ನವದೆಹಲಿ: ಬ್ರಿಟನ್ ಸಂಸತ್ತಿನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹಲ್ ಗಾಂಧಿ ಅವರು, ಭಾರತದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಹೇಳಿದ್ದರು. ರಾಹುಲರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ”ಭಾರತೀಯ ವ್ಯವಹಾರಗಳಲ್ಲಿ ಯುರೋಪ್ ಮತ್ತು ಅಮೆರಿಕ ಹಸ್ತಕ್ಷೇಪ ಮಾಡಬೇಕು ಎಂದು ರಾಹುಲ್ ಗಾಂಧಿ ಅವರು ಬಯಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದೆ.
ರಾಹುಲ್ ಗಾಂಧಿ ಅವರು ತಮ್ಮ ಭಾಷಣಗಳಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸತ್ತು, ರಾಜಕೀಯ ವ್ಯವಸ್ಥೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಅವಮಾನಿಸಿದ್ದಾರೆಂದು ಬಿಜೆಪಿ ತೀವ್ರ ಸಂಕಟದಿಂದ ಹೇಳಲು ಬಯಸುತ್ತದೆ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡ್ಗೆ ಹೋಗಿ ಚೀನಾವನ್ನು ಹೊಗಳಿದ ರಾಹುಲ್ ಗಾಂಧಿ; ಪಡೆದ ದೇಣಿಗೆಯ ಋಣ ತೀರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಬಿಜೆಪಿ
ಪ್ರಜಾಪ್ರಭುತ್ವಗಳ ರಕ್ಷಕರಾದ ಯುರೋಪ್ ಮತ್ತು ಅಮೆರಿಕಾ ರಾಷ್ಟ್ರಗಳು, ಭಾರತದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿರುವುದನ್ನು ಏಕೆ ಮರೆಯುತ್ತಿವೆ ಎಂದು ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅವರು ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಈ ಹಿಂದಿನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.