RPF Firing: ಆರ್‌ಪಿಎಫ್‌ ಪೇದೆ ಹಿರಿಯ ಅಧಿಕಾರಿಯನ್ನೇ ಗುಂಡಿಕ್ಕಿ ಕೊಲ್ಲಲು ಕಾರಣವೇನು? ಸಿಕ್ಕಿದೆ ಟ್ವಿಸ್ಟ್ - Vistara News

ದೇಶ

RPF Firing: ಆರ್‌ಪಿಎಫ್‌ ಪೇದೆ ಹಿರಿಯ ಅಧಿಕಾರಿಯನ್ನೇ ಗುಂಡಿಕ್ಕಿ ಕೊಲ್ಲಲು ಕಾರಣವೇನು? ಸಿಕ್ಕಿದೆ ಟ್ವಿಸ್ಟ್

RPF FIring: ಜೈಪುರ ಎಕ್ಸ್‌ಪ್ರೆಸ್‌ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಎಎಸ್‌ಐ ಸೇರಿ ನಾಲ್ವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೇದೆ ಗುಂಡಿನ ದಾಳಿ ನಡೆಸಲು ಇದೇ ಕಾರಣ ಎನ್ನಲಾಗಿದೆ.

VISTARANEWS.COM


on

RPF ASI Tika Sharma
ಹತ್ಯೆಗೀಡಾದ ಎಎಸ್‌ಐ ಟೀಕಾ ಶರ್ಮಾ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಸೋಮವಾರ ಬೆಳಗಿನ ಜಾವ 5 ಗಂಟೆಗೆ ರೈಲ್ವೆ ರಕ್ಷಣಾ ಪಡೆಯ (RPF) ಪೇದೆಯು ತನ್ನ ಹಿರಿಯ ಅಧಿಕಾರಿ, ಎಎಸ್‌ಐ ಟೀಕಾ ಶರ್ಮಾ (Tika Sharma) ಎಂಬುವರು ಸೇರಿ ನಾಲ್ವರ ಮೇಲೆ ಗುಂಡಿನ ದಾಳಿ (RPF FIring) ನಡೆಸಿರುವುದಕ್ಕೆ ಹೊಸ ತಿರುವು ಸಿಕ್ಕಿದೆ. ಇತ್ತೀಚೆಗೆ ಆರ್‌ಪಿಎಫ್‌ ಪೇದೆಯನ್ನು ಗುಜರಾತ್‌ನಿಂದ ಮುಂಬೈಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಕುಪಿತಗೊಂಡು ಎಎಸ್‌ಐ ಮೇಲೆ ಮೊದಲು ಗುಂಡಿನ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಪೇದೆ ಚೇತನ್‌ ಸಿಂಗ್‌ನನ್ನು ಗುಜರಾತ್‌ನಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಕೌಟುಂಬಿಕ ಸಮಸ್ಯೆಗಳೂ ಇದ್ದ ಕಾರಣ ಚೇತನ್‌ ಸಿಂಗ್‌, ಗುಜರಾತ್‌ನಿಂದ ಮುಂಬೈಗೆ ತೆರಳಲು ಇಷ್ಟವಿರಲಿಲ್ಲ. ಇದರಿಂದ ಆತನ ಮಾನಸಿಕವಾಗಿ ನೊಂದಿದ್ದ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಹಿರಿಯ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದ. ಆದರೂ, ಆತ ಗುಜರಾತ್‌ಗೆ ತೆರಳಲೇಬೇಕಿತ್ತು. ಇದು ಆತನ ಮಾನಸಿಕ ಸ್ಥಿಮಿತವನ್ನು ಕದಡಿತ್ತು ಎಂದು ಮೂಲಗಳು ತಿಳಿಸಿವೆ.

RPF Constable Chetan Singh
ಗುಂಡಿನ ದಾಳಿ ನಡೆಸಿದ ಪೇದೆ ಚೇತನ್‌ ಸಿಂಗ್.

