ದೇಶ
SEBI Fine: 2 ಕಂಪನಿ, 7 ಜನಕ್ಕೆ 2.46 ಕೋಟಿ ರೂ. ದಂಡ ವಿಧಿಸಿದ ಸೆಬಿ; ಏನಿದಕ್ಕೆ ಕಾರಣ?
SEBI Fine: ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು ಎರಡು ಕಂಪನಿ ಹಾಗೂ ಏಳು ಪ್ರಮೋಟರ್‌ಗಳಿಗೆ ಭಾರಿ ದಂಡ ವಿಧಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿದೆ.
ನವದೆಹಲಿ: ನಿಯಂತ್ರಕ ಮಾನದಂಡಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಎರಡು ಕಂಪನಿಗಳು ಹಾಗೂ ಏಳು ವ್ಯಕ್ತಿಗಳಿಗೆ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (Securities and Exchange Board of India-SEBI) 2.46 ಕೋಟಿ ರೂ. ದಂಡ (SEBI Fine) ವಿಧಿಸಿದೆ.
ಸೆಬಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ತಳ್ವಾಲ್ಕರ್ಸ್ ಬೆಟರ್ ವ್ಯಾಲ್ಯೂ ಫಿಟ್‌ನೆಸ್ ಲಿಮಿಟೆಡ್ ಆ್ಯಂಡ್ (TBVFL) ಹಾಗೂ ತಳ್ವಾಲ್ಕರ್ಸ್ ಹೆಲ್ತ್‌ಕ್ಲಬ್ಸ್ ಲಿಮಿಟೆಡ್ (THL) ಕಂಪನಿಗಳಿಗೆ ದಂಡ ವಿಧಿಸಲಾಗಿದೆ. ಇದರ ಪ್ರಮೋಟರ್‌ಗಳಾದ ಗಿರೀಶ್ ತಳ್ವಾಲ್ಕರ್, ಪ್ರಶಾಂತ್ ತಳ್ವಾಲ್ಕರ್, ಮಧುಕರ್ ತಳ್ವಾಲ್ಕರ್, ವಿನಾಯಕ್ ಗಾವಂಡೆ, ಅನಂತ್ ಗಾವಂಡೆ, ಹರ್ಷ ಬಟ್ಕಳ್ ಹಾಗೂ ಅನಂತ್ ಗಾವಂಡೆ ಅವರೂ ಸೇರಿ ದಂಡ ಪಾವತಿಸಬೇಕಿದೆ.
ಮೋಸ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಗಳ ನಿಯಂತ್ರಣ (PFUTP) ಹಾಗೂ ಕಂಪನಿಯ ಲೆಕ್ಕಪತ್ರ ಬಹಿರಂಗಪಡಿಸುವಿಕೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮ ಮುಂದುವರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಂಪನಿ ಹಾಗೂ ಅದರ ಏಳು ಪ್ರಮೋಟರ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Adani-Hindenburg case: ಅದಾನಿ ಷೇರು ವ್ಯವಹಾರ ತನಿಖೆ ಪೂರ್ಣ! ಸುಪ್ರೀಂಗೆ ಸೆಬಿ ಮಾಹಿತಿ, ಕೆಲವು ಕೇಸ್‌ನಲ್ಲಿ ಕ್ರಮ ಸಾಧ್ಯತೆ!
ಯಾರಿಗೆ ಎಷ್ಟು ದಂಡ?
ಗಿರೀಶ್ ತಳ್ವಾಲ್ಕರ್, ಪ್ರಶಾಂತ್ ತಳ್ವಾಲ್ಕರ್, ಅನಂತ್ ಗಾವಂಡೆ ಹಾಗೂ ಹರ್ಷ ಭಟ್ಕಳ್ ಅವರಿಗೆ ತಲಾ 36 ಲಕ್ಷ ರೂ., ಟಿಬಿವಿಎಫ್‌ಎಲ್, ವಿನಾಯಕ್ ಗಾವಂಡೆ ಹಾಗೂ ಮಧುಕರ್ ತಳ್ವಾಲ್ಕರ್ ಅವರಿಗೆ ತಲಾ 24 ಲಕ್ಷ ರೂ., ಗಿರೀಶ್ ನಾಯಕ್ ಅವರಿಗೆ 18 ಹಾಗೂ ಟಿಎಚ್‌ಎಲ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ, ಏಳೂ ಜನರಿಗೂ 18 ತಿಂಗಳು ಸೆಬಿ ನಿಯಂತ್ರಣದಲ್ಲಿರುವ ಯಾವುದೇ ಕಂಪನಿಯ ಭಾಗವಾಗುವುದರಿಂದ ನಿಷೇಧಿಸಿದೆ.
