Love Jihad: ಹೊಸ ಕಾನೂನಿನಲ್ಲಿ ಲವ್‌ ಜಿಹಾದ್‌ಗೆ ಬ್ರೇಕ್‌; ನಕಲಿ ಐಡೆಂಟಿಟಿ ತೋರಿಸಿ ಮದುವೆಯಾದರೆ ಜೈಲು ಗ್ಯಾರಂಟಿ - Vistara News

ದೇಶ

Love Jihad: ಹೊಸ ಕಾನೂನಿನಲ್ಲಿ ಲವ್‌ ಜಿಹಾದ್‌ಗೆ ಬ್ರೇಕ್‌; ನಕಲಿ ಐಡೆಂಟಿಟಿ ತೋರಿಸಿ ಮದುವೆಯಾದರೆ ಜೈಲು ಗ್ಯಾರಂಟಿ

Love Jihad: ಕೇಂದ್ರ ಸರ್ಕಾರದ ನೂತನ ವಿಧೇಯಕದಲ್ಲಿ ಲವ್‌ ಜಿಹಾದ್‌ ತಡೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಯಾವುದೇ ವ್ಯಕ್ತಿಯು ನಕಲಿ ಐಡೆಂಟಿಟಿ ಮೂಲಕ ಮದುವೆಯಾದರೆ, ಲೈಂಗಿಕ ಸಂಪರ್ಕ ಹೊಂದಿದರೆ, ಅದನ್ನು ಅಪರಾಧ ಎಂದು ಘೋಷಿಸಲಾಗುತ್ತದೆ.

VISTARANEWS.COM


on

Law Against Love Jihad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದಲ್ಲಿ ಬ್ರಿಟಿಷ್ ಕಾಲದ ಕ್ರಿಮಿನಲ್‌ ಕಾನೂನುಗಳ (Criminal Laws) ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೊಳಿಸಿ, ಹೊಸ ಹೆಸರುಗಳೊಂದಿಗೆ ಕಾಯ್ದೆಯಾಗಿ ಜಾರಿಗೆ ತರುವ ದಿಸೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ವಿಧೇಯಕಗಳನ್ನು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಜೀವಾವಧಿ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಸೇರಿ ಹಲವು ಬದಲಾವಣೆ ಮಾಡಲಾಗಿದೆ. ಹಾಗೆಯೇ, ಲವ್‌ ಜಿಹಾದ್‌ (Love Jihad) ನಿಯಂತ್ರಣಕ್ಕೂ ಕೇಂದ್ರ ಸರ್ಕಾರ ಹೊಸ ಕಾನೂನು ರೂಪಿಸುತ್ತಿದೆ.

ಹೌದು, ನೂತನ ಕಾನೂನಿನಲ್ಲಿ ಲವ್‌ ಜಿಹಾದ್‌ ತಡೆಗೆ ಹಲವು ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ತನ್ನ ಗುರುತು, ಆಚರಣೆಗಳನ್ನು (Identity) ಮುಚ್ಚಿಟ್ಟು, ನಕಲಿ ದಾಖಲೆ ತೋರಿಸಿ, ಸುಳ್ಳು ಭರವಸೆಗಳನ್ನು ನೀಡಿ ಲೈಂಗಿಕ ಸಂಬಂಧ ಹೊಂದಿದರೆ ಅಥವಾ ಮದುವೆಯಾದರೆ ಅದನ್ನು ಅಪರಾಧ ಎಂದು ಘೋಷಿಸಲಾಗುತ್ತದೆ. ಅಲ್ಲದೆ, ಹಾಗೆ ಮಾಡುವವರಿಗೆ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಲಾಗುತ್ತದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಈಗಿನ ಭಾರತೀಯ ದಂಡ ಸಂಹಿತೆಯಲ್ಲಿ (IPC) ಈ ರೀತಿಯ ನಿಬಂಧನೆಗಳು ಇಲ್ಲ. ಹಾಗಾಗಿ, ನೂತನ ವಿಧೇಯಕದಲ್ಲಿ ನಕಲಿ ದಾಖಲೆ, ಸುಳ್ಳು ಮಾಹಿತಿ ನೀಡಿ ಲೈಂಗಿಕ ಸಂಪರ್ಕ ಹೊಂದುವುದು ಹಾಗೂ ಮದುವೆಯಾಗುವುದನ್ನು ಅಪರಾಧ ಎಂದು ಘೋಷಿಸಲಾಗುತ್ತದೆ. ಇತ್ತೀಚೆಗೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಮೂಲಕ ಯುವತಿಯರನ್ನು ನಂಬಿಸಿ, ಪ್ರೀತಿಯ ಬಲೆಯಲ್ಲಿ ಬೀಳಿಸಿಕೊಂಡು, ಅವರನ್ನು ಮದುವೆಯಾಗುವುದಲ್ಲದೆ ಮತಾಂತರ ಮಾಡುವಂತಹ ಪ್ರಕರಣಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂತಹ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Criminal Laws: ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ರಾಕ್ಷಸರಿಗೆ ಗಲ್ಲು; ಸ್ತ್ರೀಯರ ರಕ್ಷಣೆಗೆ ಹೊಸ ಕಾನೂನು ಬಲ

