Sexual abuse: ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಕೇಸ್‌ ತೆಗೆದುಕೊಳ್ಳಲು ವಕೀಲರ ಹಿಂದೇಟು-ಆ.24ರಂದು ಬಂದ್‌ಗೆ ಕರೆ - Vistara News

ದೇಶ

Sexual abuse: ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಕೇಸ್‌ ತೆಗೆದುಕೊಳ್ಳಲು ವಕೀಲರ ಹಿಂದೇಟು-ಆ.24ರಂದು ಬಂದ್‌ಗೆ ಕರೆ

sexual abuse: ಹೀನ ಕೃತ್ಯ ಖಂಡಿಸಿ ಮತ್ತು ಮಹಿಳಾ ಸುರಕ್ಷತೆಗಾಗಿ ಮಹಾ ವಿಕಾಸ್‌ ಅಗಾಡಿ ಆ.24ರಂದು ಮಹರಾಷ್ಟ್ರ ಬಂದ್‌ಗೆ ಕರೆ ನೀಡಿದೆ. MVA ಯ ಸಭೆಯಲ್ಲಿ, ಕಾಂಗ್ರೆಸ್, ಶಿವಸೇನೆ (UBT) ಮತ್ತು NCP ಮೂರು ಪಕ್ಷಗಳ ನಾಯಕರು ಭಾಗಿಯಾಗಿ ಬದ್ಲಾಪುರ ಘಟನೆ ಮತ್ತು ರಾಜ್ಯದ ಒಟ್ಟಾರೆ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಚರ್ಚಿಸಿದರು.

VISTARANEWS.COM


on

sexual abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಥಾಣೆ: ಖಾಸಗಿ ಶಾಲೆಯ ನರ್ಸರಿ ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ(Sexual abuse) ಪ್ರಕರಣ ಮಹಾರಾಷ್ಟ್ರದ ಬದ್ಲಾಪುರ(Badlapur)ದಲ್ಲಿ ಉದ್ನಿಗ್ನ ಪ್ರತಿಸ್ಥಿತಿಯನ್ನು ನಿರ್ಮಿಸಿದೆ. ನಿನ್ನೆ ನಡೆದ ಪ್ರತಿಭಟನೆ ಹಿಂಸಾ ರೂಪ ಪಡೆದುಕೊಂಡ ಕಾರಣ ಇಂದೂ ಕೂಡ ಥಾಣೆ(Thane) ಜಿಲ್ಲೆಯಾದ್ಯಂತ ಇಂಟರ್ನೆಟ್‌ ಸೇವೆ(Internet services) ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಶಾಲಾ ಕಾಲೇಜು ಬಂದ್‌ ಮಾಡಲಾಗಿತ್ತು. ಮತ್ತೊಂದೆಡೆ ಆರೋಪಿ ಅಕ್ಷಯ್‌ ಶಿಂಧೆಯ ಕೇಸ್‌ ಅನ್ನು ಯಾವ ವಕೀಲರೂ ತೆಗೆದುಕೊಳ್ಳದಂ,ತೆ ಕಲ್ಯಾಣ್‌ ಬಾರ್‌ ಅಸೋಸಿಯೇಶನ್‌ ನಿರ್ಧರಿಸಿದೆ.

ಆ.24ರಂದು ಬಂದ್‌ಗೆ ಕರೆ

ಇನ್ನು ಈ ಹೀನ ಕೃತ್ಯ ಖಂಡಿಸಿ ಮತ್ತು ಮಹಿಳಾ ಸುರಕ್ಷತೆಗಾಗಿ ಮಹಾ ವಿಕಾಸ್‌ ಅಗಾಡಿ ಆ.24ರಂದು ಮಹರಾಷ್ಟ್ರ ಬಂದ್‌ಗೆ ಕರೆ ನೀಡಿದೆ. MVA ಯ ಸಭೆಯಲ್ಲಿ, ಕಾಂಗ್ರೆಸ್, ಶಿವಸೇನೆ (UBT) ಮತ್ತು NCP ಮೂರು ಪಕ್ಷಗಳ ನಾಯಕರು ಭಾಗಿಯಾಗಿ ಬದ್ಲಾಪುರ ಘಟನೆ ಮತ್ತು ರಾಜ್ಯದ ಒಟ್ಟಾರೆ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಚರ್ಚಿಸಿದರು.