ದೇಶ
India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ
India At UNGA: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರು ಕಾಶ್ಮೀರ ವಿಷಯ ಪ್ರಸ್ತಾಪಿಸಿದರು. ಕಾಶ್ಮೀರದಲ್ಲಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು ಎಂದಿದ್ದರು. ಹಾಗಾಗಿ, ಭಾರತ ಸರಿಯಾಗಿಯೇ ಪ್ರತ್ಯುತ್ತರ ನೀಡಿದೆ.
ನ್ಯೂಯಾರ್ಕ್: ವಿಶ್ವಸಂಸ್ಥೆ ಸಾಮಾನ್ಯ ಸಭೆಯ (UNGA) 78ನೇ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರದ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರಿಗೆ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆ ಭಾರತದ (India At UNGA) ಕಾರ್ಯದರ್ಶಿ ಪೆತಲ್ ಗೆಹ್ಲೋಟ್, “ಪಾಕಿಸ್ತಾನವು ಭಾರತದ ಅವಿಭಾಜ್ಯ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಹಾಗೂ ಲಡಾಕ್ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಚಾಟಿ ಬೀಸಿದ್ದಾರೆ.
“ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಚಾಳಿಯನ್ನು ಪಾಕಿಸ್ತಾನ ಬಿಡಬೇಕು. ಪಾಕಿಸ್ತಾನವು ತನ್ನ ದೇಶದಲ್ಲಿ ಆಗುತ್ತಿರುವ ಮಾನವ ಹಕ್ಕುಗಳ ದಮನದ ವಿಷಯವನ್ನು ಜಗತ್ತಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾವಾಗಲೂ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರ ವಿಷಯ ಪ್ರಸ್ತಾಪಿಸಿದೆ. ಆದರೆ, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ನೆರೆರಾಷ್ಟ್ರವು ಮೊದಲು ತನ್ನ ದೇಶದ ಹುಳುಕನ್ನು ಸರಿಪಡಿಸಿಕೊಳ್ಳಬೇಕು” ಎಂದು ಪೆತಲ್ ಗೆಹ್ಲೋಟ್ ಹೇಳಿದ್ದಾರೆ.
#WATCH | First Secretary at United Nations for 2nd Committee of UNGA, Petal Gahlot says "Pakistan has become a habitual offender when it comes to misusing this August forum to peddle baseless and malicious propaganda against India. Member states of the United Nations and other… pic.twitter.com/eIyynFFa1Q
— ANI (@ANI) September 23, 2023
“ಪಾಕಿಸ್ತಾನವು ಭಾರತದ ವಿಚಾರದಲ್ಲಿ ಮೂಗು ತೂರಿಸುವ ಬದಲು ಗಡಿ ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ತೆಗೆದುಕೊಳ್ಳಬೇಕು. ಉಗ್ರರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ಬಿಡಬೇಕು. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇಂತಹ ಅನಿಷ್ಟಗಳನ್ನು ಪಾಕಿಸ್ತಾನ ನಿರ್ಮೂಲನೆ ಮಾಡಬೇಕು” ಎಂದು ಆಗ್ರಹಿಸಿದರು.
ಇದನ್ನೂ ಓದಿ: India retaliates to Pak | ಪ್ರಧಾನಿ ಮೋದಿ ಕಟುಕ ಎಂದ ಭುಟ್ಟೋಗೆ 1971ರ ನರಮೇಧ ನೆನಪಿಸಿ, ತಿರುಗೇಟು ನೀಡಿದ ಭಾರತ!
ಪಾಕ್ ಪ್ರಧಾನಿ ಹೇಳಿದ್ದೇನು?
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪಾಕ್ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್, “ಭಾರತ ಹಾಗೂ ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಜಮ್ಮು-ಕಾಶ್ಮೀರವೇ ನಿರ್ಣಾಯಕವಾಗಿದೆ. ಇದರಿಂದ ಉಭಯ ದೇಶಗಳ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಹಾಗೆಯೇ, ಜಮ್ಮು-ಕಾಶ್ಮೀರದಲ್ಲಿ ವಿಶ್ವಸಂಸ್ಥೆ ಮಿಲಿಟರಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು. ಹಾಗೆಯೇ, ಭಾರತ ಹಾಗೂ ಪಾಕಿಸ್ತಾನ ಮಾತುಕತೆಗೆ ಸಂಬಂಧಿಸಿದಂತೆ ಜಗತ್ತಿನ ರಾಷ್ಟ್ರಗಳು ಭಾರತಕ್ಕೆ ಮನವರಿಕೆ ಮಾಡಬೇಕು” ಎಂದು ಹೇಳಿದ್ದರು.
ದೇಶ
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
Kamal Haasan: ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಳಿಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಟ ಕಮಲ್ ಹಾಸನ್ ಅವರು ಉದಯನಿಧಿ ಸ್ಟಾಲಿನ್ ಪರ ನಿಂತಿದ್ದಾರೆ.
ಚೆನ್ನೈ: “ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದ ಹಾಗೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ ನೀಡಿ ಭಾರಿ ಟೀಕೆಗೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರಿಗೆ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೂಡ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ, ನಟ, ಮಕ್ಕಳ್ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಉದಯನಿಧಿ ಸ್ಟಾಲಿನ್ ಪರ ನಿಂತಿದ್ದಾರೆ. “ಸನಾತನ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ‘ಚಿಕ್ಕ ಮಗು’ ಉದಯನಿಧಿ ಸ್ಟಾಲಿನ್ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.
“ಸನಾತನ ಧರ್ಮದ ಕುರಿತಂತೆ ಇನ್ನೂ ಚಿಕ್ಕವನಾಗಿರುವ (Young Kid) ಉದಯನಿಧಿ ಸ್ಟಾಲಿನ್ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಎಲ್ಲರೂ ಅವನ ಮೇಲೆ ಮುಗಿಬಿದ್ದಿದ್ದಾರೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಅವರು ಯಾವುದೇ ಪಕ್ಷ ಅಥವಾ ಸಂಘಟನೆಯ ಹೆಸರು ಹೇಳಿಲ್ಲ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಬಳಿಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಳಿಬರುತ್ತಿರುವ ಆಕ್ರೋಶದ ಕುರಿತು ಕಮಲ್ ಹಾಸನ್ ಅವರು ಸಮಾರಂಭವೊಂದರಲ್ಲಿ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"Young child is being targeted…," Kamal Haasan on 'Sanatana Dharma' row
— ANI Digital (@ani_digital) September 23, 2023
Read @ANI Story | https://t.co/4uFyHSXVep#SanatanaDharma #KamalHaasan #UdhayanidhiStalin pic.twitter.com/ylMZdZ0X8Z
ಸನಾತನ ಕುರಿತೂ ಕಮಲ್ ಹಾಸನ್ ಪ್ರತಿಕ್ರಿಯೆ
ಸನಾತನ ಧರ್ಮದ ಕುರಿತು ಕೂಡ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. “ನಾವೆಲ್ಲ ಪೆರಿಯಾರ್ ಅವರಿಂದ ಸನಾತನ ಎಂಬ ಪದವನ್ನು ಕೇಳಿದ್ದೇವೆ. ಪೆರಿಯಾರ್ ಅವರು ವಾರಾಣಸಿಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ತಿಲಕ ಇಟ್ಟುಕೊಂಡು ಪೂಜೆ ಮಾಡುತ್ತಿದ್ದರು. ಅಂತಹವರು ಎಲ್ಲವನ್ನೂ ಬಿಟ್ಟು ಸಮಾಜ ಸುಧಾರಣೆಗೆ ಇಳಿದರು. ಹಾಗಂತ, ಪೆರಿಯಾರ್ ಅವರನ್ನು ಡಿಎಂಕೆ ಸೇರಿ ಯಾವುದೇ ಪಕ್ಷವು ಸ್ವಂತ ಮಾಡಿಕೊಳ್ಳುವ ಹಾಗಿಲ್ಲ. ಅವರನ್ನು ಇಡೀ ತಮಿಳುನಾಡು ಸ್ವಂತ ಮಾಡಿಕೊಂಡಿದೆ” ಎಂದರು.
ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ
ಏನು ಹೇಳಿದ್ದರು ಉದಯನಿಧಿ ಸ್ಟಾಲಿನ್?
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.
ದೇಶ
India Canada Row: ನಿಜ್ಜರ್ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ
India Canada Row: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಮಾಡಿದ ಆರೋಪಕ್ಕೆ ಸಾಕ್ಷ್ಯ ನೀಡದ ಜಸ್ಟಿನ್ ಟ್ರುಡೋ ಈಗ ಹೊಸ ರಾಗ ತೆಗೆದಿದ್ದಾರೆ. ಭಾರತಕ್ಕೆ ಮೊದಲೇ ಈ ಕುರಿತು ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಆದರೆ, ಯಾವ ಸಾಕ್ಷ್ಯ ನೀಡಲಾಗಿದೆ ಎಂಬುದನ್ನು ಅವರು ಹೇಳಿಲ್ಲ. ಹಾಗಾಗಿ, ಇದು ಬಿಕ್ಕಟ್ಟು ಬಿಗಡಾಯಿಸಲು ಕಾರಣವಾಗಿದೆ.
ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರದಲ್ಲಿ ಸಾಕ್ಷ್ಯಾಧಾರಗಳನ್ನೂ ಕೊಡದೆ ಸುಖಾಸುಮ್ಮನೆ ಭಾರತದ ವಿರುದ್ಧ ಆರೋಪ (India Canada Row) ಮಾಡುತ್ತಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಈಗ ಹೊಸ ರಾಗ ತೆಗೆದಿದ್ದಾರೆ. “ನಿಜ್ಜರ್ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಲವು ವಾರಗಳ ಹಿಂದೆಯೇ ‘ನಂಬಲರ್ಹ ಆರೋಪಗಳ’ ಕುರಿತು (Credible Allegations) ಮಾಹಿತಿ ನೀಡಿದ್ದೇವೆ” ಎಂದು ಹೇಳಿರುವುದು ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟನ್ನು ಮತ್ತಷ್ಟು ಬಿಗಿಗೊಳಿಸಿದೆ.
“ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ನಾನು ಸೋಮವಾರ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್‌ಸ್ಕಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸುವ ವೇಳೆ ಜಸ್ಟಿನ್ ಟ್ರುಡೋ ಹೇಳಿದ್ದಾರೆ.
ಜಸ್ಟಿನ್ ಟ್ರುಡೋ ಆರೋಪ
#WATCH | On the India-Canada row, Canadian PM Justin Trudeau says, "In regards to India, Canada has shared the credible allegations with India. We did that many weeks ago. We are there to work constructively with India and we hope that they engage with us so that we can get to… pic.twitter.com/lpgAwKfSdN
— ANI (@ANI) September 22, 2023
ಇದರೊಂದಿಗೆ ಭಾರತಕ್ಕೆ ನಾವು ಈಗಾಗಲೇ ಸಾಕ್ಷ್ಯ ನೀಡಿದ್ದೇವೆ, ಆದರೆ ಭಾರತ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬಂತೆ ಜಸ್ಟಿನ್ ಟ್ರುಡೋ ಬಿಂಬಿಸಿದ್ದಾರೆ. ಆದರೆ, ಅವರು ಬೇರೊಂದು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದಾರೆ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.
ಇದನ್ನೂ ಓದಿ: India Canada Row: ನಿಜ್ಜರ್ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ
ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದಾರೆ. ಮತ್ತೊಂದೆಡೆ, ಜಸ್ಟಿನ್ ಟ್ರುಡೋ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ, ತನಿಖೆಗೆ ಭಾರತ ಸಹಕಾರ ನೀಡಬೇಕು ಎಂದಿದೆ. ಆದರೆ, ಸರಿಯಾದ ಸಾಕ್ಷ್ಯಾಧಾರ ಬೇಕು ಎಂದು ಭಾರತ ಸ್ಪಷ್ಟಪಡಿಸಿದೆ.
ದೇಶ
India Canada Row: ನಿಜ್ಜರ್ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ
India Canada Row: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ ನಿಜ್ಜರ್‌ನನ್ನು ಕಳೆದ ಜೂನ್ 18ರಂದು ಕೆನಡಾದಲ್ಲಿ ಹತ್ಯೆ ಮಾಡಲಾಗಿದೆ. ಈತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ.
ನವದೆಹಲಿ: ಭಾರತ ಹಾಗೂ ಕೆನಡಾ ಬಿಕ್ಕಟ್ಟು ದಿನೇದಿನೆ ಉಲ್ಬಣವಾಗುತ್ತಿರುವ ಬೆನ್ನಲ್ಲೇ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಚರ್ಚೆ ಜೋರಾಗಿವೆ. ಒಂದೆಡೆ, ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂಬ ಆರೋಪಕ್ಕೆ (India Canada Row) ಜಸ್ಟಿನ್ ಟ್ರುಡೋ (Justin Trudeau) ಸಾಕ್ಷ್ಯ ನೀಡತ್ತಿಲ್ಲ. ಮತ್ತೊಂದೆಡೆ, ಭಾರತದ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲಿಸುತ್ತಿಲ್ಲ. ಇದರ ಬೆನ್ನಲ್ಲೇ, ಭಾರತವು ಕೆನಡಾಗೆ ತಿರುಗೇಟು ನೀಡಿದೆ. “ಹರ್ದೀಪ್ ಸಿಂಗ್ ನಿಜ್ಜರ್ ಒಬ್ಬ ಕೊಲೆಗಾರನೇ ಹೊರತು, ಧಾರ್ಮಿಕ ನಾಯಕನಲ್ಲ” ಎಂದು ತಿಳಿಸಿದೆ.
ಹರ್ದೀಪ್ ಸಿಂಗ್ ನಿಜ್ಜರ್ ಒಬ್ಬ ಮಹಾನ್ ವ್ಯಕ್ತಿ ಎಂಬಂತೆ ಕೆನಡಾ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದ ಗುಪ್ತಚರ ಇಲಾಖೆಯು ಕೆನಡಾಗೆ ತಿರುಗೇಟು ನೀಡಿದೆ. “ಹರ್ದೀಪ್ ಸಿಂಗ್ ನಿಜ್ಜರ್ ಖಲಿಸ್ತಾನ ಕಮಾಂಡೋ ಫೋರ್ಸ್ (KCF) ಸದಸ್ಯನಾಗಿದ್ದಾಗ ಜನರ ಹತ್ಯೆಯಲ್ಲಿ ತೊಡಗಿದ್ದ. ಆತ 1980ರ ದಶಕದ ಕೊನೆ ಹಾಗೂ 1990ರ ದಶಕದ ಆರಂಭದಲ್ಲಿ ಪಂಜಾಬ್‌ನಲ್ಲಿ 200 ಜನರ ಕೊಲೆಯಲ್ಲಿ ಭಾಗಿಯಾಗಿದ್ದ. ಆತ ಮತ್ತೊಬ್ಬ ಗ್ಯಾಂಗ್‌ಸ್ಟರ್ ಗುರ್ನೆಕ್ ಸಿಂಗ್ ಸಹಚರನಾಗಿದ್ದ” ಎಂದು ಗುಪ್ತಚರ ಇಲಾಖೆಯು ಹರ್ದೀಪ್ ಸಿಂಗ್ ನಿಜ್ಜರ್‌ನ ಬಣ್ಣ ಬಯಲು ಮಾಡಿದೆ.
ಇದನ್ನೂ ಓದಿ: India Canada Row: ಉಗ್ರರ ಸುರಕ್ಷಿತ ತಾಣವಾಗುತ್ತಿರುವ ಕೆನಡಾ! ಭಾರತದ ತೀಕ್ಷ್ಣ ಪ್ರತಿಕ್ರಿಯೆ, ಪಾಕ್‌ಗೆ ಹೋಲಿಸಿತೇ ಸರ್ಕಾರ?
ಜೂನ್ 18ರಂದು ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ, ಭಾರತದ ಏಜೆಂಟರೇ ಹತ್ಯೆ ಮಾಡಿದ್ದಾರೆ ಎಂದು ಜಸ್ಟಿನ್ ಟ್ರುಡೋ ಆರೋಪಿಸಿದ್ದಾರೆ. ಆದರೆ, ಅವರು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದಾರೆ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.
ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದಾರೆ.
-
ಪ್ರಮುಖ ಸುದ್ದಿ16 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ22 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ6 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್19 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ17 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ17 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಕರ್ನಾಟಕ12 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಉಡುಪಿ15 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