ಹಾಗಾಗಿ, ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಚೇತನ್‌ ಸಿಂಗ್‌ ಹಾಗೂ ಟೀಕಾ ಶರ್ಮಾ ಮಧ್ಯೆ ವಾಗ್ವಾದ ಶುರುವಾಗಿದೆ. ಇಬ್ಬರ ನಡುವಿನ ವಾಗ್ವಾದವು ಅತಿರೇಕ ತಲುಪಿದಾಗ, ಚೇತನ್‌ ಸಿಂಗ್‌ ಗನ್‌ ತೆಗೆದು ಎಎಸ್‌ಐಗೆ ಗುಂಡು ಹಾರಿಸಿದ್ದಾನೆ. ಕೋಪದಿಂದ ಕುದಿಯುತ್ತಿದ್ದ ಆತ ಪ್ರಯಾಣಿಕರ ಮೇಲೂ ಗುಂಡಿನ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. 30 ವರ್ಷದ ಚೇತನ್‌ ಸಿಂಗ್‌, ಉತ್ತರ ಪ್ರದೇಶದವನಾಗಿದ್ದು, ಮೊದಲಿನಿಂದಲೂ ಸಣ್ಣ ಸಣ್ಣ ವಿಷಯಗಳಿಗೂ ಜಗಳವಾಡುವ, ಕೋಪ ಮಾಡಿಕೊಳ್ಳುವ ಸ್ವಭಾವದವನಾಗಿದ್ದ ಎಂದು ತಿಳಿದುಬಂದಿದೆ.

ರಜೆಯಿಂದ ಮರಳಿದ್ದ ಚೇತನ್‌ ಸಿಂಗ್‌

“ಕೆಲ ದಿನಗಳ ಹಿಂದೆ ರಜೆ ತೆಗೆದುಕೊಂಡಿದ್ದ ಚೇತನ್‌ ಸಿಂಗ್‌, ಆಗಷ್ಟೇ ಕೆಲಸಕ್ಕೆ ಹಾಜರಾಗಿದ್ದರು” ಎಂದು ಪಶ್ಚಿಮ ರೈಲ್ವೆ ಐಜಿ ಪಿ.ಸಿ. ಸಿನ್ಹಾ ತಿಳಿಸಿದ್ದಾರೆ. “ಪ್ರಾಥಮಿಕ ತನಿಖೆ ಬಳಿಕ ಅವರು ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿದ್ದರು. ರಜೆ ಮುಗಿಸಿ ಬಂದಾಗಲೂ ಅವರು ಮಾನಸಿಕವಾಗಿ ಉಲ್ಲಸಿತರಾಗಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: RPF Firing: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ ನಡೆಸಿದ ಪೇದೆ; ಎಎಸ್‌ಐ ಸೇರಿ ನಾಲ್ವರ ಸಾವು

ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಚೇತನ ಸಿಂಗ್‌ ಸುಮಾರು 12 ಸುತ್ತು ಗುಂಡು ಹಾರಿಸಿದ್ದಾನೆ. ಆದಾಗ್ಯೂ, ಪೇದೆಯ ವರ್ಗಾವಣೆಗೆ ಎಎಸ್‌ಐ ಕಾರಣವೇ ಎಂಬ ಕುರಿತು ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಬಳಿಕ ಪರಾರಿಯಾಗಿದ್ದ ಚೇತನ್‌ ಸಿಂಗ್‌ನನ್ನು ಬಂಧಿಸಲಾಗಿದೆ. ಎಎಸ್‌ಐ ಸೇರಿ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Stone Pelting: ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

VISTARANEWS.COM


on

Stone pelting
Koo

ಲಕ್ನೋ: ರಸ್ತೆಯಲ್ಲಿ ಆದ ಸಣ್ಣ ಜಗಳ ಇಡೀ ಒಂದು ಊರನ್ನೇ ಉದ್ವಿಗ್ನಗೊಳಿಸಿರುವ ಘಟನೆ ಉತ್ತರಪ್ರದೇಶದ(Uttar Pradesh) ಲಕ್ನೋದಲ್ಲಿ ನಡೆದಿದೆ. ಸಣ್ಣದೊಂದು ಜಗಳದ ಕಿಡಿ ಗುಂಪು ಘರ್ಷಣೆ(ಯಾಗಿ ಹೊತ್ತಿಕೊಂಡಿದ್ದು, ಜನ ಕಲ್ಲು ತೂರಾಟ(Stone Pelting) ನಡೆಸಿದ್ದಾರೆ. ಅಲ್ಲದೇ ಇದೇ ವೇಳೆ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಈ ಭೀಕರ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹಲವರಿಗೆ ಗಂಭೀರ ಗಾಯಗಳಾಗಿವೆ.

