Site icon Vistara News

Ram Mandir : ಮುಂಬೈ ಬಳಿ ಎರಡು ಸಮುದಾಯಗಳ ನಡುವೆ ಮಾರಾಮಾರಿ; ಐದು ಮಂದಿಯ ಸೆರೆ

Ram Mandir

ಮುಂಬೈ: ಅಯೋಧ್ಯೆ ರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದ ಘಟನೆ ಮುಂಬೈನ ಹೊರವಲಯದಲ್ಲಿ ನಡೆದಿದೆ. ಭಾನುವಾರ ರಾತ್ರಿ 10:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂರು ಕಾರುಗಳು ಮತ್ತು ಹಲವಾರು ಮೋಟಾರ್ ಸೈಕಲ್​​ಗಳಲ್ಲಿ ಜನರ ಗುಂಪು ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ ಹಲವರ ಮೇಲೆ ಕೇಸ್ ದಾಖಲಾಗಿದ್ದು ಐವರನ್ನು ಬಂಧಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನಾ ಹಿನ್ನೆಲೆಯಲ್ಲಿ ಭಗವಾನ್ ರಾಮನನ್ನು ಸ್ತುತಿಸುವ ಘೋಷಣೆಗಳನ್ನು ಕೂಗುತ್ತಿದ್ದರು. ರ್ಯಾಲಿಯಲ್ಲಿ ಭಾಗವಹಿಸಿದ್ದ ಕೆಲವರು ಪಟಾಕಿಗಳನ್ನು ಸಿಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ದೊಣ್ಣೆ ಹಿಡಿದುಕೊಂಡು ಹೊರಬಂದ ಸ್ಥಳೀಯರೊಂದಿಗೆ ವಾಗ್ವಾದಕ್ಕೆ ಕಾರಣವಾಯಿತು. ಅದು ಘರ್ಷಣೆಯಾಗಿ ಮುಂದುವರಿಯಿತು. ಈ ವೇಳೆ ವಾಹನಗಳಲ್ಲಿದ್ದ ಜನರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಪ್ರದೇಶದಲ್ಲಿ ಭಾರಿ ಭದ್ರತಾ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Ayodhya Ram Mandir: ಇಂದಿನ `ಮುಖ್ಯ ಯಜಮಾನ’ ಮೋದಿ; ಹಾಗೆಂದರೇನು?

ಸ್ಥಳೀಯ ಪೊಲೀಸ್ ಸಿಬ್ಬಂದಿಯಲ್ಲದೆ, ಗಲಭೆ ನಿಯಂತ್ರಣ ಪೊಲೀಸ್ (ಸಿಆರ್​ಪಿ ) ತುಕಡಿಯನ್ನು ಸಹ ನಿಯೋಜಿಸಲಾಗಿದೆ. ನಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದ ಮೇಲೆ, ದಾಳಿಕೋರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಅಪರಾಧವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಈವರೆಗೆ ಆರು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಇತರ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಈ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿ ಹೇಳಿದರು.

Exit mobile version