ಮೂರು ವಿಧೇಯಕ ಯಾವವು?

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗುತ್ತಿದ್ದು, ಇವುಗಳನ್ನು ಸಂಸದೀಯ ಸಮಿತಿಯ ಪರಿಶೀಲನೆಗಾಗಿ ಕಳುಹಿಸಲಾಗುತ್ತಿದೆ ಎಂದು ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ಸಮಿತಿ ಪರಿಶೀಲನೆ ಬಳಿಕ ವಿಧೇಯಕಗಳಿಗೆ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕಾರ ದೊರೆತರೆ ಮೂರೂ ಕಾನೂನುಗಳು ಜಾರಿಗೆ ಬರಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಅಂಬಾನಿಯನ್ನು ಟೀಕಿಸುತ್ತಿದ್ದ ದೀದಿ, ಅಖಿಲೇಶ್‌, ಲಾಲು ಸೇರಿ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Anant Ambani Wedding: ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿ ಹಲವು ರಾಜಕಾರಣಿಗಳು ಅನಂತ್‌ ಅಂಬಾನಿ ವಿವಾಹದಲ್ಲಿ ಭಾಗವಹಿಸಿದ್ದರು.

VISTARANEWS.COM


on

Anant Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ರಾಧಿಕಾ ಮರ್ಚಂಟ್ (Radhika Merchant) ಅವರ ವಿವಾಹವು ಶುಕ್ರವಾರ‌ (ಜುಲೈ 12) ಅದ್ಧೂರಿಯಾಗಿ ನಡೆದಿದೆ. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಪ್ರತಿದಿನ ಅಂಬಾನಿ ವಿರುದ್ಧ ಆರೋಪ ಮಾಡುತ್ತಿದ್ದ ರಾಜಕಾರಣಿಗಳು ಈಗ ಅವರ ಪುತ್ರನ ಮದುವೆಯಲ್ಲಿ ಭಾಗಿಯಾಗಿದ್ದಾರೆ.

ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿವಾಹದಲ್ಲಿ ಭಾಗವಹಿಸಿದ್ದರು. ಶಿವಸೇನಾ (ಯುಬಿಟಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್‌ಸಿಪಿ (ಶರದ್ ಪವಾರ್) ಹಿರಿಯ ನಾಯಕಿ ಸುಪ್ರಿಯಾ ಸುಳೆ ಕೂಡ ಮದುವೆಯಲ್ಲಿ ಉಪಸ್ಥಿತರಿದ್ದರು.

ಅನಂತ್- ರಾಧಿಕಾ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ನ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ಉಪಸ್ಥಿತರಿದ್ದರು.

ಎನ್‌ಡಿಎ ಪಕ್ಷದ ಪ್ರಮುಖ ನಾಯಕರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ ಕೂಡ ಬಂದಿದ್ದರು.

