ಅಣ್ವಸ್ತ್ರ ಸಾಗಣೆ; ಚೀನಾದಿಂದ ಪಾಕ್‌ಗೆ ಹೊರಟಿದ್ದ ಹಡಗನ್ನು ಮುಂಬೈನಲ್ಲಿ ತಡೆದ ಅಧಿಕಾರಿಗಳು! - Vistara News

ದೇಶ

ಅಣ್ವಸ್ತ್ರ ಸಾಗಣೆ; ಚೀನಾದಿಂದ ಪಾಕ್‌ಗೆ ಹೊರಟಿದ್ದ ಹಡಗನ್ನು ಮುಂಬೈನಲ್ಲಿ ತಡೆದ ಅಧಿಕಾರಿಗಳು!

ಚೀನಾದಿಂದ ಪಾಕಿಸ್ತಾನಕ್ಕೆ ಹೊರಟಿದ್ದ ಹಡಗನ್ನು ಕಸ್ಟಮ್ಸ್‌ ಅಧಿಕಾರಿಗಳು ಮುಂಬೈ ಬಂದರಿನಲ್ಲಿಯೇ ತಡೆದಿದ್ದಾರೆ. ಇದರಲ್ಲಿ ಅಣ್ವಸ್ತ್ರ ಹಾಗೂ ಕ್ಷಿಪಣಿ ತಯಾರಿಕೆಗೆ ಬಳಸುವ ಮಷೀನ್‌ ಕೂಡ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Ship
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಚೀನಾದಿಂದ ಪಾಕಿಸ್ತಾನಕ್ಕೆ ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿಗಳನ್ನು (Nuclear and Ballistic Missiles) ತಯಾರಿಸಲು ಬಳಸುವ ಕಚ್ಚಾ ವಸ್ತು ಇದೆ ಎಂಬ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಗೆ ತೆರಳುತ್ತಿದ್ದ ಹಡಗನ್ನು ಭಾರತದ ಭದ್ರತಾ ಏಜೆನ್ಸಿ ಅಧಿಕಾರಿಗಳು (Indian Security Agencies) ಮುಂಬೈನಲ್ಲಿಯೇ ತಡೆದಿದ್ದಾರೆ. ಮುಂಬೈನ ನ್ಹಾವಾ ಶೆವಾ (Nhava Sheva Port) ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಮರ್ಚಂಟ್‌ ಹಡಗನ್ನು ತಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಾಲ್ಟಾ ಧ್ವಜ ಇರುವ, ಸಿಎಂಎ ಸಿಜಿಎಂ ಅಟ್ಟಿಲಾ ಎಂಬ ಮರ್ಚಂಟ್‌ ಹಡಗನ್ನು ಮುಂಬೈನಲ್ಲಿ ತಡೆ ಹಿಡಿಯಲಾಗಿದೆ. ಗುಪ್ತಚರ ಇಲಾಖೆಯ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್‌ ಅಧಿಕಾರಿಗಳು, ಹಡಗನ್ನು ಮುಂಬೈ ಬಂದರಿನಲ್ಲಿಯೇ ತಡೆದಿದ್ದಾರೆ. ಹಡಗನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಕನ್ಸೈನ್‌ಮೆಂಟ್‌ನಲ್ಲಿ ಕಂಪ್ಯೂಟರ್‌ ನ್ಯೂಮರಿಕಲ್‌ ಕಂಟ್ರೋಲ್‌ (CNC) ಮಷೀನ್‌ ಲಭ್ಯವಾಗಿದೆ. ಈ ಮಷೀನ್‌ಅನ್ನು ಇಟಲಿಯಲ್ಲಿ ತಯಾರಿಸಲಾಗಿದೆ. ಇದು ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಗೆ ಸಿಕ್ಕ ಬಹುದೊಡ್ಡ ಮುನ್ನಡೆಯಾಗಿದೆ ಎಂದು ತಿಳಿದುಬಂದಿದೆ.