ಸ್ಥಳೀಯ ಶಾಲೆಯೊಂದರಲ್ಲಿ ಅಟೆಂಡರ್‌ನಿಂದ ನರ್ಸರಿ ತರಗತಿಯ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ಮಂಗಳವಾರ ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ಕೊನೆಗೆ ಈ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಉದ್ರಿಕ್ತ ಪ್ರತಿಭಟನಾಕಾರರು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಈ ಘಟನೆಯು ಆಗಸ್ಟ್ 12-13, 2024 ರಂದು ನಡೆದಿದ್ದು, ಬದ್ಲಾಪುರದ ಶಾಲೆಯ ನರ್ಸರಿ ತರಗತಿಗಳಲ್ಲಿ ಓದುತ್ತಿರುವ ಇಬ್ಬರು ನಾಲ್ಕು ವರ್ಷದ ಬಾಲಕಿಯರ ಮೇಲೆ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಹುಡುಗಿಯರ ಶೌಚಾಲಯದ ಒಳಗೆ ತೆರಳಿದಾಗ ಕಿಡಿಗೇಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, 2024 ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆಯನ್ನು ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Sexual Abuse : ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಹೆಣ್ಣು ಮಗುವನ್ನುಎಳೆದೊಯ್ದು ಅತ್ಯಾಚಾರ ಎಸಗಿದ ಪಾಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

Champai Soren: ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಚಂಪೈ, ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ” ಎಂದು ಹೇಳಿದ್ದಾರೆ.

VISTARANEWS.COM


on

Champai Soren
Koo

ನವದೆಹಲಿ: ಸ್ವಪಕ್ಷದ ಬಗ್ಗೆ ತೀವ್ರ ಬೇಸರಗೊಂಡು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಬಲವಾಗಿ ಕೇಳುತ್ತಿರುವ ಬೆನ್ನಲ್ಲೇ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ (Jharkhand Mukti Morcha-JMM)ದ ಹಿರಿಯ ನಾಯಕ ಚಂಪೈ ಸೊರೆನ್ (Champai Soren) ಹೊಸ ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ. ಚಂಪೈ ಸೊರೆನ್ ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಚಂಪೈ, ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಮಾಡಿರುವ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ದಾರೆ.ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆಯನ್ನು ಸ್ಥಾಪನೆ ಮತ್ತು ಮೂರನೆಯದಾಗಿ, ನಾನು ಈ ಹಾದಿಯಲ್ಲಿ ಮತ್ತೊಬ್ಬ ಜೊತೆಗಾರನನ್ನು ಹುಡುಕಿಕೊಳ್ಳುವುದು(ಪರೋಕ್ಷವಾಗಿ ಬಿಜೆಪಿ ಸೇರ್ಪಡೆ) ಆ ದಿನದಿಂದ ಇಂದಿನವರೆಗೆ ಮತ್ತು ಮುಂಬರುವ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯವರೆಗೆ, ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಪೋಸ್ಟ್‌ ಮಾಡಿದ್ದರು.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ. ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ. ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

