Republic Day 2024: "ಸಂವಿಧಾನವನ್ನು ರಕ್ಷಿಸೋಣ…ʼʼ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಗಣರಾಜ್ಯೋತ್ಸವದ ಸಂದೇಶ - Vistara News

ಗಣರಾಜ್ಯೋತ್ಸವ

Republic Day 2024: “ಸಂವಿಧಾನವನ್ನು ರಕ್ಷಿಸೋಣ…ʼʼ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಗಣರಾಜ್ಯೋತ್ಸವದ ಸಂದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಾಡಿನ ಜನತೆಗೆ 75ನೇ ಗಣರಾಜ್ಯೋತ್ಸವದ (Republic Day 2024) ಸಂದೇಶ ನೀಡಿದ್ದಾರೆ.

VISTARANEWS.COM


on

CM Siddarmaiah infrot of vidhansoudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ಸಂವಿಧಾನ (constitution) ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ (Democracy) ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಅವರು ನಾಡಿನ ಜನತೆಗೆ 75ನೇ ಗಣರಾಜ್ಯೋತ್ಸವದ (Republic Day 2024) ಸಂದೇಶ ನೀಡಿದ್ದಾರೆ. ಸಂದೇಶದ ಪೂರ್ಣ ಪಾಠ ಹೀಗಿದೆ:

  1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
  2. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.
  3. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
  4. ‘ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ’ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ.
  5. ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ.
  6. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ. ಸಂವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಇಟ್ಟುಕೊಂಡು ಸಂಸದೀಯ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇದು ಸಂವಿಧಾನಕ್ಕೆ ಮಾಡುವ ಅಪಚಾರ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಕೂಡಾ ಹೌದು. ಇಂತಹವರನ್ನು ತಿರಸ್ಕರಿಸುವುದು ಪ್ರತಿಯೊಬ್ಬ ಪ್ರಜೆಯ ಧರ್ಮವಾಗಿದೆ.
  7. ಜಾತ್ಯತೀತತೆ ಸಂವಿಧಾನದ ಮುಖ್ಯ ಆಶಯಗಳಲ್ಲಿ ಒಂದು. ಇದು ಅನ್ಯಧರ್ಮವನ್ನು ದ್ವೇಷಿಸದೆ ಸ್ವಂತ ಧರ್ಮವನ್ನು ಪ್ರೀತಿಸುವ ಉದಾತ್ತ ಮಾನವೀಯ ಗುಣ. ಜಾತಿ,ಧರ್ಮವನ್ನು ಮೀರಿ `ಮನುಷ್ಯ ಜಾತಿ ತಾನೊಂದೆ ವಲಂ ಎಂಬ ಕವಿವಾಣಿ ಕೂಡಾ ಸಂವಿಧಾನದ ಈ ಆಶಯವನ್ನೇ ನೆನಪು ಮಾಡಿಕೊಡುತ್ತದೆ.
  8. ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯ ಇಲ್ಲ.
  9. ಸ್ವಾತಂತ್ರ್ಯ ಎನ್ನುವುದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುಲ್ಲ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಾಕ್ಷಾತ್ಕಾರಗೊಂಡಾಗ ಮಾತ್ರ ಪ್ರಜಾಪ್ರಭುತ್ವ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ಪ್ರಜಾಪ್ರಭುತ್ವ ಎಂದು ಹೇಳಿದ್ದು. ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ.
  10. ನಮ್ಮ ಯೋಚನೆಗಳು ಮತ್ತು ಯೋಜನೆಗಳು ಸಂವಿಧಾನದ ಆಶಯಗಳೇ ಆಗಿವೆ. ನಮ್ಮ ಆಡಳಿತದ ‘’ಕರ್ನಾಟಕ ಮಾದರಿ’ ಬಗ್ಗೆ ಇಡೀ ದೇಶ ಮಾತ್ರ ಅಲ್ಲ ವಿಶ್ವಶ್ರೇಷ್ಠ ಆರ್ಥಿಕ ತಜ್ಞರು ಕೂಡಾ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಕನ್ನಡಿಗರೆಲ್ಲರಿಗೂ ಅಭಿಮಾನದ ಸಂಗತಿಯಾಗಿದೆ.
  11. ಬಡತನ ಎನ್ನುವುದು ಅಪರಾಧ ಅಲ್ಲ. ಇದು ಸಂಪತ್ತು ಮತ್ತು ಅವಕಾಶಗಳ ಅಸಮಾನ ಹಂಚಿಕೆಯ ಫಲ ಎನ್ನುವುದನ್ನು ನಾವು ಮರೆಯಬಾರದು. ನಮ್ಮ ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯಾದಾಗ ಮಾತ್ರ ಸಮೃದ್ಧ, ಬಲಿಷ್ಠ ಮತ್ತು ಕ್ರಿಯಾಶಾಲಿಯಾದ ಸಮಾಜ ನಿರ್ಮಾಣ ಸಾಧ್ಯ ಎನ್ನುವದನ್ನು ನಾನು ಬಲವಾಗಿ ನಂಬಿದ್ದೇನೆ.
  12. ಈ ನಂಬಿಕೆಯ ಆಧಾರದಲ್ಲಿಯೇ ಸಾರ್ವತ್ರಿಕ ಮೂಲ ಆದಾಯದ (Universal basic income ) ಪರಿಕಲ್ಪನೆಯಡಿ ರೂಪುಗೊಂಡದ್ದು ನಮ್ಮ ಪಂಚ ಗ್ಯಾರಂಟಿ ಯೋಜನೆಗಳು. ಇಂದು ಇಡೀ ದೇಶ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿವೆ. ಹಲವಾರು ರಾಜ್ಯಗಳು ಇದನ್ನು ಅನುಷ್ಠಾನಕ್ಕೆ ತರುತ್ತಿವೆ.
  13. ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗಿಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು. ಇದರ ಫಲವಾಗಿ ಇಂದು ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ. ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದ ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ನಾವು ಮರೆತಿಲ್ಲ.
  14. ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ನಮ್ಮ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಗ್ಯ,ಋಣಮುಕ್ತಭಾಗ್ಯ, ವಿದ್ಯಾಸಿರಿ, ಆರೋಗ್ಯಭಾಗ್ಯ, ಜಲಭಾಗ್ಯ ಕಾರ್ಯಕ್ರಮಗಳು ಕೂಡಾ ಯಶಸ್ವಿಯಾಗಿ ಜಾರಿಯಲ್ಲಿದೆ. ಇವೆಲ್ಲ ಯೋಜನೆಗಳು ದುಡಿಯುವ ಕೈಗಳನ್ನು ಇನ್ನಷ್ಟು ಬಲಪಡಿಸಿ ಅವುಗಳು ರಾಜ್ಯದ ಅಭಿವೃದ್ಧಿಗೆ ಬಳಕೆಯಾಗುವಂತೆ ಮಾಡುವ ಕಾರ್ಯಕ್ರಮಗಳು.
  15. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ವಾರ್ಷಿಕ 50ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯ ದೊರೆಯುತ್ತಿದೆ.