ಇದನ್ನೂ ಓದಿ: Anant Ambani Wedding:  ಅಂಬಾನಿ ಮದುವೆಯ ವಿವಾಹದಲ್ಲಿ ಸಿನಿ ತಾರೆಯರು ಮಿಂಚಿದ್ದು ಹೀಗೆ!

Continue Reading

ದೇಶ

YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

YouTuber Dhruv Rathee: ಇತ್ತೀಚೆಗಷ್ಟೇ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇದಾದ ಬಳಿ ಧೃವ್‌ ರಥೀ ಅವರ ಪರೋಡಿ ಎಂಬ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಒಂದು ಪ್ರಕಟವಾಗಿತ್ತು. ಪೋಸ್ಟ್‌ನಲ್ಲಿ ಅಂಜಲಿ ಪರೀಕ್ಷೆಗೆ ಬರೆಯದೆಯೇ ಯುಪಿಎಸ್‌ಸಿ ಪರೀಕ್ಷೆ ಉತ್ತೀರ್ಣರಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದರು. ಅದೂ ಅಲ್ಲದೇ ಅಂಜಲಿಯವರ ಫೋಟೋವನ್ನು ಕೂಡ ಅವರ ಅನುಮತಿ ಇಲ್ಲದೇ ಪೋಸ್ಟ್‌ ಮಾಡಿದ್ದರು.

VISTARANEWS.COM


on

YouTuber Dhruv Rathee
Koo

ಮುಂಬೈ: ಸದಾ ಮೋದಿ ವಿರೋಧಿ ವಿಡಿಯೋಗಳ ಮೂಲಕ ಸುದ್ದಿಯಲ್ಲಿರುವ ಯೂಟ್ಯೂಬರ್‌ ಧೃವ್‌ ರಥೀ(YouTuber Dhruv Rathee) ಸಂಕಷ್ಟಕ್ಕೀಡಾಗಿದ್ದಾರೆ. ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ(Om Birla) ಪುತ್ರಿ ವಿರುದ್ಧ ಜನರನ್ನು ದಾರಿತಪ್ಪಿಸುವಂತಹ ಪೋಸ್ಟ್‌ ಮಾಡಿರುವ ಆರೋಪದಲ್ಲಿ ಧೃವ್‌ ರಥೀ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ(Anjali Birla) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಗ್ಗೆ ತಪ್ಪಾದ ಪೋಸ್ಟ್‌ವೊಂದು ರಥೀ ಅವರ ಎಕ್ಸ್‌ ಖಾತೆಯಿಂದ ಪೋಸ್ಟ್‌ ಆಗಿತ್ತು.

ಏನಿದು ಪ್ರಕರಣ?

ಇತ್ತೀಚೆಗಷ್ಟೇ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇದಾದ ಬಳಿ ಧೃವ್‌ ರಥೀ ಅವರ ಪರೋಡಿ ಎಂಬ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಒಂದು ಪ್ರಕಟವಾಗಿತ್ತು. ಪೋಸ್ಟ್‌ನಲ್ಲಿ ಅಂಜಲಿ ಪರೀಕ್ಷೆಗೆ ಬರೆಯದೆಯೇ ಯುಪಿಎಸ್‌ಸಿ ಪರೀಕ್ಷೆ ಉತ್ತೀರ್ಣರಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದರು. ಅದೂ ಅಲ್ಲದೇ ಅಂಜಲಿಯವರ ಫೋಟೋವನ್ನು ಕೂಡ ಅವರ ಅನುಮತಿ ಇಲ್ಲದೇ ಪೋಸ್ಟ್‌ ಮಾಡಿದ್ದರು.

