Site icon Vistara News

Petrol Diesel Price: ಗ್ಯಾಸ್‌ ಬೆಲೆ ಇಳಿಕೆ ಖುಷಿಗೆ ಕತ್ತರಿ; ಶೀಘ್ರದಲ್ಲೇ ಏರಲಿದೆಯೇ ಪೆಟ್ರೋಲ್‌ ಬೆಲೆ?

Pakistan Inflation

Pakistan grapples with sky-high inflation; Wheat flour costs 800 Pak rupees

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು (Central Government) ಅಡುಗೆ ಅನಿಲ ಸಿಲಿಂಡರ್‌ (LPG Price Cut) ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಇದು ತುಸು ಅನುಕೂಲ ಆಗಿತ್ತು. ಆದರೆ, ಈ ಖುಷಿ ತುಂಬ ದಿನ ಇರುವ ಸಾಧ್ಯತೆ ಕಡಿಮೆ. ಏಕೆಂದರೆ, ಶೀಘ್ರದಲ್ಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಾಗುವ (Petrol Diesel Price) ಸಾಧ್ಯತೆ ಇದೆ.

ಹೌದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕೆಲ ತಿಂಗಳಿಂದ ಏರಿಕೆ ಕಂಡಿದೆ. ಇದರಿಂದಾಗಿ ಭಾರತದ ತೈಲ ಕಂಪನಿಗಳಿಗೆ ಭಾರಿ ಪ್ರಮಾಣದಲ್ಲಿ ನಷ್ಟವಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 95 ಡಾಲರ್‌ ಆಗಿರುವುದರಿಂದ ಭಾರತದಲ್ಲಿ ಕೂಡ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಶೀಘ್ರದಲ್ಲೇ ಏರಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Petrol Gun

ಕೇಂದ್ರ ಸರ್ಕಾರವು ಕಳೆದ ವರ್ಷದ ಮೇ ತಿಂಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿತ್ತು. ಆ ಮೂಲಕ ಜನರ ಹೊರೆಯನ್ನು ತುಸು ಕಡಿಮೆ ಮಾಡಿತ್ತು. ಇದರಿಂದಾಗಿ ಕಳೆದ ವರ್ಷದಿಂದಲೂ ಭಾರತದಲ್ಲಿ ಒಂದು ಲೀಟರ್‌ ಪೆಟ್ರೋಲ್‌ ಬೆಲೆಯು 100 ರೂ. ಅಥವಾ ಇದರ ಆಸುಪಾಸಿನಲ್ಲಿತ್ತು. ಆದರೆ, ಹಣದುಬ್ಬರದ ಏರಿಕೆಯಿಂದಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Rahul Gandhi: ಬೆಲೆ ಏರಿಕೆಯಿಂದಾಗಿ ಕಣ್ಣೀರು ಹಾಕಿದ್ದ ವ್ಯಕ್ತಿ ಜತೆ ರಾಹುಲ್ ಗಾಂಧಿ ಲಂಚ್!

21 ಸಾವಿರ ಕೋಟಿ ರೂ. ನಷ್ಟ

ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಇಳಿಸಿದಾಗ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾತೈಲದ ಬೆಲೆ 85 ಡಾಲರ್‌ ಇತ್ತು. ಆದರೀಗ ಅದು 95 ಡಾಲರ್‌ಗೆ ಏರಿಕೆಯಾಗಿದೆ. ಇದರಿಂದಾಗಿ ಭಾರತದ ಸರ್ಕಾರಿ ಒಡೆತನದ ತೈಲ ಕಂಪನಿಗಳಾದ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಸೇರಿ ಹಲವು ಕಂಪನಿಗಳಿಗೆ 21 ಸಾವಿರ ಕೋಟಿ ರೂ. ನಷ್ಟವಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಮಾಡುವುದು ತೈಲ ಕಂಪನಿಗಳಿಗೆ ಅನಿವಾರ್ಯವಾಗಿದೆ ಎಂದು ತಿಳಿದುಬಂದಿದೆ.

ಬೆಲೆಯೇರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಾದರೆ ಆಕ್ರೋಶ ಹೆಚ್ಚಾಗಲಿದೆ. ಅದರಲ್ಲೂ, ಮುಂದಿನ ವರ್ಷ ಲೋಕಸಭೆ ಚುನಾವಣೆ ಇರುವುದರಿಂದ ಕೇಂದ್ರ ಸರ್ಕಾರವು ಬೆಲೆಯೇರಿಕೆಗೆ ಆಸ್ಪದ ಕೊಡುವುದಿಲ್ಲ ಎಂಬ ಮಾತುಗಳೂ ಕೇಳಿಬಂದಿವೆ.

Exit mobile version