Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ - Vistara News

ದೇಶ

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Shobha Karandlaje: ಪ್ರತಿಭಟನೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ʻʻನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರೆ ಎಂಬ ಹೇಳಿಕೆ ನೀಡಿದ್ದರು. ʻʻಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ. ಯಾರಿಗೂ ಕರ್ನಾಟಕದ ಬಗ್ಗೆ ಸಣ್ಣ ಭಯವೂ ಇಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

VISTARANEWS.COM


on

Shobha Karandlaje
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೆಲವು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌(Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿ ಕಾನೂನು ಸಂಕಷ್ಟ ಎದುರಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಕ್ಷಮೆಯಾಚಿಸಿದರೆ ಅವರ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗುತ್ತದೆ ಎಂಂದು ಅಡ್ವೊಕೇಟ್‌ ಜನರಲ್‌ ಮದ್ರಾಸ್‌ ಹೈಕೋರ್ಟ್‌(Madras Highcourt)ಗೆ ತಿಳಿಸಿದ್ದಾರೆ.

ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೂ ತಮಿಳುನಾಡಿಗೂ ಸಂಬಂಧ ಕಲ್ಪಿಸಿ ಹೇಳಿಕೆ ನೀಡಿದ್ದ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂದು ಮದ್ರಾಸ್‌ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ಪಿ.ಎಸ್. ರಾಮನ್ ಅವರು, ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆ ಕುರಿತು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ಕೊಟ್ಟು ಕ್ಷಮೆಯಾಚಿಸಿದರೆ ಪ್ರಕರಣ ರದ್ದುಗೊಳಿಸಬಹುದು ಎಂದು ಹೈಕೋರ್ಟ್‌ಗೆ ತಿಳಿಸಿದರು.

ಒಂದು ವೇಳೆ ತಮ್ಮ ಹೇಳಿಕೆ ಕುರಿತು ಕ್ಷಮಾಪಣೆ ಕೇಳದಿದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸುವ ಕುರಿತು ನ್ಯಾಯಪೀಠವನ್ನು ಕೇಳಿದರು. ಅಲ್ಲದೇ ನಮಗೆ ಉನ್ನತ ಮಟ್ಟದಿಂದ ಅನುಮತಿ ದೊರೆತಿದ್ದು, ಒಂದು ವೇಳೆ ಸಚಿವರು ಪತ್ರಿಕಾಗೋಷ್ಠಿಯನ್ನು ಕರೆದು ಕ್ಷಮೆಯಾಚಿಸಿದರೆ ಪ್ರಕರಣವನ್ನು ಕೈಬಿಡಬಹುದಾಗಿದೆ. ಈ ಸಂಬಂಧ ಅಡ್ವೊಕೇಟ್ ಜನರಲ್ ತಾವು ಕರಡು ಕ್ಷಮಾಪಣೆ ಸಿದ್ಧಪಡಿಸಿರುವುದಾಗಿ ಕೋರ್ಟ್‌ ಗೆ ತಿಳಿಸಿದರು.

ಏನಿದು ಪ್ರಕರಣ?

ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿಗೂ ಸಂಬಂಧ ಕಲ್ಪಿಸಿದ್ದೇ ಅವರು ವಿವಾದಕ್ಕೆ ಸಿಲುಕಲು ಕಾರಣ. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದ ಮುಕೇಶ್‌ ಅವರು ಹನುಮಾನ್‌ ಚಾಲೀಸಾ ಹಾಕಿದ್ದನ್ನು ಪ್ರಶ್ನಿಸಿ ಮುಸ್ಲಿಂ ಯುವಕರೇ ಹೆಚ್ಚಾಗಿರುವ ತಂಡವೊಂದು ಆವರ ಮೇಲೆ ಹಲ್ಲೆ ಮಾಡಿತ್ತು. ಇದರ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ʻʻನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರೆ ಎಂಬ ಹೇಳಿಕೆ ನೀಡಿದ್ದರು. ʻʻಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ. ಯಾರಿಗೂ ಕರ್ನಾಟಕದ ಬಗ್ಗೆ ಸಣ್ಣ ಭಯವೂ ಇಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದ ತಮಿಳಿಗ ಎಂಬರ್ಥದಲ್ಲಿ ಶೋಭಾ ಕರಂದ್ಲಾಜೆ ಅವರು ಹೇಳಿಕೆ ನೀಡಿದ್ದು ತಮಿಳುನಾಡಿನವರನ್ನು ಕೆರಳಿಸಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸೇರಿ ಹಲವು ಇದಕ್ಕೆ ಪ್ರತಿಕ್ರಿಯೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

