭಾರತ್ ರೈಲುಗಳ ಬೇಡಿಕೆಯನ್ನು ಲಿಂಗ ಮತ್ತು ಪ್ರಯಾಣಿಕರ ವಯಸ್ಸಿನ ಆಧಾರದ ಮೇಲೆ ಸಮೀಕ್ಷೆ ಮಾಡಲು ಆರಂಭಿಸಿದೆ. ಈ ದತ್ತಾಂಶವು ನಾಲ್ಕು ವಂದೇ ಭಾರತ್ ಮಾರ್ಗಗಳಲ್ಲಿ ಪ್ರಯಾಣಿಸುವ ಅಂದರೆ, ಮುಂಬೈನಿಂದ ಶಿರಡಿ, ಗೋವಾ, ಸೋಲಾಪುರ ಮಾರ್ಗಗಳಲ್ಲಿ ಸಂಚರಿಸುವ ಪುರುಷರು, ಮಹಿಳೆಯರು ಮತ್ತು ಮಂಗಳರಮುಖಿಯರ ಸಂಖ್ಯೆಯನ್ನು ಒಳಗೊಂಡಿದೆ.

ಮುಂಬೈನಿಂದ ಪ್ರಾರಂಭವಾಗುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ 31-45 ವರ್ಷ ವಯಸ್ಸಿನವರು, ನಂತರ 15-30 ವರ್ಷ ವಯಸ್ಸಿನವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ರೈಲ್ವೆ ಮಾಹಿತಿ ನೀಡಿದೆ. ಸೆಪ್ಟೆಂಬರ್ 15ರಿಂದ ಅಕ್ಟೋಬರ್ 13ರ ನಡುವೆ ಒಟ್ಟು 85,600 ಪುರುಷರು, 57838 ಮಹಿಳೆಯರು ಮತ್ತು 26 ಮಂಗಳಮುಖಿಯರು ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ್ದಾರೆಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Vande Bharat : ಗಮನಿಸಿ, ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಮಯ ಬದಲಾಗಿದೆ, ಈಗ ಅರ್ಧ ಗಂಟೆ ಫಾಸ್ಟ್‌

ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಮತ್ತು ವಂದೇ ಭಾರತ್ ರೈಲಗಳನ್ನು ಜನಪ್ರಿಯ ಮಾಡುವುದಕ್ಕಾಗಿ ರೈಲ್ವೆ ಇಲಾಖೆಯು ಮಾಹಿತಿಯನ್ನು ಕಲೆ ಹಾಕುತ್ತಿದೆ. ಈ ಅವಧಿಯಲ್ಲಿ 1-14 ವರ್ಷದೊಳಗಿನ ಮಕ್ಕಳ ಸಂಖ್ಯೆ ಶೇ.5ರಷ್ಟಿದ್ದರೆ ವಂದೇ ಭಾರತ್ ರೈಲುಗಳಲ್ಲಿ ಮಂಗಳಮುಖಿಯರ ಪಯಣದ ಪ್ರಮಾಣ ಶೇ. 4.5ರಷ್ಟಿದೆ ಎಂದು ತಿಳಿದು ಬಂದಿದೆ.

ಎಲ್ಲ ರಾಜ್ಯಗಳಲ್ಲೂ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸಲು ಹೊರಟಿರುವ ಕೇಂದ್ರ ಸರ್ಕಾರವು ಶೀಘ್ರವೇ ಕಾಶ್ಮೀರದಲ್ಲಿ ಈ ರೈಲು ಶುರುವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಕಾಶ್ಮೀರದ ಎತ್ತರ ಪ್ರದೇಶ ಹಾಗೂ ತಾಪಮಾನಕ್ಕೆ ಹೊಂದಾಣಿಕೆಯಾಗುವಂತೆ ಈ ರೈಲುಗಳನ್ನು ವಿನ್ಯಾಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

LPG Price Cut: ಮೇ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 19 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1825.50 ರೂ.ಗೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತದೆ.