  16. ಅಧಿಕಾರಕ್ಕೆ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಮಾಡಲು ಅನುವು ಮಾಡಿಕೊಟ್ಟ ಶಕ್ತಿ ಯೋಜನೆ ಅಭೂತಪೂರ್ವ ಜನಮನ್ನಣೆಗೆ ಪಾತ್ರವಾಗಿದೆ. 138 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿದ್ದಾರೆ. 1.18 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ.ಗಳ ನೆರವು ನೀಡಲಾಗುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ 1.51 ಕೋಟಿ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.
  17. ಯುವನಿಧಿ ಯೋಜನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಸುಮಾರು ಒಂದು ಲಕ್ಷ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ನಿರುದ್ಯೋಗ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಅನೇಕ ಸ್ಪರ್ಧಾತ್ಮಕ ಪರೀಕ್ಷಾ ಶುಲ್ಕವನ್ನು ಭರಿಸಲು, ಉತ್ತಮ ಪುಸ್ತಕಗಳನ್ನು ಖರೀದಿಸಿ ಅಧ್ಯಯನ ಮಾಡಲು, ಉದ್ಯೋಗ ಸಂದರ್ಶನಕ್ಕೆ ತೆರಳುವ ವೆಚ್ಚಕ್ಕೆ, ಉದ್ಯಮಶೀಲತೆ ತರಬೇತಿ ಪಡೆಯುವ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳಲು ಬಳಸಲೆಂದೇ ಈ ಯೋಜನೆ ಜಾರಿಯಾಗಿದೆ.
  18. ಯುವನಿಧಿಯ ಫಲಾನುಭವಿ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಅವರಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸಲು ಸಹ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
  19. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧಿಗಳಿಂದ ವ್ಯಕ್ತವಾದ ಟೀಕೆ-ಟಿಪ್ಪಣಿ, ಅನುಮಾನ-ಆತಂಕಗಳನ್ನು ನಾವು ಗಮನಿಸಿದ್ದೇವೆ. ನಮ್ಮ ಸರ್ಕಾರ ದಿವಾಳಿಯಾಗಲಿದೆ ಎಂಬ ಅಪಪ್ರಚಾರವನ್ನು ಮಾಡಿದ್ದಾರೆ. ಇಂತಹವರೆಲ್ಲರಿಗೂ ನಮ್ಮ ಯೋಜನೆಗಳ ಫಲಾನುಭವಿಗಳೇ ದಿಟ್ಟತನದಿಂದ ಉತ್ತರ ನೀಡಬೇಕೆಂದು ನಾನು ಮನವಿ ಮಾಡುತ್ತೇನೆ. ನಾವು ಮಾತುಗಾರರಲ್ಲ, ಕೆಲಸಗಾರರು.
  20. ಚುನಾವಣೆಯ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ಮೊದಲ ಅಧಿವೇಶನದಲ್ಲಿಯೇ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಜಮೀನು ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಸಮುದಾಯಗಳ ಭೂ-ಒಡೆತನದ ಹಕ್ಕನ್ನು ಖಾತರಿಪಡಿಸಿದ್ದೇವೆ.
  21. ಎಸ್.ಸಿ.ಎಸ್‍.ಪಿ/ಟಿ.ಎಸ್‍ಪಿ ಅಧಿನಿಯಮ 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳಿಗೇ ಬಳಕೆಯಾಗಬೇಕೆನ್ನುವುದು ಸರ್ಕಾರದ ಆಶಯ. ಈ ಬಗ್ಗೆ ದಲಿತ ಸಮುದಾಯಗಳ ದೀರ್ಘಕಾಲದ ಮನವಿಗೆ ಸರ್ಕಾರ ಸ್ಪಂದಿಸಿ ಕಾಯ್ದೆಯ ಕಲಂ 7 (ಡಿ) ಅನ್ನು ಕೈಬಿಡಲಾಗಿದೆ. ಹಿಂದುಳಿದ ಪ್ರವರ್ಗ-1 ಮತ್ತು ಪ್ರವರ್ಗ-2ಎ ಗಳಲ್ಲಿನ ಜಾತಿಗಳ ಜನರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ 1 ಕೋಟಿ ರೂಗಳವರೆಗೆ ಮೀಸಲಾತಿ ನೀಡಲಾಗಿದೆ. ಇದು ಸಾಮಾಜಿಕ ನ್ಯಾಯದ ಬಂಡಿ ಮೇಲೆ ಅಭಿವೃದ್ದಿಯ ರಥವನ್ನು ಮುಂದಕ್ಕೆ ಒಯ್ಯುವ ನಮ್ಮ ಪ್ರಯತ್ನವಾಗಿದೆ.
  22. ಈ ಬಾರಿ ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದಾಗಿ, 236ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.
  23. ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ.
  24. ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2000 ರೂ.ಗಳ ವರೆಗಿನ ತಾತ್ಕಾಲಿಕ ಪರಿಹಾರದ ಘೋಷಣೆಯನ್ನು ಮಾಡಿದ್ದು, ಈವರೆಗೆ 550 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವ ವ್ಯವಸ್ಥೆಯಾಗುತ್ತಿದೆ.
  25. ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದಲ್ಲಿ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ಆದೇಶ ಹೊರಡಿಸಿದೆ.
  26. ಕೊಬ್ಬರಿ ಬೆಲೆ ಕುಸಿತಗೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1500 ರೂಗಳ ನೆರವನ್ನು ರಾಜ್ಯ ಸರ್ಕಾರವೆ ನೀಡುತ್ತಿದೆ.
  27. ನೆಟೆ ರೋಗದಿಂದ ಬಾಧಿತರಾದ ತೊಗರಿ ಬೆಳೆಗಾರರಿಗೆ 223 ಕೋಟಿ ರೂ ಪರಿಹಾರ ನೀಡಿದ್ದೇವೆ.
  28. ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ಪರಿಹಾರ ವಿಮೆ ಮತ್ತು ಸ್ಥಳ ನಿರ್ಧಿಷ್ಠ ವಿಕೋಪಗಳಿಗೆ ಪರಿಹಾರವಾಗಿ 8.10 ಲಕ್ಷ ರೈತರಿಗೆ 591 ಕೋಟಿ ರೂಪಾಯಿಗಳನ್ನು ನೀಡಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿ ಮಾಡಲಾಗಿದೆ.
