Modi Birthday | ಒಂದು ದಿನವಾದರೂ ರಜೆ ತೆಗೆದುಕೊಳ್ಳಿ ಎಂಬ ಸಲಹೆ ಜತೆ ಮೋದಿಗೆ ಶುಭ ಕೋರಿದ ಶಾರುಖ್‌ ಖಾನ್‌ - Vistara News

ದೇಶ

Modi Birthday | ಒಂದು ದಿನವಾದರೂ ರಜೆ ತೆಗೆದುಕೊಳ್ಳಿ ಎಂಬ ಸಲಹೆ ಜತೆ ಮೋದಿಗೆ ಶುಭ ಕೋರಿದ ಶಾರುಖ್‌ ಖಾನ್‌

ನರೇಂದ್ರ ಮೋದಿ ಅವರ ಜನ್ಮದಿನದ (Modi Birthday) ಹಿನ್ನೆಲೆಯಲ್ಲಿ ಅವರಿಗೆ ದೇಶ-ವಿದೇಶದಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ಮಧ್ಯೆಯೇ ಶಾರುಖ್‌ ಖಾನ್‌ ಅವರು ಶುಭಕೋರಿದ ರೀತಿ ಗಮನ ಸೆಳೆದಿದೆ.

VISTARANEWS.COM


on

Sharukh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Modi Birthday) ಅವರ ೭೨ನೇ ಜನ್ಮದ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ರಾಜಕಾರಣಿಗಳು, ಕ್ರೀಡಾಪಟುಗಳು, ಬಾಲಿವುಡ್‌ ನಟರು, ಬೇರೆ ದೇಶಗಳ ಪ್ರಧಾನಿ, ಅಧ್ಯಕ್ಷರು ಮೋದಿ ಅವರಿಗೆ ಶುಭ ಕೋರುತ್ತಿದ್ದಾರೆ.

ಅದರಲ್ಲೂ, ಬಾಲಿವುಡ್‌ ನಟ ಶಾರುಖ್‌ ಖಾನ್‌ (Shah Rukh Khan) ಅವರು ಮೋದಿ ಅವರಿಗೆ ವಿಭಿನ್ನವಾಗಿ ಶುಭಕೋರಿದ್ದು ಜನರ ಗಮನ ಸೆಳೆದಿದೆ. “ಜನ್ಮದಿನದಂದಾದರೂ ಒಂದು ದಿನ ರಜೆ ತೆಗೆದುಕೊಂಡು, ಖುಷಿಯಾಗಿರಿ ಸರ್”‌ ಎಂಬ ಸಲಹೆಯೊಂದಿಗೆ ಶುಭ ಕೋರಿದ್ದು ವಿಶೇಷ ಎನಿಸಿದೆ.

“ದೇಶದ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ನೀವು ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ನೀವು ಮುಂದಿನ ದಿನಗಳಲ್ಲಿ ಎಲ್ಲ ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ. ಹಾಗೆಯೇ, ಒಂದು ದಿನ ರಜೆ ತೆಗೆದುಕೊಂಡು, ಜನ್ಮದಿನವನ್ನು ಎಂಜಾಯ್‌ ಮಾಡಿ ಸರ್”‌ ಎಂದು ಶಾರುಖ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ. ಕಳೆದ ೨೨ ವರ್ಷದಿಂದ ಮೋದಿ ಅವರು ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ, ಶಾರುಖ್‌ ಟ್ವೀಟ್‌ ಮಹತ್ವ ಪಡೆದಿದೆ.

ದೊಡ್ಡ ವ್ಯಕ್ತಿ ಎಂದ ಪೀಟರ್ಸನ್‌

ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಕೆವಿನ್‌ ಪೀಟರ್ಸನ್‌ ಅವರು ಹಿಂದಿಯಲ್ಲಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಮೋದಿ ಅವರು ಜನ್ಮದಿನದಂದೇ ಎಂಟು ಚೀತಾಗಳನ್ನು ನಮೀಬಿಯಾದಿಂದ ತಂದು, ಕಾಡಿಗೆ ಬಿಟ್ಟ ಹಿನ್ನೆಲೆಯಲ್ಲಿ ಹಾಗೂ ಮೋದಿ ಅವಧಿಯಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಿದ ಕಾರಣ ಧನ್ಯವಾದ ತಿಳಿಸಿದ್ದಾರೆ.