ಘಟನೆ ವಿವರ:

ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

ಅವರು ತಮ್ಮ ಮನೆ ಬಳಿ ತಲುಪುತ್ತಿದ್ದಂತೆ 40-50 ಜನರಿಗೆಕರೆ ಮಾಡಿ ಕರೆಸಿಕೊಂಡಿದ್ದರು. ಹಿಂಬಾಲಿಸಿಕೊಂಡು ಬಂದಿದ್ದ ಹರ್ಷ್‌ ಮತ್ತು ಆತನ ಸ್ನೇಹಿತರನ್ನು ಕಂಡ ಕೂಡಲೇ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೇ ಸಫಾರಿ ಸೂಟ್‌ ಧರಿಸಿದ್ದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣವಾಇ ಜಖಂ ಆಗಿದ್ದು, ಅನೇಕರು ಕಲ್ಲೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಇನ್ನು ಘಟನೆಗೆ ಸಂಬಂಧಿಸಿದಂತೆ ಆಧಿಕೃತವಾಗಿ ಯಾವುದೇ ದೂರು ದಾಖಲಾಗಿಲ್ಲ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಲಾಯಿತು. ಇನ್ನು ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ಮೊದಲು ಅರೆಸ್ಟ್‌ ಮಾಡಲಾಗಿತ್ತು. ಇದೀಗ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Crowd Funding: ರಾಜಸ್ಥಾನದ ಜೈಪುರದಲ್ಲಿ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಅಭೂತಪೂರ್ವಾಗಿ ಸ್ಪಂದಿಸಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ 17.5 ಕೋಟಿ ರೂ. ಬೇಕಾಗಿತ್ತು. ಸುಮಾರು 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ. ಸದ್ಯ ಸಾರ್ವಜನಿಕರ ಮಾನವೀಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Crowd Funding
Koo

ಜೈಪುರ: ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ರಾಜಸ್ಥಾನದ 22 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಅನೇಕರು ಭರಪೂರ ದೇಣಿಗೆ ನೀಡಿದ್ದಾರೆ. ಕ್ರಿಕೆಟ್‌ ಅಟಗಾರರಿಂದ ಹಿಡಿದು, ನಟರು, ತರಕಾರಿ ಮಾರುವವರು, ಬೀದಿಬದಿ ವ್ಯಾಪಾರಿಗಳು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ ಸುಮಾರು 17.5 ಕೋಟಿ ರೂ. ಮೊತ್ತದ ಇಂಜೆಕ್ಷನ್‌ ನೀಡಬೇಕಾಗಿದ್ದು, ಇದಕ್ಕಾಗಿ ಇವರೆಲ್ಲ ಒಂದಾಗಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿ ಮಗುವಿನ ನೆರವಿಗೆ ಧಾವಿಸಿದ್ದಾರೆ (Crowd Funding).

ರಾಜಸ್ಥಾನದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಶ್‌ ಶರ್ಮಾ ಅವರ ಪುತ್ರ ಹೃದಯಾಂಶ್‌ ಶರ್ಮಾ (22 ತಿಂಗಳು) ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (Spinal muscular atrophy) ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಕಾರಣದಿಂದ ಆತನ ಸೊಂಟದ ಕೆಳಭಾಗ ಸಂಪೂರ್ಣ ನಿಷ್ಕ್ರೀಯವಾಗಿತ್ತು. ಇದನ್ನು ವಾಸಿ ಮಾಡಲು, ಸಂಪೂರ್ಣ ಗುಣಮುಖನಾಗಲು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಜೀನ್ ಥೆರಪಿ ಇಂಜೆಕ್ಷನ್‌ ಜೊಲ್ಗೆನ್ಸ್ಮಾ (Zolgensma)ದ ಸಿಂಗಲ್ ಡೋಸ್ ಪಡೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಅತ್ಯಂತ ದುಬಾರಿಯಾದ ಇದರ ಬೆಲೆ ಅಂದಾಜು 17.5 ಕೋಟಿ ರೂ.

