Site icon Vistara News

New Parliament Building: ಹೊಸ ಸಂಸತ್ ಭವನ ಫಲಕ ಅನಾವರಣ; ಸರ್ವ ಧರ್ಮ ಪ್ರಾರ್ಥನೆ

Sarv dharma prayer ceremony

#image_title

ನವ ದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ (New Parliament Building Inauguration) ನಿಮಿತ್ತ ಮುಂಜಾನೆ 7.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನಿ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲ ಪೂಜೆಗಳಲ್ಲೂ ಪಾಲ್ಗೊಂಡರು. ಗಣಪತಿ ಹೋಮ ಮುಕ್ತಾಯವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್​​ನ್ನು ಹಿಡಿದು, ನೂತನ ಸಂಸತ್ ಭವನ ಪ್ರವೇಶಿಸಿ, ಅಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಪ್ರತಿಷ್ಠಾಪಿಸಿದರು. ಈ ವೇಳೆ ತಮಿಳುನಾಡಿನ ಅಧೀನಂ ಮಠದ ಪುರೋಹಿತರು, ಸಂತರು, ಮಠಾಧೀಶರು ಇದ್ದರು. ಮಂತ್ರಘೋಷ ಮೊಳಗುತ್ತಿತ್ತು.

ಇಷ್ಟಾದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕರನ್ನು ಸನ್ಮಾನಿಸಿದರು. ನೂತನ ಸಂಸತ್ ಭವನ ನಿರ್ಮಾಣ ಮಾಡಿದ ಈ ಕೆಲಸಗಾರರಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಅದಕ್ಕೂ ಮೊದಲು ನರೇಂದ್ರ ಮೋದಿಯವರು ಸಂಸತ್ ಭವನದ ಫಲಕ ಅನಾವರಣಗೊಳಿಸುವ ಮೂಲಕ ಕಟ್ಟಡವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿದರು. ನಂತರ ಅಲ್ಲಿ ಸರ್ವಧರ್ಮಗಳ ಪ್ರಾರ್ಥನೆ ನಡೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್​ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್​, ರಾಜನಾಥ್ ಸಿಂಗ್​ ಮತ್ತಿತರ ಹಲವು ಗಣ್ಯರು ಇದ್ದರು. ಇವರಲ್ಲಿ ಸ್ಪೀಕರ್ ಓಂ ಬಿರ್ಲಾ ಪ್ರತಿ ಕಾರ್ಯದಲ್ಲೂ ಪ್ರಧಾನಿ ಮೋದಿಗೆ ಜತೆಯಾದರು.

ವಿಡಿಯೋಗಳು ಇಲ್ಲಿವೆ:

Exit mobile version