ಭಾಷಿಗರ ನಡುವೆ ದ್ವೇಷ ಹಚ್ಚುವ ರೀತಿಯಲ್ಲಿ ಭಾಷಣ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂ.ಕೆ. ಸ್ಟಾಲಿನ್ ಅವರು ಚುನಾವಣಾ ಆಯೋಗವನ್ನೂ ಆಗ್ರಹಿಸಿದ್ದರು. ಇದನ್ನೂ ಮೀರಿ ಕೆಲವರು ಶೋಭಾ ಕರಂದ್ಲಾಜೆಯ ಹೇಳಿಕೆಗೆ ಪ್ರಧಾನಿ ಮೋದಿ ಅವರೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Cattle Smuggling: ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Cattle Smuggling
Koo

ಕೋಲ್ಕೊತಾ: ಭಾರತದ ಗಡಿಯಲ್ಲಿ ಪುರುಷರು ಮಾತ್ರವಲ್ಲ ಮಹಿಳಾ ಯೋಧರು ಕೂಡ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆ. ಉಗ್ರರು, ಅಕ್ರಮ ಒಳನುಸುಳುಕೋರರನ್ನು ನಿಗ್ರಹಿಸುವ ಜತೆಗೆ ಗಡಿಯಲ್ಲಿ ಅಕ್ರಮ ಚಟುವಟಿಕೆಗಳನ್ನೂ ದಕ್ಷತೆಯಿಂದ ತಡೆಯುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆಯೊಬ್ಬರು (BSF Woman Constable) ಚಾಣಾಕ್ಷತನದಿಂದ ಗೋವುಗಳ ಅಕ್ರಮ ಸಾಗಣೆಯನ್ನು (Cattle Smuggling) ತಡೆಯುವ ಮೂಲಕ ಶೌರ್ಯ ಮೆರೆದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಳ್ಳುವ ಜತೆಗೆ ಅಪಾಯದ ಮುನ್ನೆಚ್ಚರಿಕೆ ಅರಿತು ಸಿಬ್ಬಂದಿಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ಎಫ್‌ ಮಹಿಳಾ ಪೇದೆಯು ಗೋವುಗಳ ಸಾಗಣೆದಾರರನ್ನು ತಡೆದ ಬಳಿಕ ದುಷ್ಕರ್ಮಿಗಳು ಮಹಿಳಾ ಪೇದೆ ಮೇಲೆ ದಾಳಿ ಆರಂಭಿಸಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಆಗಲೂ ಜಗ್ಗದ ಪೇದೆಯು ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಬೆಚ್ಚಿದ ದುಷ್ಕರ್ಮಿಗಲೂ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗೋವುಗಳನ್ನು ಅಲ್ಲಿಯೇ ಬಿಟ್ಟು ಅವರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಾದ ಬಳಿಕ ಬಿಎಸ್‌ಎಫ್‌ ಯೋಧರ ತಂಡವು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ. ಕತ್ತಲಿದ್ದ ಕಾರಣ ಸ್ವಯಂ ರಕ್ಷಣೆಗಾಗಿ ಮಹಿಳಾ ಪೇದೆಯು ಗುಂಡಿನ ದಾಳಿ ನಡೆಸಿದ್ದಾರೆ. ಕತ್ತಲಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಳಿಕ ಬಿಎಸ್‌ಎಫ್‌ ಯೋಧರು ಆರು ಎಮ್ಮೆಗಳು ಹಾಗೂ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಬಿಎಸ್‌ಎಫ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

