PM Modi Russia Visit : ಸರ್ ಪೆ ಲಾಲ್ ಟೋಪಿ ರುಸಿ, ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ! ರಷ್ಯನ್ನರಿಗೆ ಹಳೆಯ ಹಾಡು ನೆನಪಿಸಿದ ಮೋದಿ - Vistara News

ದೇಶ

PM Modi Russia Visit : ಸರ್ ಪೆ ಲಾಲ್ ಟೋಪಿ ರುಸಿ, ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ! ರಷ್ಯನ್ನರಿಗೆ ಹಳೆಯ ಹಾಡು ನೆನಪಿಸಿದ ಮೋದಿ

PM Modi Russia Visit : ಮೋದಿ ಭಾಷಣದ ಪ್ರಮುಖ ಹೈಲೈಟ್​ ಬಾಲಿವುಡ್​ನ ಒಂದು ಜನಪ್ರಿಯ ಹಾಡು. ‘ಸರ್ ಪೆ ಲಾಲ್ ಟೋಪಿ ರಸ್ಸಿ, ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ (ತಲೆಯ ಮೇಲೆ ಕೆಂಪು ರಷ್ಯನ್ ಟೋಪಿ, ಆದರೂ ಹೃದಯದಲ್ಲಿ ಹಿಂದೂಸ್ತಾನಿ). ಈ ಜನಪ್ರಿಯ ಹಾಡನ್ನು ಒಮ್ಮೆ ಇಲ್ಲಿನ ಪ್ರತಿ ಮನೆಯಲ್ಲೂ ಹಾಡಲಾಗುತ್ತಿತ್ತು ಎಂದು ಹೇಳಿದ ಅವರು, ಹಾಡು ಹಳೆಯದಾಗಿರಬಹುದು, ಆದರೆ ಭಾವನೆಗಳು ಸದಾ ಹಸಿರು ಎಂದರು.

VISTARANEWS.COM


on

PM Modi Russia Visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi Russia Visit) ಅವರು ಮಂಗಳವಾರ ಮಾಸ್ಕೋದಲ್ಲಿ ನೆಲೆಸಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಭಾರತ-ರಷ್ಯಾ ನಡುವಿನ ಹಲವು ವರ್ಷಗಳ ಬಾಂಧವ್ಯವನ್ನು ಸ್ಮರಿಸಿಕೊಂಡಲ್ಲದೆ, ಸಾಂಸ್ಕೃತಿಕ ಸಂಬಂಧಗಳನ್ನು ಶ್ಲಾಘಿಸಿದರು. ಎಲ್ಲದಕ್ಕಿಂತ ಪ್ರಮುಖವಾಗಿ ಜನಪ್ರಿಯವಾಗಿರುವ ಹಿಂದಿ ಹಾಡೊಂದನ್ನು ಹಾಡುವ ಮೂಲಕ ಅಲ್ಲಿ ನೆಲೆಸಿರುವ ಭಾರತೀಯ ನಿವಾಸಿಗಳ ಮನಗೆದ್ದರು.

ಮೋದಿ ಭಾಷಣದ ಪ್ರಮುಖ ಹೈಲೈಟ್​ ಬಾಲಿವುಡ್​ನ ಒಂದು ಜನಪ್ರಿಯ ಹಾಡು. ‘ಸರ್ ಪೆ ಲಾಲ್ ಟೋಪಿ ರಸ್ಸಿ, ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ (ತಲೆಯ ಮೇಲೆ ಕೆಂಪು ರಷ್ಯನ್ ಟೋಪಿ, ಆದರೂ ಹೃದಯದಲ್ಲಿ ಹಿಂದೂಸ್ತಾನಿ). ಈ ಜನಪ್ರಿಯ ಹಾಡನ್ನು ಒಮ್ಮೆ ಇಲ್ಲಿನ ಪ್ರತಿ ಮನೆಯಲ್ಲೂ ಹಾಡಲಾಗುತ್ತಿತ್ತು ಎಂದು ಹೇಳಿದ ಅವರು, ಹಾಡು ಹಳೆಯದಾಗಿರಬಹುದು, ಆದರೆ ಭಾವನೆಗಳು ಸದಾ ಹಸಿರು ಎಂದರು. ರಾಜ್ ಕಪೂರ್ ಮತ್ತು ಮಿಥುನ್ ಚಕ್ರವರ್ತಿಯಂಥ ಮಹಾನ್​​ ಕಲಾವಿದರು ಭಾರತ ಮತ್ತು ರಷ್ಯಾ ನಡುವಿನ ಸ್ನೇಹ ಸಂಬಂಧಕ್ಕೆ ನೀರೆದಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ ಮತ್ತು ರಷ್ಯಾ ನಡುವೆ ಬಲವಾದ ಸಂಬಂಧ ಬೆಳೆಸುವಲ್ಲಿ ಅಲ್ಲಿನ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಪ್ರಯತ್ನಗಳನ್ನು ಪ್ರಧಾನಿ ಮೋದಿ ಹೊಗಳಿದರು. ಭಾರತದ ವಿಶ್ವಾಸಾರ್ಹ ಸ್ನೇಹಿತ ದೇಶ ರಷ್ಯಾ . ನಮ್ಮ ಸ್ನೇಹವು ಪರಸ್ಪರ ನಂಬಿಕೆ ಮತ್ತು ಗೌರವವಗಳಿಂದ ತುಂಬಿಕೊಂಡಿದೆ ಎಂದರು. ಉಭಯ ರಾಷ್ಟ್ರಗಳ ಪರಸ್ಪರ ಸಹಕಾರದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, “ಜಾಗತಿಕ ಏಳಿಗೆಗಾಗಿ ಭಾರತ ಮತ್ತು ರಷ್ಯಾ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು.