ಪರೀಕ್ಷೆ ಬರೆಯದೇ ನೀವು UPSC ಅನ್ನು ತೇರ್ಗಡೆ ಮಾಡುವ ಏಕೈಕ ದೇಶ ಭಾರತ. ಆದರೆ ಅದಕ್ಕಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮಗಳಾಗಿ ಹುಟ್ಟಬೇಕು. ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಯಾವುದೇ ಪರೀಕ್ಷೆಯನ್ನು ನೀಡದೆ UPSC ತೇರ್ಗಡೆಯಾಗಿದ್ದಾರೆ, ಅವರು ವೃತ್ತಿಯಲ್ಲಿ ಮಾಡೆಲ್ ಆಗಿದ್ದಾರೆ. ಮೋದಿ ಸರ್ಕಾರ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಪಹಾಸ್ಯ ಮಾಡುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಅಂಜಲಿಯ ಸೋದರ ಸಂಬಂಧಿ ನಮನ ಮಹೇಶ್ವರಿ ಅವರು ದೂರು ದಾಖಲಿಸಿದ್ದಾರೆ. 2019 ರಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ ಅಂಜಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿದ್ದಾಳೆ ಎಂದು ನಮನ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ರಾಥೀ ಅವರ ಟ್ವೀಟ್‌ಗಳು ಅಂಜಲಿಯನ್ನು ಭಾರತದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಅಪಖ್ಯಾತಿಗೊಳಿಸಿವೆ ಎಂದು ಅವರು ದೂರಿದ್ದಾರೆ.ಈ ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಶೀಘ್ರದಲ್ಲೇ ಧ್ರುವ ರಥಿಯನ್ನು ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ.

17.3 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿರುವ ಧ್ರುವ ರಥಿ ಪ್ರಸಿದ್ಧ ಭಾರತೀಯ ಯೂಟ್ಯೂಬರ್‌ಗಳಲ್ಲಿ ಒಬ್ಬರು. ಪ್ರವಾಸದ ವಿಷಯದ ಕುರಿತೂ ಅವರು ಸದಾ ಮಾಹಿತಿಗಳನ್ನು ನೀಡುತ್ತಿರುತ್ತಾರೆ. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಯಾಣದ ಶಾಲೆಯಲ್ಲಿ ಪೂರ್ಣಗೊಳಿಸಿದರು. ಜರ್ಮನಿಯಲ್ಲಿ ಹೆಚ್ಚಿನ ಅಧ್ಯಯನವನ್ನು ಮುಂದುವರೆಸಿದ ಅವರು ನವೀಕರಿಸಬಹುದಾದ ಇಂಧನ ವಿಷಯದಲ್ಲಿ ಎಂಜಿನಿಯರಿಂಗ್‌ ಸ್ನಾತಕೋತ್ತರ ಪದವಿಯನ್ನು ಗಳಿಸಿದ್ದಾರೆ.

ಧ್ರುವ ರಥಿ ಅವರು ಕಂಠದಾನ ಮಾಡುತ್ತಾರೆ ಮತ್ತು ಆಗಾಗ ಯೂಟ್ಯೂಬ್‌ನಲ್ಲಿ ತಮ್ಮ ಅನುಭವ, ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಅವರ ನಿವ್ವಳ ಸಂಪತ್ತು ಸುಮಾರು 4 ಮಿಲಿಯನ್ ಡಾಲರ್ ಅಂದರೆ, ಸುಮಾರು 33 ಕೋಟಿ ರೂ. ಆಗಿದೆ. ಯೂಟ್ಯೂಬ್ ಚಾನಲ್ ಮತ್ತು ವಿವಿಧ ಬ್ರ್ಯಾಂಡ್‌ಗಳ ಸಹಯೋಗವೇ ಅವರ ಪ್ರಾಥಮಿಕ ಆದಾಯದ ಮೂಲವಾಗಿದೆ.

ಇದನ್ನೂ ಓದಿ: Divyanka Tripathi: ವಿದೇಶದಲ್ಲಿ ದರೋಡೆಗೆ ಒಳಗಾದ ಕಿರುತೆರೆ ದಂಪತಿ; ಕಾರಿನ ಗಾಜುಗಳೆಲ್ಲ ಪೀಸ್‌ ಪೀಸ್‌!

