ಹೈದರಾಬಾದ್: ಇತ್ತೀಚೆಗಷ್ಟೇ ತೆರೆ ಕಂಡು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಸ್ತ್ರೀ 2 ಸಿನಿಮಾದ ಸಕ್ಸೆಸ್ ಸಂಭ್ರಮದಲ್ಲಿರುವ ಬಾಲಿವುಡ್ ಸ್ಟಾರ್ ನಟಿ ಶ್ರದ್ಧಾ ಕಪೂರ್(Shraddha Kapoor) ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಸಿನಿಮಾ ಯಶಸ್ಸಿನ ಬೆನ್ನಲ್ಲೇ ಅವರ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆಯೂ ಭಾರೀ ಏರಿಕೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನೇ ಹಿಂದಿಕ್ಕಿದ್ದಾರೆ.
ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ ಬರೋಬ್ಬರಿ 91.4 ಮಿಲಿಯನ್‌ಗೆ ಎರಿಕೆಯಾಗಿದೆ. ಪ್ರಧಾನಿ ಮೋದಿ ಇನ್‌ಸ್ಟಾಗ್ರಾಂನಲ್ಲಿ 91.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಟ್ವಿಟರ್‌ನಲ್ಲಿ ಮೋದಿ 101.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆಮೂಲಕ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಶ್ರದ್ಧಾ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬರೋಬ್ಬರಿ 271 ಮಿಲಿಯನ್ ಇನ್‌ಸ್ಟಾ ಫಾಲೋವರ್ಸ್ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ 91.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಮೂರನೇ ಸ್ಥಾನವವನ್ನು ಇದೀಗ ಶ್ರದ್ಧ ಕಪೂರ್ ಆಕ್ರಮಿಸಿಕೊಂಡರೆ, ನರೇಂದ್ರ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಬಾಲಿವುಡ್ ನಟಿ ಅಲಿಯಾ ಭಟ್ 85.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ದೀಪಿಕಾ ಪಡುಕೋಣೆ 79.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕತ್ರಿನಾ ಕೈಪ್ 80.4 ಮಿಲಿಯನ್, ಗಾಯಕಿ ನೇಹಾ ಕಕ್ಕರ್ 78.7 ಮಿಲಿಯನ್, ಊರ್ವಶಿ ರೌಟೇಲಾ 73 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಭಾರತದ ಗರಿಷ್ಠ ಇನ್‌ಸ್ಟಾಗ್ರಾಂ ಫಾಲೋವರ್ಸ್ ಪಟ್ಟಿಯಲ್ಲಿ ನರೇಂದ್ರ ಮೋದಿ 4ನೇ ಸ್ಥಾನದಲ್ಲಿದ್ದಾರೆ. ಆದರೆ ವಿಶ್ವದ ಜನಪ್ರಿಯ ನಾಯಕರ ಪೈಕಿ ನರೇಂದ್ರ ಮೋದಿ ಮೊದಲ ಸ್ಥಾನದಲ್ಲಿದ್ದಾರೆ. ಟ್ವಿಟರ್‌ನಲ್ಲೂ ಪ್ರಧಾನಿ ನರೇಂದ್ರ ಮೋದಿ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಸೂಪರ್ ಹಿಟ್ ಸಿನಿಮಾಗಳ ಮೂಲಕ ಚೆಲುವೆ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ದೊಡ್ಡಮಟ್ಟದಲ್ಲಿ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. 14 ವರ್ಷಗಳ ಹಿಂದೆ ‘ತೀನ್ ಪತ್ತಿ’ ಸಿನಿಮಾ ಮೂಲಕ ಆಕೆ ಬಾಲಿವುಡ್ ಪ್ರವೇಶಿಸಿದ್ದರು. ತಂದೆ ಶಕ್ತಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದರು. ಪೋಷಕ ನಟನಾಗಿ, ಖಳನಟನಾಗಿ ಅಬ್ಬರಿಸಿದ್ದರು. ಹಾಗಾಗಿ ಶ್ರದ್ಧಾ ಕಪೂರ್ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ. ಬಂದ ಬಳಿಕ ತಮ್ಮದೇ ವಿಭಿನ್ನ ಅಭಿನಯದಿಂದ ಮೋಡಿ ಮಾಡುತ್ತಾ ಬಂದರು. ಸ್ಟಾರ್ ನಟರ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡರು. ಚಿತ್ರದಿಂದ ಚಿತ್ರಕ್ಕೆ ಜನಪ್ರಿಯತೆ ಹೆಚ್ಚಿಸಿಕೊಂಡರು.
ಇದನ್ನೂ ಓದಿ: Stree 2 Box Office Day 5: ಕಲ್ಕಿ, ಫೈಟರ್ ದಾಖಲೆ ಮುರಿದ ಶ್ರದ್ಧಾ ಕಪೂರ್ ಅಭಿನಯದ ಸ್ತ್ರೀ 2