VISTARANEWS.COM


on

LPG Price Cut
Koo

ನವದೆಹಲಿ: ಮೇ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 19 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1,825.50 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,745.50 ರೂ. ಆಗಿದೆ. ಹಿಂದೆ 1,764.50 ರೂ. ಆಗಿತ್ತು. ಮುಂಬೈಯಲ್ಲಿಯೂ 19 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,698.50 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,911 ರೂ., ಕೋಲ್ಕತ್ತಾದಲ್ಲಿ 20 ರೂ.ಗಳ ಕಡಿತದ ನಂತರ 1,859 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತದೆ.

ಜಾಗತಿಕ ತೈಲ ಬೆಲೆಗಳು ಇತ್ತೀಚೆಗೆ ಕುಸಿದ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ. ಅಮೆರಿಕದಲ್ಲಿ ಕಚ್ಚಾ ದಾಸ್ತಾನುಗಳ ಏರಿಕೆ ಮತ್ತು ಅಸ್ಥಿರ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಭಾವ್ಯ ಕದನ ವಿರಾಮ ಒಪ್ಪಂದದ ಸುತ್ತ ಹೆಚ್ಚುತ್ತಿರುವ ಆಶಾವಾದದ ಕಾರಣದಿಂದ ಜಾಗತಿಕ ತೈಲ ಬೆಲೆಗಳು ಕುಸಿಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ₹25ರಷ್ಟು ಹೆಚ್ಚಿಸಿದ್ದವು.

Continue Reading

ಕ್ರೈಂ

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Divorce Case: ವಿಚ್ಛೇದನ ಪ್ರಕರಣದಲ್ಲಿ ಸಿವಿಲ್ ಪ್ರಕರಣಗಳನ್ನು ಹೊರತುಪಡಿಸಿ ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದು ಕ್ರೌರ್ಯಕ್ಕೆ ಸಮಾನವಾಗಿರುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ ಹೇಳಿದೆ.

VISTARANEWS.COM


on

By

Divorce Case
Koo

ಮುಂಬಯಿ: ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ವಿವಿಧ ಸುಳ್ಳು (fake) ಕ್ರಿಮಿನಲ್ ಪ್ರಕರಣಗಳನ್ನು (criminal case) ದಾಖಲಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಬಾಂಬೆ ಹೈಕೋರ್ಟ್‌ನ (bombay high court) ಔರಂಗಾಬಾದ್ ಪೀಠ (Aurangabad bench) ಹೇಳಿದೆ. ವಿಚ್ಛೇದನಕ್ಕೆ ದಂಪತಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಪತಿ ಸಲ್ಲಿಸಿದ ಮನವಿಯ ಮೇರೆಗೆ ಕೆಳ ನ್ಯಾಯಾಲಯವು ದಂಪತಿಗೆ ವಿಚ್ಛೇದನವನ್ನು ನೀಡಿದರೆ, ವೈವಾಹಿಕ ಹಕ್ಕುಗಳನ್ನು ಮರುಸ್ಥಾಪಿಸಲು ಪತ್ನಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿ ವೈ.ಜಿ. ಖೋಬ್ರಾಗಡೆ ಅವರ ಪೀಠವು ವಿಚಾರಣೆ ನಡೆಸುತ್ತಿದೆ. ದಂಪತಿಗೆ ನೀಡಿರುವ ವಿಚ್ಛೇದನವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. 2004 ರಲ್ಲಿ ಪರ್ಭಾನಿಯಲ್ಲಿ ವಿವಾಹವಾದ ದಂಪತಿ 2012 ರವರೆಗೆ ಒಟ್ಟಿಗೆ ವಾಸಿಸುತ್ತಿದ್ದರು. ಅವರಿಗೆ ಒಬ್ಬ ಮಗಳು ಇದ್ದಾಳೆ.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

2012ರಲ್ಲಿ ಹೆಂಡತಿ ತನ್ನನ್ನು ತೊರೆದು ಮಗಳೊಂದಿಗೆ ತವರು ಮನೆಯಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಾಳೆ ಎಂದು ವ್ಯಕ್ತಿ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾನೆ. ಇದಾದ ಬಳಿಕ 2015ರಲ್ಲಿ ವೈವಾಹಿಕ ಹಕ್ಕುಗಳ ಮರುಸ್ಥಾಪನೆಗಾಗಿ ಪತ್ನಿ ಮನವಿ ಸಲ್ಲಿಸಿದ್ದು, ನ್ಯಾಯಾಲಯವು ಅವರ ಪರವಾಗಿ ತೀರ್ಪು ನೀಡಿದ್ದರಿಂದ ಪತ್ನಿ ಗಂಡನೊಂದಿಗೆ ವಾಸಿಸಲು ಹೋಗಿದ್ದರು. ಆದರೆ ಆತ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಪತ್ನಿ ಗಂಡನ ವಿರುದ್ಧ ನಾಪತ್ತೆ ದೂರನ್ನು ದಾಖಲಿಸಿದ್ದರು. ಅವರು ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಕಾನೂನು ಹೋರಾಟವನ್ನು ಪ್ರಾರಂಭಿಸಿದರು.