Continue Reading

ದೇಶ

PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Narendra Modi: ಸೆ.17ರಂದು ತಮ್ಮ 74ನೇ ಹುಟ್ಟುಹಬ್ಬ ಆಚರಿಸುತ್ತಿರುವ ಮೋದಿ ಅಧಿಕಾರಾವಧಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್‌ ಸ್ವಾಮಿ, ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅಧಿಕಾರ ಕಳೆದುಕೊಳ್ಳುವ ಬಗ್ಗೆ ಮತ್ತೊಮ್ಮೆ ಚರ್ಚೆ ರಾಜಕೀಯ ವಲಯದಲ್ಲಿ ಭುಗಿಲೆದ್ದಿದೆ. ಆರ್‌ಎಸ್‌ಎಸ್‌(RSS) ನಿಯಮ ಪ್ರಕಾರ ಹಾಗೂ ಈ ಹಿಂದೆ ತಾವೇ ಘೋಷಿಸಿದ ಪ್ರಕಾರ 75ವರ್ಷ ವಯಸ್ಸಿನ ನಂತರ ಪ್ರಧಾನಿಯಾಗಿ ಮುಂದುವರೆಯುವಂತಿಲ್ಲ. ಹೀಗಾಗಿ ಸೆ.17ರಂದು ತಮ್ಮ 74ನೇ ಹುಟ್ಟುಹಬ್ಬ ಆಚರಿಸುತ್ತಿರುವ ಮೋದಿ ಅಧಿಕಾರಾವಧಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್‌ ಸ್ವಾಮಿ(Subramanian Swamy), ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಸುಬ್ರಮಣಿಯನ್‌ ಸ್ವಾಮಿ, ಮೋದಿಯವರು ಆರ್‌ಎಸ್‌ಎಸ್ ಪ್ರಚಾರಕನ ಸಂಸ್ಕಾರಕ್ಕೆ ಬದ್ಧರಾಗಿ ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಸೆಪ್ಟೆಂಬರ್ 17 ರಂದು ನಿವೃತ್ತಿ ಘೋಷಿಸಬೇಕು. ಇಲ್ಲವಾದರೆ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) 75 ವರ್ಷ ತುಂಬಿದ ಯಾವುದೇ ನಾಯಕ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡಲು ಸಚಿವ ಸ್ಥಾನದಿಂದ ಕೆಳಗಿಳಿಯಬೇಕು ಎಂಬ ಅಲಿಖಿತ ನಿಯಮವಿದೆ. ಬಿಜೆಪಿಯ ಹಲವು ನಾಯಕರನ್ನು ಉನ್ನತ ಸ್ಥಾನಗಳಿಂದ ಕೆಳಗಿಳಿಸಿದ ನಂತರ ಈ ಹೇಳಿಕೆ ನೀಡಲಾಗಿದೆ. ಆದಾಗ್ಯೂ, ಈ ನಿಯಮಕ್ಕೆ ವಿನಾಯಿತಿಗಳಿವೆ. ಉದಾಹರಣೆಗೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. 75ರ ವಯೋಮಿತಿ ದಾಟಿದ ನಂತರವೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿಯೇ ಉಳಿದಿದ್ದರು.

ಆದರೆ, ಈ ವರ್ಷದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ರ್ಯಾಲಿಯಲ್ಲಿ ನರೇಂದ್ರ ಮೋದಿ ಅವರು 75 ನೇ ವರ್ಷಕ್ಕೆ ಕಾಲಿಟ್ಟ ನಂತರ ನಿವೃತ್ತಿ ಹೊಂದುತ್ತಾರೆ ಮತ್ತು ಅಮಿತ್ ಶಾ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು. ನಂತರ, ಗೃಹ ಸಚಿವ ಅಮಿತ್ ಶಾ ಅವರು, “ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಐ ಮೈತ್ರಿಕೂಟಕ್ಕೆ ನಾನು ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದನ್ನೂ ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಪ್ರಧಾನಿ ಮೋದಿ ಮುಂದುವರಿಯಲಿದ್ದಾರೆ. ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸಲು ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading

ದೇಶ

Cognizant: ವಾರ್ಷಿಕ ಕೇವಲ 2.5 ಲಕ್ಷ ರೂ . ಸಂಬಳ ಪ್ಯಾಕೇಜ್ ಘೋಷಿಸಿ ಟೀಕೆಗೆ ಗುರಿಯಾದ ಕಾಗ್ನಿಜೆಂಟ್!

ಕಾಗ್ನಿಜೆಂಟ್ (Cognizant) ಇತ್ತೀಚೆಗೆ ಹೊಸ ನೇಮಕಾತಿಗಳ ಬಗ್ಗೆ ಸೂಚನೆ ಹೊರಡಿಸಿತ್ತು. ಫ್ರೆಶರ್ ಗಳಿಗೆ ವಾರ್ಷಿಕ ಕೇವಲ 2.5 ಲಕ್ಷ ರೂ. ಗಳನ್ನು ನೀಡುವ ಖಾಲಿ ಹುದ್ದೆಯನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಿ ಬಳಿಕ ಭಾರೀ ಟೀಕೆಗೆ ಗುರಿಯಾಯಿತು. ಈ ಬಗ್ಗೆ ಕಂಪನಿ ನೀಡಿರುವ ಪ್ರತಿಕ್ರಿಯೆ ಏನು? ಈ ಕುರಿತ ವಿವರಣೆ ಇಲ್ಲಿದೆ.