Continue Reading

ದೇಶ

Smriti Singh: ಹುತಾತ್ಮ ಯೋಧನ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್;‌ ಅಹ್ಮದ್‌ ವಿರುದ್ಧ ಎಫ್‌ಐಆರ್

Smriti Singh: ಹುತಾತ್ಮ ಯೋಧ ಕ್ಯಾಪ್ಟನ್‌ ಅನ್ಶುಮಾನ್‌ ಸಿಂಗ್‌ ಅವರ ಪತ್ನಿ ಸ್ಮೃತಿ ಸಿಂಗ್‌ ಅವರ ಫೋಟೊಗೆ ಸಾಮಾಜಿಕ ಜಾಲತಾಣದಲ್ಲಿ ಅಹ್ಮದ್‌ ಕೆ. ಎಂಬಾತನು ಕಮೆಂಟ್‌ ಮಾಡಿರುವುದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸ್ಮೃತಿ ಸಿಂಗ್‌ ಅವರಿಗೆ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಕೂಡಲೇ ಬಂಧಿಸುವಂತೆ ಪೊಲೀಸರಿಗೂ ಆಗ್ರಹಿಸಿತ್ತು.

VISTARANEWS.COM


on

Smriti Singh
Koo

ನವದೆಹಲಿ: ಕಳೆದ ವರ್ಷ ಗಡಿಯಲ್ಲಿ ಹುತಾತ್ಮರಾದ ಯೋಧ, ಕ್ಯಾಪ್ಟನ್‌ ಅನ್ಶುಮಾನ್‌ ಸಿಂಗ್‌ (Captain Anshuman Singh) ಎಂಬುವರ ಪತ್ನಿ ಸ್ಮೃತಿ ಸಿಂಗ್‌ (Smriti Singh) ಬಗ್ಗೆ ಅಹ್ಮದ್‌ ಕೆ. ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಫ್‌ಐಆರ್‌ ದಾಖಲಿಸಲಾಗಿದೆ. ಅಹ್ಮದ್‌ ಕೆ ಎಂಬಾತನ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡಿದ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಶ್ಲೀಲ ಕಮೆಂಟ್‌ಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ದೂರು ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಪತಿಯ ಕುರಿತು ಸ್ಮೃತಿ ಸಿಂಗ್‌ ಮಾತು

ಕಳೆದ ವರ್ಷದ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್‌ ಅನ್ಶುಮಾನ್‌ ಸಿಂಗ್‌ ಅವರಿಗೆ ಕೆಲ ದಿನಗಳ ಹಿಂದಷ್ಟೇ ಮರಣೋತ್ತರವಾಗಿ ದೇಶದ ಎರಡನೇ ಗ್ಯಾಲಂಟ್ರಿ ಪ್ರಶಸ್ತಿಯಾದ ಕೀರ್ತಿ ಚಕ್ರ ಪ್ರಶಸ್ತಿ (Kirti Chakra Award) ಘೋಷಿಸಲಾಗಿದ್ದು, ಪತಿಯ ಪರವಾಗಿ ಅವರ ಪತ್ನಿ ಸ್ಮೃತಿ ಸಿಂಗ್‌ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸ್ಮೃತಿ ಸಿಂಗ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೀರ್ತಿ ಚಕ್ರ ಪ್ರಶಸ್ತಿ ನೀಡಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಸ್ಮೃತಿ ಸಿಂಗ್‌ ಮಾತನಾಡಿದ್ದು, ಪತಿಯ ಜತೆ ಕಳೆದ ದಿನಗಳನ್ನು ನೆನೆದು ಕಣ್ಣೀರು ಹಾಕಿದ್ದರು. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಆದರೆ, ಅಹ್ಮದ್‌ ಕೆ ಎಂಬಾತನು ಸ್ಮೃತಿ ಸಿಂಗ್‌ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ್ದಾನೆ. ಈತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಜನ ಆಗ್ರಹಿಸುತ್ತಿದ್ದಾರೆ.

