ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರದದಲ್ಲಿ (Shahjahanpur) ಗುರುವಾರ (ಜನವರಿ 25) ನಡೆದ ಭೀಕರ ರಸ್ತೆ ಅಪಘಾತ (Road Accident)ದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ-ಡಂಪರ್ ಪರಸ್ಪರ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ದಟ್ಟ ಮಂಜಿನ ಕಾರಣದಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ. ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
जनपद शाहजहांपुर में सड़क दुर्घटना में हुई जनहानि अत्यंत दु:खद है।
— Yogi Adityanath (@myogiadityanath) January 25, 2024
मेरी संवेदनाएं शोक संतप्त परिजनों के साथ हैं।
प्रभु श्री राम दिवंगत आत्माओं को शांति व शोकाकुल परिजनों को यह दुःख सहन करने की शक्ति प्रदान करें।
स्थानीय अधिकारियों को घायलों के समुचित उपचार हेतु निर्देश दिए…
ಅಲ್ಲಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫರೂಕಾಬಾದ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಗಾ ಸ್ನಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.
ತಮಿಳುನಾಡಿನಲ್ಲಿ ಸರಣಿ ಅಪಘಾತ
ಇನ್ನೊಂದು ರಸ್ತೆ ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೊಪ್ಪೂರ್ ಘಾಟ್ ರಸ್ತೆಯಲ್ಲಿ ಈ ಸರಣಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸರಕು ತುಂಬಿದ ಟ್ರಕ್ ಎದುರಲ್ಲಿ ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿತ್ತು. ಎದುರಿನ ಲಾರಿ ಮತ್ತೊಂದು ಟ್ರಕ್‌ಗೆ ಗುದ್ದಿದಾಗ ಅದು ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಉರುಳಿ ಬಿದ್ದಿತ್ತು. ಇದರಿಂದ ನಾಲ್ವರು ಮೃತಪಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Road Accident: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ದುರ್ಮರಣ
ಈ ಅಪಘಾತದಲ್ಲಿ ಒಂದು ಲಾರಿಗೆ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ. ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