Special Parliament Session: 75 ವರ್ಷಗಳ ಸಂಸತ್‌ ಹಾದಿ ನೆನೆದ ಪ್ರಧಾನಿ, ನೆಹರೂ ಹೊಗಳುತ್ತಲೇ ಕಾಂಗ್ರೆಸ್‌ಗೆ ಕುಟುಕಿದ ಮೋದಿ Vistara News
Connect with us

ದೇಶ

Special Parliament Session: 75 ವರ್ಷಗಳ ಸಂಸತ್‌ ಹಾದಿ ನೆನೆದ ಪ್ರಧಾನಿ, ನೆಹರೂ ಹೊಗಳುತ್ತಲೇ ಕಾಂಗ್ರೆಸ್‌ಗೆ ಕುಟುಕಿದ ಮೋದಿ

Special Parliament Session: ಹಳೆಯ ಸಂಸತ್‌ ಭವನದಲ್ಲಿ ಕೊನೆಯ ಭಾಷಣ ಮಾಡುತ್ತಿರುವ ಕಾರಣ ಸಂಸತ್‌ ಇತಿಹಾಸದ ಕುರಿತು ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಹಲವು ವ್ಯಕ್ತಿಗಳು, ಗಣ್ಯರನ್ನು ಸ್ಮರಿಸಿದರು.

VISTARANEWS.COM


on

Narendra Modi Speech In Lok Sabha
Koo

ನವದೆಹಲಿ: ಹಳೆಯ ಸಂಸತ್‌ ಸಂಸತ್‌ ಭವನದಲ್ಲಿ (Special Parliament Session) ಸೋಮವಾರ ಕೊನೆಯ ಅಧಿವೇಶನದ ದಿನವಾದ ಕಾರಣ ನರೇಂದ್ರ ಮೋದಿ ಅವರು ಹಲವರಿಗೆ ಧನ್ಯವಾದ ತಿಳಿಸಿದರು. ಲೋಕಸಭೆಯಲ್ಲಿ ಭಾಷಣ ಮಾಡುವ ವೇಳೆ ಅವರು ದೇಶದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಅಟಲ್‌ ಬಿಹಾರಿ ವಾಜಪೇಯಿ ಸೇರಿ ಹಲವು ವ್ಯಕ್ತಿಗಳನ್ನು ಸ್ಮರಿಸಿದರು. ಹಿಂದಿನ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿ ಅವರ ಕಾರ್ಯವನ್ನು ಶ್ಲಾಘಿಸುತ್ತಲೇ, ತುರ್ತು ಪರಿಸ್ಥಿತಿ ಜಾರಿಯಾಗಿದ್ದೂ ಇದೇ ಸಂಸತ್‌ನಲ್ಲಿ ಎನ್ನುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಕುಟುಕಿದರು.

“ಹಳೆಯ ಸಂಸತ್‌ ಭವನವು ಕಳೆದ 75 ವರ್ಷದಲ್ಲಿ ದೇಶದ ವಿಕಾಸಕ್ಕೆ ಕಾರಣವಾಗಿದೆ. ಇದೇ ಸಂಸತ್‌ನಲ್ಲಿ ಸಂವಿಧಾನ ರಚನೆಗೆ 2 ವರ್ಷ 11 ತಿಂಗಳು ಸಭೆ ನಡೆಸಲಾಗಿದೆ. ನೆಹರು ಅವರ ನೇತೃತ್ವದಲ್ಲಿ ರಚನೆಯಾದ ಸರ್ಕಾರದಲ್ಲಿ ಸಚಿವರಾದ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ದೇಶದ ಸಮಗ್ರ ಜನರಿಗೆ ತಲುಪುವ ಯೋಜನೆಗಳನ್ನು ರೂಪಿಸಿದರು. ಆ ಮೂಲಕ ದೇಶದ ಜನರಿಗೆ ಯೋಜನೆ ತಲುಪುವಲ್ಲಿ ಮೊದಲ ಸರ್ಕಾರವು ಮುನ್ನುಡಿ ಬರೆಯಿತು” ಎಂದು ಮೋದಿ ಹೇಳಿದರು.

“ಜವಾಹರ ಲಾಲ್‌ ನೆಹರು, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ಅಟಲ್‌ ಬಿಹಾರಿ ವಾಜಪೇಯಿ, ಡಾ.ಬಾಬು ರಾಜೇಂದ್ರ ಪ್ರಸಾದ್‌, ರಾಮನಾಥ್‌ ಕೋವಿಂದ್‌, ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ, ಪಿ.ವಿ.ನರಸಿಂಹರಾವ್‌ ಸೇರಿ ನೂರಾರು ಧೀಮಂತರು, 7,500 ಸಂಸದರು ದೇಶದ ಏಳಿಗೆಗೆ ಕೊಡುಗೆ ನೀಡಿದ್ದಾರೆ. ಈ ಸಂಸತ್ತು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನೂ ಕಂಡಿದೆ, ಯುದ್ಧ ಘೋಷಣೆ ಸೇರಿ ಹಲವು ಕಠಿಣ ನಿರ್ಧಾರಗಳ ಮೂಲಕ ಜಗತ್ತಿಗೆ ಭಾರತದ ಶಕ್ತಿಯನ್ನು ಪ್ರದರ್ಶಿಸಿದೆ” ಎಂದು ಮೋದಿ ಸ್ಮರಿಸಿದರು.

ಇದನ್ನೂ ಓದಿ: Special Parliament Session: ಸಂಸತ್ತಿನ ಮೆಟ್ಟಿಲಿಗೆ ನಾನೇಕೆ ನಮಿಸಿದೆ? ಭಾವುಕರಾದ ಮೋದಿ ಹೇಳಿದ್ದಿಷ್ಟು…

ಪತ್ರಕರ್ತರಿಗೆ ಮೋದಿ ಧನ್ಯವಾದ

“ಗಣ್ಯರ ಜತೆಗೆ ಸಂಸತ್ತಿನ ಪ್ರತಿಯೊಬ್ಬ ಸಿಬ್ಬಂದಿಯೂ ಕೊಡುಗೆ ನೀಡಿದ್ದಾರೆ. ಕೆಲವೊಮ್ಮೆ ರಾತ್ರಿಯವರೆಗೆ ಕಲಾಪಗಳು ನಡೆದಾಗ ಇಲ್ಲಿನ ಸಿಬ್ಬಂದಿಯು ಊಟ ಪೂರೈಸಿದ್ದಾರೆ. ಅಷ್ಟೇ ಏಕೆ ಉಗ್ರರು ಸಂಸತ್ತಿನ ಮೇಲೆ ದಾಳಿ ನಡೆದಾಗ ವೀರ ಭದ್ರತಾ ಸಿಬ್ಬಂದಿಯು ಗುಂಡಿಗೆ ಎದೆಯೊಡ್ಡಿದರು. ಅದೇ ರೀತಿ, ಪತ್ರಕರ್ತರು ಕೂಡ ಇಲ್ಲಿನ ಪ್ರಮುಖ ನಿರ್ಧಾರಗಳನ್ನು ಜನರಿಗೆ ತಿಳಿಸಿದರು. ಈಗ ತಂತ್ರಜ್ಞಾನ ಇದೆ, ಮೊದಲು ಇಲ್ಲಿನ ತೀರ್ಮಾನಗಳನ್ನು ಪತ್ರಕರ್ತರೇ ಜನರಿಗೆ ತಲುಪಿಸುತ್ತಿದ್ದರು. ಕೆಲವು ಪತ್ರಕರ್ತರು ಇಡೀ ಜೀವನವನ್ನು ಸಂಸತ್‌ ವರದಿಯಲ್ಲೇ ಕಳೆದಿದ್ದಾರೆ. ಇವರೆಲ್ಲರಿಗೂ ಧನ್ಯವಾದ” ಎಂದರು.

“ಹಳೆಯ ಸಂಸತ್‌ ಭವನವು ದೇಶದ ಎಲ್ಲರಿಗೂ ಸೌಲಭ್ಯ ನೀಡಿದೆ. ಬಡವರು, ದಲಿತರು, ತುಳಿತಕ್ಕೊಳಗಾದವರ ಭವಿಷ್ಯಕ್ಕೆ ಅಡಿಗಲ್ಲು ಹಾಕಿದೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಸತ್‌ ಸದಸ್ಯರು ತಮ್ಮ ವೇತನದ ಭಾಗವನ್ನು ನೀಡಿದರು. ಕ್ಯಾಂಟೀನ್‌ನ ಸಬ್ಸಿಡಿ ಬಿಟ್ಟರು. ಆ ಮೂಲಕ ದೇಶದ ಜನರಿಗೆ ಮಾದರಿ ಎನಿಸಿದರು” ಎಂದು ತಿಳಿಸಿದರು.

ಹೊಸ ಸಂಸತ್ತಿಗೆ ವಿಶ್ವಾಸದೊಂದಿಗೆ ಸಾಗೋಣ

“ನಾವು ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಹೊಸ ಸಂಸತ್ತಿಗೆ ಹೋಗೋಣ. ಎಲ್ಲರೂ ಹೊಸ ವಿಶ್ವಾಸ, ಮನೋಭಾವದೊಂದಿಗೆ ಹೊಸ ಸಂಸತ್ತಿಗೆ ಹೊರಡೋಣ. ಎಲ್ಲ ಸದಸ್ಯರು ಕೂಡ ತಮ್ಮ ಅನುಭವಗಳನ್ನು ಜನರಿಗೆ ತಿಳಿಸಿ ಎಂಬುದಾಗಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಮೋದಿ ಭಾಷಣ ಮುಗಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

UNGA Speech: 78ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ಪಾಲ್ಗೊಂಡು ದೇಶದ ವಾದವನ್ನು ಮಂಡಿಸಿದರು.

VISTARANEWS.COM


on

Edited by

jai shankar
Koo

ವಿಶ್ವ ಸಂಸ್ಥೆ: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದು(Respect for territorial integrity), ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಷೇರಿದಂತೆ ಅನೇಕ ವಿಷಯಗಳನ್ನು ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ (External affairs minister S Jaishankar) ಅವರು, ಮಂಗಳವಾ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ”ನಮಸ್ತೆ, ನಾನು ಭಾರತದಿಂದ ಬಂದಿದ್ದೇನೆ(Bharat)” ಎಂದು ಮಾತು ಆರಂಭಿಸಿದ ಜೈ ಶಂಕರ್ ಅವರು, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಮತ್ತು ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರು. ಇದೇ ವೇಳೆ, ಪರೋಕ್ಷವಾಗಿ ಕೆನಡಾಕ್ಕೆ ಕುಟುಕಿದ ಜೈ ಶಂಕರ್ ಅವರು, ಭಯೋತ್ಪಾದನೆಯ ಪ್ರತಿಕ್ರಿಯೆಯು ರಾಜಕೀಯ ಅನುಕೂಲಕ್ಕಾಗಿ ನಿರ್ಧರಿಸಬಾರದು ಎಂದು ಹೇಳಿದರು(UNGA Speech).

ಲಸಿಕೆ ವರ್ಣಭೇದ ನೀತಿಯಂತಹ ಅನ್ಯಾಯವನ್ನು ಮರುಕಳಿಸಲು ನಾವು ಎಂದಿಗೂ ಅವಕಾಶವನ್ನು ನೀಡಬಾರದು. ಹವಾಮಾನ ಕ್ರಿಯೆಯು ಸಹ ಐತಿಹಾಸಿಕ ಜವಾಬ್ದಾರಿಗಳ ತಪ್ಪಿಸಿಕೊಳ್ಳುವಿಕೆಗೆ ಸಾಕ್ಷಿಯಾಗಲು ಸಾಧ್ಯವಿಲ್ಲ. ಆಹಾರ ಮತ್ತು ಶಕ್ತಿಯನ್ನು ಅಗತ್ಯವಿರುವವರಿಂದ ಶ್ರೀಮಂತರಿಗೆ ಸಾಗಿಸಲು ಮಾರುಕಟ್ಟೆಯ ಶಕ್ತಿಯನ್ನು ಬಳಸಬಾರದು ಎಂದು ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ಹೇಳಿದರು.

ರಾಜಕೀಯ ಅನುಕೂಲವು ಭಯೋತ್ಪಾದನೆ, ಉಗ್ರವಾದ ಮತ್ತು ಹಿಂಸೆಗೆ ಪ್ರತಿಕ್ರಿಯೆಗಳನ್ನು ನಿರ್ಧರಿಸುತ್ತದೆ ಎಂದು ನಾವು ಪರಿಗಣಿಸಬಾರದು. ಅದೇ ರೀತಿ, ಪ್ರಾದೇಶಿಕ ಸಮಗ್ರತೆಗೆ ಗೌರವ ಮತ್ತು ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದು ಎಂದು ಭಾರತೀಯ ವಿದೇಶಾಂಗ ಸಚಿವರು ಹೇಳಿದರು.

78 ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರ ಭಾಷಣವು ಗಮನ ಸೆಳೆಯಿತು. ನ್ಯಾಯಯುತ, ಸಮಾನ ಮತ್ತು ಪ್ರಜಾಪ್ರಭುತ್ವದ ವಿಶ್ವ ಕ್ರಮಕ್ಕಾಗಿ ಕರೆ ನೀಡಿದರು. ನಮ್ಮ ಚರ್ಚೆಗಳಲ್ಲಿ, ನಾವು ಸಾಮಾನ್ಯವಾಗಿ ನಿಯಮಾಧಾರಿತ ಆದೇಶದ ಪ್ರಚಾರವನ್ನು ಪ್ರತಿಪಾದಿಸುತ್ತೇವೆ. ಕಾಲಕಾಲಕ್ಕೆ, ಯುಎನ್ ಚಾರ್ಟರ್ಗೆ ಗೌರವವನ್ನು ಸಹ ಒಳಗೊಂಡಿರುತ್ತದೆ. ಆದರೆ ಎಲ್ಲಾ ಚರ್ಚೆಗಾಗಿ, ಇನ್ನೂ ಕೆಲವು ರಾಷ್ಟ್ರಗಳು ಕಾರ್ಯಸೂಚಿಯನ್ನು ರೂಪಿಸುತ್ತವೆ ಮತ್ತು ರೂಢಿಗಳನ್ನು ವ್ಯಾಖ್ಯಾನಿಸಲು ಪ್ರಯತ್ನಿಸುತ್ತವೆ. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ: ಯುರೋಪ್ ದೇಶಗಳಿಗೆ ತಮ್ಮ ಸಮಸ್ಯೆ ಜಗತ್ತಿನ ಸಮಸ್ಯೆ ಎಂಬ ಭ್ರಮೆ: ವಿದೇಶಾಂಗ ಸಚಿವ ಜೈ ಶಂಕರ್ ಖಡಕ್‌ ಮಾತು

ಮಹಿಳಾ ಮಸೂದೆ ಪ್ರಸ್ತಾಪ

ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆಯೂ ವಿದೇಶಾಂಗ ಸಚಿವರು ಮಾತನಾಡಿದರು. “ನಮ್ಮ ಇತ್ತೀಚಿನ ಸಮರ್ಥನೆಯು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಶಾಸನ ಮಾಡಿದ್ದೇವೆ. ಪ್ರಜಾಪ್ರಭುತ್ವದ ಪ್ರಾಚೀನ ಸಂಪ್ರದಾಯಗಳು ಆಳವಾದ ಆಧುನಿಕ ಬೇರುಗಳನ್ನು ಹೊಂದಿರುವ ಸಮಾಜ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಪರಿಣಾಮವಾಗಿ, ನಮ್ಮ ಆಲೋಚನೆಗಳು, ವಿಧಾನಗಳು ಮತ್ತು ಕಾರ್ಯಗಳು ಹೆಚ್ಚು ಆಧಾರವಾಗಿವೆ ಮತ್ತು ಅಧಿಕೃತವಾಗಿವೆ ಎಂದು ಸಚಿವರು ಪ್ರತಿಪಾದಿಸಿದರು.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Manipur Horror: ಹದಿ ಹರಿಯದ ಇಬ್ಬರ ವಿದ್ಯಾರ್ಥಿಗಳನ್ನು ಅಪಹರಿಸಿದ ದುಷ್ಕರ್ಮಿಗಳು, ಅವರನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