ರಷ್ಯಾ ನಿವಾಸಿಗಳ ಬಣ್ಣನೆ

ರಷ್ಯಾದಲ್ಲಿ ನೆಲೆಸಿರುವ ಭಾರತೀಯರು ಉಭಯ ರಾಷ್ಟ್ರಗಳ ಸಂಬಂಧಗಳಿಗೆ ಹೊಸ ಹೊಳಪು ನೀಡುತ್ತಿದ್ದಾರೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆ ಮೂಲಕ ರಷ್ಯಾದ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿದ್ದೀರಿ ಎಂದು ಮೋದಿ ಹೊಗಳಿದರು. ಪರಸ್ಪರ ಸ್ನೇಹದ ಬಗ್ಗೆ ಮಾತನಾಡಿದ ಮೋದಿ “ರಷ್ಯಾ ಎಂಬ ಪದ ಕೇಳಿದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಬರುವ ಮೊದಲ ಪದವೆಂದರೆ ಸಂತೋಷ ಮತ್ತು ದುಃಖದಲ್ಲಿ ಭಾರತದ ಪಾಲುದಾರ ಎಂಬುದು. ನಾವು ಅದನ್ನು ‘ದೋಸ್ತಿ’ ಎಂದು ಕರೆಯುತ್ತೇವೆ. ರಷ್ಯಾದಲ್ಲಿ ಚಳಿಗಾಲದಲ್ಲಿ ತಾಪಮಾನವು ಮೈನಸ್ ಗೆ ಇಳಿದರೂ, ಭಾರತ-ರಷ್ಯಾ ಸ್ನೇಹವು ಯಾವಾಗಲೂ ಪ್ಲಸ್ ನಲ್ಲಿ ಇರುತ್ತದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: PM Modi Russia Visit: “ಕೊಲೆಗಡುಕನನ್ನು ಮೋದಿ ಅಪ್ಪಿಕೊಂಡಿದ್ದಾರೆ”- ರಷ್ಯಾ ಭೇಟಿಗೆ ಉಕ್ರೇನ್‌ ಅಸಮಾಧಾನ

ನಮ್ಮ ಸಂಬಂಧಗಳ ಕೊಂಡಿಯನ್ನು ಅನೇಕ ಬಾರಿ ಪರೀಕ್ಷಿಸಲಾಗಿದೆ. ಪ್ರತಿ ಬಾರಿಯೂ ನಮ್ಮ ಸ್ನೇಹವು ಬಲವಾಗಿ ಪ್ರದರ್ಶನಗೊಂಡಿದೆ. ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಪುಟಿನ್ ಅವರ ನಾಯಕತ್ವವನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ. ಎರಡು ದಶಕಗಳಿಗೂ ಹೆಚ್ಚು ಕಾಲ ಈ ಪಾಲುದಾರಿಕೆಯನ್ನು ಬಲಪಡಿಸುವ ಅದ್ಭುತ ಕೆಲಸವನ್ನು ಅವರು ಮಾಡಿದ್ದಾರೆ. ಕಳೆದ 10 ವರ್ಷಗಳಲ್ಲಿ ನಾನು ರಷ್ಯಾಕ್ಕೆ ಬರುತ್ತಿರುವುದು ಇದು ಆರನೇ ಬಾರಿ. ಈ ವರ್ಷಗಳಲ್ಲಿ, ನಾವು ಪರಸ್ಪರ 17 ಬಾರಿ ಭೇಟಿಯಾಗಿದ್ದೇವೆ ಎಂದು ಮೋದಿ ಸ್ಮರಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