ತಮಿಳುನಾಡು: ಇಲ್ಲಿನ ಕಲ್ಲಕುರುಚಿಯ ಖಾಸಗಿ ಶಾಲೆಯಲ್ಲಿ 12ನೇ ತರಗತಿ (School Girl Suicide) ವಿದ್ಯಾರ್ಥಿಯೊಬ್ಬಳ ಮೃತದೇಹ ಬುಧವಾರ ಹಾಸ್ಟೆಲ್‌ನಲ್ಲಿ ಪತ್ತೆಯಾಗಿದೆ. ಶಾಲಾ ವಿದ್ಯಾರ್ಥಿನಿ ಸಾವಿಗೆ ಶಾಲಾ ಶಿಕ್ಷಕರ ಕಿರುಕುಳವೇ ಕಾರಣ ಎನ್ನಲಾಗುತ್ತಿದ್ದು, ಸಾವಿರಾರು ನಾಗರಿಕರು ತೀವ್ರ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಶಾಲಾ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ತಿರುಗಿ ಬಿದ್ದಿದ್ದಾರೆ. 2 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಶಾಲೆ ಮುಂದೆ ಜಮಾಯಿಸಿ ಧಿಕ್ಕಾರ ಕೂಗುತ್ತಾ, ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಳಕ್ಕೆ ತಳ್ಳಿ ಆಕ್ರೋಶ ಹೊರಹಾಕಿದರು.
ಸಮೀಪದ ಚಿನ್ನಸೇಲಂನಲ್ಲಿರುವ ಶಾಲೆಯೊಂದರ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು, ಸಂಸ್ಥೆಯ ಆವರಣದಲ್ಲಿ ನಿಲ್ಲಿಸಿದ್ದ ಹತ್ತಾರು ಬಸ್‌ಗಳಿಗೆ ಬೆಂಕಿ ಹಚ್ಚಿದರು. ಇತ್ತ ಹಿಂಸಾಚಾರವನ್ನು ನಿಯಂತ್ರಿಸಲು ಕಲ್ಲಕುರುಚಿ ಜಿಲ್ಲಾ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಇದನ್ನೂ ಓದಿ | ನನ್ನ ಕಾಳಿ ವಿಲಕ್ಷಣ ದೇವಿ, ಹಿಂದುತ್ವ ಕಿತ್ತೊಗೆಯುತ್ತಾಳೆ; ಪೋಸ್ಟರ್ ಸಮರ್ಥಿಸಿಕೊಂಡ ಲೀನಾ
ಈ ವೇಳೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲುತೂರಾಟ ನಡೆಸಿದರು. ಘಟನೆಯಲ್ಲಿ ಡಿಐಜಿ ಎಂ.ಪಾಂಡಿಯನ್ ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಡಿಜಿಪಿಗೆ ತಿಳಿಸಿದ್ದಾರೆ.
ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿರುವ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ರಸ್ತೆ ತಡೆ ನಡೆಸಿ, ವಿದ್ಯಾರ್ಥಿನಿಯ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಈ ನಡುವೆ ಬಾಲಕಿಯ ಪೋಷಕರು, ಹಿಂಸಾಚಾರದಲ್ಲಿ ಪಾಲ್ಗೊಳ್ಳದಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದರು.
ಇದನ್ನೂ ಓದಿ | ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ರೂಪದರ್ಶಿ