Site icon Vistara News

Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ

Stabbing Case

ಉದಯ್​ಪುರ: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾಗಿ (Stabbing Case) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ (Student Death) ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ. ದೇವರಾಜ್ (15)​ ಮೃತ ಬಾಲಕನಾಗಿದ್ದು, ಆತ ಕೊನೆಯುಸಿರೆಳೆಯುವ ಮೊದಲು ಸಹೋದರಿ ಆತನಿಗೆ ರಾಖಿ (Rakhi) ಕಟ್ಟಿದ್ದಳು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಸೋಮವಾರ ಚಿಕಿತ್ಸೆ ವೇಳೆ ಬಾಲಕ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಭಾರಿ ಪೊಲೀಸ್ ನಿಯೋಜನೆ ಹಾಗೂ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್​ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಮುಸ್ಲಿಂ ವಿದ್ಯಾರ್ಥಿ ತನ್ನ ಸಹಪಾಠಿಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಅದನ್ನು ಇದೀಗ ಹತೋಟಿಗೆ ತಂದಿರುವ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದು, ಗಾಳಿಸುದ್ದಿಗಳನ್ನು ತಡೆಯಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಇದನ್ನೂ ಓದಿ: Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Exit mobile version