ಮುಂಬೈ: ಫೇಸ್‌ಬುಕ್ ಲೈವ್‌ನಲ್ಲಿದ್ದಾಗಲೇ (Facebook Live) ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕನ ಪುತ್ರರೊಬ್ಬರನ್ನು (Shiv Sena UBT leader son shot dead) ಗುಂಡು ಹೊಡೆದು ಹತ್ಯೆ ಮಾಡಿದ ಘಟನೆ ಗುರುವಾರ ಮುಂಬೈನಲ್ಲಿ (Mumbai) ನಡೆದಿದೆ.
ಶಿವಸೇನೆಯ ಯುಬಿಟಿ ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಫೇಸ್‌ಬುಕ್ ಲೈವ್ ಮಾಡುತ್ತಿದ್ದ ವ್ಯಕ್ತಿಯೇ ಅವರಿಗೆ ಶೂಟ್ ಮಾಡಿದ್ದಾನೆ. ಬಳಿಕ ತಾನು ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ. ಫೇಸ್‌ಬುಕ್ ಲೈವ್‌ನಲ್ಲಿ ಚಿತ್ರೀಕರಣದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘೋಸಲ್ಕರ್ ಮತ್ತು ಅವರ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಇಬ್ಬರು ಮೃತಪಟ್ಟಿದ್ದಾರೆ. ಮುಂಬೈನ ದಹಿಸರ್ ಪ್ರದೇಶದ ಎಂಎಚ್‌ಬಿ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಅಭಿಷೇಕ್ ಅವರು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾಜಿ ಕೌನ್ಸಿಲರ್ ವಿನೋದ್ ಘೋಸಲ್ಕರ್ ಅವರ ಪುತ್ರರಾಗಿದ್ದಾರೆ.
Is underworld back in Mumbai in different form? Earlier BJP MLA opened fire in police station. Now, Shiv Sena (UBT) leader Abhishek Ghosalkar, son of fr Sena MLA Vinod Ghosalkar was shot at Dahisar during Facebook live. Morris who had got past criminal records shot at Ghosalkar pic.twitter.com/5PY964oOn4
— Sudhir Suryawanshi (@ss_suryawanshi) February 8, 2024
‘ಮಾರಿಸ್ ಭಾಯ್’ ಎಂದು ಜನಪ್ರಿಯವಾಗಿ ಕರೆಯಲಾಗುವ ಮಾರಿಸ್ ನೊರೊನ್ಹಾ ಅವರ ಕಚೇರಿಗೆ ಅಭಿಷೇಕ್ ಘೋಸಲ್ಕರ್ ಅವರು ಹೋಗಿದ್ದರು. ಈ ವೇಳೆ, ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ಭಿನ್ನಾಭಿಪ್ರಾಯಗಳ ನಂತರ ಇಬ್ಬರು ಇತ್ತೀಚೆಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಮತ್ತು ವೆಬ್‌ಕಾಸ್ಟ್ ಆಗುತ್ತಿರುವ ಕಾರ್ಯಕ್ರಮಕ್ಕಾಗಿ ಘೋಸಲ್ಕರ್ ಅವರನ್ನು ಅವರ ಕಚೇರಿಗೆ ಆಹ್ವಾನಿಸಲಾಗಿತ್ತು. ಈ ವೇಳೆ ಅವರ ಮೇಲೆ ಗುಂಡು ಹೊಡೆದು ಸಾಯಿಸಲಾಯಿತು. ಆದರೆ, ಗುಂಡಿನ ದಾಳಿಯ ಹಿಂದಿನ ಕಾರಣ ಏನು ಎಂಬುದು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: viral video: ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!