“ನರೇಂದ್ರ ಮೋದಿ ಅವರು ದೊಡ್ಡ ವ್ಯಕ್ತಿಯಾಗಿದ್ದಾರೆ. ಅದರಲ್ಲೂ, ನೀವು ಇದುವರೆಗೆ ವನ್ಯಜೀವಿಗಳನ್ನು ರಕ್ಷಿಸಲು ಕ್ರಮ ತೆಗೆದುಕೊಂಡಿದ್ದು ನನಗೆ ಇಷ್ಟವಾಯಿತು. ನೀವು ತುಂಬ ಒಳ್ಳೆಯ ವ್ಯಕ್ತಿ. ಉಳಿದ ಸಚಿವರೂ ನಿಮ್ಮನ್ನು ಅನುಸರಿಸಬೇಕು” ಎಂದು ಪೀಟರ್ಸನ್‌ ಹಿಂದಿಯಲ್ಲಿಯೇ ಟ್ವೀಟ್‌ ಮಾಡಿದ್ದಾರೆ.

ಬಾಲಿವುಡ್‌ ದಿಗ್ಗಜರಿಂದ ಶುಭಾಶಯ

ಶಾರುಖ್‌ ಮಾತ್ರವಲ್ಲ, ಬಾಲಿವುಡ್‌ ನಟರಾದ ಅಕ್ಷಯ್‌ ಕುಮಾರ್‌, ಕಂಗನಾ ರಾಣಾವತ್‌, ಅಭಿಷೇಕ್‌ ಬಚ್ಚನ್‌, ಆಲಿಯಾ ಭಟ್‌ ಸೇರಿ ಹಲವರು ಟ್ವೀಟ್‌ ಮೂಲಕ ಮೋದಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. “ನಿಮಗಿರುವ ದೃಷ್ಟಿಕೋನ, ನಿಮಗಿರುವ ಸಾಮರ್ಥ್ಯ ತುಂಬ ಜನರಿಗೆ ಸ್ಫೂರ್ತಿ ನೀಡುತ್ತದೆ. ನಿಮಗೆ ದೇವರು ಆರೋಗ್ಯ, ಆಯಸ್ಸು ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಅಕ್ಷಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಪಕ್ಷಾತೀತವಾಗಿ ಶುಭಾಶಯ

ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂಸದ ಶಶಿ ತರೂರ್‌ ಸೇರಿ ಹಲವು ನಾಯಕರು ಪಕ್ಷಾತೀತವಾಗಿ ಪ್ರಧಾನಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ವಿದೇಶಿ ಗಣ್ಯರಿಂದಲೂ ಹಾರೈಕೆ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಬೌದ್ಧ ಧರ್ಮಗುರು ದಲಾಯಿ ಲಾಮಾ, ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಸೇರಿ ಹಲವು ಜಾಗತಿಕ ಗಣ್ಯರು ಮೋದಿ ಅವರಿಗೆ ಶುಭಕೋರಿದ್ದಾರೆ. ದಲಾಯಿ ಲಾಮಾ ಅವರಂತೂ ವಿಶೇಷ ಪತ್ರದ ಮೂಲಕ ಮೋದಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ | Narendra Modi : ತಂದೆ ಕಷ್ಟಕ್ಕೆ ಹೆಗಲು.. ಬಾಲ್ಯದಲ್ಲೇ ಮಾದರಿ ಮೋದಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

VISTARANEWS.COM


on

Rakshit Shetty Richard Anthony Produce By Hombale

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಚುನಾವಣೆಯಲ್ಲಿ ಮಮತಾ ವಿರುದ್ಧ ಸೆಣಸಿ ಗೆದ್ದಿರುವ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಶನಿವಾರ ಬೆಳಗ್ಗೆ ೧೧ ಗಂಟೆಗೆ ಸುವೇಂದು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಪ.ಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಹೆಸರು ಇತಿಹಾಸದಲ್ಲಿ ದಾಖಲಾಗಲಿದೆ.
ಇದೇ ವೇಳೆ ಯಾವುದೇ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸದೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಸಿಎಂ ರೇಸ್‌‌ನಲ್ಲಿರೋ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌‌ ಹತ್ಯೆ ಆಗಿದೆ. ಆದ್ರೆ, ದುಷ್ಕರ್ಮಿಗಳ ಟಾರ್ಗೆಟ್‌‌‌‌‌ ಇದಿದ್ದು, ಸುವೇಂದು ಅಧಿಕಾರಿ, ಚಂದ್ರನಾಥ್‌ ಸುವೇಂದು‌ ಅವರ ಕಾರಿನಲ್ಲೇ ಮನೆಗೆ ಹೋಗ್ತಿದ್ದಾಗ ದುಷ್ಕಿರ್ಮಿಗಳು ಅಡ್ಡಗಟ್ಟಿ ಪಿಸ್ತೂಲ್‌‌ನಿಂದ ಶೂಟೌಟ್‌‌‌‌ ಮಾಡಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗ್ಬೇಕೆಂದು ಕಣ್ಣೀರು ಹಾಕುತ್ತಲೆ ಸುವೇಂದು ಅಧಿಕಾರಿ ಗುಡುಗಿದ್ದಾರೆ. ಇದೆಲ್ಲದರ ಮಧ್ಯೆ ಪಶ್ಚಿಮ ಬಂಗಾಳದ ಗದ್ದುಗೆ ಯಾರು ಏರ್ತಾರೆ ಅನ್ನೋ ಕುತೂಹಲಕ್ಕೆ ನಾಳೆ ಬ್ರೇಕ್‌ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಹ ವೀಕ್ಷಕ ಒಡಿಶಾದ ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ನೂತನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲೇ ಪಶ್ಚಿಮ ಬಂಗಾಳದ ಸಿಎಂ ಯಾರಾಗಬೇಕು ಅನ್ನೋದು ಫೈನಲ್‌ ಆಗಲಿದೆ.
ಇವತ್ತಿಗೆ ಮಮತಾ ಬ್ಯಾನರ್ಜಿ ಆಡಳಿತಾವಧಿ ಮುಕ್ತಾಯಗೊಂಡಿದೆ. ಮೇ 9ರಂದು ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುವೇಂದು ಅಧಿಕಾರಿಯವರ ಜನಪ್ರಿಯತೆಯೋ ಅಥವಾ ದಿಲೀಪ್ ಘೋಷ್, ಸಮಿಕ್ ಭಟ್ಟಾಚಾರ್ಯ ಅವರ ಸಂಘಟನಾ ನಿಷ್ಠೆಯೋ? ಹೈಕಮಾಂಡ್ ಯಾರಿಗೆ ಮನ್ನಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜಕೀಯ

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

VISTARANEWS.COM


on

ತಮಿಳುನಾಡು ರಾಜಕೀಯ ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. ವಿಜಯ್‌ ಪ್ರಮಾಣವಚನಕ್ಕೆ ಗವರ್ನರ್‌ ಎರಡನೇ ಸಲವೂ ಬ್ರೇಕ್‌ ಹಾಕಿದ್ದಾರೆ. ೧೧೮ ಶಾಸಕರ ಬೆಂಬಲದ ಪತ್ರ ತನ್ನಿ, ಅಲ್ಲಿಯವರೆಗೆ ಉಳಿದ ಯಾವ ಪಕ್ಷಕ್ಕೂ ಪ್ರಮಾಣವಚನಕ್ಕೆ ಆಹ್ವಾನಿಸುವುದಿಲ್ಲ ಎಂದು ಗವರ್ನರ್‌ ರಾಜೇಂದ್ರ ಅರ್ಲೇಕರ್‌ ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಸೂಚಿಸಿದ್ದಾರೆ.
ಈ ಮಧ್ಯೆ, ಟಿವಿಕೆ ಪಕ್ಷ ಬೆಂಬಲಕ್ಕಾಗಿ ವಿಸಿಕೆಯನ್ನು ಸಂಪರ್ಕಿಸಿದೆ. ಸಿಪಿಐ ಮತ್ತು ಸಿಪಿಎಂ ಪಕ್ಷಗಳನ್ನೂ ವಿಜಯ್‌ ಮಾತುಕತೆ ನಡೆಸುತ್ತಿದ್ದಾರೆ. ವಿಸಿಕೆ, ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಮೂರೂ ಪಕ್ಷಗಳು ಇದುವರೆಗೆ ವಿಜಯ್‌ಗೆ ಅಧಿಕೃತ ಬೆಂಬಲ ಘೋಷಿಸಿಲ್ಲ.
ಮತ್ತೊಂದು ಕಡೆ, ಚೆನ್ನೈನಲ್ಲಿ ವಿಜಯ್‌ ಬೆಂಬಲಿಗರ ಜಮಾವಣೆ ಏರುತ್ತಿದೆ. ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ಟಿವಿಕೆ ನಾಯಕರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲು ವಿಜಯ್‌ಗೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿಗೆ ಇ-ಮೇಲ್‌ ರವಾನಿಸಿದ್ದಾರೆ

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading
Advertisement
Rakshit Shetty Richard Anthony Produce By Hombale
ದೇಶ8 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ8 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ9 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