ಜೈಪುರ: ಕೋಟಾದ ಕೋಚಿಂಗ್ ಸೆಂಟರ್‌ನಲ್ಲಿ (Kota Coaching Center) ಓದುತ್ತಿದ್ದ 17 ವರ್ಷದ ನೀಟ್ ಆಕಾಂಕ್ಷಿಯನ್ನು (NEET Aspirant) ಇತರ ನಾಲ್ವರು ಕೋಚಿಂಗ್ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ (Gang Rape)ಎಸಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ(Rajasthan Police). ಜನವರಿ 11ರಂದು ಈ ಘಟನೆ ನಡೆದಿದ್ದು, ಫೆ.13ರಂದು ಸಂತ್ರಸ್ತ ಬಾಲಕಿ ದೂರು ನೀಡಿದ್ದಾಳೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ಅವರು ತಿಳಿಸಿದ್ದಾರೆ(Sexual Assault).
ಗುರುಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆ ಒಂದು ವರ್ಷದಿಂದ ಕೋಟಾದ ಹಾಸ್ಟೆಲ್‌ನಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸಂತ್ರಸ್ತೆ ಆರೋಪಿಗಳಲ್ಲಿ ಒಬ್ಬನನ್ನು ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದಳು. ಜ.11, ಶನಿವಾರ ರಾತ್ರಿ ಆಕೆಯನ್ನು ಆರೋಪಿ ತನ್ನ ಫ್ಲ್ಯಾಟ್‌ಗೆ ಆಹ್ವಾನಿಸಿದ. ಆಕೆ ಫ್ಲ್ಯಾಟ್‌ಗೆ ಆಗಮಿಸುತ್ತಿದ್ದಂತೆ ಆರೋಪಿಯು ತನ್ನ ಇತರ ಮೂರು ಸ್ನೇಹಿತರನ್ನು ಅಲ್ಲಿಗೆ ಕರೆಯಿಸಿದನು. ಅವರೆಲ್ಲರೂ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು ಎಂದು ಪೊಲೀಸ್ ಅಧಿಕಾರಿ ಶರ್ಮಾ ಹೇಳಿದರು.
ಸಂತ್ರಸ್ತ ಬಾಲಕಿಯು ಆರಂಭದಲ್ಲಿ ಎಫ್ಐಆರ್ ದಾಖಲಿಸಲು ಹಿಂದೇಟು ಹಾಕಿದ್ದಳು. ಆದರೆ, ಆಕೆ ತನಗಾದ ನೋವನ್ನು ತನ್ನ ಸ್ನೇಹಿತರ ಮುಂದೆ ಹೇಳಿಕೊಂಡಿದ್ದಳು. ಸ್ನೇಹಿತರು ಪೊಲೀಸರಿಗೆ ದೂರು ನೀಡುವಂತೆ ಪ್ರೇರಣೆ ನೀಡಿದ ನಂತರ, ಸಂತ್ರಸ್ತೆ ದೂರು ದಾಖಲಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಮತ್ತು 376 (ಅತ್ಯಾಚಾರ) ಮತ್ತು ಪೋಕ್ಸೋ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಲ್ಲಾ ಆರೋಪಿಗಳು 18 ರಿಂದ 20 ವರ್ಷದೊಳಗಿನವರಾಗಿದ್ದಾರೆ. ನಾವು ಅವರನ್ನು ಪ್ರಮುಖ ಆರೋಪಿಯ ಫ್ಲಾಟ್‌ನಿಂದ ಬಂಧಿಸಿದ್ದೇವೆ. ಅಪ್ರಾಪ್ತ ವಯಸ್ಕರ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲಾಗಿದೆ ಮತ್ತು ಆಕೆಗೆ ಮಾನಸಿಕ ಸಮಾಲೋಚನೆ ಕೂಡ ನಡೆಸಲಾಗುತ್ತಿದೆ. ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Abuse: ಕೋಚಿಂಗ್‌ಗೆ ತೆರಳುತ್ತಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