ಮುಂಬೈ: ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ವಿದ್ಯಾರ್ಥಿ(Student Death)ಯೊಬ್ಬ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಘಟನೆ ಹಿಂದೆ ರ್ಯಾಗಿಂಗ್ ಆರೋಪ ಕೇಳಿ ಬಂದಿದೆ. ಮೃತ ವಿದ್ಯಾರ್ಥಿಯನ್ನು ಲಕ್ನೋ ಮೂಲದ ಅನುರಾಗ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಈತ ಶನಿವಾರ ಬೆಳಗ್ಗೆ ನಗರದ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
It is with deep sadness and a heavy heart that we announce the passing away of Anurag Jaiswal, first year student of HRM&LR of TISS Mumbai.
— TISS – Tata Institute of Social Sciences (@TISSpeak) August 25, 2024
We are withAnurag’s family at this heartbreaking time and our thoughts and prayers will always be with the Anurag's family.
ಮಾನವ ಸಂಪನ್ಮೂಲ ಕಾರ್ಯಕ್ರಮಕ್ಕೆ ದಾಖಲಾದ ಅನುರಾಗ್, ಶುಕ್ರವಾರ ರಾತ್ರಿ ವಾಶಿಯಲ್ಲಿ ತನ್ನ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ. ಪಾರ್ಟಿಯಲ್ಲಿ 150 ವಿದ್ಯಾರ್ಥಿಗಳು ಇದ್ದರು.
ಪಾರ್ಟಿಯಲ್ಲಿ ವಿದ್ಯಾರ್ಥಿ ಸಾಕಷ್ಟು ಮದ್ಯ ಸೇವಿಸಿದ್ದ ಎಂದು ಮೂಲಗಳು ತಿಳಿಸಿವೆ. ಪಾರ್ಟಿ ಮುಗಿಸಿ ಫ್ಲ್ಯಾಟ್‌ಗೆ ಹಿಂದಿರುಗಿದ ನಂತರ ವಿದ್ಯಾರ್ಥಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ದಾರೆ.
ಇನ್ನು ಮಾರನೇ ದಿನ ಎಷ್ಟೇ ಎಬ್ಬಿಸಿದರೂ ಅನುರಾಗ್ ಏಳದೇ ಇರುವುದನ್ನು ಕಂಡ ಸ್ನೇಹಿತರು ತಕ್ಷಣ ಆತನನ್ನು ಸ್ಥಳೀಯ ಚೆಂಬೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅನುರಾಗ್‌ನನ್ನು ಪರೀಶೀಲಿಸಿದ ವೈದ್ಯರು ಆತ ಮೃತಪಟ್ಟಿರುವ ಬಗೆ ದೃಢಪಡಿಸಿದ್ದಾರೆ.
ಘಟನೆ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಲಕ್ನೋದಲ್ಲಿರುವ ವಿದ್ಯಾರ್ಥಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.
ನಗರಕ್ಕೆ ಬಂದ ನಂತರವೇ ಮರಣೋತ್ತರ ಪರೀಕ್ಷೆ ನಡೆಸುವಂತೆ ಕುಟುಂಬದವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ಅನುರಾಗ್ ಸಾವು ಆಕಸ್ಮಿಕವೇ ಅಥವಾ ಆತ್ಮಹತ್ಯೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು