Site icon Vistara News

Padma Award: ಸಾಹಿತಿ ಎಸ್ ಎಲ್ ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ ಪ್ರದಾನ

s l bhyrappa

ನವದೆಹಲಿ: ಪದ್ಮ ಪ್ರಶಸ್ತಿಗಳಿಗೆ ಭಾಜನರಾದ ದೇಶದ ಖ್ಯಾತನಾಮರಿಗೆ ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು(Padma Award). ವಿಶ್ವಾದ್ಯಂತ ಖ್ಯಾತಿ ಗಳಿಸಿರುವ, ಕಾದಂಬರಿಕಾರ, ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ದಿ. ಮುಲಾಯಂ ಸಿಂಗ್ ಅವರಿಗೆ ಘೋಷಣೆಯಾಗಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಪುತ್ರರಾದ ಅಖಿಲೇಶ್ ಸಿಂಗ್ ಯಾದವ್ ಅವರು ಸ್ವೀಕರಿಸಿದರು.

ಇನ್ಫೋಸಿಸ್ ಸಂಸ್ಥಾಪಕ ಎನ್‌ ನಾರಾಯಣ ಮೂರ್ತಿ ಅವರ ಧರ್ಮಪತ್ನಿ ಸುಧಾ ಮೂರ್ತಿ ಅವರು ಸಾಮಾಜಿಕ ಸೇವೆಗಳಿಗಾಗಿ ಪದ್ಮಭೂಷಣ ನಾಗರಿಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಾಲಿವುಡ್‌ ನಟಿ ರವೀನಾ ಟಂಡನ್‌, ಆರ್‌ಆರ್‌ಆರ್ ಚಿತ್ರದ ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಎಂ.ಎಂ. ಕೀರವಾಣಿ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೇಶಾದ್ಯಂತ ಪದ್ಮ ಪ್ರಶಸ್ತಿಗಳಿಗೆ ಪಾತ್ರರಾದ ಗಣ್ಯರಿಗೆ ಪದ್ಮ ಪುರಸ್ಕಾರಗಳನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು.

ಪದ್ಮ ಪ್ರಶಸ್ತಿಗಳ ಪ್ರದಾನ ಸಮಾರಂಭದ ವಿಡಿಯೋ

ಪದ್ಮ ಪ್ರಶಸ್ತಿ ಪ್ರದಾನ ವೇಳೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವ ಸಂಪುಟ ಹಿರಿಯ ಸಹೋದ್ಯೋಗಿಗಳು ಈ ವೇಳೆ ಹಾಜರಿದ್ದರು. ಹಲವು ಪುರಸ್ಕೃತರ, ಪ್ರಶಸ್ತಿ ಸ್ವೀಕರಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ನಮಸ್ಕರಿಸಿ, ಪ್ರಶಸ್ತಿ ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕರ್ನಾಟಕದ ಸುಧಾಮೂರ್ತಿ.
ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
Exit mobile version