Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ! - Vistara News

ದೇಶ

Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

Reliance Industries: 2023-24ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Reliance Industries
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ನೇತೃತ್ವದ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) 2023-24ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ಒಟ್ಟು 1,86,440 ಕೋಟಿ (1.86 ಲಕ್ಷ ಕೋಟಿ) ರೂಪಾಯಿಗಳನ್ನು ತೆರಿಗೆಯಾಗಿ ಠೇವಣಿ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 9 ಸಾವಿರ ಕೋಟಿ ರೂಪಾಯಿ ಅಧಿಕವಾಗಿದೆ ಎಂಬುದು ಕಂಪನಿಯ ವಾರ್ಷಿಕ ವರದಿಯಲ್ಲಿ ತಿಳಿದುಬಂದಿದೆ. ಇದು ಒಂದು ರಾಜ್ಯದ ಇಡೀ ವರ್ಷದ ಬಜೆಟ್‌ ಮೊತ್ತದಷ್ಟು!

ದೇಶದ ಆರ್ಥಿಕತೆಗೆ ರಿಲಯನ್ಸ್ ಕೊಡುಗೆ ಮಹತ್ವದ್ದಾಗಿದೆ. 2023-24 ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ರಫ್ತಿನಲ್ಲೂ ರಿಲಯನ್ಸ್ ದೇಶದ ಸಾಮರ್ಥ್ಯಕ್ಕೆ ಬಲ ತುಂಬಿದೆ. ಕಳೆದ ಹಣಕಾಸು ವರ್ಷದಲ್ಲಿ ರಿಲಯನ್ಸ್ ಸುಮಾರು 3 ಲಕ್ಷ ಕೋಟಿ ರೂಪಾಯಿ ಮೌಲ್ಯದಷ್ಟು ರಫ್ತು ಮಾಡಿದೆ. ಅಷ್ಟೇ ಅಲ್ಲ, ಕಂಪನಿಯು ದೇಶದಲ್ಲಿ ಬಂಡವಾಳ ಆಸ್ತಿಗಳ ಸೃಷ್ಟಿಯಲ್ಲಿಯೂ ಖಾಸಗಿ ವಲಯದ ಅತಿದೊಡ್ಡ ಕೊಡುಗೆದಾರರಲ್ಲಿ ಒಂದಾಗಿದೆ. ವಾರ್ಷಿಕ ವರದಿಯ ಪ್ರಕಾರ, 2023-24ರ ಹಣಕಾಸು ವರ್ಷದಲ್ಲಿ ರಿಲಯನ್ಸ್ 1 ಲಕ್ಷ 35 ಸಾವಿರ ಕೋಟಿ ರೂಪಾಯಿ ಕೊಡುಗೆ ನೀಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ವಾರ್ಷಿಕ ವರದಿ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿ, ಕಳೆದ ದಶಕದಲ್ಲಿ ಜಾಗತಿಕ ಆರ್ಥಿಕ ಸನ್ನಿವೇಶದಲ್ಲಿ ಭಾರತದ ಪ್ರಾಮುಖ್ಯತೆ ಹಲವು ಪಟ್ಟು ಹೆಚ್ಚಾಗಿದೆ. ಅಸ್ಥಿರತೆ ಮತ್ತು ಅನಿಶ್ಚಿತತೆಯ ಈ ಜಗತ್ತಿನಲ್ಲಿ ಭಾರತವು ಸ್ಥಿರತೆ ಮತ್ತು ಸಮೃದ್ಧಿಯ ಸಂಕೇತವಾಗಿ ಕಾಣುತ್ತಿದೆ. 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದ ಫಲವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಬಲವಾದ ಬೆಳವಣಿಗೆ ಆಗಿದೆ. ಭಾರತ ಮತ್ತು ಭಾರತೀಯತೆಯ ಈ ಚೈತನ್ಯವೇ ರಿಲಯನ್ಸ್ ಅನ್ನು ನಿರಂತರವಾಗಿ ಹೊಸತನ್ನು ಕಂಡುಕೊಳ್ಳಲು ಮತ್ತು ಪ್ರತಿ ಪ್ರಯತ್ನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರೇಪಿಸುತ್ತದೆ. ರಿಲಯನ್ಸ್ ಕುಟುಂಬವು ಭಾರತದ ಬೆಳವಣಿಗೆಯ ಯಶೋಗಾಥೆ ಭಾಗವಾಗುವುದು ಮತ್ತು ಅದರ ಅದ್ಭುತ ಬೆಳವಣಿಗೆಗೆ ಕೊಡುಗೆ ನೀಡುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಂಪನಿಯು ಸಾಮಾಜಿಕ ಜವಾಬ್ದಾರಿಗಾಗಿ (ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ) ಒಟ್ಟು 1,592 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದು ಹಿಂದಿನ ಹಣಕಾಸು ವರ್ಷಕ್ಕಿಂತ 300 ಕೋಟಿ ರೂಪಾಯಿ ಹೆಚ್ಚಾಗಿದೆ. ಲಾಭ ಗಳಿಸುವಲ್ಲಿಯೂ ಕಂಪನಿ ಮೊದಲ ಸ್ಥಾನದಲ್ಲಿದ್ದು, 2023-24ನೇ ಹಣಕಾಸು ವರ್ಷದಲ್ಲಿ ತೆರಿಗೆ ನಂತರದ ಲಾಭ 79 ಸಾವಿರ ಕೋಟಿ ರೂಪಾಯಿ ಗಳಿಸಿದೆ. ಇದು ಕಳೆದ ಹಣಕಾಸು ವರ್ಷದಲ್ಲಿ ಗಳಿಸಿದ್ದ 73 ಸಾವಿರದ 670 ಕೋಟಿ ರೂಪಾಯಿಗಿಂತ ಶೇ 7.3ರಷ್ಟು ಹೆಚ್ಚಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