ಏನಿದು ಸಿಎನ್‌ಸಿ ಮಷೀನ್?‌

ಕಂಪ್ಯೂಟರ್‌ ನ್ಯೂಮರಿಕಲ್‌ ಕಂಟ್ರೋಲ್‌ಅನ್ನು ಅಣ್ವಸ್ತ್ರ, ಕ್ಷಿಪಣಿ ಸೇರಿ ಹತ್ತಾರು ಬಗೆಯ ಭಯಾನಕ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಳಸಲಾಗುತ್ತದೆ. ಉತ್ತರ ಕೊರಿಯಾ ಕೂಡ ಅಣ್ವಸ್ತ್ರ ತಯಾರಿಕೆಗೆ ಇದೇ ಮಷೀನ್‌ಅನ್ನು ಬಳಸಿತ್ತು. ಈಗ ಪಾಕಿಸ್ತಾನವು ಕೂಡ ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿಗಳ ತಯಾರಿಕೆಗಾಗಿ ಈ ಮಷೀನ್‌ಅನ್ನು ಚೀನಾದಿಂದ ತರಿಸಿಕೊಳ್ಳಲು ಮುಂದಾಗಿತ್ತು. ಜನವರಿ 23ರಂದೇ ಚೀನಾದಿಂದ ಹೊರಟ ಕಾರ್ಗೋ ಹಡಗು, ಇನ್ನೇನು ಕೆಲವೇ ದಿನಗಳಲ್ಲಿ ಪಾಕಿಸ್ತಾನ ತಲುಪುವುದಿತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಚೀನಾವನ್ನು ಕೈಬಿಟ್ಟು ಭಾರತಕ್ಕೆ ಮಹತ್ವದ ಗುತ್ತಿಗೆ ಕೊಟ್ಟ ಶ್ರೀಲಂಕಾ; ರಾಜತಾಂತ್ರಿಕ ಮುನ್ನಡೆ

ಅಮೆರಿಕ ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಹಣಕಾಸು ನೆರವು ಸ್ಥಗಿತವಾದ ಬಳಿಕ ಪಾಕಿಸ್ತಾನವು ಅಣ್ವಸ್ತ್ರ, ಕ್ಷಿಪಣಿ ಸೇರಿ ಹಲವು ಬಗೆಯ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಚೀನಾದ ನೆರವಿನೊಂದಿಗೆ ಸಿಎನ್‌ಸಿ ಮಷೀನ್‌ಗಳನ್ನು ತರಿಸಿಕೊಂಡು, ಅಣ್ವಸ್ತ್ರ, ಕ್ಷಿಪಣಿಗಳನ್ನು ತಯಾರಿಸುವುದು ನೆರೆ ರಾಷ್ಟ್ರದ ಕುತಂತ್ರವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದಾಗ್ಯೂ, ಪ್ರಕರಣದ ಕುರಿತು ಭಾರತದ ಕಸ್ಟಮ್ಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟು ಸ್ಫೋಟಕ ಮಾಹಿತಿಯನ್ನು ಕೂಡ ನಿರೀಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ದೇಶ

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

Patanjali Case: ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್‌ ಅಮಾನುಲ್ಲಾ ಇದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್‌ ಸಲ್ಲಿಸಲು ಮೂರು ವಾರಗಳ ಗಡುವನ್ನು ಪತಂಜಲಿ ಸಂಸ್ಥೆಗೆ ಕೋರ್ಟ್‌ ನೀಡಿದೆ. ಬಾಬಾ ರಾಮ್‌ದೇವ್‌ ಅವರಿಗೆ ಸಾಕಷ್ಟು ಪ್ರಭಾವ ಇದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ ಕ್ಷೇತ್ರಕ್ಕೆ ಅವರು ಉತ್ತಮ ಕೊಡುಗೆ ನೀಡಿದ್ದಾರೆ. ಆದರೆ ಪತಂಜಲಿ ಉತ್ಪನ್ನಗಳ ವಿಚಾರ ಬೇರೆಯಾಗಿದೆ ಎಂದು ಹೇಳಿದರು.