  29. ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ ಎಂದು ಡಾ: ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಮಹತ್ವವನ್ನು ನೀಡಿದೆ. ಮಕ್ಕಳಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಗುಣಗಳನ್ನು ಬೆಳೆಸುವ ರೀತಿಯಲ್ಲಿ ಪಠ್ಯಪುಸ್ತಕಗಳನ್ನು ರೂಪಿಸುತ್ತಿದ್ದೇವೆ. ಇದಲ್ಲದೆ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಸ್ಥಳೀಯ ಅವಶ್ಯಕತೆಗಳಿಗೆ ತಕ್ಕಂತೆ ಸುಧಾರಣೆಗೆ ಒಳಪಡಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ.
  30. ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗುವ ಶಾಲಾ ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಮನದಟ್ಟು ಮಾಡಿಸುವ ಉದ್ದೇಶದಿಂದ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಲಾಗಿದೆ. ತನ್ಮೂಲಕ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಚಯಿಸುವ ಗುರಿ ನಮ್ಮದು.
  31. 75ನೇ ಗಣರಾಜ್ಯೋತ್ಸವದ ಆಚರಣೆಯ ಭಾಗವಾಗಿ ಜನವರಿ 26ರಿಂದ ಒಂದು ತಿಂಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ ನಡೆಸಲಾಗುತ್ತಿದ್ದು, ನಾಡಿನ ಜನತೆಗೆ ಸಂವಿಧಾನದ ಸ್ವರೂಪ ಹಾಗೂ ಆಶಯಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ. ನಾಗರಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಮ್ಮ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಲು ಕೈಜೋಡಿಸಬೇಕೆಂದು ಮನವಿ ಮಾಡುತ್ತೇನೆ.
  32. ಸರ್ಕಾರ ಜನರ ಮನೆಬಾಗಿಲಿಗೆ ತಲುಪಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮೂಲೆಮೂಲೆಗಳಿಂದ ಸಮಸ್ಯೆಗಳನ್ನು ಹೊತ್ತು ತಂದುದನ್ನು ಗಮನಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ.
  33. ಹೂಡಿಕೆದಾರ ಸ್ನೇಹಿ ನೀತಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ. ಈ ಬಾರಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಬಯೋಟೆಕ್ ನೀತಿ ಹಾಗೂ ಎವಿಜಿಸಿ ಪಾಲಿಸಿಯನ್ನು ಬಿಡುಗಡೆ ಮಾಡಲಾಗಿದೆ.
  34. ದಾವೋಸ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಲು ಎನ್ಟಿಟಿ ಡೇಟಾ, ಆ್ಯಬ್ ಸಮೂಹ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳು ಉತ್ಸುಕತೆ ತೋರಿದೆ. ಇದರಿಂದ ರಾಜ್ಯದ ಆರ್ಥಿಕತೆಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ.
  35. ಬಸವಣ್ಣ ನಮ್ಮ ನಾಡಿನ ಸಾಮಾಜಿಕ ನ್ಯಾಯದ ಮೊದಲ ಹರಿಕಾರ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಬಸವಮಾರ್ಗದಲ್ಲಿ ನಡೆಯುವವನು ನಾನು. ಈ ಬದ್ದತೆಯಂದಾಗಿಯೇ ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದೆ.
  36. ನಮ್ಮ ಸಂವಿಧಾನದ ಮೂಲತತ್ವಕ್ಕೆ ಪೂರಕವಾಗಿದ್ದ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮಪ್ರಭುಗಳ ಹೆಸರನ್ನು ಶಿವಮೊಗ್ಗದ ಹಳೆ ಜೈಲು ಆವರಣದ ಪ್ರದೇಶಕ್ಕೆ ನಾಮಕರಣ ಮಾಡಲಾಗಿದೆ.
  37. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ದಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ.
  38. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ, ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ. ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ.
  39. ಸಹೃದಯಿ ಕನ್ನಡಿಗರು ಇಂತಹ ಹುನ್ನಾರಗಳಿಗೆ ಬಲಿಯಾಗದೆ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ತೊಡಗಿರುವ ನಮ್ಮ ಸರ್ಕಾರದ ಜೊತೆ ದೃಡಚಿತ್ತದಿಂದ ನಿಲ್ಲಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.
  40. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ತತ್ವವನ್ನು ಮರೆಯದಿರೋಣ. ಈ ಮೂಲಕ ಭಾರತದ ಗಣರಾಜ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿಸೋಣ ಎಂದು ಆಶಿಸಿ ನನ್ನ ಮಾತುಗಳನ್ನು ಮುಗಿಸುತ್ತೇನೆ.
  41. ಮತ್ತೊಮ್ಮೆ ನಿಮಗೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ನಮಸ್ಕಾರ. ಜೈ ಹಿಂದ್, ಜೈ ಕರ್ನಾಟಕ.

