ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್, ಕರಾವಳಿ ಮೂಲದ ದಿಶಾ ಸಾಲಿಯಾನ್ (28) (Disha Salian) ಸಾವಿನ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ದಿಶಾ ಸಾಲಿಯಾನ್ ಅವರು ಮುಂಬೈನ ಮಲಾಡ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಿಂದ 2020ರ ಜೂನ್ 8ರಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಾದ ಆರೇ ದಿನಕ್ಕೆ ಅಂದರೆ, ಜೂನ್ 14ರಂದು ಬಾಂದ್ರಾ ಅಪಾರ್ಟ್‌ಮೆಂಟ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಾಗಾಗಿ, ದಿಶಾ ಸಾಲಿಯಾನ್ ಪ್ರಕರಣದ ತನಿಖೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು.
ದಿಶಾ ಸಾಲಿಯಾನ್ ಸಾವಿನ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವಿಸ್, “ಸಾವಿನ ಪ್ರಕರಣದ ಕುರಿತು ಈಗಾಗಲೇ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಈಗ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗುವುದು” ಎಂದು ಹೇಳಿದ್ದಾರೆ. ದಿಶಾ ಸಾಲಿಯಾನ್ ಮೃತಪಟ್ಟು ಎರಡು ದಿನವಾಗಿದ್ದರೂ ಮರಣೋತ್ತರ ಪರೀಕ್ಷೆ ನಡೆಸದಿರುವುದು ಸೇರಿ ಹಲವು ಲೋಪಗಳಿವೆ ಎಂಬ ಆರೋಪವಿದೆ.
ಇದನ್ನೂ ಓದಿ | Bande Mutt Seer | ಬಂಡೆ ಮಠ ಶ್ರೀ ಸಾವಿನ ತನಿಖೆ ಪೂರ್ಣಗೊಳಿಸಿದ ಪೊಲೀಸ್; ಇಂದು ಚಾರ್ಜ್ಶೀಟ್ ಸಲ್ಲಿಕೆ