Site icon Vistara News

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

Reels tragedy

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ (Reels Accident) ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ರೀಲ್ಸ್‌ (Reels Tragedy) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ರೀಲ್ಸ್ ಹುಚ್ಚಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ.

ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version