ಪತ್ನಿ ತನ್ನ ಮತ್ತು ತನ್ನ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಕ್ರಿಮಿನಲ್ ದೂರುಗಳು ಸೇರಿದಂತೆ ವಿವಿಧ ಕೇಸುಗಳನ್ನು ದಾಖಲಿಸಿದ್ದಾರೆ. ಈ ಸುಳ್ಳು ದೂರುಗಳಿಂದಾಗಿ ತಾನು ಮತ್ತು ತನ್ನ ಕುಟುಂಬ ಸದಸ್ಯರು ಮಾನಸಿಕ ಕ್ರೌರ್ಯವನ್ನು ಅನುಭವಿಸಿರುವುದಾಗಿ ವ್ಯಕ್ತಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಅಲ್ಲದೇ ಪತ್ನಿ ತನ್ನ ತಂದೆ ಮತ್ತು ಸಹೋದರನ ವಿರುದ್ಧವೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಕಲಿ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ . ಅನಂತರ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು, ಆದರೆ ಪತ್ನಿಯಿಂದಾಗಿ ತನ್ನ ಕುಟುಂಬ ಸದಸ್ಯರು ಆಘಾತವನ್ನು ಅನುಭವಿಸಿದ್ದಾರೆ ಮತ್ತು ಸಮಾಜದಲ್ಲಿ ಅವರ ಖ್ಯಾತಿಯನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತನಗೆ ಅತ್ತೆಯಂದಿರು ಕಿರುಕುಳ ನೀಡಿರುವುದಾಗಿ ಪ್ರಕರಣ ದಾಖಲಿಸಿಸಿರುವುದಾಗಿ ಮಹಿಳೆ ನ್ಯಾಯಾಲಯದ ಮುಂದೆ ತಿಳಿಸಿದ್ದಾರೆ.


ನ್ಯಾ. ಖೋಬ್ರಗಡೆ ಅವರು ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿದ ಅನಂತರ, ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ವಿಚಾರಣೆಯನ್ನು ಪ್ರಾರಂಭಿಸುವುದು ಮತ್ತು ದಾಂಪತ್ಯದ ಹಕ್ಕುಗಳನ್ನು ಮರುಸ್ಥಾಪಿಸುವುದು ಕ್ರೌರ್ಯವಲ್ಲ. ಆದರೆ, ಪತಿ, ಅವರ ತಂದೆ, ಸಹೋದರ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಅಧಿಕಾರಿಗಳಿಗೆ ವಿವಿಧ ಸುಳ್ಳು, ಆಧಾರರಹಿತ ದೂರುಗಳನ್ನು ಸಲ್ಲಿಸುವುದು ಖಂಡಿತವಾಗಿಯೂ ಕ್ರೌರ್ಯದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯ ಕಡೆಯಿಂದ ಕ್ರೌರ್ಯವಿದೆ ಎಂದು ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪೀಠ ಒಪ್ಪಿತು. ದಂಪತಿಗೆ ವಿಚ್ಛೇದನ ನೀಡುವ ಕೆಳ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿ ಹೈಕೋರ್ಟ್ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿದೆ.