ಬಂಧಿಸುವಂತೆ ಮಹಿಳಾ ಆಯೋಗ ಆಗ್ರಹ

ಸ್ಮೃತಿ ಸಿಂಗ್‌ ಅವರಿಗೆ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. “ಸ್ಮೃತಿ ಸಿಂಗ್‌ ಅವರಿಗೆ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದವನನ್ನು ದೆಹಲಿಯ ಅಹ್ಮದ್‌ ಕೆ. ಎಂಬುದಾಗಿ ಗುರುತಿಸಲಾಗಿದೆ. ಈತನ ವಿರುದ್ಧ ಪೊಲೀಸರು ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆರೋಪಿಯನ್ನು ಬಂಧಿಸಬೇಕು. ಈ ಕುರಿತು ಮೂರು ದಿನಗಳಲ್ಲಿ ವರದಿ ನೀಡಬೇಕು” ಎಂಬುದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ದೆಹಲಿ ಪೊಲೀಸರಿಗೆ ನೋಟಿಸ್‌ ನೀಡಿದ್ದರು.

2023ರ ಜುಲೈ 19ರಂದು ಸಿಯಾಚಿನ್‌ನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಬೆಳಗಿನ ಜಾವ ಭಾರತೀಯ ಸೇನೆಯ ಶಸ್ತ್ರಾಸ್ತ್ರಗಳನ್ನು ಇರಿಸುವ ನೆಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಫೈಬರ್‌ ಗ್ಲಾಸ್‌ನ ಕೋಣೆಯಲ್ಲಿ ಸಿಲುಕಿದ್ದ ಹಲವು ಸೈನಿಕರನ್ನು ಕ್ಯಾಪ್ಟನ್‌ ಅನ್ಶುಮಾನ್ ಸಿಂಗ್‌ ಅವರು ರಕ್ಷಣೆ ಮಾಡಿದ್ದರು. ಆದರೆ, ರಕ್ಷಣೆ ಮಾಡಿದ ಬಳಿಕ ಅವರೇ ಅಗ್ನಿಯ ಕೆನ್ನಾಲಗೆಗೆ ಸಿಲುಕಿ ಹುತಾತ್ಮರಾಗಿದ್ದರು.

ಇದನ್ನೂ ಓದಿ: Smriti Singh: ಮನೆ, ಮಗುವಿನ ಕನಸಿತ್ತು, ಎಲ್ಲವೂ ನುಚ್ಚು ನೂರಾಯ್ತು; ಹುತಾತ್ಮ ಯೋಧನ ಪತ್ನಿ ಕಣ್ಣೀರು!

Continue Reading

ವಾಣಿಜ್ಯ

Anant Radhika Wedding: ಅನಂತ್ – ರಾಧಿಕಾ ವಿವಾಹದಂತೆ ಅದ್ಧೂರಿಯಾಗಿ ನಡೆದಿತ್ತು ಈ ಐದು ಮದುವೆಗಳು

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant Radhika Wedding) ಅದ್ದೂರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ. ಯಾರ ಮದುವೆ ಎಷ್ಟು ವೆಚ್ಚದಲ್ಲಿ ನಡೆದಿತ್ತು ಎಂಬುದರ ವಿವರ ಇಲ್ಲಿದೆ.

VISTARANEWS.COM


on

By

Anant Radhika Wedding
Koo

ಏಷ್ಯಾದ ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ (Anant Radhika Wedding) ಈಗ ವಿಶ್ವದ ಗಮನ ಸೆಳೆದಿದೆ. ಅಂತೆಯೇ ಈ ಹಿಂದೆ ವಿಶ್ವದ ಗಮನ ಸೆಳೆದ ಐದು ಪ್ರಮುಖ ಅದ್ದೂರಿ ಮದುವೆಗಳು ಯಾರದ್ದು, ಹೇಗಿತ್ತು ಗೊತ್ತೇ?

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಭರ್ಜರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ.


1. ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್

1979ರಲ್ಲಿ ರಾಜಕುಮಾರಿ ಸಲಾಮಾ ಅವರನ್ನು ವಿವಾಹವಾದ ದುಬೈನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಮದುವೆಗಾಗಿ 137 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 11,44,21,50,950 ರೂಪಾಯಿ ಖರ್ಚು ಮಾಡಿದ್ದರು. ಮದುವೆಯು ಐದು ದಿನಗಳ ಕಾಲ ನಡೆಯಿತು. ಈ ಸಮಾರಂಭದಲ್ಲಿ ವಧುವಿಗೆ ಮದುವೆಯ ಉಡುಗೊರೆಗಳಾಗಿ 20 ಬೆಜೆವೆಲ್ಡ್ ಒಂಟೆಗಳನ್ನು ನೀಡಲಾಯಿತು. ಈ ಮದುವೆಯು ಅತ್ಯಂತ ದುಬಾರಿ ವಿವಾಹಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಪಡೆದಿದೆ.


2. ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II

ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II ಮತ್ತು ಚಾರ್ಲೀನ್ ವಿಟ್‌ಸ್ಟಾಕ್ 2011ರಲ್ಲಿ ವಿವಾಹವಾಗಿದ್ದು, ಈ ರಾಜಮನೆತನದ ವಿವಾಹವು ಬಹು ದಿನಗಳ ಆಚರಣೆಗಳನ್ನು ಒಳಗೊಂಡಿತ್ತು. ಇದು ಪ್ರಿನ್ಸ್ ಅರಮನೆಯಲ್ಲಿ ನಡೆದ ಸಮಾರಂಭ. ಮೊನಾಕೊದಲ್ಲಿ ಗಣ್ಯರು ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ಅದ್ದೂರಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಮದುವೆಗಾಗಿ 70 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,847,779,000 ರೂ. ಗಳನ್ನು ಖರ್ಚು ಮಾಡಲಾಗಿತ್ತು.


3. ವನಿಶಾ ಮಿತ್ತಲ್

ಉಕ್ಕಿನ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಮಗಳು ವನಿಶಾ ಮಿತ್ತಲ್ ಅವರು ಅಮಿತ್ ಭಾಟಿಯಾ ಅವರೊಂದಿಗೆ
2004ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಐಷಾರಾಮಿ ವಸತಿ ಮತ್ತು ಸಾಂಪ್ರದಾಯಿಕ ಆಚರಣೆಗಳಿಂದ ಗುರುತಿಸಲ್ಪಟ್ಟ ಈ ವಿವಾಹಕ್ಕೆ 66 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,512,392,006 ರೂ. ವೆಚ್ಚವಾಗಿತ್ತು.


4. ಪ್ರಿನ್ಸ್ ಚಾರ್ಲ್ಸ್

ಪ್ರಿನ್ಸ್ ಚಾರ್ಲ್ಸ್ ಮತ್ತು ಪ್ರಿನ್ಸೆಸ್ ಡಯಾನಾ 1981ರಲ್ಲಿ ವಿವಾಹವಾಗಿದ್ದು, ಇವರ ವಿವಾಹವು ಅತ್ಯಂತ ಸಾಂಪ್ರದಾಯಿಕ ಮತ್ತು ದುಬಾರಿ ವಿವಾಹಗಳಲ್ಲಿ ಒಂದಾಗಿದೆ. ಸೇಂಟ್ ಪಾಲ್ಸ್ ಕ್ಯಾಥೆಡ್ರಲ್‌ನಲ್ಲಿ ನಡೆದ ಈ ಮದುವೆಗೆ 750 ಮಿಲಿಯನ್ ಜನರು ಸಾಕ್ಷಿಯಾಗಿದ್ದರು. 48 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 4,007,368,656 ರೂಪಾಯಿ ವೆಚ್ಚವಾಗಿದೆ.

