ಲಕ್ನೋ: ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಡಿಸೆಂಬರ್ 9) ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ (Road Accident). ಕಾರು ಮತ್ತು ಎದುರಿನಿಂದ ಬರುತ್ತಿದ್ದ ಟ್ರಕ್ ನಡುವೆ ಸಂಭವಿಸಿದ ಈ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಏಳು ವಯಸ್ಕರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಎಲ್ಲ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಮೃತ ಕುಟುಂಬವು ಉತ್ತರಾಖಂಡದ ಬಹೇಡಿ ಗ್ರಾಮದವರು ಎಂದು ತಿಳಿದು ಬಂದಿದೆ.
Uttar Pradesh: Eight burnt alive after car suffers tyre burst, rams dumper head-on on highway
— ANI Digital (@ani_digital) December 10, 2023
Read @ANI Story | https://t.co/VPKEEquech#RoadAccident #Bareilly #UttarPradesh pic.twitter.com/cRx9DOo7fM
ʼʼಬರೇಲಿ ಜಿಲ್ಲೆಯ ಭೋಜಿಪುರ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರು ಟ್ರಕ್‌ಗೆ ಡಿಕ್ಕಿ ಹೊಡೆಯಿತು. ಬಳಿಕ ಟ್ರಕ್ ಕಾರನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿತ್ತು. ಆಗ ಬೆಂಕಿ ಹೊತ್ತಿಕೊಂಡಿತು. ಕಾರಿನೊಳಗೆ ಲಾಕ್ ಆಗಿದ್ದ ಪ್ರಯಾಣಿಕರು ಬೆಂಕಿಯಲ್ಲಿ ಬೆಂದು ಪ್ರಾಣ ಕಳೆದುಕೊಂಡರುʼʼ ಎಂದು ಬರೇಲಿ ಎಸ್ಎಸ್‌ಪಿ ಘುಲೆ ಸುಶೀಲ್ ಚಂದ್ರಭಾನ್ ತಿಳಿಸಿದ್ದಾರೆ. ಶವಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿಎಂ ಸಂತಾಪ
ರಸ್ತೆ ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿ, ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: Robbery Case : ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ, ಇಬ್ಬರ ಮೇಲೆ ಹಲ್ಲೆ