Continue Reading

ವೈರಲ್ ನ್ಯೂಸ್

‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

Viral News: ದೀಪೇಂದ್ರ ಸಿಂಗ್‌ ಎಂಬ ಯುವಕನಿಗೆ ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯೊಬ್ಬಳು ಪರಿಚಯ ಆಗಿದ್ದಳು. ಆಕೆ ಪ್ರೊಫೈಲ್‌ ಪಿಕ್ಚರ್‌ಗೆ ಮನಸೋತಿದ್ದ. ಬಹಳ ಖುಷಿಯಿಂದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ದೀಪೇಂದ್ರ ಸಿಂಗ್‌ಗೆ ಶಾಕ್‌ ಕಾದಿತ್ತು. ಪ್ರೊಫೈಲ್‌ ಪೋಟೋಗೂ ಅಲ್ಲಿ ಬಂದಿದ್ದಾಕೆಗೂ ಅಜಗಜಾಂತರ ವ್ಯತ್ಯಾಸ ಇತ್ತು. ಅಲ್ಲದೇ ಆಕೆ 45ವರ್ಷದ ಮಹಿಳೆ ಆಗಿದ್ದಳು.

VISTARANEWS.COM


on

Viral News
Koo

ಉತ್ತರಪ್ರದೇಶ: ಸೋಶಿಯಲ್‌ ಮೀಡಿಯಾ(Social Media)ದಲ್ಲಿ ಪ್ರೊಫೈಲ್‌ ಫೋಟೋ(Fake profile) ನೋಡಿ ಯಾಮಾರೋದು ಹೊಸ ವಿಚಾರವೇನಲ್ಲ. ಚಂದ ಫೋಟೋ ನೋಡಿ ಅದನ್ನೇ ನಿಜ ಎಂದು ಭಾವಿಸಿ ಚಾಟಿಂಗ್‌ ಮಾಡಿ ಬಳಿಕ ಹಣ ಕಳೆದುಕೊಂಡವರು ಅದೆಷ್ಟೋ ಜನರಿದ್ದಾರೆ. ಆಗಾಗ ಇಂತಹ ಘಟನೆ(Viral News)ಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದೇ ಮತ್ತೊಂದು ಘಟನೆ ಉತ್ತರಪ್ರದೇಶ(Uttar pradesh)ದ ಕಾನ್ಪುರದಲ್ಲಿ ನಡೆದಿದೆ. 20ವರ್ಷದ ಯುವಕನೋರ್ವ ಸೋಶಿಯಲ್‌ ಮೀಡಿಯಾದಲ್ಲಿ ಪರಿಚಯ ಆಗಿದ್ದ ಮಹಿಳೆಯನ್ನು ನಂಬಿ ಮೋಸ ಹೋಗಿದ್ದಾನೆ. ಪ್ರೊಫೈಲ್‌ ಫೋಟೋ ಕಂಡು ಪ್ರೀತಿಯಲ್ಲಿ ಬಿದ್ದಿದ್ದ ಆ ಯುವಕನಿಗೆ ನೇರವಾಗಿ ಆಕೆಯನ್ನು ನೋಡಿ ಶಾಕ್‌ ಆಗಿದೆ ಇದರಿಂದ ಕೋಪಗೊಂಡ ಆತನ ಆಕೆಯನ್ನು ಚೆನ್ನಾಗಿ ಥಳಿಸಿದ್ದಾನೆ.

