ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ (Gyanvapi Case) ಸಿಕ್ಕಿರುವ ಶಿವಲಿಂಗದ ರಕ್ಷಣೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಂದಿನ ಆದೇಶದವರೆಗೆ ಶಿವಲಿಂಗಕ್ಕೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ಪೀಠವು ಆದೇಶ ಹೊರಡಿಸಿದೆ.
ಶಿವಲಿಂಗಕ್ಕೆ ರಕ್ಷಣೆ ನೀಡುವ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಅವಧಿಯು ನವೆಂಬರ್ 12ರಂದು ಮುಗಿಯುವ ಹಿನ್ನೆಲೆಯಲ್ಲಿ ಹಿಂದೂಗಳ ಪರ ವಾದ ಮಂಡಿಸಿದ ವಿಷ್ಣು ಶಂಕರ್ ಜೈನ್, “ಶಿವಲಿಂಗದ ರಕ್ಷಣೆಯನ್ನು ಮುಂದುವರಿಸುವ ಅವಶ್ಯಕತೆ ಇದೆ” ಎಂದರು. ವಿಷ್ಣು ಶಂಕರ್ ಜೈನ್ ಮನವಿ ಪುರಸ್ಕರಿಸಿದ ನ್ಯಾಯಾಲಯವು ಮುಂದಿನ ಆದೇಶದವರೆಗೆ ರಕ್ಷಣೆ ಒದಗಿಸಬೇಕು ಎಂದು ತೀರ್ಪು ನೀಡಿತು.
ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶೃಂಗಾರ ಗೌರಿಯ ಪೂಜೆಗೆ ಅವಕಾಶ ನೀಡಬೇಕು ಎಂದು ಹಿಂದೂ ಮಹಿಳೆಯರು ಮೊದಲು ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ನ್ಯಾಯಾಲಯವು ಮಸೀದಿಯ ವಿಡಿಯೊ ಸಮೀಕ್ಷೆಗೆ ಆದೇಶಿಸಿದೆ. ಸಮೀಕ್ಷೆ ವೇಳೆ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದೆ. ಇದನ್ನು ರಕ್ಷಿಸಬೇಕು ಎಂದು ಮೇ 17ರಂದೇ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈಗ ಇದೇ ಆದೇಶವನ್ನು ಮುಂದುವರಿಸಲಾಗಿದೆ.
ಇದನ್ನೂ ಓದಿ | Gyanvapi Case | ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪೂಜೆಗೆ ಅವಕಾಶ ಕೋರಿಕೆ; ತೀರ್ಪು ನ.14ಕ್ಕೆ ಮುಂದೂಡಿಕೆ