ಇದನ್ನೂ ಓದಿ: Republic Day 2024: ಮಾಣಿಕ್‌ಷಾ ಮೈದಾನದಲ್ಲಿ ಬಿಗಿ ಭದ್ರತೆ ನಡುವೆ ಗಣರಾಜ್ಯ ದಿನ ಪರೇಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಗಣರಾಜ್ಯೋತ್ಸವ

Republic Day: ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ದೋಸ್ತಿ! ಮಾಲ್ಡೀವ್ಸ್ ಅಧ್ಯಕ್ಷನಿಗೆ ಬಂತಾ ಬುದ್ಧಿ?

Republic Day: ಪ್ರಧಾನಿ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ನಿಂದನಾತ್ಮಕ ಭಾಷೆ ಬಳಸಿದ ಹಿನ್ನೆಲೆಯಲ್ಲಿ ಭಾರತ ಮತ್ತು ಮಾಲ್ಡೀವ್ಸ್ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.

VISTARANEWS.COM


on

Maldives Election
Koo

ನವದೆಹಲಿ: ಭಾರತ ವಿರೋಧಿ(Anti India), ಚೀನಾ ಸ್ನೇಹಿತ (Friend of China) ಅಧ್ಯಕ್ಷ ಎಂದು ಗುರುತಿಸಿಕೊಂಡಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು (Maldives President Mohamed Muizzu)ಅವರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ್ದಾರೆ. ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ಸ್ನೇಹ (Centuries of Friendship) ಎಂದು ಹೇಳಿದ್ದಾರೆ. ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಅರ್ಥದಲ್ಲಿ ಸ್ಥಾಪಿಸಲಾದ ಎರಡು ರಾಷ್ಟ್ರಗಳ ನಡುವಿನ ಶತಮಾನಗಳ ಹಳೆಯ ಸ್ನೇಹ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ(Republic Day).

ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಮೊಹಮ್ಮದ್ ಮುಯಿಜ್ಜು ಅವರು ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳಿಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತ್ಯೇಕ ಸಂದೇಶಗಳಲ್ಲಿ, ಅಧ್ಯಕ್ಷ ಮುಯಿಝು ಅವರು ಭಾರತದ 75 ನೇ ಗಣರಾಜ್ಯೋತ್ಸವವನ್ನು ಸ್ಮರಿಸಿದ್ದಾರೆ ಮತ್ತು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಅಧ್ಯಕ್ಷ ಮುಯಿಜು ಅವರು ಸರ್ಕಾರ ಮತ್ತು ಮಾಲ್ಡೀವ್ಸ್ ಜನರಿಂದ ಭಾರತದ ಜನರಿಗೆ ಶುಭ ಹಾರೈಸಿದರು. ಅವರು ಶತಮಾನಗಳ ಸ್ನೇಹ, ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಪ್ರಜ್ಞೆಯಿಂದ ಪೋಷಿಸಿದ ಮಾಲ್ಡೀವ್ಸ್-ಭಾರತದ ಬಾಂಧವ್ಯವನ್ನು ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ ಭಾರತ ಸರ್ಕಾರ ಮತ್ತು ಜನರಿಗೆ ನಿರಂತರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಯ ದೊರೆಯಲಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮತ್ತು ಭಾರತದ ಸ್ನೇಹಪರ ಜನರಿಗೆ ಹಾರ್ದಿಕ ಶುಭಾಶಯಗಳು. ಮುಂದಿನ ವರ್ಷಗಳಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಬಂಧಗಳು ಪ್ರವರ್ಧಮಾನಕ್ಕೆ ಬರುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಜಮೀರ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ, ಇದೊಂದು ಅತ್ಯುತ್ತಮ ಪ್ರವಾಸಿತಾಣವಾಗಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಕುರಿತು ಮಾಲ್ಡೀವ್ಸ್ ಕೆಲವು ಸಚಿವರು ಮೋದಿ ಅವರು ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ ಟೀಕಿಸಿದ್ದರು. ಇದರಿಂದಾಗಿ ಮಾಲ್ಡೀವ್ಸ್ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ನ ಈ ಶತಮಾನದ ದೋಸ್ತಿ ಎಂಬ ಹೇಳಿಕೆ ಮಹತ್ವದ ಪಡೆದುಕೊಂಡಿದೆ.

ಈ ಸುದ್ದಿಯನ್ನೂ ಓದಿ: ಭಾರತದ ವಿಮಾನ ಬಳಸಲು ಮಾಲ್ಡೀವ್ಸ್‌ ಅಧ್ಯಕ್ಷ ನಕಾರ; 13 ವರ್ಷದ ಬಾಲಕ ಸಾವು

Continue Reading

ವಿಜಯನಗರ

Vijayanagara News: ಕೊಟ್ಟೂರಿನಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

VISTARANEWS.COM


on

75th Republic Day celebrations in Kottur
ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
Koo

ಕೊಟ್ಟೂರು: ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು (75th Republic Day) ಆಚರಿಸಲಾಯಿತು.