ಘಟನೆ ವಿವರ

20 ವರ್ಷದ ದೀಪೇಂದ್ರ ಸಿಂಗ್‌ ಎಂಬ ಯುವಕನಿಗೆ ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯೊಬ್ಬಳು ಪರಿಚಯ ಆಗಿದ್ದಳು. ಆಕೆ ಪ್ರೊಫೈಲ್‌ ಪಿಕ್ಚರ್‌ಗೆ ಮನಸೋತಿದ್ದ. ಹಲವು ದಿನಗಳಿಂದ ಆಕೆಯ ಜೊತೆ ಚಾಟಿಂಗ್‌ ಮಾಡುತ್ತಿದ್ದ ಆತ ಪ್ರೇಮ ನಿವೇದನೆಯನ್ನೂ ಮಾಡಿದ್ದ. ಮುಂದೆ ಮದುವೆ ಆಗಬೇಕೆಂದೂ ಇಬ್ಬರೂ ನಿರ್ಧರಿಸಿದ್ದರು. ಇಷ್ಟೆಲ್ಲಾ ಬರೀ ಚಾಟಿಂಗ್‌ನಲ್ಲೇ ನಡೆದಿತ್ತು. ಹೀಗೆ ನಡೆಯುತ್ತಿದ್ದಾಗ ಮುಖಾಮುಖಿ ಭೇಟಿಯಾಗುವಂತೆ ದೀಪೇಂದ್ರ ಸಿಂಗ್‌ ಆಕೆಯನ್ನು ಕೇಳಿದ್ದಾಳೆ. ಅದಕ್ಕೆ ಒಪ್ಪಿದ ಆಕೆ ದೀಪೇಂದ್ರ ಸಿಂಗ್‌ನನ್ನು ಭೇಟಿ ಆಗಲು ಬಂದಿದ್ದಳು. ಆದರೆ ಇವರಿಬ್ಬರ ಈ ಇನ್‌ಸ್ಟಾಗ್ರಾಂ ಪ್ರೇಮ ಕತೆಯಲ್ಲಿ ಒಂದು ಟ್ವಿಸ್ಟ್‌ ಇತ್ತು. ಬಹಳ ಖುಷಿಯಿಂದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ ದೀಪೇಂದ್ರ ಸಿಂಗ್‌ಗೆ ಶಾಕ್‌ ಕಾದಿತ್ತು. ಪ್ರೊಫೈಲ್‌ ಪೋಟೋಗೂ ಅಲ್ಲಿ ಬಂದಿದ್ದಾಕೆಗೂ ಅಜಗಜಾಂತರ ವ್ಯತ್ಯಾಸ ಇತ್ತು. ಅಲ್ಲದೇ ಆಕೆ 45ವರ್ಷದ ಮಹಿಳೆ ಆಗಿದ್ದಳು.

ಮಹಿಳೆಗೆ ಥಳಿಸಿ, ಎಸ್ಕೇಪ್

ಎದುರಿಗೆ ನಿಂತಿದ್ದ ಮಹಿಳೆಯನ್ನು ಕಂಡು ಕೋಪಗೊಂಡಿದ್ದ ದೀಪೇಂದ್ರ ಸಿಂಗ್‌ ಆಕೆಯನ್ನು ಮುಖಾಮೂತಿ ನೋಡದೇ ಚಚ್ಚಿದ್ದಾನೆ. ನೆಲಕ್ಕೆ ಹಾಕಿ ಆಕೆಯ ತಲೆಗೆ ಒದ್ದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ಮೊಬೈಲ್‌ ಅನ್ನೂ ಕಸಿದು ಅಲ್ಲಿಂದ ಎಸ್ಕೇಪ್‌ ಆಗಿದ್ದಾನೆ. ಅಲ್ಲಿಂದ ಹೇಗೋ ಪೊಲೀಸ್‌ ಠಾಣೆಗೆ ಬಂದ ಮಹಿಳೆ ದೀಪೇಂದ್ರ ಸಿಂಗ್‌ ವಿರುದ್ಧ ದೂರು ದಾಖಲಿಸಿದ್ದಾಳೆ. ದೂರಿನಾಧಾರದಲ್ಲಿ ತನಿಖೆ ಆರಂಭಿಸಿದ್ದ ಪೊಲೀಸರು ದೀಪೇಂದ್ರ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲೂ ಇಂತಹದ್ದೇ ಪ್ರಕರಣವಂದು ಬೆಳಕಿಗೆ ಬಂದಿತ್ತು. ಲೊಕ್ಯಾಂಟೋ ಆ್ಯಪ್ (Locanto App) ಬಳಸುವವರನ್ನೇ ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನದೀಂ ಪಾಷ ಹಾಗೂ ನಾಗೇಶ್ ಎಂಬ ಖದೀಮರು ಹುಡುಗಿ ಹೆಸರಲ್ಲಿ ಲೊಕ್ಯಾಂಟೋ ಆ್ಯಪ್‌ನಲ್ಲಿ ಚೆಂದದ ಫೋಟೊ ಹಾಕಿ ಫೇಕ್‌ ಪ್ರೊಫೈಲ್ ಕ್ರಿಯೇಟ್‌ ಮಾಡುತ್ತಿದ್ದರು. ಬಳಿಕ ಆ ಅಕೌಂಟ್‌ನಿಂದ‌ ತಾವೇ ಮೊದಲು ಮೆಸೇಜ್ ಮಾಡುತ್ತಿದ್ದರು. ಸಲುಗೆಯಿಂದ ಮಾತಾಡುತ್ತಾ ನಂಬಿಕೆಯನ್ನು ಗಿಟ್ಟಿಸಿಕೊಂಡು ಮರುಳು ಮಾಡುತ್ತಿದ್ದರು.