ಮನೆಗೊಂದು ಕಾರು ಬೇಕು ಎನ್ನುವ ಆಸೆ ಜೊತೆಗೆ ಇದಕ್ಕೆ ಪೂರಕವಾಗಿ ವಿವಿಧ ಆಕರ್ಷಕ ಕೊಡುಗೆಗಳಿಂದ ಕಾರುಗಳ ಬೇಡಿಕೆ ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು (Best Selling Cars) ಮತ್ತು ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಕಾರುಗಳು ಯಾವುದು ಗೊತ್ತೇ? ಇಲ್ಲಿದೆ ಇದರ ಸಂಪೂರ್ಣ ಡಿಟೇಲ್ಸ್.

VISTARANEWS.COM


on

By

Best Selling Cars
Koo

ಜುಲೈ ತಿಂಗಳು ಕೆಲವು ಕಾರು ಕಂಪನಿಗಳಿಗೆ (car) ಹಬ್ಬವನ್ನು ಉಂಟು (Best Selling Cars) ಮಾಡಿದರೆ, ಇನ್ನು ಕೆಲವು ಕಾರು ತಯಾರಕರಿಗೆ ಸಣ್ಣ ಹೊಡೆತವನ್ನೂ ನೀಡಿದೆ. ಇದರಲ್ಲಿ ಮುಖ್ಯವಾಗಿ ಮಾರುತಿ ಸುಜುಕಿ (Maruti Suzuki), ಹುಂಡೈ (Hyundai) ಮತ್ತು ಟಾಟಾ ಮೋಟಾರ್ಸ್‌ನ (Tata Motors) ಕಾರುಗಳು ಮಾರಾಟದಲ್ಲಿ ಕುಸಿತವನ್ನು ದಾಖಲಿಸಿತ್ತು. ಹಿನ್ನಡೆಯ ಹೊರತಾಗಿಯೂ ಹುಂಡೈ ಜುಲೈ ತಿಂಗಳಲ್ಲಿ ಕಾರು ಮಾರಾಟದಲ್ಲಿ ಕ್ರೆಟಾ (Hyundai Creta) ಟಾಟಾ ಪಂಚ್ (Tata Punch) ಸೇರಿದಂತೆ ಕೆಲವು ಜನಪ್ರಿಯ ಮಾದರಿಗಳಿಗೆ ಸಡ್ಡು ಹೊಡೆದಿದೆ.

ಜುಲೈ 2024ರಲ್ಲಿ ಹೆಚ್ಚು ಮಾರಾಟವಾದ ಹತ್ತು ಪ್ರಮುಖ ಕಾರುಗಳ ವಿವರ ಇಲ್ಲಿದೆ:

ಜುಲೈ ತಿಂಗಳಲ್ಲಿ 17,350 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಹ್ಯುಂಡೈ ಕ್ರೆಟಾ ಮುನ್ನಡೆಯನ್ನು ಕಂಡಿದೆ. 2023ರ ಜುಲೈಗೆ ಹೋಲಿಸಿದರೆ ಶೇ. 23ರಷ್ಟು ಬೇಡಿಕೆ ಹೆಚ್ಚಾಗಿರುವುದಾಗಿ ಕಂಪನಿ ಪ್ರಕಟಿಸಿದೆ. ಅಲ್ಲದೇ ಹೊಸ ಹುಂಡೈ ಕ್ರೆಟಾ ಜನವರಿಯಿಂದ ಈವರೆಗೆ 1 ಲಕ್ಷ ಮಾರಾಟದ ಮೈಲುಗಲ್ಲನ್ನು ತಲುಪಿದೆ. ಈ ವರ್ಷ. ಕ್ರೆಟಾ ಎನ್ ಲೈನ್ ಆವೃತ್ತಿಯಲ್ಲಿಯೂ ಲಭ್ಯವಿದ್ದು, ಸ್ಪೋರ್ಟಿಯರ್ ಆವೃತ್ತಿಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸುತ್ತಿದೆ.


ಮಾರುತಿ ಸುಜುಕಿ ಸ್ವಿಫ್ಟ್ ನಂ.2

ಕ್ರೆಟಾದ ಬಳಿಕ ಮಾರುತಿ ಸುಜುಕಿ ಸ್ವಿಫ್ಟ್ 16,854 ಯುನಿಟ್‌ಗಳ ಮಾರಾಟವನ್ನು ದಾಖಲಿಸಿದೆ. ಶೇ. 6ರಷ್ಟು ಮಾರಾಟ ಕುಸಿತವನ್ನು ಕಂಡಿದೆ. ಸ್ವಿಫ್ಟ್ ಅನಂತರ ವ್ಯಾಗನರ್ ಕಳೆದ ತಿಂಗಳು ಮಾರಾಟ ಕುಸಿತವನ್ನು ದಾಖಲಿಸಿದ ಅನಂತರ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ.

ಕಳೆದ ತಿಂಗಳ ಬೆಸ್ಟ್-ಸೆಲ್ಲರ್, ಟಾಟಾ ಪಂಚ್ 16,121 ಯುನಿಟ್‌ಗಳ ಮಾರಾಟ ಮತ್ತು ಶೇ. 34ರಷ್ಟು ಬೆಳವಣಿಗೆಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಪಂಚ್ ಸೇರಿದಂತೆ ಇನ್ನೂ ಎರಡು ಮಾರುತಿ ಸುಜುಕಿ ವಾಹನಗಳಾದ ಎರ್ಟಿಗಾ ಮತ್ತು ಬ್ರೆಝಾ, ಕ್ರಮವಾಗಿ 15,701 ಯುನಿಟ್ ಮತ್ತು 14,676 ಯುನಿಟ್‌ಗಳನ್ನು ಮಾರಾಟವಾಗಿದೆ. ಎರ್ಟಿಗಾ ಶೇ. 9, ಬ್ರೆಝಾ ಶೇ. 11 ರಷ್ಟು ಮಾರಾಟ ಕುಸಿತವನ್ನು ಅನುಭವಿಸಿದೆ.


ಟಾಟಾ ನೆಕ್ಸಾನ್ ಸ್ಥಾನ ಏನು?:

ಏಳನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ ಇದ್ದು, ಇದು ಮೊದಲ ಬಾರಿಗೆ ಧನಾತ್ಮಕ ಬೆಳವಣಿಗೆಯನ್ನು ಕಂಡಿದೆ. ಟಾಟಾ ಜುಲೈ 2024 ರಲ್ಲಿ 13,902 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ್ದು, ಶೇ. 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಜುಲೈ 2024ರಲ್ಲಿ ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದ ಕೆಲವೇ ಕಾರು ತಯಾರಕರಲ್ಲಿ ಮಹೀಂದ್ರಾ ಕೂಡ ಒಂದಾಗಿದೆ. 12,237 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ ಸ್ಕಾರ್ಪಿಯೊ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ. ಮಾರುತಿ ಸುಜುಕಿ ಉತ್ಪನ್ನಗಳಾದ ಇಕೋ, ಡಿಜೈರ್ ಎರಡೂ ಮಾರಾಟದಲ್ಲಿ ಕುಸಿತವನ್ನು ಅನುಭವಿಸಿದೆ.

ಇದನ್ನೂ ಓದಿ: Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

ಯಾವುದು ಎಷ್ಟು?

ಹುಂಡೈ ಕ್ರೆಟಾ ಈ ಬಾರಿ 17,350ರಷ್ಟು ಮಾರಾಟವಾಗಿದ್ದು, ಕಳೆದ ವರ್ಷ 14,062ರಷ್ಟಾಗಿತ್ತು.


ಮಾರುತಿ ಸುಜುಕಿ ಸ್ವಿಫ್ಟ್ ಈ ಬಾರಿ 16,854, ಕಳೆದ ಬಾರಿ 17,896, ಮಾರುತಿ ಸುಜುಕಿ ವ್ಯಾಗನ್ ಆರ್ ಈ ಬಾರಿ 16,191, ಕಳೆದ ವರ್ಷ 12,970, ಟಾಟಾ ಪಂಚ್ ಈ ಬಾರಿ 16,121, ಕಳೆದ ವರ್ಷ 12,019, ಮಾರುತಿ ಸುಜುಕಿ ಎರ್ಟಿಗಾ ಈ ಬಾರಿ 15,701, ಕಳೆದ ಬಾರಿ 14,352, ಮಾರುತಿ ಸುಜುಕಿ ಬ್ರೆಝಾ ಈ ಬಾರಿ 14,676, ಕಳೆದ ವರ್ಷ 16,543, ಟಾಟಾ ನೆಕ್ಸಾನ್ ಈ ಬಾರಿ 13,902, ಕಳೆದ ವರ್ಷ 12,349, ಮಹೀಂದ್ರ ಸ್ಕಾರ್ಪಿಯೋ ಈ ಬಾರಿ 12,237, ಕಳೆದ ಬಾರಿ 10,522, ಮಾರುತಿ ಸುಜುಕಿ ಇಕೋ ಈ ಬಾರಿ 11,916, ಕಳೆದ ವರ್ಷ 12,037, ಮಾರುತಿ ಸುಜುಕಿ ಡಿಜೈರ್ ಈ ಬಾರಿ 11,647 ಕಳೆದ ವರ್ಷ 13,395ರಷ್ಟು ಮಾರಾಟವನ್ನು ದಾಖಲಿಸಿದೆ.