VISTARANEWS.COM


on

Patanjali case
Koo

ನವದೆಹಲಿ: ಜನರನ್ನು ದಾರಿ ತಪ್ಪಿಸುವ ಕೆಲಸ (Misleading Advertisement) ಜಾಹೀರಾತು ಪ್ರಕಟ ಕೇಸ್‌ಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌(Baba Ramdev) ಅವರ ಆಪ್ತ ಬಾಲಕೃಷ್ಣ ಮತ್ತು ಪತಂಜಲಿ ಸಂಸ್ಥೆ (Patanjali Case)ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ತೀರ್ಪನ್ನು ಸುಪ್ರೀಂಕೋರ್ಟ್‌(Supreme Court) ಕಾಯ್ದಿರಿಸಿದೆ. ಇದೇ ವೇಳೆ ಮಾಧ್ಯಮಗಳಲ್ಲಿ ಕೋರ್ಟ್‌ ಮಾಡಿರುವ ಅವಲೋಕನಗಳ ಬಗ್ಗೆ ಹೇಳಿಕೆ ನೀಡಿದಕ್ಕಾಗಿ ಕ್ಷಮೆಯಾಚಿಸಿ ಭಾರತೀಯ ಮೆಡಿಕಲ್‌ ಅಸೋಸಿಯೇಶನ್‌ನ ಅಧ್ಯಕ್ಷ ಡಾ.ಆರ್‌.ವಿ.ಅಶೋಕನ್‌ ಸಲ್ಲಿಸಿರುವ ಅರ್ಜಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್‌ ಅಮಾನುಲ್ಲಾ ಇದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್‌ ಸಲ್ಲಿಸಲು ಮೂರು ವಾರಗಳ ಗಡುವನ್ನು ಪತಂಜಲಿ ಸಂಸ್ಥೆಗೆ ಕೋರ್ಟ್‌ ನೀಡಿದೆ. ಬಾಬಾ ರಾಮ್‌ದೇವ್‌ ಅವರಿಗೆ ಸಾಕಷ್ಟು ಪ್ರಭಾವ ಇದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ ಕ್ಷೇತ್ರಕ್ಕೆ ಅವರು ಉತ್ತಮ ಕೊಡುಗೆ ನೀಡಿದ್ದಾರೆ. ಆದರೆ ಪತಂಜಲಿ ಉತ್ಪನ್ನಗಳ ವಿಚಾರ ಬೇರೆಯಾಗಿದೆ ಎಂದು ಹೇಳಿದರು.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶಗಳ ಕುರಿತು ಪತ್ರಿಕೆಗಳಿಗೆ ಸಂದರ್ಶನ ನೀಡಿದ್ದಕ್ಕಾಗಿ ಐಎಂಎ ಅಧ್ಯಕ್ಷ ಡಾ ಆರ್‌ವಿ ಅಶೋಕನ್ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅವರು ಕ್ಷಮೆ ಕೋರಿ ಸಲ್ಲಿಸಿರುವ ಅಫಿಡವಿಟ್‌ನೊಂದಿಗೆ ಸಮಾಧಾನಕರವಾಗಿಲ್ಲ ಎಂದು ಹೇಳಿದೆ. ಪತಂಜಲಿ ಮಾಡಿದಂತೆಯೇ ನೀವೂ ಮಾಡುತ್ತಿದ್ದೀರಿ. ನೀವು ಜನಸಾಮಾನ್ಯರಲ್ಲ, ಅಂತಹ ವಿಷಯಗಳ ಪರಿಣಾಮಗಳು ನಿಮಗೆ ತಿಳಿದಿಲ್ಲವೇ?ನಾವು ವಾಕ್ ಸ್ವಾತಂತ್ರ್ಯವನ್ನು ಎತ್ತಿ ಹಿಡಿದವರಲ್ಲಿ ಮೊದಲಿಗರು. ಆದರೆ ಕೆಲವು ಸಂದರ್ಭಗಳಲ್ಲಿ ಸ್ವಯಂ ಸಂಯಮ ಇರಬೇಕು. IMA ಅಧ್ಯಕ್ಷರಾಗಿ ನೀವು ಸ್ವಯಂ ಸಂಯಮವನ್ನು ಹೊಂದಿರಬೇಕು. ನಿಮ್ಮಿಂದ ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಪೀಠವು ನ್ಯಾಯಾಲಯದಲ್ಲಿ ಹಾಜರಿದ್ದ ಅಶೋಕನ್‌ಗೆ ಸೂಚಿಸಿತು.