ಗಣರಾಜ್ಯೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ರವಿಕುಮಾರ್‌, ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿದ್ದರಾಮ ಕಲ್ಮಠ, ಸದಸ್ಯರಾದ ಕೆ.ಬಿ. ಮಲ್ಲಿಕಾರ್ಜುನ್, ಅಡಿಕೆ ಮಂಜುನಾಥಯ್ಯ, ಡಿ.ಎಸ್. ಶಿವಮೂರ್ತಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಪ್ರಶಾಂತ್ ಕುಮಾರ್, ಹಿರಿಯ ಉಪನ್ಯಾಸಕರಾದ ಡಿ. ರವೀಂದ್ರ ಗೌಡ, ಕೃಷ್ಣಪ್ಪ, ಜೆ.ಬಿ. ಸಿದ್ದನಗೌಡ, ಪೃಥ್ವಿರಾಜ್, ಡಾ. ಶಿವಕುಮಾರ್, ವಿಜಯಲಕ್ಷ್ಮಿ ಸಜ್ಜನ್, ಬಸವರಾಜ ಬಣಕಾರ್ ಉಮೇಶ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಚೈತ್ರ ಪ್ರಾರ್ಥಿಸಿದರು. ಕೆ.ಎಂ. ಪ್ರಭಾಕರ್ ನಿರೂಪಿಸಿದರು.

Continue Reading

ವಿಜಯನಗರ

Vijayanagara News: ಕೂಡ್ಲಿಗಿಯಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.

VISTARANEWS.COM


on

75th Republic Day celebration in Kudligi
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.
Koo

ಕೂಡ್ಲಿಗಿ: ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ (75th Republic Day) ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೋತ್ಸವದಲ್ಲಿ ಧ್ವಜಾವಂದನೆ ಸ್ವೀಕರಿಸಿ ಮಾತನಾಡಿದ ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಭಾರತದ ಇತಿಹಾಸದಲ್ಲೇ ಗಣರಾಜ್ಯೋತ್ಸವ ದಿನ ಮಹತ್ವದ ದಿನವಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಸುಮಾರು 400 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಅರಿತಿದ್ದು,ಅವರಿಗೆ ಅವಶ್ಯವಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ತುಂಗಭದ್ರಾ ನದಿಯಿಂದ ಪಾವಗಡಕ್ಕೆ ಕುಡಿಯುವ ನೀರಿನ ಬಹುಗ್ರಾಮ ಯೋಜನೆಯಿಂದ ಕೂಡ್ಲಿಗಿ ಪಟ್ಟಣ ಕೈಬಿಡಲಾಗಿತ್ತು, ಅದನ್ನ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಪಟ್ಟಣಕ್ಕೂ ಕುಡಿಯುವ ನೀರು ಒದಗಿಸಲು ಸುಮಾರು 68 ಕೋಟಿ ಅನುದಾನ ಈಗಾಗಲೇ ಬಿಡುಗಡೆ ಮಾಡಿ ಟೆಂಡರ್ ಮುಗಿದಿದೆ, ಶ್ರೀಘ್ರದಲ್ಲಿ ಕಾಮಾಗಾರಿ ಆರಂಭವಾಗಲಿದೆ ಎಂದರು.

ಇದೇ ಸಂಧರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಶಾಸಕರು ಸನ್ಮಾನಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: Tea And Coffee With Meals: ಊಟ ತಿಂಡಿ ಜೊತೆಜೊತೆಗೆ ಚಹಾ ಕಾಫಿ ಹೀರುವ ಅಭ್ಯಾಸ ಒಳ್ಳೆಯದೇ, ಕೆಟ್ಟದ್ದೇ?

ಈ ವೇಳೆ ತಾಪಂ ಇಒ ವೈ. ರವಿಕುಮಾರ್, ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪೂರ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಪಪಂ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಪಿ.ಚಂದ್ರು, ಸಚಿನ್ ಕುಮಾರ್, ಕೆ.ಈಶಪ್ಪ, ಸಿರಬಿ ಮಂಜುನಾಥ, ಲಕ್ಷ್ಮೀದೇವಿ, ಚೌಡಮ್ಮ, ಸರಸ್ವತಿ, ರೇಣುಕಾ ದುರುಗೇಶ್, ಲೀಲಾವತಿ ಪ್ರಭಾಕರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

Uttara Kannada News: ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

VISTARANEWS.COM


on

75th Republic Day celebration in Yallapur
ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
Koo