Continue Reading

ದೇಶ

Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Muhammad Yunus: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ದೇವಾಲಯಗಳು ಸೇರಿ 97ಕ್ಕೂ ಹಿಂದು ಸ್ಥಳಗಳ ಮೇಲೆ ದಾಳಿ ಇಸ್ಲಾಮಿಕ್‌ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವುದು, ಹಿಂದು ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸಲಾಗಿದೆ. ಹಾಗಾಗಿ, ಮೋದಿ ಅವರು ಹಿಂದುಗಳನ್ನು ರಕ್ಷಿಸಿ ಎಂದು ಮೊಹಮ್ಮದ್‌ ಯೂನಸ್‌ ಅವರಿಗೆ ಮೋದಿ ಮನವಿ ಮಾಡಿದ್ದಾರೆ.

VISTARANEWS.COM


on

Muhammad Yunus
Koo

ಢಾಕಾ: ಆಂತರಿಕ ದಂಗೆ, ಪ್ರತಿಭಟನೆ ಹಾಗೂ ಹಿಂಸಾಚಾರದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ (Sheikh Hasina) ಅವರು ರಾಜೀನಾಮೆ ನೀಡಿ, ದೇಶ ತೊರೆದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ (Bangladesh) ಹಂಗಾಮಿ ಸರ್ಕಾರ ರಚನೆಯಾಗಿದೆ. ಹಂಗಾಮಿ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್‌ ಶಾಂತಿ ಪುರಸ್ಕೃತ ಮೊಹಮ್ಮದ್‌ ಯೂನಸ್‌ (Muhammad Yunus) ಅವರು ಪದಗ್ರಹಣ ಮಾಡಿದ್ದಾರೆ. ಇನ್ನು, ಮೊಹಮ್ಮದ್‌ ಯೂನಸ್‌ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ದೇಶದಲ್ಲಿ ಹಿಂದುಗಳನ್ನು ರಕ್ಷಿಸಿ ಎಂದು ಕೂಡ ಮನವಿ ಮಾಡಿದ್ದಾರೆ.

“ನೂತನ ಜವಾಬ್ದಾರಿ ವಹಿಸಿಕೊಂಡಿರುವ ಪ್ರೊಫೆಸರ್‌ ಮೊಹಮ್ಮದ್‌ ಯೂನಸ್‌ ಅವರಿಗೆ ಶುಭಾಶಯಗಳು. ಬಾಂಗ್ಲಾದೇಶದಲ್ಲಿ ಎಲ್ಲವೂ ಸಹಜಸ್ಥಿತಿಗೆ ಬರಲಿದೆ ಎಂಬ ವಿಶ್ವಾಸವಿದೆ. ಹಾಗೆಯೇ, ಹಿಂದುಗಳು ಸೇರಿ ಎಲ್ಲ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸುತ್ತೀರಿ ಎಂಬ ನಂಭಿಕೆ ಇದೆ. ಉಭಯ ದೇಶಗಳ ಶಾಂತಿ, ಭದ್ರತೆ ಹಾಗೂ ಅಭಿವೃದ್ಧಿಯ ಕುರಿತು ಮುಂದಿನ ದಿನಗಳಲ್ಲೂ ಭಾರತದ ಸಹಕಾರ ಇರಲಿದೆ” ಎಂಬುದಾಗಿ ನರೇಂದ್ರ ಮೋದಿ ಪೋಸ್ಟ್‌ ಮಾಡಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ದೇವಾಲಯಗಳು ಸೇರಿ 97ಕ್ಕೂ ಹಿಂದು ಸ್ಥಳಗಳ ಮೇಲೆ ದಾಳಿ ಇಸ್ಲಾಮಿಕ್‌ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವುದು, ಹಿಂದು ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸಲಾಗಿದೆ. ಇದಕ್ಕೆಲ್ಲ ಗಲ್ಫ್‌ ದೇಶಗಳು ಬಾಂಗ್ಲಾದೇಶದ ಮೂಲಭೂತವಾದಿಗಳು ನೀಡುತ್ತಿರುವ ಹಣವೇ ಕಾರಣ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಹಾಗಾಗಿ, ಮೋದಿ ಅವರು ಹಿಂದುಗಳ ರಕ್ಷಣೆಗೆ ಆದ್ಯತೆ ನೀಡಿ ಎಂದು ಕೋರಿದ್ದಾರೆ.

