ಹರ್ಯಾಣದ ಜಿಂದ್ನಲ್ಲಿರುವ ಭಿವಾನಿ ರಸ್ತೆಯಲ್ಲಿ ಬಸ್ ಮತ್ತು ಕ್ರೂಸರ್ ನಡುವೆ ಡಿಕ್ಕಿಯಾಗಿ 8ಮಂದಿ ಮೃತಪಟ್ಟಿದ್ದಾರೆ (Road Accident) 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಎರಡೂ ವಾಹನಗಳ ಮಧ್ಯೆ ಮುಖ್ಯಾಮುಖಿ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ಮಾಹಿತಿ ಸಿಗುತ್ತಿದ್ದಂತೆ ಜಿಂದ್ ಡಿಎಸ್ಪಿ ರೋಹ್ತಾಸ್ ಧುಲ್ ಮತ್ತು ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ರಕ್ಷಣೆಯಲ್ಲಿ ಸ್ಥಳೀಯರು ಸಹಕಾರ ನೀಡಿದ್ದಾರೆ. ಯಾರೆಲ್ಲರ ಬಳಿ ವಾಹನ ಇದೆಯೋ ಅವರೆಲ್ಲ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಸಿವಿಲ್ ಲೈನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಸಿವಿಲ್ ಲೈನ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಹೆಚ್ಚುವರಿ ವೈದ್ಯರು, ನರ್ಸ್ಗಳು, ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು.
ಇದನ್ನೂ ಓದಿ: Road Accident : ಮೂರು ಕಡೆ ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು, ಹಲವರು ಗಂಭೀರ
ಇತ್ತೀಚೆಗೆ ಒಡಿಶಾದಲ್ಲಿ ಭೀಕರ ಬಸ್ ಅಪಘಾತ ಆಗಿತ್ತು. ಇಲ್ಲಿನ ಗಂಜಾಮ್ ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು ಡಿಕ್ಕಿಯಾಗಿದ್ದು, ಖಾಸಗಿ ಬಸ್‌ನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸೇರಿ 12 ಜನ ಮೃತಪಟ್ಟಿದ್ದರು. ಏಳು ಜನ ಗಂಭೀರವಾಗಿ ಗಾಯಗೊಂಡಿದ್ದರು. ಮೃತರೆಲ್ಲರೂ ಬೆರ್ಹಾಂಪುರದಲ್ಲಿ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದರು. ಪಾರ್ಟಿ ಮುಗಿಸಿಕೊಂಡು ಊರಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ನಿದ್ರೆಯ ಮಂಪರಿನಲ್ಲಿದ್ದಾಗಲೇ ಅಪಘಾತ ಸಂಭವಿಸಿದ್ದು, ಯಾರಿಗೆ ಏನಾಗುತ್ತಿದೆ ಎಂಬಷ್ಟರಲ್ಲಿಯೇ ಬಹುತೇಕರ ಉಸಿರು ನಿಂತಿತ್ತು.