VISTARANEWS.COM


on

By

Cognizant
Koo

ಕಂಪನಿಗೆ ಹೊಸದಾಗಿ ಸೇರಬಯಸುವವರಿಗೆ ವಾರ್ಷಿಕವಾಗಿ 2.5 ಲಕ್ಷ ರೂ. ವೇತನ ನೀಡುವ ಖಾಲಿ ಹುದ್ದೆಗಳ (vacancy offer) ಬಗ್ಗೆ ಘೋಷಣೆ ಮಾಡಿ ಭಾರೀ ಟೀಕೆಗೆ ಗುರಿಯಾದ ಸಾಫ್ಟ್ ವೇರ್ ಕಂಪನಿ ಕಾಗ್ನಿಜೆಂಟ್ (Cognizant) ಈಗ ಪ್ರತಿಕ್ರಿಯೆಯನ್ನು ನೀಡಿದೆ, ನೇಮಕಾತಿ ಕುರಿತ ಪ್ರಕಟಣೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೊಂಡಿದೆ.

ಕಾಗ್ನಿಜೆಂಟ್ ಇತ್ತೀಚೆಗೆ ಹೊಸ ನೇಮಕಾತಿಗಳ (New recruitment) ಬಗ್ಗೆ ಸೂಚನೆ ಹೊರಡಿಸಿತ್ತು. ಫ್ರೆಶರ್ ಗಳಿಗೆ ವಾರ್ಷಿಕ 2.5 ಲಕ್ಷ ರೂ.ಗಳನ್ನು ನೀಡುವ ಖಾಲಿ ಹುದ್ದೆಯನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಿ ಬಳಿಕ ಭಾರೀ ಟೀಕೆಗೆ ಗುರಿಯಾಯಿತು.

ಮೆಟ್ರೋ ನಗರದಲ್ಲಿ ಇಂತಹ ಸಂಬಳದಲ್ಲಿ ಹೇಗೆ ಬದುಕಲು ಸಾಧ್ಯ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ವರ್ಷ ಕಂಪೆನಿಯ ಸಿಇಒ 186 ಕೋಟಿ ರೂ. ಗಳನ್ನು ಗಳಿಸಿದ್ದಾರೆ. ಹೀಗಿರುವಾಗ 20 ವರ್ಷಗಳಿಂದ ಪ್ರವೇಶ ಹಂತದವರಿಗೆ ವೇತನಗಳು ಏಕೆ ಇನ್ನೂ ಕೆಳ ಮಟ್ಟದಲ್ಲಿಯೇ ಇದೆ ಎಂದು ಅನೇಕ ಪ್ರಶ್ನಿಸಿದ್ದರು. ಇದೀಗ ಕಾಗ್ನಿಜೆಂಟ್ ಅಂತಿಮವಾಗಿ ತನ್ನ ಮೌನವನ್ನು ಮುರಿದಿದೆ.

ಕಾಗ್ನಿಜೆಂಟ್ ತನ್ನ ವಾರ್ಷಿಕ 2.5 ಲಕ್ಷ ರೂ. ಸಂಬಳದ ಕೊಡುಗೆಯ ಕುರಿತಾದ ವಿವಾದದಕ್ಕೆ ಪ್ರತಿಕ್ರಿಯಿಸಿದ್ದು, ಮಾಹಿತಿಯನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಹೇಳಿದೆ.

ಮೂರು ವರ್ಷಗಳ ಪದವಿಪೂರ್ವ, ಪದವಿ ಹೊಂದಿರುವ ಎಂಜಿನಿಯರಿಂಗ್ ಅಲ್ಲದ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಈ ಕಡಿಮೆ ವೇತನ ಪ್ಯಾಕೇಜ್ ಅನ್ನು ನೀಡಲಾಗುತ್ತದೆ ಎಂದು ಕಂಪನಿ ಸ್ಪಷ್ಟಪಡಿಸಿದೆ.

ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಾಗ್ನಿಜೆಂಟ್ ಈ ಬಗ್ಗೆ ತಿಳಿಸಿದ್ದು, 3 ವರ್ಷಗಳ ಪದವಿಪೂರ್ವ, ಪದವಿಯೊಂದಿಗೆ ಎಂಜಿನಿಯರಿಂಗ್ ಅಲ್ಲದ ಹಿನ್ನೆಲೆಯ ಪ್ರತಿಭೆಗಳಿಗೆ ನಮ್ಮ ಇತ್ತೀಚಿನ ಉದ್ಯೋಗ ಪೋಸ್ಟ್ ಅನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ವಾರ್ಷಿಕ 2.52 ಲಕ್ಷ ರೂ. ವೇತನ ನೀಡುವ ಈ ಉದ್ಯೋಗ ಜಾಹೀರಾತು 3 ವರ್ಷಗಳ ಎಂಜಿನಿಯರಿಂಗ್ ಪದವಿ ಮಾಡದ ಅಭ್ಯರ್ಥಿಗಳಿಗಾಗಿ ಎಂದು ತಿಳಿಸಿದೆ.


ಎಂಜಿನಿಯರಿಂಗ್ ಪದವೀಧರರಿಗೆ ವೇತನವು ಐಟಿ ಉದ್ಯಮದಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿದೆ: ಎಂಜಿನಿಯರಿಂಗ್ ಪದವೀಧರರಿಗೆ ನಾವು ನೀಡುವ ವೇತನವು ಐಟಿ ಸೇವೆಗಳ ಇತರ ಗುಂಪಿನೊಳಗೆ ಹೆಚ್ಚು ಸ್ಪರ್ಧಾತ್ಮಕವಾಗಿದೆ ಎಂದು ಇವಿಪಿ ಮತ್ತು ಕಾಗ್ನಿಜೆಂಟ್ ಅಮೆರಿಕದ ಅಧ್ಯಕ್ಷ ಸೂರ್ಯ ಗುಮ್ಮಡಿ ತಿಳಿಸಿದ್ದಾರೆ.

ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ತನ್ನ ಕೆಲವು ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಳವನ್ನು ಶೇ. 1 ರಷ್ಟು ಕಡಿಮೆಗೊಳಿಸಿದೆ ಮತ್ತು ಅತ್ಯಧಿಕ ಹೆಚ್ಚಳವು ಕೇವಲ ಶೇ. 5 ಆಗಿದೆ ಎಂಬ ವರದಿಗಳು ವಿವಾದವನ್ನು ಹೆಚ್ಚಿಸಿವೆ.
ಕಂಪೆನಿಯು ಈ ಇನ್‌ಕ್ರಿಮೆಂಟ್‌ಗಳನ್ನು ಅಂತಿಮವಾಗಿ ಹೊರತರುವ ಮೊದಲು ನಾಲ್ಕು ತಿಂಗಳವರೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಈ ಸುದ್ದಿ ಬಂದಿದೆ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; 391 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಕಳಪೆ ಸಂಬಳ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಗುಮ್ಮಡಿ, ವೇತನ ಹೆಚ್ಚಳವು ವೈಯಕ್ತಿಕ ಕಾರ್ಯಕ್ಷಮತೆ ಮತ್ತು ಮ್ಯಾಕ್ರೋ ಉದ್ಯಮದ ಡೈನಾಮಿಕ್ಸ್ ಎರಡಕ್ಕೂ ಸಂಬಂಧ ಹೊಂದಿದೆ. ಈ ವರ್ಷ, ಉದ್ಯೋಗಿಗಳಿಗೆ ಇನ್ಕ್ರಿಮೆಂಟ್ ಮತ್ತು ಬೋನಸ್ ಗಳನ್ನು ವಿತರಿಸಿದ ಕೆಲವು ಐಟಿ ಕಂಪೆನಿಗಳಲ್ಲಿ ನಾವು ಒಂದಾಗಿದ್ದೇವೆ. ಕಳೆದ 3 ವರ್ಷಗಳಲ್ಲಿ ಹೆಚ್ಚಿನ ಕಾಗ್ನಿಜೆಂಟ್‌ನ ಉದ್ಯೋಗಿಗಳು 4ನೇ ಬಾರಿಯಾಗಿ ಈ ಬಾರಿಯೂ ವೇತನ ಹೆಚ್ಚಳದ ಪ್ರಯೋಜನವನ್ನು ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

Continue Reading

ದೇಶ

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟ; 18ಕ್ಕೂ ಅಧಿಕ ಮಂದಿ ಜೀವನ್ಮರಣ ಹೋರಾಟ

Pharma Company Blast: ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.

