Site icon Vistara News

ಲೈಂಗಿಕ ದೌರ್ಜನ್ಯ ಕೇಸ್: ದಲಿತ ಸಂತ್ರಸ್ತೆ ತಾಯಿಯನ್ನು ವಿವಸ್ತ್ರಗೊಳಿಸಿ, ಸಹೋದರನನ್ನು ಬಡಿದುಕೊಂದರು!

Sexual Assault Case: mother of Dalit Victim stripped and brother killed

ಭೋಪಾಲ್, ಮಧ್ಯ ಪ್ರದೇಶ: ಲೈಂಗಿಕ ದೌರ್ಜನ್ಯ ಕೇಸ್ (Sexual Assault Case) ವಾಪಸ್ ಪಡೆಯಲು ನಿರಾಕರಿಸಿದ ಸಂತ್ರಸ್ತೆಯ 20 ವರ್ಷದ ಸಹೋದರನನ್ನು ಬಡಿದು ಕೊಂದು(dalit man killed), 49 ವರ್ಷ ತಾಯಿಯನ್ನು ವಿವಸ್ತ್ರಗೊಳಿಸಿದ (Mother Stripped) ಘಟನೆ ಮಧ್ಯ ಪ್ರದೇಶದ (Madhya Pradesh) ಸಾಗರ್ ಜಿಲ್ಲೆಯ (Sagar District) ಬರೋದಿಯಾ ನೌನಾಗಿರ್ ಹಳ್ಳಿಯಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ 9 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ(Police Case).

2019ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಪ್ರಮುಖ ಆರೋಪಿ ವಿಕ್ರಮ್ ಸಿಂಗ್ (28) ಮತ್ತು ಆತನ ಕುಟುಂಬದ 8 ಸದಸ್ಯರು ಸಂತ್ರಸ್ತೆಯ ಕುಟುಂಬದ ಮೇಲೆ ಒತ್ತಡ ಹಾಕುತ್ತಿದ್ದರು. ಆದರೆ, ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಸಂತ್ರಸ್ತೆಯ ಸಹೋದರನ್ನು ಕೊಲೆ ಮಾಡಿ, ತಾಯಿಯನ್ನು ನಗ್ನಗೊಳಿಸಿದ್ದಾರೆ. ಈ ಘಟನೆ ಮಧ್ಯ ಪ್ರದೇಶದಲ್ಲಿ ಈ ಭಾರೀ ಚರ್ಚೆಗೆ ಕಾರಣವಾಗಿದೆ.

ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಆರೋಪಿ ವಿಕ್ರಮ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಮತ್ತು ನಂತರ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡವನ್ನು ಹೇರಲಾಗುತ್ತಿತ್ತು. ಗುರುವಾರ, ಸಿಂಗ್ ತನ್ನ ಮನೆಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಗಳಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿ, ಪ್ರಮುಖ ಆರೋಪಿಯು ಸಂತ್ರಸ್ತೆ ಮತ್ತು ಅವನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಕೃತ್ಯದಲ್ಲಿ ಆರೋಪಿಯ ಕುಟುಂಬದ ಸದಸ್ಯರೂ ಭಾಗಿಯಾಗಿದ್ದಾರೆ. ಅಲ್ಲದೇ ಸಂತ್ರಸ್ತೆಯ ತಾಯಿಯನ್ನು ನಗ್ನಗೊಳಿಸಲಾಗಿದೆ ಎಂದು ಸಾಗರ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ಹೇಳಿದ್ದಾರೆ.

ಗಾಯಗೊಂಡಿದ್ದ ಸಂತ್ರಸ್ತೆಯ ಸಹೋದರನನ್ನು ಬಂದೇಲ್‌ಖಂಡ ಮೆಡಿಕಲ್ ಕಾಲೇಜ್‌ ಚಿಕಿತ್ಸೆಗಾಗಿ ಕರೆತರಲಾಯಿತು. ಆದರೆ, ತರುವಾಗಲೇ ಗಾಯಗೊಂಡಿದ್ದವನು ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ. ಆಘಾತಕ್ಕೆ ಒಳಗಾಗಿರುವ ತಾಯಿಯಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖುರೈ ಪೊಲೀಸ್ ಠಾಣೆ ಮುಖ್ಯಸ್ಥ ನಿತಿನ್ ಪಾಲ್ ಅವರು ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಒಂದು ಕೈ ಮುರಿದಿದೆ ಮತ್ತು ಸಣ್ಣ ಗಾಯಗಳಾಗಿವೆ. ಹಾಗಿದ್ದೂ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಬುಂದೇಲ್‌ಖಂಡ್ ವೈದ್ಯಕೀಯ ಕಾಲೇಜ್ ಅಧೀಕ್ಷಕ ಆರ್ ಸಿ ಪಾಂಡೆ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Manipur Video: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ಸಿಬಿಐ ತನಿಖೆಗೆ ವಹಿಸಿದ ಕೇಂದ್ರ ಸರ್ಕಾರ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಕ್ರಮ್ ಸಿಂಗ್ ಸೇರಿದಂತೆ 9 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 353 (ಲೈಂಗಿಕ ಕಿರುಕುಳ) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version