ದೇಣಿಗೆ ಸಂಗ್ರಹಕ್ಕೆ ಮುಂದಾದ ಪೊಲೀಸರು

ಇಷ್ಟೊಂದು ದುಬಾರಿ ಮೊತ್ತ ಭರಿಸಲು ನರೇಶ್‌ ಶರ್ಮಾ ಅವರ ಕುಟುಂಬಕ್ಕೆ ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರವಿಗೆ ಧಾವಿಸಿದ ರಾಜಸ್ಥಾನ ಪೊಲೀಸರು ಸಾವರ್ಜನಿಕ ದೇಣಿಗೆ ಸಂಗ್ರಹಕ್ಕೆ ಮುಂದಾದರು. ಮಗುವಿಗೆ 2 ವರ್ಷ ತುಂಬುವ ಮೊದಲೇ ಈ ಚಿಕಿತ್ಸೆ ನಡೆಯಬೇಕಿರುವುದರಿಂದ ಪೊಲೀಸರು ಫೆಬ್ರವರಿಯಲ್ಲಿ ಕ್ರೌಡ್‌ ಫಡಿಂಗ್‌ ಅಭಿಯಾನ ಆರಂಭಿಸಿದರು. ಈ ಅಭಿಯಾನಕ್ಕೆ ಸೂಕ್ತ ಸ್ಪಂದನೆ ದೊರೆಯಿತು. ಸೆಲೆಬಿಟಿಗಳಾದ ಕ್ರಿಕೆಟಿಗ ದೀಪಕ್‌ ಚಹರ್‌ ಮತ್ತು ಬಾಲಿವುಡ್‌ ನಟ, ಬಹಭಾಷಾ ಕಲಾವಿದ ಸೋನು ಸೂದ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡು ನೆರವು ನೀಡಲು ಮನವಿ ಮಾಡಿದರು.

ಹರಿದು ಬಂದ ನೆರವು

ಬಳಿಕ ಜೈಪುರದ ವಿವಿಧ ಕಡೆಗಳಿಂದ ನೆರವು ಹರಿದು ಬರತೊಡಗಿತು. ಅಂಗಡಿಯವರು, ವಿದ್ಯಾರ್ಥಿಗಳು, ಗೃಹಣಿಯರು, ತರಕಾರಿ, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ನೆರವಿನ ಹಸ್ತ ಚಾಚಿದರು. ವಿವಿಧ ಎನ್‌ಜಿಒಗಳು ಮತ್ತು ಸಂಸ್ಥೆಗಳು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದವು. ʼʼರಾಜಸ್ಥಾನದಲ್ಲಿ ಕ್ರೌಡ್‌ ಫಡಂಗ್‌ಗೆ ಈ ರೀತಿಯ ಸ್ಪಂದನೆ ದೊರೆಯುತ್ತಿರುವುದು ಇದು ಮೊದಲ ಬಾರಿʼʼ ಎಂದು ಅಭಿಯಾನದಲ್ಲಿ ತೊಡಗಿಸಿಕೊಂಡಿರುವವರು ಅಭಿಪ್ರಾಯಪಡುತ್ತಾರೆ.

