SBI: ದುಬಾರಿಯಾಗಲಿದೆ ಎಸ್‌ಬಿಐ ಸಾಲ; ಲೆಂಡಿಂಗ್‌ ದರದಲ್ಲಿ ಭಾರೀ ಏರಿಕೆ - Vistara News

ದೇಶ

SBI: ದುಬಾರಿಯಾಗಲಿದೆ ಎಸ್‌ಬಿಐ ಸಾಲ; ಲೆಂಡಿಂಗ್‌ ದರದಲ್ಲಿ ಭಾರೀ ಏರಿಕೆ

SBI: ಭಾರತದ ಅತಿದೊಡ್ಡ ಬ್ಯಾಂಕ್, ಎಸ್‌ಬಿಐ, 1 ವರ್ಷದ ಅವಧಿಯ ಸಾಲದ ಮೇಲಿನ ಎಂಸಿಎಲ್‌ಆರ್ ಅನ್ನು 10 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಮಾಡಿದ್ದು, ಶೇಕಡಾ 8.85 ಕ್ಕೆ ಏರಿಕೆ ಆಗಿದೆ. ಅಂತೆಯೇ, 3-ತಿಂಗಳು, 6-ತಿಂಗಳು ಮತ್ತು 2-ವರ್ಷದ ಸಾಲದ ಅವಧಿಗೆ MCLR ಅನ್ನು ತಲಾ 10 ಮೂಲ ಅಂಕಗಳನ್ನು ಹೆಚ್ಚಿಸಲಾಗಿದೆ, ಕ್ರಮವಾಗಿ 8.4 ಶೇಕಡಾ, 8.75 ಶೇಕಡಾ ಮತ್ತು 8.95 ಶೇಕಡಾವನ್ನು ತಲುಪಿದೆ.

VISTARANEWS.COM


on

SBI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(SBI) ತನ್ನ ಗ್ರಾಹಕರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಇನ್ನು ಮುಂದೆ ಎಸ್‌ಬಿಐನ ಸಾಲ ದುಬಾರಿಯಾಗಲಿದೆ. ಅಂದರೆ ಎಸ್‌ಬಿಐ ತಮ್ಮ ಮಾರ್ಜಿನಲ್‌ ಕಾಸ್ಟ್‌ ಆಫ್‌ ಲೆಂಡಿಂಗ್‌ ರೇಟ್‌(MCLR) ಅನ್ನು 5-10 ಪಾಯಿಂಟ್‌ ಹೆಚ್ಚಿಸಿದೆ. ಹೀಗಾಗಿ ಸಾಲದ ಮೇಲಿನ ದರ ಏರಿಕೆ ಆಗಲಿದ್ದು, ಇದು ನೇರವಾಗಿ ತಿಂಗಳ EMI ಮೇಲೆ ಬೀಳಲಿದೆ.

ಭಾರತದ ಅತಿದೊಡ್ಡ ಬ್ಯಾಂಕ್, ಎಸ್‌ಬಿಐ, 1 ವರ್ಷದ ಅವಧಿಯ ಸಾಲದ ಮೇಲಿನ ಎಂಸಿಎಲ್‌ಆರ್ ಅನ್ನು 10 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಮಾಡಿದ್ದು, ಶೇಕಡಾ 8.85 ಕ್ಕೆ ಏರಿಕೆ ಆಗಿದೆ. ಅಂತೆಯೇ, 3-ತಿಂಗಳು, 6-ತಿಂಗಳು ಮತ್ತು 2-ವರ್ಷದ ಸಾಲದ ಅವಧಿಗೆ MCLR ಅನ್ನು ತಲಾ 10 ಮೂಲ ಅಂಕಗಳನ್ನು ಹೆಚ್ಚಿಸಲಾಗಿದೆ, ಕ್ರಮವಾಗಿ 8.4 ಶೇಕಡಾ, 8.75 ಶೇಕಡಾ ಮತ್ತು 8.95 ಶೇಕಡಾವನ್ನು ತಲುಪಿದೆ.

ಇದಕ್ಕೂ ಮೊದಲು, ಜೂನ್ ಮಧ್ಯದಲ್ಲಿ ಎಸ್‌ಬಿಐ ವಿವಿಧ ಅವಧಿಗಳಿಗೆ ಎಂಸಿಎಲ್‌ಆರ್ ಅನ್ನು 10 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿತ್ತು, ಆ ಸಮಯದಲ್ಲಿ 1 ವರ್ಷದ ಸಾಲಗಳಿಗೆ ಬೆಂಚ್‌ಮಾರ್ಕ್ ದರವನ್ನು ಶೇಕಡಾ 8.75ಕ್ಕೆ ಏರಿಕೆ ಮಾಡಿತ್ತು.