ಮೊಹಮ್ಮದ್‌ ಯೂನಸ್‌ ಅವರೊಂದಿಗೆ 15 ಸಲಹೆಗಾರರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಬಾಂಗ್ಲಾದೇಶದಲ್ಲಿ ಹೊಸದಾಗಿ ಚುನಾವಣೆ ನಡೆದು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಮೊಹಮ್ಮದ್‌ ಯೂನಸ್‌ ಅವರೇ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇವರಿಗೆ ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ (BNP) ಬೆಂಬಲವಿದೆ. ಇದರೊಂದಿಗೆ ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಅವರ ಆಡಳಿತ ಅಂತ್ಯವಾಗಿ, ಮೊಹಮ್ಮದ್‌ ಯೂನಸ್‌ ಅವರ ಆಡಳಿತ ಜಾರಿಗೆ ಬಂದಿದೆ. ಶೇಖ್‌ ಹಸೀನಾ ಅವರು 15 ವರ್ಷ ಪ್ರಧಾನಿಯಾಗಿದ್ದರು. ಸದ್ಯ ಅವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

83 ವರ್ಷದ ಮುಹಮ್ಮದ್ ಯೂನಸ್ ಅವರು ಶೇಖ್‌ ಹಸೀನಾ ಅವರ ಪ್ರಮುಖ ಟೀಕಾಕಾರರು ಮತ್ತು ರಾಜಕೀಯ ವಿರೋಧಿಯೂ ಆಗಿದ್ದಾರೆ. ಅರ್ಥಶಾಸ್ತ್ರಜ್ಞರು ಆಗಿರುವ ಯೂನಸ್ 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಡ ವ್ಯಕ್ತಿಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಮೈಕ್ರೋಕ್ರೆಡಿಟ್‌ನೊಂದಿಗೆ ಅವರ ಅದ್ಭುತ ಕೆಲಸಕ್ಕಾಗಿ ನೊಬೆಲ್ ಸಮಿತಿಯು ಯೂನಸ್ ಮತ್ತು ಅವರ ಗ್ರಾಮೀಣ ಬ್ಯಾಂಕ್ ಅನ್ನು ಗುರುತಿಸಿದೆ. ತಳಮಟ್ಟದಿಂದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಅವರ ಕಾರ್ಯವನ್ನು ಗೌರವಿಸುವ ಸಲುವಾಗಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್‌ ಯೂನಸ್‌ ಪದಗ್ರಹಣ!

Continue Reading

ದೇಶ

Waqf Act: ಪುರಸಭೆ ಕಚೇರಿಯನ್ನೇ ನುಂಗಿದ ವಕ್ಫ್‌ ಮಂಡಳಿ; ಆಸ್ತಿ ಕಬಳಿಕೆ ಬಣ್ಣ ಬಯಲು ಮಾಡಿದ ಕೇಂದ್ರ ಸಚಿವ!

Waqf Act: Parliament Session: ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ. ಇನ್ನು ತಿದ್ದುಪಡಿ ಕುರಿತು ಪ್ರತಿಪಕ್ಷಗಳ ಆಕ್ಷೇಪಕ್ಕೆ ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್‌ ರಿಜಿಜು ಅವರು ನಿದರ್ಶನಗಳ ಸಮೇತ ತಿರುಗೇಟು ನೀಡಿದ್ದಾರೆ.

VISTARANEWS.COM


on

Waqf Act
Koo

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಹುಚರ್ಚಿತ ವಕ್ಫ್‌ ತಿದ್ದುಪಡಿ ವಿಧೇಯಕವನ್ನು (Waqf Amendment Bill) ಸಂಸತ್‌(Parliament Session)ನಲ್ಲಿ ಗುರುವಾರ ಮಂಡಿಸಲಾಗಿದೆ. ಇದೀಗ ಈ ಮದೂದೆಯ ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಸರ್ಕಾರ ಕಳುಹಿಸಿದೆ. ಇಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ (Union Minister of Minority Affairs) ಕಿರಣ್‌ ರಿಜಿಜು (Kiren Rijiju) ಮಸೂದೆಯನ್ನು ಮಂಡಿಸಿದ್ದಾರೆ. ಅಷ್ಟೇ ಅಲ್ಲ, ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರುವ ಕುರಿತು ಪ್ರತಿಪಕ್ಷಗಳ ಆರೋಪಗಳಿಗೆ ನಿದರ್ಶನಗಳ ಸಮೇತ ಮರುತ್ತರ ನೀಡಿದ್ದಾರೆ.