Continue Reading

ವಿದೇಶ

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Sunita Williams: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ತಾಂತ್ರಿಕ ದೋಷದಿಂದ ಅವರು ಬಾಹ್ಯಾಕಾಶದಲ್ಲಿಯೇ ಉಳಿದಿದ್ದು, 2025ರ ಫೆಬ್ರವರಿವರೆಗೂ ಅವರು ಅಲ್ಲಿಯೇ ಇರಲಿದ್ದಾರೆ ಎಂಬುದಾಗಿ ನಾಸಾ ಮಾಹಿತಿ ನೀಡಿದೆ.

VISTARANEWS.COM


on

Sunita Williams
Koo

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಅವರು ಬಾಹ್ಯಾಕಾಶದಲ್ಲಿಯೇ ಸಿಲುಕಿದ್ದು, ಇವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್‌ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್‌ ಸ್ಟಾರ್‌ಲೈನರ್‌ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್‌ಲೈನರ್‌ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್‌ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading

ದೇಶ

Parliament Session: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಪ್ರಸ್ತಾಪ

Parliament Session: ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ.

VISTARANEWS.COM


on

parliament session
Koo

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಹುಚರ್ಚಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು(Waqf Amendment Bill) ಸಂಸತ್‌(Parliament Session)ನಲ್ಲಿ ಇಂದು ಮಂಡನೆಯಾಗಿದೆ. ಇದೀಗ ಈ ಮದೂದೆಯ ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಸರ್ಕಾರ ಕಳುಹಿಸಿದೆ. ಇಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ(Union Minister of Minority Affairs) ಕಿರಣ್‌ ರಿಜಿಜು(Kiren Rijiju) ಮಸೂದೆಯನ್ನು ಮಂಡಿಸಿದ್ದಾರೆ.

ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ.

ಇನ್ನು ಈ ಮಸೂದೆಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣ ಇದನ್ನು ಹಿಂಪಡೆಯುವಂತೆ ಆಗ್ರಹಿಸಿವೆ. ಕಾಂಗ್ರೆಸ್‌ ಸಂಸದ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ನಾವು ಹಿಂದೂಗಳು. ಆದರೆ ನಮ್ಮ ಧರ್ಮದ ಜೊತೆಗೆ ನಾವು ಇತರ ಧರ್ಮಗಳ ನಂಬಿಕೆಯನ್ನು ಗೌರವಿಸುತ್ತೇವೆ. ಈ ಮಸೂದೆಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಗಳ ದೃಷ್ಟಿಯಿಂದ ಮಂಡನೆ ಮಾಡಲಾಗಿದೆ.

ಕಳೆದ ಬಾರಿ ಭಾರತದ ಜನತೆ ನಿಮಗೆ ಪಾಠ ಕಲಿಸಿದ್ದು ನಿಮಗೆ ಅರ್ಥವಾಗುತ್ತಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ. ಈ ಮಸೂದೆಯು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ…ಈ ಮಸೂದೆಯ ಮೂಲಕ, ಅವರು ಮುಸ್ಲಿಮೇತರರೂ ವಕ್ಫ್ ಆಡಳಿತ ಮಂಡಳಿಯ ಸದಸ್ಯರಾಗಬೇಕೆಂಬ ನಿಬಂಧನೆಯನ್ನು ಹಾಕುತ್ತಿದ್ದಾರೆ. ಇದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Job Alert: CDACಯಲ್ಲಿದೆ 250 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading
Advertisement
Cattle Smuggling
ದೇಶ13 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ46 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ47 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ57 mins ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

parliament session
ದೇಶ1 hour ago

Parliament Session: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಪ್ರಸ್ತಾಪ

Job Alert
ಉದ್ಯೋಗ1 hour ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಟ್ರೆಂಡಿಂಗ್‌