2024-25ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ ಗ್ರಾಮೀಣ ಭಾಗಗಳೂ ಸೇರಿ 400 ಹೊಸ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲೂ ಜನ ಬ್ಯಾಂಕ್‌ಗಳನ್ನು ಹೊಂದಬಹುದಾಗಿದೆ. ಹೊಸ ಶಾಖೆಗಳನ್ನು ತೆರೆಯುವ ಕುರಿತು ಎಸ್‌ಬಿಐ ಚೇರ್ಮನ್‌ ದಿನೇಶ್‌ ಕುಮಾರ್‌ ಖಾರಾ ಅವರು ಮಾಹಿತಿ ನೀಡಿದ್ದರು.

ದೇಶದಲ್ಲಿ ಶೇ.89ರಷ್ಟು ವಹಿವಾಟುಗಳು ಡಿಜಿಟಲ್‌ ಮೂಲಕ ಹಾಗೂ ಶೇ.98ರಷ್ಟು ವಹಿವಾಟು ಬ್ಯಾಂಕ್‌ ಹೊರತಾಗಿ ನಡೆಯುತ್ತಿವೆ. ಹೀಗಿರುವಾಗ ಬ್ಯಾಂಕ್‌ಗಳ ಬ್ರ್ಯಾಂಚ್‌ಗಳು ಏಕೆ ಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ದೇಶದ ಪ್ರತಿಯೊಂದು ಭಾಗದಲ್ಲೂ, ಹೊಸ ಹೊಸ ಪಟ್ಟಣ, ಗ್ರಾಮಗಳಿಗೂ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಇದೇ ಕಾರಣಕ್ಕಾಗಿಯೇ 2024-25ನೇ ಹಣಕಾಸು ವರ್ಷದಲ್ಲಿ ದೇಶದ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಬ್ರ್ಯಾಂಚ್‌ಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

ದೇಶಾದ್ಯಂತ ಹೊಸ ಹೊಸ ಪ್ರದೇಶಗಳಲ್ಲಿ ಬ್ಯಾಂಕ್‌ ಶಾಖೆಗಳನ್ನು ಸ್ಥಳಗಳ ಹುಡುಕಾಟ ನಡೆಯುತ್ತಿದೆ. ಜನರಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಸ್ಥಳಗಳನ್ನು ನಿರ್ಧರಿಸುವ ಕೆಲಸ ನಡೆಯುತ್ತಿದೆ. ದೇಶದ ಜನರಿಗೆ ಬ್ಯಾಂಕ್‌ಗಳ ಅವಶ್ಯಕತೆ ಹೆಚ್ಚಿಲ್ಲ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ದೇಶದ ಪ್ರತಿಯೊಂದು ಭಾಗದಲ್ಲಿ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಆ ಅವಶ್ಯಕತೆಯನ್ನು ಪೂರೈಸುವುದು ನಮ್ಮ ಆದ್ಯತೆಯಾಗಿದೆ” ಎಂದು ಪಿಟಿಐಗೆ ವಿವರಿಸಿದರು

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Alcohol Delivery: ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕರ್ನಾಟಕದ ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಈ ಸೌಲಭ್ಯ ಇರಲಿದೆ ಎಂಬುದು ಗಮನಾರ್ಹವಾಗಿದೆ.

VISTARANEWS.COM


on

Alcohol Delivery
Koo

ನವದೆಹಲಿ: ಪರಿಚಯದವರ ಕಣ್ಣುತಪ್ಪಿಸಿ ಬಾರ್‌ಗೆ ಹೋಗುವ ಗೋಜು, ಕೌಂಟರ್‌ನಲ್ಲಿ ಅವಸರದಲ್ಲಿಯೇ ಮದ್ಯವನ್ನು ಹೀರಿ, ಉಪ್ಪಿನಕಾಯಿ ನೆಕ್ಕಿ ಬರುವ ಗಡಿ ಬಿಡಿ ಇರಲ್ಲ, ಆಫೀಸಿನಿಂದ ಮನೆಗೆ ಬರುತ್ತಲೇ ಊಟ ಆರ್ಡರ್‌ ಮಾಡಿದಂತೆ, ಬಿಯರ್‌, ವೈನ್‌ ಸೇರಿ ಯಾವುದೇ ಮದ್ಯದ ಬಾಟಲಿಗಳನ್ನು ಇನ್ನು ಸ್ವಿಗ್ಗಿ (Swiggy), ಜೊಮ್ಯಾಟೋದಂತಹ ಆನ್‌ಲೈನ್‌ ಕಂಪನಿಗಳ ಮೂಲಕವೇ‌ ಮನೆಯ ಬಾಗಿಲಿಗೆ ತಂದು ಕೊಡುವಂತೆ (Alcohol Home Delivery) ಆರ್ಡರ್‌ ಮಾಡಬಹುದಾಗಿದೆ. ಹೌದು, ಎಣ್ಣೆ ಪ್ರಿಯರು ಓದಿರುವ ಸುದ್ದಿ, ವಾಕ್ಯಗಳು ಸರಿಯಾಗಿಯೇ ಇವೆ. ಶೀಘ್ರದಲ್ಲೇ ಕರ್ನಾಟಕ ಸೇರಿ ದೇಶಾದ್ಯಂತ ಮದ್ಯದ ಹೋಮ್‌ ಡೆಲಿವರಿ (Alcohol Delivery) ಆಗಲಿದೆ.

ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಸದ್ಯ, ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್‌, ತಮಿಳುನಾಡು, ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ಹೋಮ್‌ ಡೆಲಿವರಿ ಕುರಿತ ಪೈಲಟ್‌ ಪ್ರಾಜೆಕ್ಟ್‌ಅನ್ನು ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ದೇಶಾದ್ಯಂತ ಹೋಮ್‌ ಡೆಲಿವರಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಆರಂಭಿಕ ಹಂತದಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಸುವ ವ್ಯವಸ್ಥೆ ಜಾರಿಯಾದರೆ, ಹಂತ ಹಂತವಾಗಿ ದೇಶಾದ್ಯಂತ ನಗರ, ಪಟ್ಟಣಗಳಿಗೆ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಬಿಯರ್‌, ವೈನ್‌, ಕಡಿಮೆ ಬೆಲೆಯ ಲಿಕ್ಕರ್‌ಗಳನ್ನು ಮೊದಲಿಗೆ ಪೂರೈಕೆ ಮಾಡಲಾಗುತ್ತದೆ. ಗ್ರಾಹಕರು ಊಟ, ತಿಂಡಿ ಆರ್ಡರ್‌ ಮಾಡಿದಂತೆಯೇ, ಸ್ವಿಗ್ಗಿ, ಜೊಮ್ಯಾಟೋ, ಬಿಗ್‌ಬ್ಯಾಸ್ಕೆಟ್‌ ಅಪ್ಲಿಕೇಷನ್‌ಗಳ ಮೂಲಕ ಮನೆಯ ಬಾಗಿಲಿನವರೆಗೆ ಮದ್ಯವನ್ನು ಪೂರೈಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರಿಂದ ಮದ್ಯ ಪ್ರಿಯರು ಆರಾಮವಾಗಿ ಮನೆಯಲ್ಲೇ ಕುಳಿತು ಮದ್ಯ ಸೇವನೆ ಮಾಡಬಹುದಾಗಿದೆ.

“ಭಾರತವು ಆಧುನಿಕತೆಗೆ ತೆರೆದುಕೊಂಡಿದ್ದು, ಮದ್ಯದ ಕುರಿತು ಇದ್ದ ಕಲ್ಪನೆಯೇ ಬದಲಾಗಿಹೋಗಿದೆ. ಮನೆಯಲ್ಲಿ ಟಿ.ವಿ ನೋಡುತ್ತ, ಊಟ ಮಾಡುತ್ತಲೇ ವೈನ್‌ ಹೀರುವ, ಹೆಣ್ಣುಮಕ್ಕಳು ಕೂಡ ಮದ್ಯ ಸೇವನೆ ಮಾಡುವ ಪ್ರಮಾಣ ಜಾಸ್ತಿಯಾಗಿದೆ. ಇನ್ನು, ಮಳೆ, ಚಂಡಮಾರುತ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ಜನ ಮದ್ಯವನ್ನು ಮಳಿಗೆಗಳಿಗೆ ಹೋಗಿ ಖರೀದಿ ಮಾಡಲು ಆಗುವುದಿಲ್ಲ. ಇದಕ್ಕೆ ಆನ್‌ಲೈನ್‌ ಡೆಲಿವರಿಯು ಪ್ರಮುಖ ಉಪಾಯವಾಗಿದೆ” ಎಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವು ಕಡೆ ಆನ್‌ಲೈನ್‌ ಮೂಲಕ ಮದ್ಯದ ಪೂರೈಕೆ ವ್ಯವಸ್ಥೆ ಜಾರಿಗೆ ಬಂದಿತ್ತಾದರೂ ಅದು ದೇಶಾದ್ಯಂತ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ಸದ್ಯ, ದೇಶದಲ್ಲಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತ್ರ ಮದ್ಯವನ್ನು ಆನ್‌ಲೈನ್‌ ಮೂಲಕ ಹೋಮ್‌ ಡೆಲಿವರಿ ಮಾಡಲಾಗುತ್ತಿದೆ. ಇನ್ನು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case: ಮದ್ಯಪಾನ ಮಾಡಿ ಬಂದು ಅಜ್ಜಿಯನ್ನೇ ಕೊಂದ ಅಪ್ರಾಪ್ತ ಬಾಲಕ