“ವಕ್ಫ್‌ ಕಾಯ್ದೆಗೆ ತಿದ್ದುಪಡಿ ಕುರಿತು ಹಲವು ತನಿಖಾ ವರದಿಗಳನ್ನು ಆಧರಿಸಿಯೇ ತೀರ್ಮಾನಿಸಲಾಗಿದೆ. ವಕ್ಫ್‌ ಮಂಡಳಿಯು ಪರಮಾಧಿಕಾರವನ್ನು ಬಳಸಿಕೊಂಡು ತಿರುಚಿರಪಳ್ಳಿ ಎಂಬ ಇಡೀ ಗ್ರಾಮವನ್ನು ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ. ಇದರಲ್ಲಿ ಧರ್ಮ ನೋಡಬೇಡಿ, ಗ್ರಾಮದಲ್ಲಿ 1,500 ವರ್ಷಗಳ ಇತಿಹಾಸ ಇರುವ ಸುಂದರೇಶ್ವರ ದೇವಾಲಯ ಇದೆ. ಆದರೂ, ವಕ್ಫ್‌ ಆಸ್ತಿ ಎಂದು ಘೋಷಿಸಲಾಯಿತು. ಇದಷ್ಟೇ ಅಲ್ಲ, ಸೂರತ್‌ ಮುನ್ಸಿಪಲ್‌ ಕಾರ್ಪೊರೇಷನ್‌ನ ಕೇಂದ್ರ ಕಚೇರಿಯನ್ನೇ ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸಲಾಗಿದೆ ಎಂದರೆ ನೀವು ಕಲ್ಪನೆ ಮಾಡಿಕೊಳ್ಳಬೇಕು” ಎಂದು ಪ್ರತಿಪಕ್ಷಗಳ ಆರೋಪಗಳಿಗೆ ಕಿರಣ್‌ ರಿಜಿಜು ತಿರುಗೇಟು ನೀಡಿದ್ದಾರೆ.

“ನಾನು ಒಬ್ಬ ಬೌದ್ಧ ಧರ್ಮೀಯನಾಗಿದ್ದೇನೆ. ನಾನು ಹಿಂದು ಅಲ್ಲ, ಮುಸ್ಲಿಂ ಅಲ್ಲ. ಆದರೆ, ಎಲ್ಲ ಧರ್ಮಗಳನ್ನು ನಾನು ಗೌರವಿಸುತ್ತೇನೆ. ಇದರಲ್ಲಿ ಧಾರ್ಮಿಕ ವಿಷಯವನ್ನು ಹುಡುಕಬೇಡಿ. ಪುರಸಭೆ ಕಚೇರಿ ಹೇಗೆ ಖಾಸಗಿ ಆಸ್ತಿ ಆಗುತ್ತದೆ? ಪುರಸಭೆ ಕಚೇರಿಯನ್ನು ಹೇಗೆ ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸಲಾಗುತ್ತದೆ? ಇದೆಲ್ಲವನ್ನು ಗಮನಿಸಿಯೇ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ” ಎಂದು ತಿಳಿಸಿದರು.

ಏನೆಲ್ಲ ಬದಲಾವಣೆ?

ದೇಶದ ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿ ಆಸ್ತಿ ಎಂಬುದಾಗಿ ಘೋಷಿಸವ, ಅದನ್ನು ಯಾರೂ ಕೋರ್ಟ್‌ನಲ್ಲೂ ಪ್ರಶ್ನಿಸಲು ಸಾಧ್ಯವಾಗದಂತಹ ಪರಮಾಧಿಕಾರವನ್ನು ವಕ್ಫ್‌ ಕಾಯ್ದೆಯು ನೀಡಿದೆ. ಆದರೆ, ಈ ಪರಮಾಧಿಕಾರವನ್ನು ರದ್ದುಗೊಳಿಸುವುದು ಪ್ರಮುಖ ಬದಲಾವಣೆಯಾಗಿದೆ. ಇನ್ನು, ಆಯಾ ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಇಬ್ಬರು ಹೆಣ್ಣುಮಕ್ಕಳು ಕಡ್ಡಾಯವಾಗಿ ಇರುವುದು, ವಕ್ಫ್‌ ಮಂಡಳಿ ಆಸ್ತಿ ಕುರಿತು ಜಿಲ್ಲಾಧಿಕಾರಿ ತೀರ್ಮಾನ ತೆಗೆದುಕೊಳ್ಳುವುದು ಸೇರಿ ಹಲವು ಬದಲಾವಣೆ ಮಾಡಲಾಗುತ್ತದೆ.

ಅಷ್ಟೇ ಅಲ್ಲ, ಸಮಿತಿಯಲ್ಲಿ ಒಬ್ಬ ಕೇಂದ್ರ ಸಚಿವ, ಮೂವರು ಸಂಸದರು, ಮೂರು ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಮೂವರು ಮುಸ್ಲಿಂ ಕಾನೂನು ತಜ್ಞರು ಇರಲಿದ್ದಾರೆ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ಇಬ್ಬರು ಜಡ್ಜ್‌ಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸುವ ಮೊದಲು ನೋಟಿಸ್‌ ನೀಡಬೇಕು. ಆ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ವಕ್ಫ್‌ ಆಸ್ತಿಗಳ ಸರ್ವೇಯನ್ನು ಜಿಲ್ಲಾಧಿಕಾರಿ ಎದುರು ಮಾಡಬೇಕು. ಮಂಡಳಿಯ ನಿರ್ಧಾರ ಪ್ರಶ್ನಿಸಿ 90 ದಿನಗಳಲ್ಲಿ ಆಸ್ತಿಯ ಮಾಲೀಕರು ಅಥವಾ ಸಂಬಂಧಪಟ್ಟವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಅಧಿಕಾರ ನೀಡಲಾಗಿದೆ.

ಆಸ್ತಿಯ ಬದಲು ಹಣಕಾಸು ನೆರವು ಬಂದರೆ, ಆ ಹಣವನ್ನು ಕೇಂದ್ರ ಸರ್ಕಾರ ಸಲಹೆಯಂತೆ ವಿಧವೆಯರು, ವಿಚ್ಛೇದನ ಪಡೆದವರು ಹಾಗೂ ಅನಾಥರ ಕಲ್ಯಾಣಕ್ಕೆ ವಿನಿಯೋಗಿಸಬೇಕು. ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿರುವ ಬೋಹ್ರಾ ಹಾಗೂ ಆಗಾಖಾನಿ ಸಮುದಾಯದವರಿಗೆ ಪ್ರತ್ಯೇಕ ಮಂಡಳಿಸಲು ಪ್ರಸ್ತಾಪಿಸಲಾಗಿದೆ.

ಏನಿದು ವಕ್ಫ್‌ ಕಾಯ್ದೆ?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ಇದನ್ನೂ ಓದಿ: Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

Continue Reading

ದೇಶ

Wayanad Landslide: ವಯನಾಡಿನಲ್ಲಿ ಸೈನಿಕರ ಕಾರ್ಯಾಚರಣೆ ಮುಕ್ತಾಯ; ಸೆಲ್ಯೂಟ್‌ ಹೊಡೆದು ಬೀಳ್ಕೊಟ್ಟ ಜನ, Video ಇದೆ

Wayanad Landslide: ಭಾರತೀಯ ಸೇನೆಯ ಸುಮಾರು 500 ಸದಸ್ಯರಿರುವ ಬೆಟಾಲಿಯನ್‌ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ತಿರುವನಂತಪುರಂ, ಕಲ್ಲಿಕೋಟೆ, ಕಣ್ಣೂರು ಹಾಗೂ ಬೆಂಗಳೂರಿನಿಂದ ಹೋಗಿದ್ದ ಯೋಧರು ವಾಪಸಾಗಿದ್ದಾರೆ. ಇವರಿಗೆ ವಯನಾಡು ಜಿಲ್ಲಾಡಳಿತದ ಜತೆಗೆ ಜನರು ಕೂಡ ಭಾವುಕರಾಗಿ ಬೀಳ್ಕೊಡುಗೆ ನೀಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Wayanad Landslide
Koo

ವಯನಾಡು: ಕೇರಳದ ವಯನಾಡಿನಲ್ಲಿ (Wayanad Landslide) ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 400 ದಾಟಿದೆ. ಇನ್ನು ಕಳೆದ 10 ದಿನಗಳಿಂದ ಅವಶೇಷಗಳ ಅಡಿಯಲ್ಲಿ, ಬೆಟ್ಟ ಗುಡ್ಡಗಳಲ್ಲಿ ಸಿಲುಕಿದ್ದ ಜನರ ರಕ್ಷಣೆಗಾಗಿ ನಿರಂತರವಾಗಿ ಕೈಗೊಂಡಿದ್ದ ಸೇನೆಯ ಕಾರ್ಯಾಚರಣೆಯು (Indian Army Rescue Operation) ಮುಕ್ತಾಯವಾಗಿದೆ. ಕಳೆದ 10 ದಿನಗಳಲ್ಲಿ ಸಾವಿರಾರು ಜನರನ್ನು ರಕ್ಷಣೆ ಮಾಡಿದ ಯೋಧರಿಗೆ (Army Soldiers) ಜನ ಚಪ್ಪಾಳೆ ತಟ್ಟಿ, ಸೆಲ್ಯೂಟ್‌ ಹೊಡೆದು, ಹೂಮಳೆ ಸುರಿಸಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಕಳೆದ 10 ದಿನಗಳಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಭಾರತದ ಯೋಧರಿಗೆ ವಯನಾಡು ಜಿಲ್ಲಾಡಳಿತವು ಬೀಳ್ಕೊಡುಗೆ ಸಮಾರಂಭ ಆಯೋಜಿಸಿತ್ತು. ಇದೇ ವೇಳೆ ಸಾರ್ವಜನಿಕರು ಕೂಡ ಯೋಧರಿಗೆ ಗೌರವ ಸಲ್ಲಿಸಿದರು. ಯೋಧರ ಮೇಲೆ ಹೂಗಳನ್ನು ಸುರಿದು, ಚಪ್ಪಾಳೆ ತಟ್ಟಿ ಭಾವುಕರಾಗಿ ಯೋಧರನ್ನು ಬೀಳ್ಕೊಟ್ಟಿದ್ದಾರೆ. ಕೊಚ್ಚಿ ಡಿಫೆನ್ಸ್‌ ಪಬ್ಲಿಕ್‌ ರಿಲೇಷನ್ಸ್‌ ಆಫೀಸರ್‌ ಎಕ್ಸ್ ಖಾತೆಯಿಂದ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಭಾರತೀಯ ಸೇನೆಯ ಸುಮಾರು 500 ಸದಸ್ಯರಿರುವ ಬೆಟಾಲಿಯನ್‌ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ತಿರುವನಂತಪುರಂ, ಕಲ್ಲಿಕೋಟೆ, ಕಣ್ಣೂರು ಹಾಗೂ ಬೆಂಗಳೂರಿನಿಂದ ಹೋಗಿದ್ದ ಯೋಧರು ವಾಪಸಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆಯ ಜತೆಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ದಳದ ಸಿಬ್ಬಂದಿ, ಕೇರಳ ಪೊಲೀಸರು ಕೂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು.

6 ಜನರಿಗಾಗಿ 8 ಗಂಟೆ ಕಾರ್ಯಾಚರಣೆ ನಡೆಸಿದ್ದರು

ಮೆಪ್ಪಾಡಿಯ ಸೂಜಿಪ್ಪಾರ ಜಲಪಾತವಿರುವ ಎರಾಕುಂಡ್‌ ಅರಣ್ಯ ಪ್ರದೇಶದಲ್ಲಿದ್ದ ಕೃಷ್ಣನ್‌, ಅವರ ಪತ್ನಿ ಶಾಂತಾ ಮತ್ತು ನಾಲ್ಕು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ನಾಲ್ವರು ಅರಣ್ಯಾಧಿಗಳ ಗುಂಪು ಸತತ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು. 10 ಹಗ್ಗಗಳನ್ನು ಸೇರಿಸಿ ಕಟ್ಟಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

ಕಲ್ಪೆಟ್ಟ ರೇಂಜ್‌ ಫಾರೆಸ್ಟ್‌ ಆಫೀಸರ್‌ ಕೆ.ಆಶೀಫ್‌, ಮುಂಡಕೈ ಸೆಕ್ಷನ್‌ ಫಾರೆಸ್ಟ್‌ ಆಫೀಸರ್‌ ಜಯಚಂದ್ರನ್‌, ಕಲ್ಪೆಟ್ಟ ರೇಂಜ್‌ ಬೀಟ್‌ ಫಾರೆಸ್ಟ್‌ ಆಫೀಸರ್‌ ಕೆ.ಅನಿಲ್‌ ಕುಮಾರ್‌ ಮತ್ತು ಕಲ್ಪೆಟ್ಟ ಆರ್‌.ಆರ್‌.ಡಿ. ಅನೂಪ್‌ ತೋಮಸ್‌ ಅವರನ್ನೊಳಗೊಂಡ ಗುಂಪು ಅತ್ಯಂತ ಸಾಹಸಿಕವಾಗಿ ಈ ಆದಿವಾಸಿ ಕುಟುಂಬವನ್ನು ಕಾಪಾಡಿತ್ತು. ಇದು ದೇಶಾದ್ಯಂತ ಸುದ್ದಿಯಾಗಿತ್ತು. ರಕ್ಷಣಾ ಕಾರ್ಯಾಚರಣೆ ತಂಡಗಳ ಶ್ರಮವನ್ನು ಜನ ಕೊಂಡಾಡಿದ್ದರು.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

Continue Reading
Advertisement
PR Sreejesh
ಪ್ರಮುಖ ಸುದ್ದಿ29 mins ago

PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

Bengaluru
ಬೆಂಗಳೂರು1 hour ago

Bengaluru: ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಟ; ದುರುಳನಿಗೆ ಬಿತ್ತು ಧರ್ಮದೇಟು!

Aman Sehrawat
ಪ್ರಮುಖ ಸುದ್ದಿ1 hour ago

Aman Sehrawat : ಸೆಮಿ ಫೈನಲ್​ನಲ್ಲಿ ಸೋತ ಅಮನ್​; ನಾಳೆ ಕಂಚಿನ ಪದಕಕ್ಕಾಗಿ ಹೋರಾಟ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಕಂಚು ಗೆದ್ದ ಹಾಕಿ ತಂಡದ ಪಂಜಾಬ್​​ನ ಆಟಗಾರರಿಗೆ ತಲಾ 1 ಕೋಟಿ ರೂ. ಬಹುಮಾನ ಪ್ರಕಟ

Best Selling Cars
ಆಟೋಮೊಬೈಲ್2 hours ago

Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

Muhammad Yunus
ದೇಶ2 hours ago

Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Bengaluru News
ಕರ್ನಾಟಕ2 hours ago

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

chess player
ಕ್ರೀಡೆ2 hours ago

Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

Toyota
ಕರ್ನಾಟಕ2 hours ago

Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

Channapatna News
ಕರ್ನಾಟಕ3 hours ago

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ8 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ9 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