VISTARANEWS.COM


on

Edited by

What did they wrong, Why they are murdered asked Parents Of Manipur Teens
Koo

ನವದೆಹಲಿ: ನನ್ನ ಮಗ ಅಥವಾ ಆ ಹುಡುಗಿ ಮಾಡಿದ ಅಪರಾಧವಾದರೂ ಏನು? (done anything wrong?) ಅವರನ್ನು ಅಪಹರಿಸಿದ ವೇಳೆ ಅವರು ಪ್ರಯಾಣಿಸುತ್ತಿರುವುದೇ ತಪ್ಪಾಯ್ತಾ ಎಂದು ಶಸ್ತ್ರ ಸಜ್ಜಿತ ದುಷ್ಕರ್ಮಿಗಳಿಂದ ಹತ್ಯೆಗೀಡಾದ 17 ವರ್ಷದ ವಿದ್ಯಾರ್ಥಿಯ ತಂದೆ ಫಿಜಾಮ್ ಇಬುಂಗೋಬಿ ಅವರು ಪ್ರಶ್ನಿಸಿದ್ದಾರೆ(Parents Of Manipur Teens). ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಹತ್ಯೆಗೀಡಾದ 17 ವರ್ಷದ ವಿದ್ಯಾರ್ಥಿಯ ಪೋಷಕರು ಎರಡು ತಿಂಗಳಿನಿಂದ ಪ್ರತಿದಿನ ಬೆಳಿಗ್ಗೆ ತಿಂಡಿಯ ತಟ್ಟೆಯನ್ನು ಅವನ ಟೇಬಲ್‌ಗೆ ಹಾಕುತ್ತಿದ್ದರು, ಅವನು ಮನೆಗೆ ಮರಳುತ್ತಾನೆ ಎಂದು ಆಶಿಸುತ್ತಿದ್ದರು. ಅವರು ಈಗ ಟೇಬಲ್‌ನಲ್ಲಿ ಆಹಾರ ತಟ್ಟೆ ಹಾಕುವುದನ್ನು ನಿಲ್ಲಿಸಿದ್ದಾರೆ. ಈ ವಿಷಯವನ್ನು ಕಣ್ಣೀರು ಹಾಕುತ್ತಲೇ ಅವರು ತಿಳಿಸಿದರು(Manipur Horror).

ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಾದ ಹಿಜಾಮ್ ಲಿಂಥೋಯಿಂಗಾಂಬಿ (17) ಮತ್ತು ಫಿಜಾಮ್ ಹೇಮ್ಜಿತ್ (20) ಅವರ ಕೊಲೆಯಾಗಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ವೈರಲ್ ಆಗಿರುವ ಫೋಟೋವೊಂದರಲ್ಲಿ ಸಶಸ್ತ್ರ ಗುಂಪೊಂದರ ಮುಂದೆ ಹುಲ್ಲುಗಾವಲಿನ ಕಾಂಪೌಂಡ್‌ನಲ್ಲಿ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದಾರೆ. ಲಿಂಥೋಯಿಂಗಾಂಬಿ ಬಿಳಿ ಟೀ ಶರ್ಟ್ ಧರಿಸಿದ್ದರೆ, ಹೇಮ್ಜಿತ್ ಚೆಕ್ಸ್‌ ಶರ್ಟ್ ಧರಿಸಿದ್ದಾರೆ. ಅವರ ಹಿಂದೆ ಬಂದೂಕುಗಳನ್ನು ಹಿಡಿದುಕೊಂಡಿರುವ ಇಬ್ಬರು ನಿಂತಿದ್ದಾರೆ. ಇನ್ನೊಂದು ಫೋಟೋದಲ್ಲಿ ವಿದ್ಯಾರ್ಥಿಗಳ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣಬಹುದು.

ಈ ಫೋಟೋಗಳು ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶವಾಗಿದ್ದು, ಸಿಬಿಐ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಈ ಮಧ್ಯೆ, ಹತರಾದ ವಿದ್ಯಾರ್ಥಿಯ ತಂದೆ ಎನ್‌ಡಿ ಟಿವಿಯೊಂದಿಗೆ ಮಾತನಾಡಿ, ತಮ್ಮ ಅಳಲನ್ನು ಹೊರ ಹಾಕಿದ್ದಾರೆ.