3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

3 ತಿಂಗಳ ಅವಧಿಯಲ್ಲಿ ಸುಮಾರು 9 ಕೋಟಿ ರೂ. ಸಂಗ್ರಹವಾಗಿದೆ. ಇದೀಗ ಜೈಪುರದ ಜೆ.ಕೆ. ಲಾನ್‌ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಇಂಜೆಕ್ಷನ್‌ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎನ್ನುವುದು ಆನುವಂಶಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ಕೊರತೆಯೊಂದಾಗಿ ವ್ಯಕ್ತಿಗೆ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೂ ಪರಿಣಾಮ ಬೀರುತ್ತದೆ. ಇದರ ಚಿಕಿತ್ಸೆಗಾಗಿ ಬಳಸುವ ಜೊಲ್ಗೆನ್ಸ್ಮಾ ಇಂಜೆಕ್ಷನ್‌ ಅನ್ನು ಸ್ವಿಸ್ ಫಾರ್ಮಾ ದೈತ್ಯ ನೊವಾರ್ಟಿಸ್ (Novartis) ತಯಾರಿಸುತ್ತದೆ.

ಇದನ್ನೂ ಓದಿ: kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

Continue Reading

ಪ್ರಮುಖ ಸುದ್ದಿ

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

M‌ine Lift Collapse: ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ.

VISTARANEWS.COM


on

copper mine lift collapse
Koo

ಜೈಪುರ: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ (copper mine) ಲಿಫ್ಟ್ ಕುಸಿದು (M‌ine Lift Collapse) 14 ಮಂದಿ ಸಿಕ್ಕಿಬಿದ್ದಿದ್ದಾರೆ. ಇವರು ಪಿಎಸ್‌ಯು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ (Hindustan copper Ltd) 14 ಅಧಿಕಾರಿಗಳು ಹಾಗೂ ವಿಜಿಲೆನ್ಸ್ ತಂಡದ ಸದಸ್ಯರಾಗಿದ್ದಾರೆ. ಮಂಗಳವಾರ ರಾತ್ರಿ ರಕ್ಷಣಾ ಕಾರ್ಯಾಚರಣೆ (rescue Operation) ಆರಂಭವಾಗಿದ್ದು, ಘಟನೆಯಲ್ಲಿ (Mine tragedy) ಕೆಲ ಅಧಿಕಾರಿಗಳು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದೆ ಎಂದು ನೀಮ್ ಕಾ ಥಾನಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಇಲ್ಲಿಯವರೆಗೆ, ಗಣಿ ಲಿಫ್ಟ್ ಕುಸಿತದಿಂದ ಯಾವುದೇ ಸಾವುಗಳು ವರದಿಯಾಗಿಲ್ಲ.

ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆ ವರದಿಯಾದ ಕೂಡಲೇ ಬಿಜೆಪಿ ಶಾಸಕ ಧರ್ಮಪಾಲ್ ಗುರ್ಜರ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. “ರಕ್ಷಣಾ ತಂಡವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. 6-7 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ. ಇಡೀ ಆಡಳಿತ ಅಲರ್ಟ್ ಆಗಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಖಂಡಿತವಾಗಿಯೂ ಎಲ್ಲರೂ ಸುರಕ್ಷಿತವಾಗಿ ಹೊರಬರುತ್ತಾರೆ” ಎಂದು ಧರ್ಮಪಾಲ್ ಗುರ್ಜರ್ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ವಿಜಿಲೆನ್ಸ್ ತಂಡವು ಪರಿಶೀಲನೆಗಾಗಿ ಗಣಿ ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ. ಅವರು ಮೇಲಕ್ಕೆ ಬರಲು ಮುಂದಾದಾಗ, ಶಾಫ್ಟ್ ಅಥವಾ ʼಪಂಜರ’ದ ಹಗ್ಗ ಮುರಿದು ಸುಮಾರು 14 ಜನರು ಕೆಳಗೆ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಲಿಫ್ಟ್ ಅನ್ನು ಹಸ್ತಚಾಲಿತವಾಗಿ ಚಲಿಸಲು ಮತ್ತು ಸಿಕ್ಕಿಬಿದ್ದ ಸಿಬ್ಬಂದಿಯನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading
Advertisement
Job Alert
ಉದ್ಯೋಗ3 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್35 mins ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ38 mins ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ40 mins ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ1 hour ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ2 hours ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ3 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ3 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202419 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