ಇದನ್ನೂ ಓದಿ: Anant Radhika Wedding: ಅನಂತ್ ರಾಧಿಕಾ ಮದುವೆಯಲ್ಲಿ 160 ವರ್ಷಗಳ ಹಿಂದಿನ ಸೀರೆ ಧರಿಸಿ ಮಿಂಚಿದ ಅಲಿಯಾ


5. ಪ್ರಿನ್ಸ್ ವಿಲಿಯಂ

ಪ್ರಿನ್ಸ್ ವಿಲಿಯಂ ಮತ್ತು ಕೇಟ್ ಮಿಡಲ್‌ಟನ್ 2011ರಲ್ಲಿ ವಿವಾಹವಾಗಿದ್ದು, ಅವರ ಹೆತ್ತವರ ಮದುವೆಗಿಂತ ಕಡಿಮೆ ಅತಿರಂಜಿತವಾಗಿದ್ದರೂ ಕೇಂಬ್ರಿಡ್ಜ್‌ನ ಡ್ಯೂಕ್ ಮತ್ತು ಡಚೆಸ್ ಸಂಪ್ರದಾಯದ ವಿವಾಹಗಳು ಜಾಗತಿಕವಾಗಿ ದೂರದರ್ಶನದಲ್ಲಿ ಪ್ರಸಾರ ಮಾಡಲಾಗಿತ್ತು. ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಅದ್ದೂರಿ ಮೆರವಣಿಗೆ ಮತ್ತು ವಿಶೇಷ ಅತಿಥಿ ಸತ್ಕಾರ ಕಾರ್ಯಕ್ರಮವನ್ನು ಒಳಗೊಂಡಿತ್ತು. 34 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2,838,056,500 ರೂಪಾಯಿ ಖರ್ಚಾಗಿತ್ತು.

Continue Reading
Advertisement
Bagalkot news
ಕರ್ನಾಟಕ1 min ago

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

T20 World Cup 2024
ಕ್ರೀಡೆ10 mins ago

T20 World Cup 2024 : ವಿಶ್ವ ಕಪ್ ಆಯೋಜನೆಯಲ್ಲಿ ಐಸಿಸಿಗೆ ಸಿಕ್ಕಾಪಟ್ಟೆ ನಷ್ಟ ​; ತೆರೆಮರೆಯಲ್ಲಿ ಜೋರು ಚರ್ಚೆ

Anant Ambani Wedding
ಪ್ರಮುಖ ಸುದ್ದಿ31 mins ago

ಅಂಬಾನಿಯನ್ನು ಟೀಕಿಸುತ್ತಿದ್ದ ದೀದಿ, ಅಖಿಲೇಶ್‌, ಲಾಲು ಸೇರಿ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Self Harming
ಬೆಂಗಳೂರು38 mins ago

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Shiva Rajkumar 131 cinema Look out
ಸ್ಯಾಂಡಲ್ ವುಡ್52 mins ago

Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

YouTuber Dhruv Rathee
ದೇಶ54 mins ago

YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

Kapil Dev
ಪ್ರಮುಖ ಸುದ್ದಿ59 mins ago

Kapil Dev : ಅಂಶುಮಾನ್ ಗಾಯಕ್ವಾಡ್​ಗೆ ಕ್ಯಾನ್ಸರ್​, ಬೇಸರ ವ್ಯಕ್ತಪಡಿಸಿದ ಕಪಿಲ್​ ದೇವ್​

Smriti Singh
ದೇಶ1 hour ago

Smriti Singh: ಹುತಾತ್ಮ ಯೋಧನ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್;‌ ಅಹ್ಮದ್‌ ವಿರುದ್ಧ ಎಫ್‌ಐಆರ್

Murder case
ಹಾವೇರಿ2 hours ago

Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

Sexual Assault
ವೈರಲ್ ನ್ಯೂಸ್2 hours ago

Sexual Assault: ಐಸ್‌ಕ್ರೀಂ ಕೊಳ್ಳಲು ಬಂದ ಬಾಲಕಿಯ ಗುಪ್ತಾಂಗ ಮುಟ್ಟಿ ದೌರ್ಜನ್ಯ; ಮೊಹಮ್ಮದ್ ಖಾನ್ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ5 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ4 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

ಟ್ರೆಂಡಿಂಗ್‌