17ರ ಹರೆಯದ ಬಾಲಕಿ ಜುಲೈ 6ರಂದು ಬೆಳಗ್ಗೆ ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಿದಾಗ ವೈದ್ಯಕೀಯ ಪೂರ್ವ ವ್ಯಾಸಂಗಕ್ಕೆ ಪ್ರವೇಶಕ್ಕಾಗಿ ನೀಟ್ ತರಗತಿಗಳಿಗೆ ಹಾಜರಾಗಲು ಮನೆಯಿಂದ ತೆರಳಿದ್ದಳು. ಆಕೆಯನ್ನು ಅವಳ ಸ್ನೇಹಿತ ಮೋಟಾರು ಸೈಕಲ್‌ನಲ್ಲಿ ಕರೆದುಕೊಂಡು ಹೋಗಿದ್ದ. ಪರಿಸ್ಥಿತಿ ಸುಧಾರಿಸಿದೆ ಎಂದು ಭಾವಿಸಿ, ಇಬ್ಬರೂ ಚುರಚಂದಪುರ ಮತ್ತು ಬಿಷ್ಣುಪುರ ಜಿಲ್ಲೆಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆಗೆ ಹೋಗಿದ್ದರು. ಈ ಪ್ರದೇಶದಲ್ಲಿ ಮೇ ಮತ್ತು ಜೂನ್‌ ತಿಂಗಳಲ್ಲಿ ಭಾರೀ ಸಂಘರ್ಷ ನಡೆದಿತ್ತು. ಬಳಿಕ ಅವರು ಕಾಣೆಯಾಗಿದ್ದರು. ವಿದ್ಯಾರ್ಥಿಗಳಿಬ್ಬರ ತಂದೆ-ತಾಯಿ ಮಕ್ಕಳ ಕಾಣೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದದ್ರು.

ಈ ಸುದ್ದಿಯನ್ನೂ ಓದಿ: Manipur Horror: ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?

ಮಗಳು ಮನೆಗೆ ಬರಲಿಲ್ಲ. ಆಗ ಅವಳಿಗೆ ಕರೆ ಮಾಡಿದೆ. ಕರೆ ಸ್ವೀಕರಿಸಿದಳು. ಆದರೆ, ಭಯಭೀತಳಂತೆ ಕಂಡಳು. ಅಲ್ಲದೇ ನಂಬೋಲ್‌ನಲ್ಲಿದ್ದೇನೆ ಎಂದು ಹೇಳಿದಳು. ಅಲ್ಲಿಗೆ ಯಾಕೆ ಹೋಗಿರುವೆ ಎಂದು ಪ್ರಶ್ನಿಸಿದೆ. ಅಲ್ಲದೇ, ನಂಬೋಲ್‌ನಲ್ಲಿ ಎಲ್ಲಿದ್ದಿಯಾ ಸ್ಥಳ ಮಾಹಿತಿ ನೀಡು ಎಂದು ಕೇಳಿದೆ. ಅವಳು ಖೌಪುಮ್ (ನಂಬೋಲ್‌ನಿಂದ 20 ಕಿಮೀ) ಎಂದು ಗೊಣಗಿದಳು ಮತ್ತು ಅವಳ ಫೋನ್ ಸ್ವಿಚ್ ಆಫ್ ಆಯಿತು ಎಂದು ವಿದ್ಯಾರ್ಥಿನಿಯ ತಾಯಿ ಜಯಶ್ರೀ ಆಗಸ್ಟ್ 2 ರಂದು ಎನ್‌ಡಿಟಿವಿಗೆ ತಿಳಿಸಿದ್ದರು. ನಮಗೆ ನ್ಯಾಯ ದೊರೆಯಬೇಕು. ಕೊಲೆಗಾರರಿ ಶಿಕ್ಷೆಯಾಗಬೇಕು. ನಾನು ಈ ದಿನಗಳನ್ನು ಹೇಗೆ ಕಳೆದಿದ್ದೇನೆ ಎಂದು ನನಗೆ ಗೊತ್ತು ಎಂದು ಬಾಲಕಿಯ ತಂದೆ ಹಿಜಾಮ್ ಕುಲ್ಲಜಿತ್ ಹೇಳುತ್ತಾ ಕಣ್ಣೀರಾದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

GST Evasion: ಮಹಾರಾಷ್ಟ್ರದ ಬಿಜೆಪಿ ನಾಯಕಿಯೊಬ್ಬರ ಕಾರ್ಖಾನೆಯು ಸಕ್ಕರೆ ಮಾರಾಟದ ಸಂಬಂಧ ಜಿಎಸ್‌ಟಿ ವಂಚಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.