Continue Reading

ದೇಶ

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Doda Encounter: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರೊಂದಿಗಿಗೆ ನಡೆದ ಗುಂಡಿನ ಚಕಮಕಿಯಲ್ಲಿಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತದ ಸೈನಿಕರು ಮತ್ತು ಅವರ ಕುಟುಂಬಗಳು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Doda Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Doda Encounterr) ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತದ ಸೈನಿಕರು ಮತ್ತು ಅವರ ಕುಟುಂಬಗಳು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್‌ ಗಾಂಧಿ, ಮೊದಲಿಗೆ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಳಿಕ ಬಿಜೆಪಿ ನಡೆಯನ್ನು ಕಟುವಾದ ಶಬ್ಧಗಳಲ್ಲಿ ಟೀಕಿಸಿದ್ದಾರೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ. ಒಂದರ ನಂತರ ಒಂದರಂತೆ ಇಂತಹ ಭಯಾನಕ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ಆತಂಕಕಾರಿ. ಈ ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿನ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತಿವೆ. ನಮ್ಮ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿದ್ದಾರೆʼʼ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮುಂದುವರಿದು, ʼʼಈ ಪುನರಾವರ್ತಿತ ಭದ್ರತಾ ಲೋಪಗಳಿಗೆ ಕೇಂದ್ರ ಸರ್ಕಾರವು ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ದೇಶದ್ರೋಹಿಗಳ ವಿರುದ್ಧ ಮತ್ತು ಸೈನಿಕರ ಮೇಲೆ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ದೇಶಭಕ್ತ ಭಾರತೀಯನ ಆಗ್ರಹ. ಈ ದುಃಖದ ಸಮಯದಲ್ಲಿ ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಂತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಭದ್ರತಾ ಕಾರ್ಯತಂತ್ರವನ್ನು ಎಚ್ಚರಿಕೆಯಿಂದ ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ಸುಳ್ಳು ಧೈರ್ಯ, ನಕಲಿ ನಿರೂಪಣೆಗಳ ಮೂಲಕ ರಾಷ್ಟ್ರೀಯ ಭದ್ರತೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಹೇಡಿ ಭಯೋತ್ಪಾದಕರು ನಡೆಸುತ್ತಿರುವ ಈ ಹಿಂಸಾಚಾರದ ಕೃತ್ಯಗಳಿಗೆ ಖಂಡನೆಯ ಪದಗಳು ಸಾಕಾಗುವುದಿಲ್ಲ, ಸೂಕ್ತ ಯೋಜನೆ ಅಗತ್ಯ ಎಂದು ಖರ್ಗೆ ತಿಳಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಯೋತ್ಪದಕ ದಾಳಿ ನಡೆಯುತ್ತಿದೆ ಎನ್ನುವುದನ್ನು ಸರ್ಕಾರ ತಿಳಿದುಕೊಳ್ಳಬೇಕು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಸಾಮೂಹಿಕವಾಗಿ ಹೋರಾಡಬೇಕು. ಕಾಂಗ್ರೆಸ್ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳ ಬೆಂಬಲಕ್ಕೆ ನಿಲ್ಲಲಿದೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

ʼʼದೋಡಾದಲ್ಲಿ ಹುತಾತ್ಮರಾದ ಅಧಿಕಾರಿ ಸೇರಿದಂತೆ ನಾಲ್ವರು ಸೈನಿಕರ ಕುಟುಂಬಗಳಿಗೆ ತಮ್ಮ ಹೃದಯ ಮಿಡಿಯುತ್ತದೆ. ಭಾರತ ಮಾತೆಯ ಸೇವೆಯಲ್ಲಿ ಈ ನಾಲ್ವರು ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ನಮ್ಮ ಪ್ರಾರ್ಥನೆಗಳು ಗಾಯಗೊಂಡವರೊಂದಿಗಿವೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿʼʼ ಎಂದು ಹೇಳಿದ್ದಾರೆ.

Continue Reading

ದೇಶ

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ; ಪಂಢರಪುರಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು.