Continue Reading

ಪ್ರಮುಖ ಸುದ್ದಿ

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Bomb Threat: ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

VISTARANEWS.COM


on

delhi schools bomb threat
Koo

ಹೊಸದಿಲ್ಲಿ: ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ 12 ಕನಿಷ್ಠ ಪ್ರತಿಷ್ಠಿತ ಶಾಲೆಗಳಿಗೆ (Schools) ಬುಧವಾರ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿದೆ. ಬುಧವಾರ ಬೆಳಗ್ಗೆ ದೆಹಲಿಯ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ಷಿಪ್ರವಾಗಿ ಸ್ಥಳಾಂತರಿಸಲಾಯಿತು.

ಬಾಂಬ್ ಬೆದರಿಕೆ ಇ-ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದಾಗಿದೆ. ಬೆದರಿಕೆ ಹಿನ್ನೆಲೆಯಲ್ಲಿ ಶಾಲಾ ಆವರಣವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಶಾಲೆಗಳಲ್ಲಿ ನೋಯ್ಡಾದ ದೆಹಲಿ ಪಬ್ಲಿಕ್ ಸ್ಕೂಲ್ ಕೂಡ ಒಂದಾಗಿದೆ. ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಕೂಡಲೇ ನೋಯ್ಡಾ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು. ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳ ಶಾಲೆಗಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿವೆ. ಬಾಂಬ್ ಪತ್ತೆ ಘಟಕ, ಬಾಂಬ್ ನಿಷ್ಕ್ರಿಯ ತಂಡ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ತಂಡವನ್ನು ಶಾಲೆಗಳಿಗೆ ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಹಿಂದೆ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು ಎಂದು ವರದಿಯಾಗಿತ್ತು. ನಂತರ ಇತರ ಮೂರು ಶಾಲೆಗಳ ಆಡಳಿತ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆಯ ಬಗ್ಗೆ ಮಾಹಿತಿ ನೀಡಿದರು. ಸಂಖ್ಯೆ ಒಟ್ಟು 12ಕ್ಕೆ ತಲುಪಿದೆ.

ಇಮೇಲ್‌ನ IP ವಿಳಾಸವು ಅದು ದೇಶದ ಹೊರಗಿನಿಂದ ಬಂದಿದೆ ಎಂದು ಸೂಚಿಸಿದೆ. ವಿಪಿಎನ್ ಮೂಲಕ ಐಪಿ ವಿಳಾಸವನ್ನು ಮರೆಮಾಚಿರಬಹುದು ಎಂದು ದೆಹಲಿ ಪೊಲೀಸರು ಶಂಕಿಸಿದ್ದಾರೆ. “ನಿನ್ನೆಯಿಂದ ಹಲವು ಸ್ಥಳಗಳಿಗೆ ಇಮೇಲ್‌ಗಳು ಬಂದಿವೆ. ಒಂದೇ ಮಾದರಿಯಲ್ಲಿ ಇವೆ. ಮೇಲ್ ಡೇಟ್‌ಲೈನ್ ಅಥವಾ BCC ಅನ್ನು ಉಲ್ಲೇಖಿಸಿಲ್ಲ. ಅಂದರೆ ಒಂದೇ ಸಂದೇಶವನ್ನು ಹಲವು ಸ್ಥಳಗಳಿಗೆ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Continue Reading
Advertisement
prajwal revanna actress swara bhasker angry government silence on prajwal revanna
ರಾಜಕೀಯ4 seconds ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ2 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ7 mins ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ17 mins ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Ambedkar Statue in kalaburagi news
ಕಲಬುರಗಿ26 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ44 mins ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Delhi Congress
ರಾಜಕೀಯ47 mins ago

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Duniya Vijay Visited Kolluru Shri Mookambika Devi Temple
ಸಿನಿಮಾ50 mins ago

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Vettaiyan Movie Anirudh Ravichander to make a special appearance in Rajinikanth
ಕಾಲಿವುಡ್59 mins ago

Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!

Divorce Case
ಕ್ರೈಂ1 hour ago

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