ಐಎಂಎ ದೂರಿನನ್ವಯ ಈ ಹಿಂದೆ ಸುಪ್ರೀಂ ಕೋರ್ಟ್ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್‌ದೇವ್ ಮತ್ತು ಸಿಇಒ ಆಚಾರ್ಯ ಬಾಲಕೃಷ್ಣಗೆ ಛೀಮಾರಿ ಹಾಕಿತ್ತು. ಈ ಸಂಬಂಧ ಹಲವು ದಿನಪತ್ರಿಕೆಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತಿನ ಬಗ್ಗೆ ಪತಂಜಲಿ ಆಯುರ್ವೇದ ಸಂಸ್ಥೆ, ಬಾಬಾ ರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಕ್ಷಮೆಯನ್ನೂ ಯಾಚಿಸಿದ್ದರು. ಸರ್ವೋಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಮತ್ತೊಮ್ಮೆ ಈ ತಪ್ಪನ್ನು ಪುನರಾವರ್ತಿಸುವುದಿಲ್ಲ ಎಂದು ಕಂಪನಿಯು ಏಪ್ರಿಲ್ 22ರಂದು ಬಹಿರಂಗವಾಗಿ ಕ್ಷಮೆ ಯಾಚಿಸಿತ್ತು.

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಇದರ ಬೆನ್ನಲ್ಲೇ ಯೋಗ ಗುರು ಬಾಬಾ ರಾಮ್‌ದೇವ್‌ ಅವರ ಪತಂಜಲಿ ಹಾಗೂ ದಿವ್ಯಾ ಫಾರ್ಮಸಿ ಸಂಸ್ಥೆಗೆ ಸೇರಿದ 14 ಆಯುರ್ವೇದ ಉತ್ಪನ್ನಗಳಿಗೆ ನೀಡಲಾಗಿದ್ದ ಮಾರಾಟ ಪರವಾನಗಿಯನ್ನು ಉತ್ತರಾಖಂಡ ಸರಕಾರ ಬ್ಯಾನ್‌ ಮಾಡಿತ್ತು. ದೃಷ್ಟಿ ಐ ಡ್ರಾಫ್ಸ್‌, ಶ್ವಾಸರಿ ಗೋಲ್ಡ್‌, ಸ್ವಸರಿ ಪ್ರವಾಹಿ, ಮಧುನಾಶಿನಿ ವಟಿ ಎಕ್ಸ್‌ಟ್ರಾ ಪವರ್‌, ಲಿವಾಮೃತ್‌ ಅಡ್ವಾನ್ಸ್‌, ಲಿವೋಗ್ರಿಟ್‌ ಸೇರಿದಂತೆ 14 ಉತ್ಪನ್ನಗಳಿಗೆ ನೀಡಲಾಗಿದ್ದ ಮಾರಾಟ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮಿಡಿಸ್‌ (ಅಬ್ಜಕ್ಷನೇಬಲ್‌ ಅಡ್ವೊರ್ಟೈಸ್‌ಮೆಂಟ್‌) ಕಾಯಿದೆ, 1954ನ್ನು ಪದೇ ಪದೇ ಉಲ್ಲಂಘಿಸಿದ ಆರೋಪದ ಮೇಲೆ ಪತಂಜಲಿ ಮುಖ್ಯಸ್ಥ ಬಾಬಾ ರಾಮದೇವ್‌ ಹಾಗೂ ಸಿಇಒ ಆಚಾರ್ಯ ಬಾಲಕೃಷ್ಣ ವಿರುದ್ಧ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಸರಕಾರ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಿದೆ.

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading
Advertisement
KL Rahul
ಕ್ರೀಡೆ12 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ15 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ19 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ21 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ36 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ53 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ2 hours ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್2 hours ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ2 hours ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ2 hours ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