VISTARANEWS.COM


on

Edited by

Vaidyanath Co-operative sugar factory
Koo

ಮುಂಬೈ: ಜಿಎಸ್‌ಟಿ ವಂಚನೆ (GST Evasion) ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಪಂಕಜಾ ಮುಂಡೆ (BJP national secretary Pankaja Munde) ಒಡೆತನದ, ಬೀಡ್ ಜಿಲ್ಲೆಯಲ್ಲಿರುವ (Beed District) ವೈದ್ಯನಾಥ್ ಸಹಕಾರಿ ಸಕ್ಕರೆ ಕಾರ್ಖಾನೆಗೆ (Vaidyanath Co-operative sugar factory) ಸೇರಿದ 19 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸರಕು ಮತ್ತು ಸೇವಾ ತೆರಿಗೆ ಕಮಿಷನರೇಟ್ (Goods and Services Tax Commissionerate) ಸೋಮವಾರ ವಶಪಡಿಸಿಕೊಂಡಿದೆ. ಸಕ್ಕರೆ ಮಾರಾಟಕ್ಕೆ ಸಂಬಂಧಿಸಿದಂತೆ ಜಿಎಸ್‌ಟಿ ವಂಚನೆ ಹಿನ್ನೆಲೆಯಲ್ಲಿ ಕಮಿಷನರೇಟ್ ಈ ಕ್ರಮ ಕೈಗೊಂಡಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವೈದ್ಯನಾಥ್ ಸಹಕಾರಿ ಸಕ್ಕರೆ ಕಾರ್ಖಾನೆಯು ಜಿಎಸ್‌ಟಿ ಪಾವತಿಸಲು ವಿಫಲವಾಗಿತ್ತು. ವಶಪಡಿಸಿಕೊಂಡ ಸೊತ್ತುಗಳಲ್ಲಿ 19 ಕೋಟಿ ರೂ. ಮೌಲ್ಯದ ಕಾರ್ಖಾನೆಯ ಬಾಯ್ಲರ್ ಮತ್ತು ಇತರ ಸಂಬಂಧಿತ ಯಂತ್ರೋಪಕರಣಗಳು ಸೇರಿವೆ.

ಹಣದ ಕೊರತೆಯಿಂದಾಗಿ ನಮ್ಮ ಕಾರ್ಖಾನೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಾವು ಮೊದಲು ರೈತರ ಬಾಕಿ ಪಾವತಿಸಲು ನಿರ್ಧರಿಸಿದ್ದೇವೆ. ನಮಗೆ ಸರ್ಕಾರದಿಂದ ಆರ್ಥಿಕ ನೆರವು ಬೇಕಿತ್ತು. ಇನ್ನು ಕೆಲವು ಕಾರ್ಖಾನೆಗಳ ಜತೆಗೆ ನಮ್ಮ ಸಕ್ಕರೆ ಕಾರ್ಖಾನೆಯ ಹೆಸರೂ ಮೊದಲ ಪಟ್ಟಿಯಲ್ಲಿದ್ದು, ಸರ್ಕಾರದಿಂದ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ ನಮ್ಮ ಕಾರ್ಖಾನೆಯನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳು ಆರ್ಥಿಕ ನೆರವು ಪಡೆದಿವೆ. ಆ ಸಮಯದಲ್ಲಿ ನಮಗೆ ನೆರವು ಸಿಕ್ಕಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪಂಕಜಾ ಮುಂಡೆ ಅವರು ಹೇಳಿದ್ದಾರೆ.

ಮುಂಡೆ ಅವರು ಜುಲೈ 7 ರಿಂದ ಎರಡು ತಿಂಗಳ ರಾಜಕೀಯ ವಿರಾಮ ತೆಗೆದುಕೊಂಡಿದ್ದರು. ಅದಾದ ಬಳಿಕ ಶಿವಶಕ್ತಿ ಯಾತ್ರೆಗಾಗಿ ಸುಮಾರು 10 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸವನ್ನು ಅವರು ಬಿಜೆಪಿಯ ಬ್ಯಾನರ್‌ನ ಅಡಿ ಮಾಡಿರಲಿಲ್ಲ. ಸ್ವಂತ ರಾಜಕೀಯ ಪ್ರವಾಸ ಕೈಗೊಂಡಿದ್ದರು. ಈ ಹಂತದಲ್ಲಿ ಮುಂಡೆ ನೇತೃತ್ವದ ಸಕ್ಕರೆ ಕಾರ್ಖಾನೆಯ ಸೊತ್ತುಗಳನ್ನು ಜಫ್ತಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಈ ಸುದ್ದಿಯನ್ನೂ ಓದಿ: NCP Crisis: ಎನ್‌ಸಿಪಿ-ಬಿಜೆಪಿ ದೋಸ್ತಿ; ‘ಮಹಾ’ ಕಮಲ ಶಾಸಕರ ಅಸಮಾಧಾನ! ಪಂಕಜಾ ಮುಂಡೆ ಬಹಿರಂಗ ಆಕ್ರೋಶ

