Site icon Vistara News

ಅಧ್ಯಕ್ಷ ಮುಯಿಜುವನ್ನು ವಜಾಗೊಳಿಸಿ; ಮೋದಿಗೆ ಮಾಲ್ಡೀವ್ಸ್‌ ಪ್ರತಿಪಕ್ಷಗಳಿಂದಲೂ ಬೆಂಬಲ

Mohamed Muizzu

Sack President, Summon Minister: Maldives Opposition Defends PM Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗುತ್ತಿವೆ. ಭಾರತ ಹಾಗೂ ಮೋದಿ ಅವರ ಬಗ್ಗೆ ಮಾಲ್ಡೀವ್ಸ್‌ ಸಚಿವರು ಹೀಗೆ ಹೇಳಬಾರದಿತ್ತು ಎಂದು ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಂಘವು (Maldives Association of Tourism Industry-MATI) ಅಸಮಾಧಾನ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ, ಮಾಲ್ಡೀವ್ಸ್‌ ಪ್ರತಿಪಕ್ಷ ನಾಯಕರು ಕೂಡ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಅವರನ್ನು ವಜಾಗೊಳಿಸಬೇಕು, ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುವ ಮೂಲಕ ಭಾರತ ಹಾಗೂ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ.

“ಡೆಮಾಕ್ರಟ್ಸ್‌ ಸಂಸದರಾಗಿರುವ ಅಲಿ ಅಜೀಮ್‌ ಅವರು ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಪದಚ್ಯುತಿಗೊಳಿಸಬೇಕು. ಬೃಹತ್‌ ಪ್ರತಿಪಕ್ಷವಾಗಿರುವ ಎಂಡಿಪಿಯು ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಮತ್ತೊಬ್ಬ ಸಂಸದ ಮೀಕೈಲ್ ನಸೀಮ್‌ ಅವರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿದೇಶಾಂಗ ಸಚಿವರಿಗೆ ಸಮನ್ಸ್‌ ನೀಡಬೇಕು” ಎಂದು ಒತ್ತಾಯಿಸಿದ್ದಾರೆ. “ಬೇರೆ ದೇಶಗಳು ಮಾಲ್ಡೀವ್ಸ್‌ಅನ್ನು ಬಾಯ್ಕಾಟ್‌ ಮಾಡಿದರೆ ಪ್ರವಾಸೋದ್ಯಮಕ್ಕೆ ತೊಂದರೆಯಾಗುತ್ತದೆ. ದೇಶದ ಆರ್ಥಿಕತೆಗೆ ಪೆಟ್ಟು ಬೀಳುತ್ತದೆ” ಎಂದು ಎಂಡಿಪಿ ನಾಯಕ ಅಹ್ಮದ್‌ ಮಹ್ಲೂಫ್‌ ಎಚ್ಚರಿಕೆ ನೀಡಿದ್ದಾರೆ.

ಕ್ಷಮೆ ಕೇಳಿದ ಮಾಲ್ಡೀವ್ಸ್‌ ಸಂಸದೆ

ಭಾರತ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ ಕಾರಣ ಬಾಯ್ಕಾಟ್‌ ಮಾಲ್ಡೀವ್ಸ್‌ ಎಂಬ ಅಭಿಯಾನ ಶುರುವಾಗಿದೆ. ಇದರಿಂದ ಕಂಗಾಲಾದ ಮಾಲ್ಡೀವ್ಸ್‌ ಭಾರತದ ಕ್ಷಮೆ ಕೇಳಿದೆ. “ಭಾರತದ ಬಗ್ಗೆ ಮಾಲ್ಡೀವ್ಸ್‌ ಸಚಿವರು ಹೇಳಿಕೆ ನೀಡಿದ ಮಾತ್ರಕ್ಕೆ ಭಾರತದ ಬಗ್ಗೆ ಮಾಲ್ಡೀವ್ಸ್‌ ಜನರಿಗೆ ಇರುವ ಗೌರವ ಕಡಿಮೆಯಾಗುವುದಿಲ್ಲ. ಆದರೆ, ಉದ್ಧಟತನದ ಹೇಳಿಕೆ ನೀಡಿರುವುದಕ್ಕೆ ನಾವು ಭಾರತದ ಕ್ಷಮೆಯಾಚಿಸುತ್ತೇವೆ. ಭಾರತೀಯರ ಆಕ್ರೋಶವನ್ನು ಗೌರವಿಸುತ್ತೇವೆ. ಆದರೆ, ಭಾರತೀಯರು ಕೂಡಲೇ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ನಿಲ್ಲಿಸಬೇಕು” ಎಂದು ಮಾಲ್ಡೀವ್ಸ್‌ ಸಂಸದೆ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಗಿರುವ ಇವಾ ಅಬ್ದುಲ್ಲಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಭೇಟಿ, ವಿವಾದ ಬಳಿಕ ಲಕ್ಷದ್ವೀಪಕ್ಕೆ ಶುಕ್ರದೆಸೆ; ಶೀಘ್ರವೇ ಹೊಸ ಏರ್‌ಪೋರ್ಟ್‌ ನಿರ್ಮಾಣ

“ಭಾರತವು ಸುಖಾಸುಮ್ಮನೆ ಮಾಲ್ಡೀವ್ಸ್‌ಅನ್ನು ಟಾರ್ಗೆ ಮಾಡುತ್ತಿದೆ. ಬೀಚ್‌ ಪ್ರವಾಸೋದ್ಯಮದಲ್ಲಿ ಭಾರತವು ಮಾಲ್ಡೀವ್ಸ್‌ಗೆ ಸವಾಲೊಡ್ಡಬೇಕು ಎಂದರೆ ತುಂಬ ಸವಾಲುಗಳನ್ನು ಎದುರಿಸಬೇಕಾಗುತ್ತದೆ” ಎಂದು ಮಾಲ್ಡೀವ್ಸ್‌ ಸಚಿವ ಅಬ್ದುಲ್ಲಾ ಮಹ್ಜೂಮ್‌ ಮಾಜಿದ್ ಪೋಸ್ಟ್‌ ಮಾಡಿದ್ದರು. ಮತ್ತೊಬ್ಬ ಸಹಾಯಕ ಸಚಿವೆ ಮರಿಯಮ್‌ ಶಿವುನಾ, “ಇಸ್ರೇಲ್‌ ಕೈಗೊಂಬೆಯಾಗಿರುವ ನರೇಂದ್ರ ಮೋದಿ ಅವರು ಲೈಫ್‌ ಜಾಕೆಟ್‌ ಧರಿಸಿ ಜಿಗಿಯುತ್ತಾರೆ” ಎಂದು ಉದ್ಧಟತನದ ಪೋಸ್ಟ್‌ ಮಾಡಿದ್ದರು. ಮೂವರು ಸಚಿವರು ಇಂತಹ ಉದ್ಧಟತನದ ಹೇಳಿಕೆ ನೀಡಿದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version