ಬೆಂಗಳೂರು: ಜನವರಿ 26ರಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ (Field Marshal Manek shaw Maidan) ಗಣರಾಜ್ಯೋತ್ಸವ ಕಾರ್ಯಕ್ರಮ (Republic day programme) ನಡೆಯಲಿದೆ. ಅಂದು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಭಾರಿ ಭದ್ರತಾ ವ್ಯವಸ್ಥೆ, ಸಂಚಾರ ಬಂದೋಬಸ್ತ್ (Traffic rules) ವ್ಯವಸ್ಥೆ ಮಾಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸಂಚಾರದಲ್ಲೂ ಕೆಲವೊಂದು ಬದಲಾವಣೆಯನ್ನು ಸೂಚಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ಈ ನಿಟ್ಟಿನಲ್ಲಿ (Republic Day) ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಗಮನಿಸಿ, ಸಂಚಾರ ಬಂದೋಬಸ್ತ್ ಮಾರ್ಗಸೂಚಿ ಹೀಗಿದೆ..
- 1. ಕಾರುಗಳಿಗೆ ಸಬಂಧಿಸಿದ ಪಾಸ್ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್ಗಳಲ್ಲಿ ನಿಗದಿಪಡಿಸಿದ ಗೇಟ್ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.
- 2.ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ, ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
- 3.ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 4 ರ ಮೂಲಕ ಒಳಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
- 4. ಜನವರಿ 26ರಂದು ಬೆಳಗ್ಗೆ 8.30ರಿಂದ ಬೆಳಗ್ಗೆ 10.30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ನಿಂದ ಕಾಮರಾಜ ರಸ್ತೆ ಜಂಕ್ಷನ್ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.
- 5.ಇನ್ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿ ರಸ್ತೆ – ಸಫೀನಾ ಪ್ಲಾಜಾ – ಎಡ ತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
- 6.ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.
- 7.ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ ಎಡಕ್ಕೆ ತಿರುವು ಪಡೆದು ಮೈನ್ ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
- 8. ಭದ್ರತಾ ದೃಷ್ಟಿಯಿಂದ ಪೆರೇಡ್ಗೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆಲೈಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.
ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
1.ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ
2. ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
ವಿಶೇಷ ಮನವಿ: ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ, ಅಥವಾ 112ಗೆ ಕರೆಮಾಡಿ ಎಂದು ಪೊಲೀಸರು ಹೇಳಿದ್ದಾರೆ.