VISTARANEWS.COM


on

Pharma Company Blast
Koo

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಫಾರ್ಮಾ ಕಂಪನಿಯಲ್ಲಿ (Pharma Company Blast) ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಈ ಸಂಭವಿಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಚ್ಚುತ್ತಪುರಂ ವಿಶೇಷ ಆರ್ಥಿಕ ವಲಯ(Achutapuram Special Economic Zone)ದಲ್ಲಿರುವ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಥಳದಿಂದ ಬಂದ ದೃಶ್ಯಗಳು ರಿಯಾಕ್ಟರ್‌ನಿಂದ ಹೊಗೆ ಹೊರ ಬರುತ್ತಿರುವುದು ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ಆವರಿಸುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಂತಹದ್ದೇ ಒಂದು ಘಟನೆ ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದರು. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು. ದೊಂಬಿವಿಲಿ ಬಳಿಯ ಎಂಐಡಿಸಿ ಫೇಸ್‌ 2ರಲ್ಲಿರುವ ಕಾರ್ಖಾನೆಯಲ್ಲಿ ಕಾರ್ಮಿಕರು ಮೇ 23ರ ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಮುದನ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸಿತ್ತು.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ (Sangareddy District) ರಾಸಾಯನಿಕ ಕಾರ್ಖಾನೆಯೊಂದರಲ್ಲೂ ಏಪ್ರಿಲ್‌ 3)ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್‌ ಬ್ಲಾಸ್ಟ್‌; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

Continue Reading
Advertisement
Champai Soren
ದೇಶ9 seconds ago

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

fraud Case chikkaballapura
ಕ್ರೈಂ18 mins ago

Fraud Case: ʼಗಟ್ಟಿಮೇಳ ನಿಲ್ಸಿʼ ಗಂಡನನ್ನು ತರಾಟೆಗೆ ತೆಗೆದುಕೊಂಡ ಮೊದಲ ಹೆಂಡತಿ, ಮದುವೆ ಮನೆಯಲ್ಲಿ ಗಲಾಟೆ

Narendra Modi
ದೇಶ20 mins ago

PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Viral Video
Latest24 mins ago

Viral Video: ರೀಲ್ ಶೋಕಿಗಾಗಿ ನಡುರಸ್ತೆಯಲ್ಲಿ ಮಳೆಯಲ್ಲಿ ಮೈಚಳಿ ಬಿಟ್ಟು ಕುಣಿದ ಮಹಿಳೆ!

Manu Bhaker
ಕ್ರೀಡೆ26 mins ago

Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

Health Tips
ಆರೋಗ್ಯ28 mins ago

Health Tips: ಮೊಸರು ಉಪ್ಪಿನೊಂದಿಗೋ, ಸಕ್ಕರೆಯೊಂದಿಗೋ? ಯಾವ ಆಯ್ಕೆ ಉತ್ತಮ?

MBA Course
ವಿದೇಶ36 mins ago

MBA Course: ವಿದೇಶಗಳಲ್ಲಿ ಬಜೆಟ್ ಫ್ರೆಂಡ್ಲಿ ಎಂಬಿಎ ಕೋರ್ಸ್‌‌ಗೆ ಯಾವ ದೇಶ ಬೆಸ್ಟ್?

Karkala News
ಕರ್ನಾಟಕ52 mins ago

Karkala News: ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

Viral Video
Latest58 mins ago

Viral Video: ಬುರ್ಖಾ ಧರಿಸಿ ಬೈಕ್ ಸ್ಟಂಟ್ ಮಾಡಿದ ಯುವಕರು ಪೊಲೀಸರ ಅತಿಥಿಗಳಾದರು!

Murder Case
Latest1 hour ago

Murder Case: 42 ಮಹಿಳೆಯರನ್ನು ಬರ್ಬರವಾಗಿ ಕೊಂದ ಸರಣಿ ಕಿಲ್ಲರ್‌ ಜೈಲಿನಿಂದ ಎಸ್ಕೇಪ್!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