ಸುಲ್ತಾನಪುರ್: ಗಾಯಕಿ ಹಾಗೂ ನಟಿ ವಿಜಯ ಲಕ್ಷ್ಮೀ ಅಲಿಯಾಸ್ ಮಲ್ಲಿಕಾ ರಜಪೂತ್ (Singer Mallika Rajput) ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವು ಅನುಮಾನಸ್ಪಾದವಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಗಾಯಕಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಸಾಧ್ಯತೆ ಇದೆ. ಆದರೆ, ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
35 ವರ್ಷದ ಗಾಯಕಿಯ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕುಟುಂಬದ ಸದಸ್ಯರು ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ಅವರ ತಾಯಿ ಸುಮಿತ್ರಾ ಸಿಂಗ್ ಹೇಳಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಶ್ರೀರಾಮ್ ಪಾಂಡೆ ಹೇಳಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ: Self Harming : ಒಂದೇ ಸೀರೆ ಸುತ್ತಿಕೊಂಡು ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