VISTARANEWS.COM


on

Road Accident
Koo

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇ (Mumbai-Pune Expressway)ಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ (Road Accident). ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿದೆ. ʼʼಡೊಂಬಿವ್ಲಿಯಿಂದ ಒಟ್ಟು 42 ಪ್ರಯಾಣಿಕರು ಪಂಢರಪುರಕ್ಕೆ ತೆರಳುತ್ತಿದ್ದಾಗ ಅಡ್ನೆ ಗ್ರಾಮದ ಬಳಿ ಈ ಅಪಘಾತ ನಡೆದಿದೆʼʼ ಎಂದು ಡಿಸಿಪಿ ವಿವೇಕ್ ಪನ್ಸಾರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

“ಆಷಾಢ ಏಕಾದಶಿ ಹಿನ್ನಲೆಯಲ್ಲಿ ಭಕ್ತರು ಖಾಸಗಿ ಬಸ್ ಮೂಲಕ ಪಂಢರಪುರಕ್ಕೆ ಹೋಗುತ್ತಿದ್ದರು. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಗಾಯಗೊಂಡ 42 ಜನರನ್ನು ಎಂಜಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆʼʼ ಎಂದು ವಿವೇಕ್ ಪನ್ಸಾರೆ ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘತಾಕ್ಕೆ 6 ಮಂದಿ ಬಲಿ

ಗಾಂಧಿನಗರ: ಇತ್ತ ಗುಜರಾತ್‌ನಲ್ಲಿಯೂ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನ ಆನಂದ್ ಪಟ್ಟಣದ ಬಳಿ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ ವೇಯಲ್ಲಿ ಸೋಮವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು ಮತ್ತು ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 4.30ರ ಸುಮಾರಿಗೆ ಆನಂದ್ ಜಿಲ್ಲೆಯ ಚಿಖೋದ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಟೈರ್‌ ಬದಲಾಯಿಸಲು ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಲಾಗಿತ್ತು. ಬಸ್‌ನಿಂದ ಕೆಳಗೆ ಇಳಿದಿದ್ದ ಪ್ರಯಾಣಿಕರು ಅಲ್ಲೇ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. 

Continue Reading

ದೇಶ

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

Jitan Sahani: ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

VISTARANEWS.COM


on

Jitan Sahani
Koo

ಬಿಹಾರ: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಬಿಹಾರದಲ್ಲೂ (Bihar) ರಾಜಕೀಯ ಪ್ರೇರಿತ ಹಿಂಸಾಚಾರ ನಡೆದಿದೆ. ವಿಕಾಸಶೀಲ ಇನ್ಸಾನ್‌ ಪಕ್ಷದ (VHP) ಮುಖ್ಯಸ್ಥ ಮುಕೇಶ್‌ ಸಹಾನಿ (Mukesh Sahani) ಅವರ ತಂದೆ ಜಿತನ್‌ ಸಹಾನಿ (Jitan Sahani) ಅವರನ್ನು ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗದಲ್ಲಿರುವ ಜಿತನ್‌ ಸಹಾನಿ ಅವರ ಮನೆಗೆ ಸೋಮವಾರ (ಜುಲೈ 15) ರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಕೇಶ್‌ ಸಹಾನಿ ಅವರು ವಿಐಪಿ ಪಕ್ಷದ ಮುಖ್ಯಸ್ಥರಾಗಿದ್ದು, ಮಲ್ಲಾಹ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರು ಇದಕ್ಕೂ ಮೊದಲು ಬಿಹಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಖಾತೆ ಸಚಿವರಾಗಿದ್ದರು. ಮಲ್ಲಾಹ್‌ ಸಮುದಾಯದವರ ಬೆಂಬಲವು ಮುಕೇಶ್‌ ಸಹಾನಿ ಅವರಿಗಿದೆ. ಇದೇ ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಜುಲೈ 5ರಂದು ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಪ್ರಕರಣದ ಕುರಿತು ಈಗಲೂ ತನಿಖೆ ನಡೆಯುತ್ತಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Continue Reading
Advertisement
RCB
ಕ್ರೀಡೆ14 mins ago

RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

Gold Rate Today
ಚಿನ್ನದ ದರ19 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಆಭರಣ ಕೊಂಡುಕೊಳ್ಳುವ ಮುನ್ನ ದರ ಗಮನಿಸಿ

Karnataka assembly live hd revanna
ಪ್ರಮುಖ ಸುದ್ದಿ27 mins ago

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Assembly Session 2024
ಕರ್ನಾಟಕ34 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ37 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ53 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್55 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ1 hour ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ1 hour ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ2 hours ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ53 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