Site icon Vistara News

Reliance Foundation: ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ

Reliance Foundation

ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿಯು, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಬಲಗೊಳಿಸುತ್ತದೆ.

ಇದನ್ನೂ ಓದಿ: Director of ED: ಜಾರಿ ನಿರ್ದೇಶನಾಲಯ ಪೂರ್ಣಾವಧಿ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಸ್ಕಾಲರ್‌ಶಿಪ್‌ಗಳು ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ, ಭವಿಷ್ಯಕ್ಕೆ ಉಪಯುಕ್ತವಾದ ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಎಲ್ಲ ವಿದ್ಯಾರ್ಥಿ ವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ ಮತ್ತು ಪದವಿ ಕಾರ್ಯಕ್ರಮಗಳ ಅವಧಿಯನ್ನು ಒಳಗೊಂಡಿರುತ್ತದೆ. ಸಮಾಜದ ಪ್ರಯೋಜನಕ್ಕಾಗಿ ದೊಡ್ಡದಾಗಿ ಯೋಚಿಸುವ, ಹಸಿರು ಮತ್ತು ಡಿಜಿಟಲ್ ಚಿಂತನೆ ಮಾಡುವ ಅಸಾಧಾರಣ ಪ್ರತಿಭೆಗಳನ್ನು ಗುರುತಿಸಲು ಮತ್ತು ಬೆಳವಣಿಗೆಗೆ ನೆರವು ನೀಡುವುದಕ್ಕಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ.

ಸಮಗ್ರವಾದ ಬೆಂಬಲ ಹಾಗೂ ಉದಾರವಾದ ಹಣಕಾಸಿನ ಅನುದಾನದ ಮೂಲಕವಾಗಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ವೃತ್ತಿಪರ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿವೇತನವು ನೆರವು ನೀಡುತ್ತದೆ. ಮೊದಲ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾಗಿದ್ದು, ಭಾರತದೊಳಗೆ ಇರುವಂಥ ಶಿಕ್ಷಣ ಸಂಸ್ಥೆಯಿಂದ ಪೂರ್ಣಾವಧಿಗೆ, ನಿಯಮಿತ ಶಿಕ್ಷಣ ಪಡೆಯುತ್ತಿರುವಂತವರು ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿರುತ್ತಾರೆ.

ಅಂಕ- ಆರ್ಥಿಕ ಸ್ಥಿತಿಯ ಮಾನದಂಡ

ರಿಲಯನ್ಸ್ ಫೌಂಡೇಷನ್ ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ನೀಡುವ ವಿದ್ಯಾರ್ಥಿ ವೇತನವು ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ವಿ ವೃತ್ತಿಪರರಾಗುವ ತಮ್ಮ ಕನಸು ನನಸಾಗಿಸಿಕೊಳ್ಳುವುದಕ್ಕೆ ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಅವರ ಸಾಮರ್ಥ್ಯವನ್ನು ಹೊರತರುವುದಕ್ಕೆ ಪ್ರಯತ್ನಿಸುತ್ತದೆ. ಪದವಿ ಕಾಲೇಜು ಶಿಕ್ಷಣಕ್ಕಾಗಿ ಅಂಕ- ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ಇದನ್ನೂ ಓದಿ: Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ಪದವಿ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ

ಈ ಅನುದಾನದ ಜತೆಗೆ ರೂ. 2 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತು ರೂ. 6 ಲಕ್ಷ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ಸ್ಕಾಲರ್‌ಶಿಪ್‌ಗಳು ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯುವುದಕ್ಕೆ, ವೃತ್ತಿಪರ ಬೆಳವಣಿಗೆ ಜತೆಗೆ ವೃತ್ತಿ ಸಲಹೆಗಾಗಿ ಉದ್ಯಮದ ನಾಯಕರು ಮತ್ತು ತಜ್ಞರ ಜತೆಗೆ ಸಂವಹನಕ್ಕೆ ಅವಕಾಶ ದೊರಕಿಸುತ್ತದೆ. ಕೌಶಲಗಳನ್ನು ಹೆಚ್ಚಿಸಲು ಕಾರ್ಯಾಗಾರಗಳು, ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳ ಮೂಲಕ ನಾಯಕತ್ವದ ಅಭಿವೃದ್ಧಿ ಅವಕಾಶಗಳು, ಜತೆಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯೊಂದಿಗೆ ಸೇವೆ ಹಾಗೂ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.

ಶಿಕ್ಷಣ ಎಂಬುದು ರಿಲಯನ್ಸ್ ಫೌಂಡೇಷನ್‌ನ ಮಾಡುತ್ತಿರುವುದರಲ್ಲಿಯೇ ಅತ್ಯಂತ ಪ್ರಮುಖ ಕೆಲಸವಾಗಿದೆ. 2022ರ ಡಿಸೆಂಬರ್ ನಲ್ಲಿ ರಿಲಯನ್ಸ್ ಸಂಸ್ಥಾಪಕ-ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ರಿಲಯನ್ಸ್ ಫೌಂಡೇಷನ್‌ನ ಹೆಚ್ಚುವರಿ ಬದ್ಧತೆಯಾಗಿ 50,000 ಸ್ಕಾಲರ್‌ಶಿಪ್‌ಗಳನ್ನು ಘೋಷಿಸಿದರು, ಇದು ಭಾರತದ ಅತಿದೊಡ್ಡ ಖಾಸಗಿ ವಿದ್ಯಾರ್ಥಿವೇತನವಾಗಿದೆ. ಅಂದಿನಿಂದ, ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇಲ್ಲಿಯವರೆಗೆ, ರಿಲಯನ್ಸ್ 23,000 ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಒದಗಿಸಿದೆ. ರಿಲಯನ್ಸ್ ಫೌಂಡೇಷನ್‌ನಿಂದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿವೇತನ ಪಡೆದಂತ ಪ್ರತಿಭಾವಂತರು ಲಾಭದಾಯಕ ವೃತ್ತಿಗಳು ಮತ್ತು ಶೈಕ್ಷಣಿಕ ಹಾಗೂ ವೃತ್ತಿಪರ ಪ್ರಯಾಣ ಪ್ರಾರಂಭಿಸಿದ್ದಾರೆ. ಈ ವರ್ಷದ ಅರ್ಜಿ ಆಹ್ವಾನವು ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತೊಂದು ಸಮೂಹಕ್ಕೆ ಈ ಲಾಭದಾಯಕ ಪ್ರಯಾಣದಿಂದ ಪ್ರಯೋಜನ ಪಡೆಯುವ ಅವಕಾಶವನ್ನು ದೊರಕಿಸುತ್ತದೆ.

ಇದನ್ನೂ ಓದಿ: Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು www.scholarships.reliancefoundation.org ಈ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ವೈಯಕ್ತಿಕ ಹೇಳಿಕೆಗಳು ಮತ್ತು ಸಂದರ್ಶನಗಳು ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ. ಅರ್ಜಿಗಳನ್ನು ಸಲ್ಲಿಸುವುದಕ್ಕೆ 6ನೇ ಅಕ್ಟೋಬರ್ 2024 ಅಂತಿಮ ದಿನಾಂಕವಾಗಿದೆ ಎಂದು ತಿಳಿಸಿದೆ.

Exit mobile version