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿಯ ತಮ್ಮ ಸೋದರಸಂಬಂಧಿ ಧನಂಜಯ್ ಮುಂಡೆ ವಿರುದ್ಧ ಪಂಕಾಜ ಮುಂಡೆ ಅವರು ಸೋಲು ಅನುಭವಿಸಿದ್ದರು. ಆ ಬಳಿಕ ಅವರನ್ನು ಬಿಜೆಪಿಯಲ್ಲಿ ಪೂರ್ತಿಯಾಗಿ ಪಕ್ಕಕ್ಕೆ ತಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪಂಕಜಾ ಮುಂಡೆ ಅವರು ಮಹಾರಾಷ್ಟ್ರದಲ್ಲಿ ಪಕ್ಷದ ನಾಯಕತ್ವದ ವಿರುದ್ಧ, ವಿಶೇಷವಾಗಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕ್ರೀಡೆ

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news kannada
Koo

1. ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್‌ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ :ಕೇಳಿದ್ದಕ್ಕಿಂತಲೂ ಹೆಚ್ಚು ನೀರು ಕೊಡುತ್ತಿದೆ ಕರ್ನಾಟಕ! ಈಗ ಹರಿಯುತ್ತಿರುವುದು 6300 ಕ್ಯೂಸೆಕ್!‌

2. CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್‌ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನ 3000 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕಾವೇರಿ ನೀರು ಬಿಡದಂತೆ ಸುಗ್ರೀವಾಜ್ಞೆ; ಸರ್ಕಾರಕ್ಕೆ ಹೋರಾಟಗಾರರಿಂದ ಮೂರು ದಿನ ಗಡುವು

3. ಬೆಂಗಳೂರು ಬಂದ್‌ ಹತ್ತಿಕ್ಕಲು ಪೊಲೀಸ್‌ ಬಲ ಪ್ರಯೋಗ ನಡೆಯಿತೇ? ಕಮಿಷನರ್‌ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ (Cauvery water Dispute) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ಕರೆ ನೀಡಿದ್ದ ಒಂದು ದಿನದ ಬೆಂಗಳೂರು ಬಂದ್‌ (Bangalore Bandh) ಸಾಂಗವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆದ ಪ್ರತಿಭಟನೆಯ ವೇಳೆ ಗಮನೀಯ ಅನಾಹುತಕಾರಿ ಘಟನೆಗಳು ಇಲ್ಲದೆ ಬಂದ್‌ ಬಹುತೇಕ ಶಾಂತಿಯುತವಾಗಿ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ
ಜಡ್ಜ್‌ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್‌ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಶವಗಳ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಮಣಿಪುರದಲ್ಲಿ ಮತ್ತೆ ಜನಾಕ್ರೋಶ ಭುಗಿಲೇಳುವ ಸಂಭವ ಕಂಡುಬರುತ್ತಿದೆ. ಬಂದೂಕು ಹಿಡಿದಿರುವ ಇಬ್ಬರು ದುಷ್ಕರ್ಮಿಗಳು ಕೂಡ ಈ ಫೋಟೋದಲ್ಲಿದ್ದಾರೆ. ಇವರು ಕುಕಿ ಸಮುದಾಯದವರು ಎಂದು ಹೇಳಲಾಗಿದೆ.

6. ಮನ ಕಲಕುವ ವಿಡಿಯೊ; ಜಿಮ್ನಾಸ್ಟಿಕ್ಸ್‌ನಲ್ಲಿ ಗೆದ್ದ​ ಬಾಲಕಿಗೆ ಕಪ್ಪು ಬಣ್ಣದವಳೆಂದು ಪದಕ ನೀಡದ ಆಯೋಜಕರು!

7. ಚಾಟ್‌ಜಿಪಿಟಿ ಜತೆ ನೀವಿನ್ನು ಮಾತನಾಡಬಹುದು! ಹೊಸ ಫೀಚರ್ ಪರಿಚಯಿಸಿದ ಓಪನ್ಎಐ

8. ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ

9. Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

10. ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್‌ ಇಲಿ!
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading
Advertisement
MLA BY Vijayendra
ಕರ್ನಾಟಕ4 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ4 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ4 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ4 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ5 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್6 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ6 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ6 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ6 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ6 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