ಯಲ್ಲಾಪುರ: ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ (75th Republic Day) ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್‌, ನಮ್ಮದು ಸಂಪೂರ್ಣ ವಿಶ್ವದಲ್ಲಿ ಅತ್ಯಂತ ಅಗ್ರಮಾನ್ಯದಲ್ಲಿರುವ ದೇಶವಾಗಿದೆ. ನಮ್ಮ ನೆಲ, ಜಲ, ಸಂಸ್ಕೃತಿಯನ್ನು ಗೌರವಿಸುವಂತ ಸಂಸ್ಕಾರ ನಮ್ಮ ದೇಶದ ಮಣ್ಣಿನ ಗುಣವಾಗಿದೆ. ಡಾ. ಬಿ.ಆರ್‌. ಅಂಬೇಡ್ಕರ್‌, ಮಹಾತ್ಮ ಗಾಂಧೀಜಿ ಅವರಂತಹ ಮಹನೀಯರ ಆದರ್ಶಗಳು ನಮಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್‌ ಗುರುರಾಜ್‌ ಎಂ., ಜಗತ್ತಿನ ಅತ್ಯುನ್ನತ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಶ್ರೇಷ್ಠ ಗುಣಗಳನ್ನು ಅಳವಡಿಸಿ ನಮ್ಮ ಸಂವಿಧಾನವನ್ನು ರೂಪಿಸಿದ ಡಾ. ಅಂಬೇಡ್ಕರ್‌ ಅವರನ್ನು ನಾವೆಲ್ಲ ಇಂದು ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Padma Shri: ಭತ್ತದ ತಳಿಯ ಸಂರಕ್ಷನನ್ನು ಅರಸಿ ಬಂತು ಪದ್ಮಶ್ರೀ ಗೌರವ

ಇದೇ ಸಂದರ್ಭದಲ್ಲಿ ತಾನ್‌ಸೇನ್‌ ಪ್ರಶಸ್ತಿ ಪುರಸ್ಕೃತ ಪಂಡಿತ್‌ ಗಣಪತಿ ಭಟ್‌ ಹಾಸಣಗಿ, ಗ್ರಾಮೀಣ ಭಾಗದಲ್ಲಿ ಸೇವೆಗಾಗಿ ಡಾ. ನಾಗರಾಜ್ ಬಿ.ಎಚ್‌. ಹಾಗೂ ನಾಟಿ ವೈದ್ಯ ನಾರಾಯಣ ಹೆಗಡೆ ಗವೇಗುಳಿ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಂತೆಯೇ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಶ್ರೀದೇವಿ ಗಂಗಾ ನಾಯಕ ಹಾಗೂ ವಿಶೇಷ ಚೇತನರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಜಯಶ್ರೀ ಮಂಜುನಾಥ ಮೈಲಾರ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ವೇದಿಕೆಯಲ್ಲಿ ಪಂಚಾಯತ್‌ ರಾಜ್‌ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಸಿಪಿಐ ರಂಗನಾಥ ನೀಲಮ್ಮನವರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುನಂದಾ ದಾಸ್ ಹಾಗೂ ಜ್ಯೋತಿ ನಾಯ್ಕ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Sachin Tendulkar: ಸಫಾರಿ ವೇಳೆ ಮೂರನೇ ತಲೆ ಮಾರಿನ ಹುಲಿಯನ್ನು ತೋರಿಸಿದ ಸಚಿನ್​ ತೆಂಡೂಲ್ಕರ್​

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಸ್ವಾಗತಿಸಿದರು. ಸಂಜೀವ್ ಕುಮಾರ್ ಹೊಸ್ಕೇರಿ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಜಿಗಳೂರು ವಂದಿಸಿದರು.

Continue Reading
Advertisement
Kodava Family Hockey Tournament Website Launched
ಕೊಡಗು3 ವಾರಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು3 ವಾರಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ3 ವಾರಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ4 ವಾರಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ4 ವಾರಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ4 ವಾರಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು4 ವಾರಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ4 ವಾರಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ4 ವಾರಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ4 ವಾರಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ1 ವರ್ಷ ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ12 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್3 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