Site icon Vistara News

Road Accident: ಪಿಕ್ಅಪ್ ಟ್ರಕ್ ಪಲ್ಟಿಯಾಗಿ 14 ಸಾವು, 20 ಮಂದಿಗೆ ಗಾಯ

dindori road accident

ಭೋಪಾಲ್‌: ಗುರುವಾರ ಮುಂಜಾನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಪಿಕ್ಅಪ್ ಟ್ರಕ್ ಪಲ್ಟಿಯಾದ (Road Accident) ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ 1.30ರ ಸುಮಾರಿಗೆ ಬಡ್ಜರ್ ಘಾಟ್ ಬಳಿ ಅಪಘಾತ ಸಂಭವಿಸಿದ್ದು, ವಾಹನದ ಚಾಲಕ ಸ್ಟಿಯರಿಂಗ್‌ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ.

ಜಿಲ್ಲೆಯ ಶಹಪುರಾ ಬ್ಲಾಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮ್ಹೈ ದೇವ್ರಿ ಗ್ರಾಮಕ್ಕೆ ತೆರಳಿದ್ದವರು ಪಿಕ್‌ಅಪ್‌ನಲ್ಲಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರಲ್ಲಿ ಏಳು ಪುರುಷರು, ಆರು ಮಹಿಳೆಯರು ಮತ್ತು ಒಬ್ಬ ಬಾಲಕ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದಿಂಡೋರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಎಲ್ಲಾ ಗಾಯಾಳುಗಳು ಶಹಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿಂಡೋರಿ ಜಿಲ್ಲಾಧಿಕಾರಿ ವಿಕಾಸ್ ಮಿಶ್ರಾ ತಿಳಿಸಿದ್ದಾರೆ. ಏತನ್ಮಧ್ಯೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ದಿಂಡೋರಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದ ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ಬಿಕ್ಕಟ್ಟನ್ನು ನಿಭಾಯಿಸಲು ಕ್ಯಾಬಿನೆಟ್ ಸಚಿವ ಸಂಪಾತಿಯಾ ಉಯ್ಕೆಯನ್ನು ಡಿಂಡೋರಿಗೆ ಕಳುಹಿಸಿದ್ದಾರೆ. “ದಿಂಡೋರಿ ಜಿಲ್ಲೆಯಲ್ಲಿ ವಾಹನ ಅಪಘಾತದಲ್ಲಿ ಸಂಭವಿಸಿದ ಅನೇಕ ಅಮೂಲ್ಯ ಜೀವಗಳ ಅಕಾಲಿಕ ಮರಣದ ಬಗ್ಗೆ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ಕುಟುಂಬ ಸದಸ್ಯರಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ಹಾರೈಸಿದ್ದಾರೆ” ಎಂದು ಸಿಎಂ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ತಿಳಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡವರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Manipur Violence: ಪೊಲೀಸ್‌ ಅಧಿಕಾರಿಯನ್ನೇ ಅಪಹರಿಸಿ ಹೊತ್ತೊಯ್ದ 200 ಶಸ್ತ್ರಸಜ್ಜಿತ ಮೈತೈ ಉಗ್ರರು!

Exit mobile version