ನವದೆಹಲಿ: ದೇಶಾದ್ಯಂತ ತನ್ನ ನೆಲೆಯನ್ನು ಹೆಚ್ಚಿಸಿಕೊಳ್ಳಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ವು ಜನರೊಂದಿಗೆ ಸಂಪರ್ಕವನ್ನು ಸಾಧಿಸುವುದಕ್ಕಾಗಿ ಜನಸಂಖ್ಯಾ ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಬೇರೆ ಬೇರೆ ಪ್ರದೇಶದಲ್ಲಿ ಜನರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಸಾರ್ವಜನಿಕ ಸಹಭಾಗಿತ್ವದ ಮೂಲಕ ಪರಿಹರಿಸಿಕೊಳ್ಳುವ ಪ್ರಯತ್ನ ಮಾಡಲಿದೆ ಎಂದು ಆರೆಸ್ಸೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಈ ಯೋಜನೆಯ ಭಾಗವಾಗಿ ಆರ್‌ಎಸ್‌ಎಸ್ ಈಗಾಗಲೇ ತನ್ನ ಶಾಖೆಗಳ ಮೂಲಕ ಸುಮಾರು 10,000 ವಿವಿಧ ಸ್ಥಳಗಳಲ್ಲಿ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿ ರಾಜ್ಯದಲ್ಲಿ ಈ ಸಮೀಕ್ಷೆಗಳ ಆಧಾರದ ಮೇಲೆ ಡೇಟಾವನ್ನು ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದ್ದಾರೆ. ಹರ್ಯಾಣದಲ್ಲಿ ಅಖಿಲ ಭಾರತೀಯ ಪ್ರತಿನಿಧಿ ಸಭಾ ಬೈಠಕ್ ಮುಕ್ತಾಯದ ದಿನದಿಂದ ಹೊಸಬಾಳೆ ಅವರು ಈ ಮಾಹಿತಿಯನ್ನು ತಿಳಿಸಿದ್ದಾರೆ.
ಸ್ವಯಂಸೇವಕರು ನಿಯಮಿತವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು, ಇದಕ್ಕಾಗಿ ಸಮಯವನ್ನು ಮೀಸಲಿಡಬೇಕು. ಉದ್ಯೋಗದಲ್ಲಿರುವ ಜನರು ಮತ್ತು ಅವರ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕುರಿತು ಪ್ರಸ್ತುತಿಯನ್ನು ಹೊಂದಿದ್ದೇವೆ. ಎಷ್ಟು ಜನರು ಉದ್ಯೋಗದಲ್ಲಿದ್ದಾರೆ, ಎಷ್ಟು ಮಂದಿ ಸರ್ಕಾರಿ ಸೇವೆಯಲ್ಲಿ ತೊಡಗಿದ್ದಾರೆ, ಎಷ್ಟು ಮಂದಿ ನಿವೃತ್ತರಾಗಿದ್ದಾರೆ ಅಥವಾ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಅವರು ಸಮೀಕ್ಷೆಯನ್ನು ನಡೆಸಿದ್ದಾರೆ ಎಂದು ಹೊಸಬಾಳೆ ತಿಳಿಸಿದ್ದಾರೆ.
ಇದನ್ನೂ ಓದಿ: Mohan Bhagwat: ಉದ್ಯೋಗದಲ್ಲಿ ಪ್ರತಿಷ್ಠೆ ಹುಡುಕಬೇಡಿ, ಅದರ ಹಿಂದೆ ಓಡಬೇಡಿ ಎಂದ ಆರ್‌ಎಸ್‌ಎಸ್ ಮುಖ್ಯಸ್ಥ
ಶಾಖಾಗಳ ಮೂಲಕವೇ ಈ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 20 ಮತ್ತು 40 ವಯಸ್ಸಿನ ಸೇವಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ವಯೋಮಾನದ ಸುಮಾರು 35 ಸಾವಿರದಿಂದ 40 ಸಾವಿರ ಶಾಖಾ ಜನರಿದ್ದಾರೆ. ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಸಮೀಕ್ಷೆಯಲ್ಲಿ ವ್ಯಕ್ತವಾಗುವ ದತ್ತಾಂಶಗಳನ್ನು ಸಂಗ್ರಹಿಸಿ ಅದನ್ನು ಜನರ ಸಮಸ್ಯೆಗಳ ಬಗೆಹರಿಸಲು ಬಳಸಲಾಗುವುದು ಎಂದು ಅವರು ಆರೆಸ್ಸೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.